Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 241 ಹುದ್ದೆಗಳು ಭರ್ತಿ ಯಾಗಿದ್ದು, 465 ಹುದ್ದೆಗಳು ಖಾಲಿ ಇರುತ್ತವೆ. ಇವುಗಳನ್ನು ತುರ್ತಾಗಿ ತುಂಬಲು ಕೋರಲಾಗಿರುತ್ತದೆ ಎಂದಿದ್ದಾರೆ. ದಿ: 31.01.2024 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ನಡೆದ DHO ಮತ್ತು RCHO ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿಗಳ (Casualty Medical Officer) ಹುದ್ದೆಗಳು ಖಾಲಿಯಿರುವುದರಿಂದ ತುರ್ತು ವೈದ್ಯಕೀಯ ಸೇವೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯ…

Read More

ಚಿಕ್ಕಬಳ್ಳಾಪುರ: ಲಾರಿಯೊಂದಕ್ಕೆ ಕೆಮಿಕಲ್ ಡಂಪ್ ಮಾಡುತ್ತಿದ್ದಂತ ವೇಳೆಯಲ್ಲಿ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಶ್ರೀನಿವಾಸಮೂರ್ತಿ ಎಂಬುವರಿಗೆ ಸೇರಿದಂತ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ನಡೆದಂತ ಘಟನೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಲಾರಿಯೊಂದರ ಮೇಲ್ಭಾಗದ ಟ್ಯಾಂಕ್ ಕ್ಯಾಪ್ ತೆರೆದು ಕೆಮಿಲಕ್ ಡಂಪ್ ಮಾಡುವಂತ ಸಂದರ್ಭದಲ್ಲಿ ಉಸಿರು ಗಟ್ಟಿ ಬಿಹಾರ ಮೂಲಕ ಮಹಮ್ಮದ್ ರಜಿಕ್ಶ್ರ(33) ಎಂಬಾತ ಸಾವನ್ನಪ್ಪಿದ್ದಾನೆ. ಇನ್ನೂ ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥ ಮತ್ತೋರ್ವ ಕಾರ್ಮಿಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ರಾತ್ರಿ ನಡೆದಿರುವಂತ ಘಟನೆ ಇದಾಗಿದೆ. ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇಷ್ಟೆಲ್ಲಾ ನಡೆದರೂ ಕಾರ್ಮಿಕ ಇಲಾಖೆಗೆ ಮಾಹಿತಿಯನ್ನು ಮಾಲೀಕ ನೀಡಿಲ್ಲ ಎನ್ನಲಾಗುತ್ತಿದೆ. ಅಲ್ಲದೇ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಕ್ಕೆ ಕಾರ್ಮಿಕರು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್…

Read More

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮಂಡ್ಯ ಸಂಸದರು ಆಗಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಶ್ರೀರಂಗಪಟ್ಟಣ – ಕೆ.ಆರ್.ಪೇಟೆ – ಪಾಂಡವಪುರ – ಚನ್ನರಾಯಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು. ಈ ರಸ್ತೆಯು ತಾಲೂಕು ಕೇಂದ್ರಗಳಿಂದ ನಗರಗಳಿಗೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದ್ದು, ಆರ್ಥಿಕವಾಗಿ ದೊಡ್ಡ ಕೊಡುಗೆಯನ್ನು ನೀಡಲಿದೆ. ಮುಖ್ಯವಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು…

Read More

ಬೆಂಗಳೂರು : 66/11 kV IISC ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/shocking-woman-raped-repeatedly-by-husbands-friends-sinful-husband-watches-video-of-act-after-taking-money/

Read More

ಹೈದರಾಬಾದ್: ತಿರುಪತಿಯಲ್ಲಿ ನಿನ್ನೆ ವೈಕುಂಠ ಏಕಾದಶಿ ಪ್ರಯುಕ್ತ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ನಡೆದಿತ್ತು. ಈ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದರು. ಇಂತಹ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರವು ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಸಂಬಂಧ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತದಿಂದ ಮೃತರಾದಂತವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವಂತ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಇನ್ನೂ ತಿರುಪತಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತ 6 ಭಕ್ತಾಧಿಗಳ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಆಂಧ್ರ ಸರ್ಕಾರವು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ನೀಡಿವುದು ಕಡಿಮೆಯೇ ಆಗಿದೆ. 1 ಕೋಟಿ ಪರಿಹಾರ ಕೊಡುವಂತೆ ಕಾಂಗ್ರೆಸ್ ಪಕ್ಷವು ಆಗ್ರಹಿಸಿದೆ.

Read More

ಆಂಧ್ರಪ್ರದೇಶ: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿರುಮಲದಲ್ಲಿ ಹೆಚ್ಚು ಜನರು ಸೇರಿದ್ದರಿಂದ ಟಿಕೆಟ್ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಹೀಗಾಗಿ ಕಾಲ್ತುಳಿತ ಉಂಟಾಗಿ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ವೈಕುಂಠ ದ್ವಾರದಲ್ಲಿ ಟಿಕೆಟ್ ಗಾಗಿ ಹೆಚ್ಚು ಜನರು ಸೇರಿದ್ದರ ಪರಿಣಾಮ ತಿರುಪತಿಯಲ್ಲಿ ಕಾಲ್ತುಳಿತ ಉಂಟಾಗಿದೆ. ಈ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ವೈಕುಂಟ ಏಕಾದಶಿಯ ಟಿಕೆಟ್ ಗಾಗಿ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿದ ಕಾರಣ, ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ನಾಳೆ ಮುಂಜಾನೆಯವರೆಗೂ ಟಿಕೆಟ್ ವಿತರಣೆಯನ್ನು ಸ್ಥಗಿತಗೊಳಿಸಿರುವುದಾಗಿ ಟಿಟಿಡಿ ತಿಳಿಸಿದೆ.

