Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಳವು ಮಾಡಿದಂತ ವಸ್ತುಗಳನ್ನು ರಿಕವರಿ ಮಾಡಿದ ನಂತ್ರ ಸಂಬಂಧ ಪಟ್ಟ ವಾರಸುದಾರರಿಗೆ ನೀಡಬೇಕಾಗಿದ್ದು ಪೊಲೀಸರ ಕರ್ತವ್ಯ. ಆದರೇ ಇಲ್ಲೊಬ್ಬ ಇನ್ಸ್ ಪೆಕ್ಟರ್ ಜಪ್ತಿ ಮಾಡಿದಂತ ವಸ್ತುಗಳನ್ನು ಮಾಲೀಕರಿಗೆ ಹಿಂದಿರುಗಿಸದೇ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಕಾರಣದಿಂದಲೇ ಬೆಂಗಳೂರಲ್ಲಿ ಇನ್ಸ್ ಪೆಕ್ಟರ್ ಒಬ್ಬರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜೆಪಿ ನಗರದ ಠಾಣೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ಹಿತೇಂದ್ರ ಎಂ.ಎಸ್ ಎಂಬುವರು ಕರ್ತವ್ಯ ನಿರ್ವಹಿಸಿದ್ದರು. ಇಂತಹ ಪೊಲೀಸ್ ಇನ್ಸ್ ಪೆಕ್ಟರ್ ಕಳವು ಮಾಡಿದ್ದಂತ ಕೆಲ ವಸ್ತುಗಳನ್ನು ಜಪ್ತಿ ಮಾಡಿದ್ದರು. ಹೀಗೆ ಜಪ್ತಿ ಮಾಡಿದ್ದಂತ ವಸ್ತುಗಳನ್ನು ಹಿಂದಿರುಗಿಸಲೇ ದುರುಪಯೋಗ ಮಾಡಿಕೊಂಡಿದ್ದರು. ಈ ಕಾರಣದಿಂದ ವಾಪಾಸ್ ನೀಡುವಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನ ಪತ್ರವನ್ನು ನೀಡಿದ್ದರು. ಡಿಸಿಪಿ ಜಪ್ತಿ ಮಾಡಿದ್ದಂತ ವಸ್ತುಗಳನ್ನು ಹಿಂದಿರುಗಿಸುವಂತೆ ಸೂಚಿಸಿದ್ದರೂ ಡೋಂಟ್ ಕೇರ್ ಎನ್ನುವಂತೆ ಪೊಲೀಸ್ ಇನ್ಸ್ ಪೆಕ್ಟರ್ ಹಿತೇಂದ್ರ ನಡೆದುಕೊಂಡಿದ್ದರು. ಈ ಹಿನ್ನಲೆಯಲ್ಲಿ ಜಪ್ತಿ ಮಾಡಿದ್ದ ವಸ್ತುಗಳನ್ನು ವಾಪಾಸ್ ಕೊಡದೇ ದುರುಪಯೋಗ ಮಾಡಿಕೊಂಡಂತ ಕಾರಣ,…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್.2025ರಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಡೆಸುತ್ತಿರುವ ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು – ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅದರಂತೆ ಮಾರ್ಚ್ 2025 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ: 01-10-2024 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದಿದೆ. 1. ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು: 1. ದಿನಾಂಕ: 31-03-2025 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2008 ರಂದು ಅಥವಾ ಅದಕ್ಕಿಂತ ಹಿಂದೆ ಜನಿಸಿರಬೇಕು.…
ಬೆಂಗಳೂರು: ದಯವಿಟ್ಟು ನಿಮ್ಮ ರಾಜಕೀಯ ದ್ವೇಷಕ್ಕೆ ರಾಜಕೀಯದಿಂದ ದೂರವಿರುವಂತ ಕುಟುಂಬದ ಹೆಣ್ಣುಮಕ್ಕಳನ್ನು ವಿವಾದದ ಕಣಕ್ಕೆ ತಂದು ಗೌರವ, ಘನತೆ ಹಾಳು ಮಾಡಬೇಡಿ. ನಾನು ಪಡೆದಿರುವಂತ ಮುಡಾದ 14 ಸೈಟುಗಳನ್ನು ವಾಪಾಸ್ ಕೊಡಲು ನಿರ್ಧರಿಸಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಘೋಷಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದಾರೆ. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು ಎಂದು ತಿಳಿಸಿದ್ದಾರೆ. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಈ ಕುರಿತಂತೆ ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು…
ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗಾಗಿ, ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಹೊಲಿಗೆ ತರಬೇತಿ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೊಲಿಗೆ ತರಬೇತಿ ಶಿಬಿರ 2024ರ ನವೆಂಬರ್ 7 ರಿಂದ 26 ರವರೆಗೆ 20 ದಿನಗಳು ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರ 2024ರ ನವೆಂಬರ್ 15 ರಿಂದ 26ರ ವರೆಗೆ 12 ದಿನಗಳ ಕಾಲ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಪಿಯುಸಿ ಪಾಸ್ ಅಥವಾ ಫೇಲ್ ಆದ ಪರಿಶಿಷ್ಟ ಜಾತಿಯ 18-40 ವರ್ಷ ವಯೋಮಿತಿ ಹೊಂದಿರುವ ಯುವ ಜನರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಚಿತ್ರದುರ್ಗ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ…
