Author: kannadanewsnow09

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. ಅದಕ್ಕೂ ಮುನ್ನವೇ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಉಪ ಮುಖ್ಯ ಚುನಾವಣಾಧಇಕಾರಿ ರಾಜ್ಯ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ  ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ ಎಂದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಮತ್ತು jointceomcc@gmail.com ಕ್ಕೆ ಸಲ್ಲಿಸುವಂತೆ…

Read More

ಹರಿಯಾಣ: ಇಲ್ಲಿನ ನುಹ್ ಜಿಲ್ಲೆಯಲ್ಲಿ ಹರಿಯಾಣ ಬೋರ್ಡ್ ಪರೀಕ್ಷೆ 2024 ರ ಸಮಯದಲ್ಲಿ ಮಾಸ್ ಕಾಪಿಯನ್ನು ವಿದ್ಯಾರ್ಥಿಗಳು ಹೊಡೆದಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಮಾರ್ಚ್ 5 ರ ಮಂಗಳವಾರ ನಡೆದ 10 ನೇ ಬೋರ್ಡ್ ಪರೀಕ್ಷೆಯ ಸಮಯದಲ್ಲಿ ತವಡು ಪಟ್ಟಣದ ಚಂದ್ರಾವತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಘಟನೆಯ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ವೆಬ್ಸೈಟ್ನಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಪರೀಕ್ಷಾ ಕೇಂದ್ರದಲ್ಲಿನ ದುಷ್ಕೃತ್ಯ ಆಘಾತಕಾರಿಯಾಗಿದೆ. ಈ ಹಿಂದೆ ಟ್ವಿಟರ್ ನಲ್ಲಿ ಅನೇಕ ಬಾರಿ ಹಂಚಿಕೊಳ್ಳಲಾದ ವೈರಲ್ ಕ್ಲಿಪ್ಗಳಲ್ಲಿ, ಜನರು ಶಾಲಾ ಕೊಠಡಿಯ ಗೋಡೆಯನ್ನು ಹಗ್ಗದ ಸಹಾಯದಿಂದ ಹತ್ತಿ, ವಿದ್ಯಾರ್ಥಿಗಳಿಗೆ ಕಾಪಿ ಚೀಟಿಗಳನ್ನು ನೀಡುತ್ತಿರುವುದು ಕಂಡು ಬಂದಿದೆ. ಇಷ್ಟೇ ಅಲ್ಲದೇ ಸಾಲು ಸಾಲು ಜನರು ತಮ್ಮ ವಿದ್ಯಾರ್ಥಿಗಳಿಗೆ ಕಾಪಿ ಚೀಟಿಯನ್ನು ಗೋಡೆ ಹತ್ತಿ, ಕಟ್ಟಡವನ್ನು ಹತ್ತಿ ಕಿಟಕಿ ಮೂಲಕ ನೀಡುತ್ತಿರುವುದನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ದೃಶ್ಯಾವಳಿಯಲ್ಲಿ…

Read More

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದ ಸ್ಥಳೀಯ ನಾಯಕರ ಒಳಹರಿವಿನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಉಲ್ಲೇಖಿಸಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿಯೂ ಬಿಡುಗಡೆಯಾಗುವ ಸಾಧ್ಯತೆ ಇದೆ. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಎರಡು ಮೂರು ದಿನಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಯಾವುದೇ ದೊಡ್ಡ ವಿವಾದಗಳಿಲ್ಲ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು, ವೀಕ್ಷಕರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ರಾಜ್ಯಸಭಾ ಮತ್ತು ಲೋಕಸಭಾ ಸದಸ್ಯರು, ಬ್ಲಾಕ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ನೀಡುವ ಅಭಿಪ್ರಾಯಗಳ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಹೇಳಿದರು. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ನಡೆಯಲಿರುವ ಸಭೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್…

