Author: kannadanewsnow09

ಶಿವಮೊಗ್ಗ : ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಶ್ರೀ ಕೃಷ್ಣ ಜಯಂತಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ)ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.26 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್…

Read More

ನವದೆಹಲಿ: ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಭಾರತೀಯ ಪ್ರಯಾಣಿಕರ ಬಸ್ ಉರುಳಿದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ. 40 ಭಾರತೀಯರನ್ನು ಹೊತ್ತ ಬಸ್ ಪೊಖಾರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು. ಉತ್ತರ ಪ್ರದೇಶದ ಎಫ್ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಉರುಳಿ ಬಿದ್ದಿದೆ ಎಂದು ತನಾಹುನ್ ಜಿಲ್ಲೆಯ ಡಿಎಸ್ಪಿ ದೀಪ್ಕುಮಾರ್ ರಾಯ ತಿಳಿಸಿದ್ದಾರೆ. ಭಾರತೀಯ ಪ್ರಯಾಣಿಕರು ಪೋಖಾರಾದ ಮಜೇರಿ ರೆಸಾರ್ಟ್ನಲ್ಲಿ ತಂಗಿದ್ದರು. ಬಸ್ ಶುಕ್ರವಾರ ಬೆಳಿಗ್ಗೆ ಪೋಖಾರಾದಿಂದ ಕಠ್ಮಂಡುವಿಗೆ ಹೊರಟಿತು. https://twitter.com/ANI/status/1826879461716787220

Read More

ಬೆಂಗಳೂರು: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ದಿನಾಂಕ  25.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ  ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ ಕರೆಂಟ್ ಇರೋದಿಲ್ಲ. ಇನ್ನೂ ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ…

Read More

ಗೃಹಪ್ರವೇಶಕ್ಕೆ ಮನೆ ಯಜಮಾನನ ಜಾತಕವನ್ನು ನೋಡಿ ಮುಹೂರ್ತವನ್ನು ನಿಷ್ಕರ್ಷೆ ಮಾಡಬೇಕು ಆದರೆ ಸ್ಥೂಲವಾಗಿ ವಾರ ತಿಥಿ ನಕ್ಷತ್ರ ಲಗ್ನ ಕಾಲ ದ್ವಾದಶ ಸುದ್ದಿ ಬಗ್ಗೆ ಸ್ವಲ್ಪ ತಿಳುವಳಿಕೆ ಅಗತ್ಯ. ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ವೈಶಾಖ ಮಾಸದಲ್ಲಿ ಗೃಹಪ್ರವೇಶ ನಡೆಸಿದ್ದಲ್ಲಿ ಬಹು ಪ್ರಶಸ್ತ ಪ್ರದವಾದದ್ದು. ಜೇಷ್ಠ ಮಾಸವು ಶುಭ ಪಾಲ್ಗುಣ ಸಂಪತ್ಕರ ಮಾಘಮಾಸದಲ್ಲಿ ಮತ್ತು ಶ್ರಾವಣ ಮಾಸದಲ್ಲಿ ಸುಖ ಸಂತೋಷ ಮತ್ತು ಧಾನ್ಯ ಸಮೃದ್ಧಿ ವಾರಗಳಲ್ಲಿ ಸೋಮವಾರ ಬುಧವಾರ ಗುರುವಾರ ಶುಕ್ರವಾರ ಸಂಪತ್ಕರ ತಿಥಿಗಳಲ್ಲಿ ತೃತಿಯ ಪಂಚಮಿ ಸಪ್ತಮಿ ದಶಮಿ ತ್ರಯೋದಶಿ ಶ್ರೇಷ್ಠ. ರಕ್ತ ತಿಥಿ ದಗ್ದ ಯೋಗ ತಿಥಿಗಳು ಭದ್ರ ಕರಣ ಶುಕ್ಲ ಷಷ್ಟಿಗಳು ಬಹುಳ ಏಕಾದಶಿ ಮೊದಲ ಶುಕ್ಲ ಪ್ರತಿಪದಿಯ ವರೆಗೆ ಪ್ರದೋಷಗಳು ಸೂರ್ಯನನ್ನು ತನಗೆದುರಿಗಿರುವ ಶುಕ್ರನನ್ನು ಬಿಟ್ಟು ಗೃಹಪ್ರವೇಶ ಮಾಡತಕ್ಕದ್ದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ…

