Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವಾಹನಗಳ ಮಾರ್ಗ ಬದಲಾವಣೆ ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ. ತೀರ್ಥಹಳ್ಳಿ ಮಾರ್ಗವಾಗಿ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದಿದೆ. ಈ ವಿಶೇಷ ರೈಲು (06237) ಮಾರ್ಚ್ 11, 2024 ರಂದು ಮೈಸೂರು ನಿಲ್ದಾಣದಿಂದ ಸಂಜೆ 06:35 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 09:10 ಗಂಟೆಗೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಇದೇ ರೈಲು (06238) ಮಾರ್ಚ್ 12, 2024 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 01:55 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರಂ, ಕೆಂಗೇರಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು,…
ಬೆಂಗಳೂರು: ನಗರದಲ್ಲಿ ಈಗಾಗಲೇ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸೇವೆ ಇದೆ. ಈಗ ಚಾಲಕ ರಹಿತ ಮೆಟ್ರೋ ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಅಲ್ಲದೇ ಬೆಂಗಳೂರಲ್ಲಿ ಚಾಲಕ ರಹಿತ ಮೆಟ್ರೋ ಸಂಚಾರದ ಟೈಮ್ ಬಂದೇ ಬಿಡ್ತು ಎನ್ನುವಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ಚೀನಾದ ಸಿ.ಆರ್.ಆರ್.ಸಿ (CRRC) ತಯಾರಿಸಿದ ಮೊದಲ ಮಾದರಿಯ ಆರು ಬೋಗಿ ಮೆಟ್ರೋ ರೈಲು ಎಲೆಕ್ಟ್ರಾನಿಕ್ ಸಿಟಿ ಹತ್ತಿರದಲ್ಲಿರುವ ಹೆಬ್ಬಗೋಡಿ ಮೆಟ್ರೋ ಡಿಪೋ ಗೆ ದಿನಾಂಕ 14 ಫೆಬ್ರವರಿ 2024 ರಂದು ಆಗಮಿಸಿದೆ ಎಂದು ತಿಳಿಸಿದೆ. ಹೊಸ ರೋಲಿಂಗ್ ಸ್ಟಾಕ್ ಆಗಿರುವುದರಿಂದ ಬಹು ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. ಸ್ಟ್ಯಾಟಿಕ್ ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಪರೀಕ್ಷೆಗಾಗಿ ಪರೀಕ್ಷಾ ಟ್ರ್ಯಾಕ್‌ಗೆ ತೆರಳುವ ಮೊದಲು ಬೋಗಿಗಳನ್ನು ಜೋಡಿಸಲಾಗಿದೆ. ನಂತರ, ಅದನ್ನು ಮುಖ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸುಮಾರು 37 ಮಾದರಿಯ ಪರೀಕ್ಷೆಗಳು ನಾಲ್ಕು ತಿಂಗಳವರೆಗೆ…
ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್ 9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು. “ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು…
ಬೆಂಗಳೂರು: ನಗರದಲ್ಲಿ ಬೇಸಿಗೆಯ ಈ ಹೊತ್ತಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ನೀರಿನ ಆಹಾಕಾರ ತೀರಿಸೋದಕ್ಕೆ ರಾಜ್ಯ ಸರ್ಕಾರದಿಂದಲೇ ನೀರಿನ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಇದರ ನಡುವೆಯೂ ಟೆಕ್ನಾಲಜಿ ಮುುಂದುವರೆದಂತೆ ನೀರಿನ ಟ್ಯಾಂಕರ್ ಅನ್ನು ಈಗ ಆನ್ ಲೈನ್ ನಲ್ಲಿ ಆರ್ಡರ್ ಮಾಡಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಕರ್ನಾಟಕವು ನಿಜವಾಗಿಯೂ ಕಷ್ಟದ ಸಮಯವನ್ನು