Read More

ಬೆಂಗಳೂರು: ಬಿಎಂಟಿಸಿಯಿಂದ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ನೀಡುವಂತ ವಿದ್ಯಾರ್ಥಿ ವೇತನ ಮೊತ್ತವನ್ನು ಪ್ರಸ್ತುತ ಸಾಲಿನಿಂದ ಪರಿಷ್ಕರಿಸಿದೆ. ಈ ಮೂಲಕ ಬಿಎಂಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ವಿದ್ಯಾ ಸಹಾಯ ನಿಧಿಯ ವತಿಯಿಂದ ಸಂಸ್ಥೆಯ ಅಧಿಕಾರಿಗಳ/ನೌಕರರಗಳ ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು 2003ನೇ ಸಾಲಿನಿಂದ ನೀಡುತ್ತಾ ಬಂದಿರುತ್ತದೆ. ಪ್ರಸ್ತುತ ಸಂಸ್ಥೆಯಲ್ಲಿ 20023-24 ರ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಅಧಿಕಾರಿಗಳ/ನೌಕರರುಗಳ ಅರ್ಹ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಮೊತ್ತವನ್ನು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ ಎಂದಿದೆ. ಪರಿಷ್ಕೃತ ವಿದ್ಯಾರ್ಥಿ ವೇತನ ವಿವರ ವಿದ್ಯಾಭ್ಯಾಸ ವಿದ್ಯಾಭ್ಯಾಸದ ಅವಧಿ ಪ್ರಸ್ತುತ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಮೊತ್ತ 2023-24 ಶೈಕ್ಷಣಿಕ ಸಾಲಿನಿಂದ ಪರಿಷ್ಕೃತ ವಿದ್ಯಾರ್ಥಿ ವೇತನ ಮೊತ್ತ      ಐಟಿಐ/ ಜೆಒಸಿ 1 ರಿಂದ 2 ವರ್ಷಗಳು ರೂ. 900/- ಪ್ರತಿ ವರ್ಷ ರೂ. 5000/- ಪ್ರತಿ ವರ್ಷ…

Read More

ಗದಗ: ಜಿಲ್ಲೆಯಲ್ಲಿ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದೆ. ಈ ಕ್ಯಾಂಟರ್ ನಲ್ಲಿದ್ದಂತ ನವೀನ್ ಕುಂಬಾರ್(23) ಸ್ಥಳದಲ್ಲೇ ಸಾವನ್ನಪ್ಪಿದ್ರೇ, ನಾಗಪ್ಪ ಕಾಳಿ(23) ಹಾಗೂ ಗಂಗಪ್ಪ (22) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕನ ಅತಿವೇಗದ ಚಾಲನೇಯೇ ಈ ಅಪಘಾತಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applications-invited-for-subsidy-for-various-units-of-fisheries/ https://kannadanewsnow.com/kannada/breaking-in-yet-another-shocking-incident-in-the-state-a-case-of-73-foeticide-has-come-to-light-in-nelamangala/

Read More

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಯೋಜನೆಗಳಾದ ಮಧ್ಯಮ ವರ್ಗದ ಆರ್.ಎ.ಎಸ್. ಘಟಕ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪ.ಜಾ./ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 31 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/breaking-in-yet-another-shocking-incident-in-the-state-a-case-of-73-foeticide-has-come-to-light-in-nelamangala/ https://kannadanewsnow.com/kannada/gauri-naik-digs-well-for-anganwadi-children-to-fetch-water/

Read More

ಕಲಬುರ್ಗಿ: ನಗರದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ವಿಚಾರವಾಗಿ ಹಿಂದೂ ಮುಸ್ಲೀಂರ ನಡುವೆ ವಿವಾದ ಉಂಟಾಗಿತ್ತು. ಈ ಬಗ್ಗೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕಲಬುರ್ಗಿಯ ಹೈಕೋರ್ಟ್ ನ್ಯಾಯಪೀಠವು ಹಿಂದೂಗಳು ಪೂಜೆ ಸಲ್ಲಿಸುವುದಕ್ಕೆ ಅವಕಾಶ ನೀಡಿದೆ. ಈ ಕುರಿತಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕಲಬುರ್ಗಿ ಹೈಕೋರ್ಟ್ ನ್ಯಾಯಪೀಠವು ಮಾರ್ಚ್.8ರಂದು ಶಿವರಾತ್ರಿಯ ದಿನದಂದು ಮಧ್ಯಾಹ್ನ 15 ಹಿಂದೂಗಳಿಂದ ಶಿವಲಿಂಗ ಪೂಜೆ ಮಾಡುವುದಕ್ಕೆ ಅನುಮತಿ ನೀಡಿದೆ. ಇನ್ನೂ ಶಿವಲಿಂಗ ಪೂಜೆ ಮಾಡುವವರ 15 ಪಟ್ಟಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಆಂದೋಲಾ ಸಿದ್ದಲಿಂಗ ಸ್ವಾಮಿ ಸೇರಿದಂತೆ 15 ಜನರ ಹೆಸರು, ಆಧಾರ್ ಕಾರ್ಡ್ ಅನ್ನು ಹೈಕೋರ್ಟ್ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಇದಲ್ಲದೇ 15 ಮಂದಿ ಮುಸ್ಲಿಂ ಸಮುದಾಯದವರಿಗೂ ಪ್ರಾರ್ಥನೆ ಮಾಡುವುದಕ್ಕೆ ಹೈಕೋರ್ಟ್ ಅನುಮತಿಸಿದೆ. ಈ ಮೂಲಕ ಕಲಬುರ್ಗಿ ನಗರದಲ್ಲಿರುವಂತ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಹಿಂದೂ ಮುಸ್ಲೀಂರಿಗೆ ಪೂಜೆ, ಪ್ರಾರ್ಥನೆಗೆ ಅವಕಾಶ ನೀಡಿದೆ. https://kannadanewsnow.com/kannada/shivamogga-soraba-municipality-revenue-inspector-vinayak-trapped-by-lokayukta/ https://kannadanewsnow.com/kannada/breaking-in-yet-another-shocking-incident-in-the-state-a-case-of-73-foeticide-has-come-to-light-in-nelamangala/