Read More

ನವದೆಹಲಿ: 40 ಪ್ರಯಾಣಿಕರನ್ನು ಹೊತ್ತ ಭಾರತೀಯ ಪ್ರಯಾಣಿಕರ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ ಎಂದು ನೇಪಾಳ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಯುಪಿ ಎಫ್ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದು ನದಿಯ ದಡದಲ್ಲಿದೆ ಎಂದು ತನಾಹುನ್ ಜಿಲ್ಲಾ ಪೊಲೀಸ್ ಕಚೇರಿಯ ಡಿಎಸ್ಪಿ ದೀಪ್ಕುಮಾರ್ ರಾಯ ಖಚಿತಪಡಿಸಿದ್ದಾರೆ. ಅಧಿಕಾರಿಯ ಪ್ರಕಾರ, ಬಸ್ ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿತ್ತು. 40 ಭಾರತೀಯ ಪ್ರಯಾಣಿಕರು ಬಸ್ ನಲ್ಲಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು; ರಾಜ್ಯ ಸರ್ಕಾರದಿಂದ ಕರ್ನಾಟಕ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ (ರೇರಾ) ಮುಖ್ಯಸ್ಥರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, 2016 ರ ಸೆಕ್ಷನ್ 22 ಮತ್ತು ಕರ್ನಾಟಕ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ನಿಯಮಗಳು, 2017 ರ ನಿಯಮ 18 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕಿಶೋರ್ ಚಂದ್ರ ಎಚ್.ಸಿ ಅವರ ಅಧಿಕಾರಾವಧಿ ಪೂರ್ಣಗೊಂಡ ಕಾರಣ ಖಾಲಿ ಇರುವ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ಐಎಎಸ್ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿರುತ್ತದೆ ಎಂದಿದ್ದಾರೆ. 2) ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಹೀಗೆ ನೇಮಕಗೊಂಡ ವ್ಯಕ್ತಿಯು, ಷರತ್ತುಬದ್ಧವಾಗಿ, ರಾಜ್ಯ / ಕೇಂದ್ರ ಸರ್ಕಾರ ಅಥವಾ ಯಾವುದೇ ಸಾರ್ವಜನಿಕ ಉದ್ಯಮ ಅಥವಾ ಅವರ…

Read More

ಬೆಂಗಳೂರು: ನಗರದಲ್ಲಿ ರೋಡ್ ರೇಜ್ ಕೇಸ್ ತಡೆಗಟ್ಟುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಆದರೇ ಅದಕ್ಕೂ ಕ್ಯಾರೆ ಎನ್ನದಂತೆ ಇಂದು ಬೈಕ್ ಸವಾರನೊಬ್ಬ ರಸ್ತೆ ಬಿಡು ಅಂತ ಹಾರನ್ ಮಾಡಿದ್ದಕ್ಕೆ ಕಾರು ಚಾಲಕನ ಮೇಲೆ ದಾದಾಗಿರಿ ನಡೆಸಿ, ಅವಾಜ್ ಹಾಕಿರುವಂತ ಘಟನೆ ಬಾಗಲಗುಂಟೆಯಲ್ಲಿ ನಡೆದಿದೆ. ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ರೋಡ್ ರೇಜ್ ಕೇಸ್ ನಡೆದಿದೆ. ಕಾರಿಗೆ ಸೈಡ್ ಬಿಡದೇ ರಸ್ತೆ ಮಧ್ಯದಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಿದ್ದಕ್ಕೆ ಸೈಡ್ ಬಿಡುವಂತೆ ಕಾರು ಚಾಲಕ ಹಾರನ್ ಮಾಡಿದ್ದಾನೆ. ಇಷ್ಟಕ್ಕೇ ಕುಪಿತಗೊಂಡ ಬೈಕ್ ಸವಾರ, ರಸ್ತೆ ಮಧ್ಯದಲ್ಲೇ ಬೈಕ್ ನಿಲ್ಲಿಸಿ ಕಾರು ಚಾಲಕನ ಮೇಲೆ ದಾದಾಗಿರಿ ಪ್ರದರ್ಶನ ಮಾಡಿರುವುದಾಗಿ ತಿಳಿದು ಬಂದಿದೆ. ನಾನು ಲೋಕಸ್ ನನಗೆ ಹಾರನ್ ಹೊಡಿತೀಯ ಅಂತ ಅವಾಜ್ ಹಾಕಿರುವಂತ ಪುಂಡ, ರಸ್ತೆಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ, ಟ್ರಾಫಿಕ್ ಜಾಮ್ ಕೂಡ ಮಾಡಿ ದಾದಾಗಿರಿ ಮೆರೆದಿದ್ದಾನೆ. ಇದರಿಂದ ಬೇಸತ್ತಂತ ಜನರು ಬಾಗಲಗುಂಟೆ ಠಾಣೆಗೆ ಕೆರೆ ಮಾಡಿ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ…

Read More

ನವದೆಹಲಿ: ದೆಹಲಿ ಪೊಲೀಸರು ಅಲ್-ಖೈದಾ ಸಂಬಂಧಿತ ಭಯೋತ್ಪಾದಕ ಜಾಲವನ್ನು ಬೇಧಿಸಿದ್ದಾರೆ. ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳ 14 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ಗುರುವಾರ (ಆಗಸ್ಟ್ 22) ವರದಿ ಮಾಡಿದೆ. ಪಡೆದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ದೆಹಲಿ ಪೊಲೀಸರು, ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳ ಸಹಭಾಗಿತ್ವದಲ್ಲಿ, ಈ ಪ್ರದೇಶಗಳಲ್ಲಿ ಉತ್ತಮ ಸಂಘಟಿತ ಕಾರ್ಯಾಚರಣೆಯನ್ನು ನಡೆಸಿದರು. ಪ್ರಸ್ತುತ ಕಾರ್ಯಾಚರಣೆಯ ಸ್ಥಿತಿಯ ಪ್ರಕಾರ, ಈ ಮಾಡ್ಯೂಲ್ ಅನ್ನು ರಾಂಚಿ (ಜಾರ್ಖಂಡ್) ನ ಡಾ.ಇಶ್ತಿಯಾಕ್ ಮುನ್ನಡೆಸುತ್ತಿದ್ದರು ಮತ್ತು ಇದು ‘ಖಿಲಾಫತ್’ ಘೋಷಿಸಲು ಮತ್ತು ದೇಶದೊಳಗೆ ಗಂಭೀರ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಯಸುತ್ತಿತ್ತು ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ವಿವಿಧ ಸ್ಥಳಗಳಲ್ಲಿ ತೀವ್ರ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದಾರೆ ಎಂದು ಶಂಕಿಸಲಾಗಿದೆ. ಶಸ್ತ್ರಾಸ್ತ್ರ ತರಬೇತಿಯಲ್ಲಿ ತೊಡಗಿದ್ದ ಆರು ಶಂಕಿತರನ್ನು ರಾಜಸ್ಥಾನದ ಭಿವಾಡಿಯಲ್ಲಿ ಬಂಧಿಸಲಾಗಿದೆ. ಏತನ್ಮಧ್ಯೆ, ಹೆಚ್ಚಿನ ವಿಚಾರಣೆಗಾಗಿ ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲಿ ಇತರ ಎಂಟು ಜನರನ್ನು ವಶಕ್ಕೆ…

Read More

ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಲಾಯಿತು ಹಾಗೂ ಎಲ್ಲಾ ಶಾಸಕರು ಸರ್ವಾನುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಕ್ಕೆ ನಿಲ್ಲುವ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಾಥಮಿಕ ತನಿಖೆ ನಡೆಯದೇ ಮುಖ್ಯಮಂತ್ರಿಗಳ ವಿರುದ್ಧ ಸೆಕ್ಷನ್ 17 (ಎ) ಅಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸುವ ಬಗ್ಗೆ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ನಿರ್ಣಯಗಳನ್ನು ಸೂಚಿಸಿದರು. ತನ್ವೀರ್ ಸೇಠ್ ಅವರು ಇವುಗಳಿಗೆ ಅನುಮೋದನೆ ನೀಡಿದರು” ಎಂದು ತಿಳಿಸಿದರು. “ಪಕ್ಷದ ಎಲ್ಲಾ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ದೆಹಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲಾ ಶಾಸಕರು ಈ…

Read More