ಎದುರಿಸುತ್ತಿದೆ. ನೀರಿನ ಕೊರತೆಯು ನಾಗರಿಕರ ಜೀವನೋಪಾಯದಲ್ಲಿ ತೊಂದರೆಗಳಿಗೆ ಕಾರಣವಾಗಿದೆ. ವರದಿಗಳ ಪ್ರಕಾರ, ನೀರಿನ ಕೊರತೆಯನ್ನು ಉಲ್ಲೇಖಿಸಿ ಖಾಸಗಿ ನೀರಿನ ಟ್ಯಾಂಕರ್ಗಳು ಮತ್ತು ಬೋರ್ವೆಲ್ಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ನಾಗರಿಕರಿಗೆ ಸಮಾನವಾಗಿ ನೀರನ್ನು ವಿತರಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟು ಸ್ಥಳೀಯರನ್ನು ನೀರಿನ ಟ್ಯಾಂಕರ್ ಗಳಿಗೆ ಹೆಚ್ಚಿನ ಮೊತ್ತವನ್ನು ಪಾವತಿಸುವಂತೆ ಮಾಡಿದೆ. ಈ ಹಿಂದೆ ನಗರದಲ್ಲಿ 500 ರೂ.ಗಳಿದ್ದ 5,000 ಲೀಟರ್ ನೀರಿನ ಟ್ಯಾಂಕರ್ ಈಗ 2,000 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿನ ಏಕೈಕ ಮೂಲವಾದ ಮಂಡ್ಯ…
ಬೆಂಗಳೂರು: ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ (Science City) ಸ್ಥಾಪನೆಗೆ ಅಗತ್ಯವಿದ್ದ 25 ಏಕರೆ ಜಾಗವನ್ನು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ 2 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ದೇಶದಲ್ಲಿ ಪ್ರಸ್ತುತ 3 ವಿಜ್ಞಾನ ನಗರಗಳಿವೆ. ಅದರಲ್ಲಿ ಪ್ರಮುಖವಾಗಿರುವುದು ಕೋಲ್ಕತ್ತಾ ನಗರದಲ್ಲಿದೆ. ದಕ್ಷಿಣ ಭಾರತದಲ್ಲಿ ಬೆಂಗಳೂರು ಪ್ರಮುಖ ನಗರವಾಗಿದ್ದು, ಭಾರತೀಯ ವಿಜ್ಞಾನ ಮಂದಿರ, ಜೆ.ಎನ್.ಸಿ.ಎ.ಎಸ್.ಆರ್, ರಾಮನ್ ಸಂಶೋಧನಾ ಸಂಸ್ಥೆ, 400 ಕ್ಕೂ ಅಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯಗಳು, ಐಟಿ-ಬಿಟಿ ಪಾರ್ಕ್ ಗಳಿವೆ. ವಿಜ್ಞಾನ ನಗರ ಸ್ಥಾಪನೆಗೆ ಬೆಂಗಳೂರು ಸೂಕ್ತ ಎನ್ನುವ ಪ್ರಸ್ತಾವನೆಯನ್ನು ಆಗಸ್ಟ್ 3, 2023 ರಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿತ್ತು…
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. ಅದಕ್ಕೂ ಮುನ್ನವೇ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಉಪ ಮುಖ್ಯ ಚುನಾವಣಾಧಇಕಾರಿ ರಾಜ್ಯ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ ಎಂದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಮತ್ತು jointceomcc@gmail.com ಕ್ಕೆ ಸಲ್ಲಿಸುವಂತೆ…
ಹರಿಯಾಣ: ಇಲ್ಲಿನ ನುಹ್ ಜಿಲ್ಲೆಯಲ್ಲಿ ಹರಿಯಾಣ ಬೋರ್ಡ್ ಪರೀಕ್ಷೆ 2024 ರ ಸಮಯದಲ್ಲಿ ಮಾಸ್ ಕಾಪಿಯನ್ನು ವಿದ್ಯಾರ್ಥಿಗಳು ಹೊಡೆದಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಮಾರ್ಚ್ 5 ರ ಮಂಗಳವಾರ ನಡೆದ 10 ನೇ ಬೋರ್ಡ್ ಪರೀಕ್ಷೆಯ ಸಮಯದಲ್ಲಿ ತವಡು ಪಟ್ಟಣದ ಚಂದ್ರಾವತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಘಟನೆಯ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ವೆಬ್ಸೈಟ್ನಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಪರೀಕ್ಷಾ ಕೇಂದ್ರದಲ್ಲಿನ ದುಷ್ಕೃತ್ಯ ಆಘಾತಕಾರಿಯಾಗಿದೆ. ಈ ಹಿಂದೆ ಟ್ವಿಟರ್ ನಲ್ಲಿ ಅನೇಕ ಬಾರಿ ಹಂಚಿಕೊಳ್ಳಲಾದ ವೈರಲ್ ಕ್ಲಿಪ್ಗಳಲ್ಲಿ, ಜನರು ಶಾಲಾ ಕೊಠಡಿಯ ಗೋಡೆಯನ್ನು ಹಗ್ಗದ ಸಹಾಯದಿಂದ ಹತ್ತಿ, ವಿದ್ಯಾರ್ಥಿಗಳಿಗೆ ಕಾಪಿ ಚೀಟಿಗಳನ್ನು ನೀಡುತ್ತಿರುವುದು ಕಂಡು ಬಂದಿದೆ. ಇಷ್ಟೇ ಅಲ್ಲದೇ ಸಾಲು ಸಾಲು ಜನರು ತಮ್ಮ ವಿದ್ಯಾರ್ಥಿಗಳಿಗೆ ಕಾಪಿ ಚೀಟಿಯನ್ನು ಗೋಡೆ ಹತ್ತಿ, ಕಟ್ಟಡವನ್ನು ಹತ್ತಿ ಕಿಟಕಿ ಮೂಲಕ ನೀಡುತ್ತಿರುವುದನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ದೃಶ್ಯಾವಳಿಯಲ್ಲಿ…
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದ ಸ್ಥಳೀಯ ನಾಯಕರ ಒಳಹರಿವಿನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಉಲ್ಲೇಖಿಸಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿಯೂ ಬಿಡುಗಡೆಯಾಗುವ ಸಾಧ್ಯತೆ ಇದೆ. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಎರಡು ಮೂರು ದಿನಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಯಾವುದೇ ದೊಡ್ಡ ವಿವಾದಗಳಿಲ್ಲ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು, ವೀಕ್ಷಕರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ರಾಜ್ಯಸಭಾ ಮತ್ತು ಲೋಕಸಭಾ ಸದಸ್ಯರು, ಬ್ಲಾಕ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ನೀಡುವ ಅಭಿಪ್ರಾಯಗಳ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಹೇಳಿದರು. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ನಡೆಯಲಿರುವ ಸಭೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್…
ಬೆಂಗಳೂರು: ಬಿಎಂಟಿಸಿಯಿಂದ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ನೀಡುವಂತ ವಿದ್ಯಾರ್ಥಿ ವೇತನ ಮೊತ್ತವನ್ನು ಪ್ರಸ್ತುತ ಸಾಲಿನಿಂದ ಪರಿಷ್ಕರಿಸಿದೆ. ಈ ಮೂಲಕ ಬಿಎಂಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ವಿದ್ಯಾ ಸಹಾಯ ನಿಧಿಯ ವತಿಯಿಂದ ಸಂಸ್ಥೆಯ ಅಧಿಕಾರಿಗಳ/ನೌಕರರಗಳ ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು 2003ನೇ ಸಾಲಿನಿಂದ ನೀಡುತ್ತಾ ಬಂದಿರುತ್ತದೆ. ಪ್ರಸ್ತುತ ಸಂಸ್ಥೆಯಲ್ಲಿ 20023-24 ರ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಅಧಿಕಾರಿಗಳ/ನೌಕರರುಗಳ ಅರ್ಹ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಮೊತ್ತವನ್ನು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ ಎಂದಿದೆ. ಪರಿಷ್ಕೃತ ವಿದ್ಯಾರ್ಥಿ ವೇತನ ವಿವರ ವಿದ್ಯಾಭ್ಯಾಸ ವಿದ್ಯಾಭ್ಯಾಸದ ಅವಧಿ ಪ್ರಸ್ತುತ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಮೊತ್ತ 2023-24 ಶೈಕ್ಷಣಿಕ ಸಾಲಿನಿಂದ ಪರಿಷ್ಕೃತ ವಿದ್ಯಾರ್ಥಿ ವೇತನ ಮೊತ್ತ ಐಟಿಐ/ ಜೆಒಸಿ 1 ರಿಂದ 2 ವರ್ಷಗಳು ರೂ. 900/- ಪ್ರತಿ ವರ್ಷ ರೂ. 5000/- ಪ್ರತಿ ವರ್ಷ…