Read More

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿನ ಮೊದಲ ಚಾಲಕ ರಹಿತ ರೈಲು ಸಂಚಾರದ ಕುರಿತು ಬಿಎಂಆರ್ ಸಿಎಲ್ ನಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ BMRCL, ಚೀನಾದ ಸಿ.ಆರ್.ಆರ್.ಸಿ (CRRC) ತಯಾರಿಸಿದ ಮೊದಲ ಮಾದರಿಯ ಆರು ಬೋಗಿ  ಮೆಟ್ರೋ ರೈಲು   ಎಲೆಕ್ಟ್ರಾನಿಕ್   ಸಿಟಿ ಹತ್ತಿರದಲ್ಲಿರುವ ಹೆಬ್ಬಗೋಡಿ ಮೆಟ್ರೋ ಡಿಪೋ ಗೆ ದಿನಾಂಕ 14 ಫೆಬ್ರವರಿ 2024 ರಂದು ಆಗಮಿಸಿದೆ. ಹೊಸ ರೋಲಿಂಗ್ ಸ್ಟಾಕ್ ಆಗಿರುವುದರಿಂದ ಬಹು ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ.  ಸ್ಟ್ಯಾಟಿಕ್ ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಪರೀಕ್ಷೆಗಾಗಿ ಪರೀಕ್ಷಾ ಟ್ರ್ಯಾಕ್‌ಗೆ ತೆರಳುವ ಮೊದಲು ಬೋಗಿಗಳನ್ನು ಜೋಡಿಸಲಾಗಿದೆ. ನಂತರ, ಅದನ್ನು ಮುಖ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.  ಸುಮಾರು 37 ಮಾದರಿಯ ಪರೀಕ್ಷೆಗಳು ನಾಲ್ಕು ತಿಂಗಳವರೆಗೆ ನಡೆಯಲಿದೆ. ತದನಂತರ 45 ದಿನಗಳವರೆಗೆ ಸಿಗ್ನಲಿಂಗ್ ವ್ಯವಸ್ಥೆ, ದೂರಸಂಪರ್ಕ ವ್ಯವಸ್ಥೆ, ವಿದ್ಯುತ್ ಸರಬರಾಜು ವ್ಯವಸ್ಥೆ ಇತ್ಯಾದಿಗಳೊಂದಿಗೆ ಸಿಸ್ಟಮ್ ಏಕೀಕರಣ ಪರೀಕ್ಷೆಗಳು ನಡೆಯಲಿವೆ. ಶಾಸನಬದ್ಧ ಸುರಕ್ಷತಾ ಪರೀಕ್ಷೆಗಳು, ರಿಸರ್ಚ್ ಡಿಸೈನ್ಸ್ ಮತ್ತು…

Read More

ಶಿವಮೊಗ್ಗ : ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿ ಕ.ಲೋ. ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿರುತ್ತಾರೆ. ಶ್ರೀಮತಿ ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿರುತ್ತಾರೆ. ಈ ಸಂದರ್ಭ ಕಂದಾಯ ನಿರೀಕ್ಷಕರು 40000/- ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ. ಈ ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್‍ರವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿರುತ್ತಾರೆ. ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ…

Read More

ಶಿವಮೊಗ್ಗ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣೆಗೆರೆ ನಗರದ ಪಿ.ಬಿ.ರಸ್ತೆ, ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮಾ.11 ಮತ್ತು 12 ರಂದು ರೈತರಿಗೆ ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ.ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಇವರ ದೂರವಾಣಿ ಸಂಖ್ಯೆ: 08192-233787 ಗೆ ಸಂಪರ್ಕಿಸುವುದು. https://kannadanewsnow.com/kannada/good-news-for-nwkrtc-staff-cashless-medical-treatment-in-collaboration-with-kims/ https://kannadanewsnow.com/kannada/breaking-in-yet-another-shocking-incident-in-the-state-a-case-of-73-foeticide-has-come-to-light-in-nelamangala/

Read More