Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು. 15 ಸಾವಿರ ವೇತನ ಫಿಕ್ಸ್ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಬಿಎಂಟಿಸಿಯಿಂದ ಬಸ್ ಪಾಸ್ ದರಗಳನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಇಂದು ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ನೂತನ ದರಗಳು ಜಾರಿಗೊಳ್ಳಲಿದ್ದಾವೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಸಾಮಾನ್ಯ ದೈನಿಕ ಪಾಸು ರೂ.70 ಇದ್ದದ್ದನ್ನು ರೂ.80ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಸಾಪ್ತಾಹಿಕ ವಾರದ ಪಾಸು ದರ ರೂ.300ರಿಂದ ರೂ.350ಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಇನ್ನೂ ಹಿರಿಯ ನಾಗರೀಕರ ಸಾಮಾನ್ಯ ಮಾಸಿಕ ಪಾಸು ದರ ರೂ.945 ಇದ್ದದ್ದನ್ನು ರೂ.1080ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಮಾಸಿಕ ಪಾಸು ದರ ರೂ.1050ರಿಂದ ರೂ.1200ಕ್ಕೆ ಹೆಚ್ಚಳವಾಗಿದೆ. ನೈಸ್ ರಸ್ತೆಯ ಸಾಮಾನ್ಯ ಮಾಸಿಕ ಪಾಸು ಟೋಲ್ ಶುಲ್ಕ ಒಳಗೊಂಡಂತೆ ರೂ.2200 ರಿಂದ ರೂ.2350ಕ್ಕೆ ಏರಿಕೆ ಮಾಡಲಾಗಿದೆ. ವಾಯು ವಜ್ರ ದೈನಿಕ ಪಾಸಿನ ದರವನ್ನು ರೂ.120 ರಿಂದ ರೂ.140ಕ್ಕೆ ಏರಿಕೆ ಮಾಡಲಾಗಿದೆ. ಮಾಸಿಕ ಪಾಸ್ ದರ ರೂ.1800ರಿಂದ…
ಮಡಿಕೇರಿ :-ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರಾದ ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಸರ್ಕಾರ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿದೆ ಎಂದರು. ಪೌರಕಾರ್ಮಿಕರು ಪ್ರತಿ ನಿತ್ಯ ನಗರ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆಗೆ ದುಡಿಯುತ್ತಾರೆ. ಇವರಿಗೆ ಮೂಲಸೌಲಭ್ಯ ಕಲ್ಪಿಸುವುದು ಹೆಚ್ಚಿನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಶೀಘ್ರ ಮನೆ ನಿರ್ಮಾಣದ ಕಾಮಗಾರಿ ಆರಂಭಿಸಿ, ಪೂರ್ಣಗೊಳಿ¸ಬೇಕು ಎಂದು ಡಾ.ಮಂತರ್ ಗೌಡ ಅವರು ತಾಕೀತು ಮಾಡಿದರು. ಸರ್ಕಾರ ಎಲ್ಲಾ ವರ್ಗದ ಜನರಿಗೆ ಕನಿಷ್ಠ ಮೂಲ…
ಬೆಂಗಳೂರು: ಇಂದು ಕರ್ನಾಟಕ, ಕೇರಳ ರಾಜ್ಯಕ್ಕೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಈ ಬಳಿಕ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. 6 ನಕ್ಸಲರು ಶರಣಾಗತಿಯ ಬಳಿಕ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮಾತಿನ ಹೈಲೈಟ್ಸ್ ಈ ಕೆಳಗಿನಂತಿದೆ. • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. • ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು. • ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. • ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. • ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ…
ಬೆಂಗಳೂರು: ಸಾರಿಗೆ ಬಸ್ ದರವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್ ನೀಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಬಿಎಂಟಿಸಿ ದೈನಿಕ ಹಾಗೂ ಮಾಸಿಕ ಬಸ್ ಪಾಸ್ ದರ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ನೂತನ ಹೆಚ್ಚಳ ದರ ನಾಳೆಯಿಂದಲೇ ಜಾರಿಗೆ ಬರುತ್ತಿರುವುದಾಗಿ ತಿಳಿಸಿದೆ. ಇಂದು ಬಿಎಂಟಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿವಿಧ ವರ್ಗದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿತರಣೆ ಮಾಡುತ್ತಿದೆ. ಪ್ರಯಾಣಿಕರ ಬಸ್ ಟಿಕೆಟ್ ದರ ಪರಿಷ್ಕರಣೆಯಾದ ಹಿನ್ನಲೆಯಲ್ಲಿ ಸಂಸ್ಥೆಯ ಆರ್ಥಿ ದೃಷ್ಠಿಯಿಂದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳ ದರಗಳನ್ನು ಹೆಚ್ಚಳ ಮಾಡುತ್ತಿದೆ. ದಿನಾಂಕ 09-01-2025ರಿಂದ ನೂತನ ಹೆಚ್ಚಳ ದರವು ಜಾರಿಯಾಗಲಿದೆ ಎಂದಿದೆ. ಹೀಗಿದೆ ಪಾಸ್ ದರ ಹೆಚ್ಚಳದ ವಿವರ ಸಾಮಾನ್ಯ ದೈನಿಕ ಪಾಸು ರೂ.70 ಇದ್ದದ್ದನ್ನು ರೂ.80ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಸಾಪ್ತಾಹಿಕ ವಾರದ ಪಾಸು ದರ ರೂ.300ರಿಂದ ರೂ.350ಕ್ಕೆ…