Read More

ಆಂಧ್ರಪ್ರದೇಶ: ತಿರುಪತಿ ವಿಷ್ಣು ನಿವಾಸದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ ಭಕ್ತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ವೈಕುಂಠ ಏಕಾದಶಿ ಸರ್ವದರ್ಶನ ಟೋಕನ್ ನೀಡುವ ಕೌಂಟರ್ ಬಳಿ ಈ ಘಟನೆ ನಡೆದಿದೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಆಂಧ್ರಪ್ರದೇಶ: ತಿರುಪತಿ ವಿಷ್ಣು ನಿವಾಸದ ಬಳಿ ಕಾಲ್ತುಳಿತಕ್ಕೆ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. ವೈಕುಂಠ ಏಕಾದಶಿ ಸರ್ವದರ್ಶನ ಟೋಕನ್ ನೀಡುವ ಕೌಂಟರ್ ಬಳಿ ಈ ಘಟನೆ ನಡೆದಿದೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/shivamogga-k-siddappa-thanks-state-government-for-solving-tahsildar-layout-issue/ https://kannadanewsnow.com/kannada/first-hmpv-virus-case-detected-in-mumbai-number-of-infected-people-in-maharashtra-rises-to-3/

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತರಾಗಿದ್ದರು. ಹೀಗೆ ಶರಣಾದಂತ ಆರು ನಕ್ಸಲರಿಗೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ತಲಾ 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಶರಣಾಗತರಾದವರನ್ನು ಸರ್ಕಾರದಿಂದ ಘೋಷಣೆಯಾಗಿರುವ ಸೌಲಭ್ಯಗಳನ್ನು ಒದಗಿಸಲು ಉಲ್ಲೇಖ(1) ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:6-01-2025 ರಂದು ರಾಜ್ಯದ ಭೂಗತ ನಕ್ಸಲರಾದ 1)ಮುಂಡಗಾರು ಲತಾ 2) ಸುಂದರಿ ಕುತ್ತಲೂರು 3)ವನಜಾಕ್ಷಿ ಬಾಳೆಹೊಳೆ 4) ಮಾರೆಪ್ಪ ಆರೋಟಿ 5) ಕೆ.ವಸಂತ 6) ಟಿ.ಎನ್.ಜಿಷಾ ಇವರುಗಳು ಎಡಪಂಥೀಯ ತೀವುಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯ ರಾಜ್ಯ ಮಟ್ಟದ ನಕ್ಸಲ್ ಶರಣಾಗತ ಸಮಿತಿಯ ಮುಂದೆ ಮುಖ್ಯವಾಹಿನಿಗೆ ಶರಣಾಗತರಾಗಿರುತ್ತಾರೆ. ಅದರಂತೆ ಇವರುಗಳ ಶರಣಾಗತ ಅರ್ಜಿಯನ್ನು ಅನುಮೋದಿಸಿ ಅಂಗೀಕರಿಸಲು ಹಾಗೂ…

Read More

ಶಿವಮೊಗ್ಗ: ತಹಶೀಲ್ದಾರ್ ಲೇಔಟ್ ಗಳಲ್ಲಿ ನಿವೇಶನ ಖರೀದಿಸಿದವರಿಗೆ ಎ-ಖಾತಾ, ಬಿ-ಖಾತಾ ಲಭ್ಯವಾಗದೇ ಸಮಸ್ಯೆ ಉಂಟಾಗಿತ್ತು. ತಹಶೀಲ್ದಾರ್ ಲೇಔಟ್ ಗಳಲ್ಲಿ ಸೈಟ್ ಖರೀದಿಸಿ ಸಮಸ್ಯೆಗೆ ಸಿಲುಕಿದ್ದಂತ ಜನರಿಗೆ ಬಿ-ಖಾತಾ ಒದಗಿಸಲು ರಾಜ್ಯ ಸರ್ಕಾರ ನಿರ್ದೇಶಿಸಿದೆ. ಈ ಸಮಸ್ಯೆ ಪರಿಹರಿಸಿದಂತ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಾಗರ ತಾಲ್ಲೂಕು ಅಸಂಘಟಿತ ಕಾರ್ಮಿಕ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿದ್ಧಪ್ಪ ಧನ್ಯವಾದ ತಿಳಿಸಿದ್ದಾರೆ. ಇಂದು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸಾಗರದಲ್ಲಿ ತಹಶೀಲ್ದಾರ್ ಲೇಔಟ್ ಸಮಸ್ಯೆ ಉಂಟಾಗಿತ್ತು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆ ಸರಿ ಪಡಿಸಲು ಮನವಿ ಮಾಡಲಾಗಿತ್ತು. ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸೋದಕ್ಕೆ ಕೋರಲಾಗಿತ್ತು ಎಂದರು. ತಹಶೀಲ್ದಾರ್ ನೋಂದಾಯಿತ ಲೇಔಟ್ ಗಳಲ್ಲಿ ನಿವೇಶನ ಖರೀದಿಸಿದ, ಮನೆ ನಿರ್ಮಿಸಿದ ಮಾಲೀಕರ ಸ್ಥಿತಿ ಅತ್ಯಂತ ಶೋಚನೀಯವಾಗಿತ್ತು. ನಿವೇಶನ ಮಾರಾಟಕ್ಕೂ ಆಗದೇ, ಬ್ಯಾಂಕ್ ನಿಂದ ಸಾಲ…

Read More