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳೂ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದರೂ ಅಧಿಕಾರಿಗಳು ಈ…
ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 24ರಂದು ಬಾಗಿಲು ಓಪನ್ ಆಗಲಿದ್ದು, ನವೆಂಬರ್.3ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಆಯೋದಿಸಲಾಗಿದೆ. ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ-2024 ಹ್ಯಾಪ್ ,ಪೊಸ್ಟರ್ ಬಿಡುಗಡೆ ಮಾಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಹಾಸನಾಂಬ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಸುಗಮ ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಕ್ಟೋಬರ್ 24 ರಂದು ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಾಗುವುದು ಎಂದ ಅವರು ನವಂಬರ್ 3ರವರೆಗೂ ಜಾತ್ರಾ ಮಹೋತ್ಸವ ಜರುಗಲಿದೆ. ಒಟ್ಟು 11…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆಯಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯೂ ಒಂದಾಗಿತ್ತು. ಈ ಯೋಜನೆ ಅನುಷ್ಠಾನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು,ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದೆ. ದಿನಾಂಕ: 05.09.2022ರಲ್ಲಿ ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು…
ಬೆಂಗಳೂರು: ದಿನಾಂಕ 02-10-2024ರಂದು ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 02-10-2024 ಬುಧವಾರದಂದು ” ಗಾಂಧಿ ಜಯಂತಿ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ತಿಳಿಸಿದ್ದಾರೆ. https://kannadanewsnow.com/kannada/important-information-for-students-about-registration-for-ii-puc-exam-1/ https://kannadanewsnow.com/kannada/in-a-major-step-towards-passenger-safety-railways-to-install-kavach-4-0-in-10000-trains/
ಬೆಂಗಳೂರು: ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಅದೇ 10,000 ಲೋಕೋಮೋಟಿವ್ ಗಳಲ್ಲಿ ಕವಚ್ 4.0 ಸ್ಥಾಪಿಸಲು ಅನುಮೋದಿಸಲಾಗಿದೆ. ಈ ಮೂಲಕ ರೈಲುಗಳ ಸುರಕ್ಷತೆಗೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ. ಭಾರತೀಯ ರೈಲ್ವೆಯಾದ್ಯಂತ ಸುರಕ್ಷತೆಯನ್ನು ಹೆಚ್ಚಿಸುವ ಕಾರ್ಯಾಚರಣೆಯ ಭಾಗವಾಗಿ ರೈಲ್ವೆ ಸಚಿವಾಲಯವು 10,000 ಲೋಕೋಮೋಟಿವ್ಗಳಲ್ಲಿ ಕವಚ್ 4.0 ಅನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (RDSO) ನಿಂದ ಅನುಮೋದಿಸಲಾದ ಕವಾಚ್‌ನ ನವೀಕರಿಸಿದ ಆವೃತ್ತಿಯು ಸ್ವಯಂಚಾಲಿತ ರೈಲು ರಕ್ಷಣೆ (ATP) ತಂತ್ರಜ್ಞಾನದಲ್ಲಿ ಪ್ರಮುಖ ಸುಧಾರಣೆಯನ್ನು ಪ್ರತಿನಿಧಿಸುತ್ತದೆ. ಕವಚ್ 4.0 ನ ಪ್ರಮುಖ ಮೈಲಿಗಲ್ಲುಗಳು ಮತ್ತು ವೈಶಿಷ್ಟ್ಯಗಳು: ಅಂತಿಮ ಅನುಮೋದನೆ ಮತ್ತು ಕಾರ್ಯಾರಂಭ: 16ನೇ ಜೂನ್ 2024 ರಂದು, ಭಾರತೀಯ ರೈಲ್ವೆಯು ಕವಚ್ ಆವೃತ್ತಿ 4.0 ಅನ್ನು ಅನುಮೋದಿಸಿತು. ಕಡಿಮೆ ಅವಧಿಯಲ್ಲಿ, ಕೋಟಾ ಮತ್ತು ಸವಾಯಿ ಮಾಧೋಪುರ್ ನಡುವೆ 108 ಕಿಮೀ ಯಶಸ್ವಿಯಾಗಿ ಸ್ಥಾಪಿಸಲಾಯಿತು ಮತ್ತು ಸೆಪ್ಟೆಂಬರ್ 26, 2024 ರೊಳಗೆ ಕಾರ್ಯಾರಂಭ ಮಾಡಿತು. 24ನೇ ಸೆಪ್ಟೆಂಬರ್…