ಚಿತ್ರದುರ್ಗ : ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ 129.80 ಅಡಿಗೆ ತಲುಪಿದೆ. ಹೀಗಾಗಿ ನೀರಿನ ಮಟ್ಟ ಜಲಾಶಯದ ಗರಿಷ್ಟ ಮಟ್ಟ 130 ಅಡಿಗೆ ತಲುಪಿ, ಹೆಚ್ಚುವರಿ ನೀರು ಕೋಡಿ ಮೂಲಕ ಹರಿದುಹೋಗಲಿದೆ. ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವುದು ಇಡೀ ಜಿಲ್ಲೆಗೆ ಸಂತಸದ ಕ್ಷಣವಾಗಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಭರ್ತಿಯಾಗಿರುವ ವಿ.ವಿ. ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕೂಡ…
ಚಿತ್ರದುರ್ಗ: ಹೆಚ್.ಎ.ಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ ಫಿಟ್ಟರ್, ಮೆಷಿನಿಸ್ಟ್, ಟರ್ನರ್, ಕಂಪ್ಯೂಟರ್ ಅಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟಟ್, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮಾರ್ಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಅಪರೇಟರ್ ಮೆಕಾನಿಕ್ ರಿಪ್ರೀರಿಗೇಷನ್ ಅಂಡ್ ಕಂಡಿಷಿನಿಂಗ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಅಪ್ರೆಂಟಿಸ್ ತರಬೇತಿಯು ಎಲ್ಲಾ ಟ್ರೇಡ್‍ಗಳಿಗೂ ಒಂದು ವರ್ಷದ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್), ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರ., ಎನ್‍ಸಿವಿಟಿ ನೋಂದಣಿ ಪ್ರತಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ನೊಂದಾಯಿಸಲು https://apprenticeshindia.gov.in, www.hal-india.com/career ವೆಬ್‍ಸೈಟ್ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060,…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು. ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ…
ಬೆಂಗಳೂರು : “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. “ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು…
ಚಿತ್ರದುರ್ಗ : 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜ.21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬ್ಯಾಟರಿ ಚಾಲಿತ ವೀಲ್‍ಚೇರ್ ಯೋಜನೆಯಡಿ ಪ್ರಯೋಜನ ಪಡೆಯಲು 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ವೈದ್ಯಕೀಯ ಪ್ರಮಾಣ ಪತ್ರ (ಶೇ.75ಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಇರುವವರಿಗೆ ಮಾತ್ರ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯದಿರುವ ಬಗ್ಗೆ ರೂ.20/ಗಳ ಛಾಪಕಾಗದ ನೋಟರಿ ದೃಢೀಕರಣ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಪಡೆದಿರುವ ವಿಕಲಚೇತನರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ. ಈ ಯೋಜನೆ www.sevasindhuservices.karnataka.gov.in/ ವೆಬ್‍ಸೈಟ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ…













