Author: kannadanewsnow09

ಬೆಂಗಳೂರು: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು. ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು. ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು. ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ,…

Read More

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಡೆಸಲಿದೆ. ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. https://kannadanewsnow.com/kannada/govt-should-conduct-proper-probe-into-irregularities-committed-by-ips-officer-m-chandrasekhar-jds/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದಿದೆ. ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ ..? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ.. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಭೂ ವ್ಯವಹಾರವೊಂದರಲ್ಲಿ 20…

Read More

ಬೆಂಗಳೂರು: ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸಿದಂತ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ರೇವ್ ಪಾರ್ಟಿ ಆಯೋಜನೆ ವಿಚಾರವನ್ನು ಮೈಸೂರು ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ. ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೇವ್ ಪಾರ್ಟಿ ವಿರುದ್ಧ ಕಾನೂನು ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಅಂದಹಾಗೆ ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿಯನ್ನು ನಿನ್ನೆ ಆಯೋಜಿಸಲಾಗಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಮೈಸೂರು ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ತಲಾ 2000ದಂತೆ ವಸೂಲಿ ಮಾಡಿ ರೇವ್ ಪಾರ್ಟಿ ಆಯೋಜಿಸಲಾಗಿದೆ ಎನ್ನಲಾಗಿತ್ತು. ಆದರೇ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸರಬರಾಜು, ಸೇವನೆಯ ಬಗ್ಗೆ ಮಾದರಿ ಸಂಗ್ರಹಿಸಿದ್ದು, ವರದಿಯ ಬಳಿಕ ತಿಳಿಯಲಿದೆ. https://kannadanewsnow.com/kannada/bengaluru-two-wheeler-owners-get-crucial-information-from-city-police/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More

ಬೆಂಗಳೂರು: ನಗರದಲ್ಲಿ ದಿನೇ ದಿನೇ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿಯೇ ಬೆಂಗಳೂರು ನಗರ ಪೊಲೀಸರಿಂದ ಮಹತ್ವದ ಮನವಿಯನ್ನು ಮಾಲೀಕರಿಗೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ಸುಮಾರು 80 ಲಕ್ಷ ದ್ವಿಚಕ್ರ ವಾಹನಗಳು ನೋಂದಣಿಯಾಗಿವೆ. ಪ್ರತಿದಿನ ಸುಮಾರು 1500 ರಿಂದ 2000 ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಕಳೆದ 3 ವರ್ಷಗಳಿಂದ ಪ್ರತಿದಿನ ಸರಾಸರಿ 14 ರಿಂದ 16 ವಾಹನಗಳು ಕಳ್ಳತನವಾಗುತ್ತಿವೆ. ಆದ್ದರಿಂದ ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನಕ್ಕೆ ಕಾರಣಗಳು 1. ವಾಹನಗಳನ್ನು ಅಜಾಗರೂಕತೆಯಿಂದ ನಿಲ್ಲಿಸುವುದು. 2. ನಿಲ್ಲಿಸಿರುವ ವಾಹನದಲ್ಲಿ ಕೀಲಿಯನ್ನು ಬಿಡುವುದು. 3. ಸುಲಭವಾಗಿ ಒಡೆಯಬಹುದಾದ ಹ್ಯಾಂಡಲ್ ಲಾಕ್ ಗಳನ್ನು ಹೊಂದಿರುವ ವಾಹನಗಳನ್ನು ಬಳಸುವುದು. 4. ಸರಿಯಾದ ಲಾಕಿಂಗ್ ವ್ಯವಸ್ಥೆಗಳಿಲ್ಲದ ಹಳೆಯ ವಾಹನಗಳನ್ನು ಬಳಸುವುದು. 5.…

Read More

ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದಾರೆ.  ಇಂದು ಮನ್ ಕೀ ಬಾತ್ ನ 114ನೇ ಎಪಿಸೋಡ್ ನಲ್ಲಿ ಮಾತನಾಡಿದಂತ ಅವರು, ಮನ್ ಕೀ ಬಾತ್ ಗೆ 10 ವರ್ಷ ಆಗಿದ್ದನ್ನು ನೆನೆದು ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಹತ್ತು ವರ್ಷಗಳನ್ನು ಪೂರೈಸಿದೆ. ಜಲ ಸಂರಕ್ಷಣೆಗೆ ಮಹಿಳಾ ರೈತರು ನೀಡಿದ ಕೊಡುಗೆಯನ್ನು ಪ್ರಧಾನಿ ಶ್ಲಾಘಿಸಿದರು. ಪ್ರತಿ ತಿಂಗಳು ಕಾರ್ಯಕ್ರಮಕ್ಕಾಗಿ ಪತ್ರಗಳು ಮತ್ತು ಸಲಹೆಗಳನ್ನು ಕಳುಹಿಸುವ ಅಸಂಖ್ಯಾತ ಜನರಿಗೆ ಪ್ರಧಾನಿ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾರೆ. ಕಳೆದ ಕೆಲವು ವಾರಗಳಿಂದ, ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ, ಈ ಮಳೆಗಾಲವು ‘ಜಲ ಸಂರಕ್ಷಣೆ’ ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪೋಷಿಸಲು…

Read More

ಮೈಸೂರು: ಜಿಲ್ಲೆಯ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಂತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು, ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಮೈಸೂರು ಹೊರ ವಲಯದಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವಿಷಯ ತಿಳಿದಂತ ಮೈಸೂರು ಜಿಲ್ಲಾ ಪೊಲೀಸರು ಅಲರ್ಟ್ ಆಗಿ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮೈಸೂರು ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಮ್ ನೇತೃತ್ವದಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ 150ಕ್ಕೂ ಹೆಚ್ಚು ಯುವತಿ, ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆಯನ್ನು ನಡೆಸಿದಂತ ಆರೋಪ ಕೂಡ ಕೇಳಿ ಬಂದಿದೆ. ಮೈಸೂರು ಹೊರ ವಲಯದ ರೇವ್ ಪಾರ್ಟಿಯಲ್ಲಿ ಭಾಗಿಯಾದವರಿಂದ ತಲಾ 2000 ಹಣವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…

Read More

ಬೆಂಗಳೂರು: ರಾಜ್ಯದ ಶೈಕ್ಷಣಿಕ ಚಟುವಟಿಕೆಯ ಮಾದರಿಯಿಂದಾಗಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಸೇರಿದಂತೆ ಹಲವು ಅವೈಜ್ಞಾನಿಕ ಶೈಕ್ಷಣಿಕ ವೇಳಾಪಟ್ಟಿಯಿಂದಾಗಿ ಶಿಕ್ಷಕರು ಒತ್ತಡದಲ್ಲೇ ಬೋಧನಾ ವೃತ್ತಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಿಸುತ್ತಾ ಎನ್ನುವ ಬಗ್ಗೆ ಮುಂದೆ ಓದಿ. ಕನಿಷ್ಠ ಕಲಿಕಾಂಶಗಳ ಕಲಿಕೆ ಇಲ್ಲದೆ   ಸ್ಪಷ್ಟವಾಗಿ ಓದಲು, ಶುದ್ಧವಾಗಿ ಬರೆಯಲು ಗಣಿತದ ಮೂಲ ಕಲಿಕಾಂಶಗಳು ಬಾರದ, ಮೂಲ ಸಾಮರ್ಥ್ಯಗಳ ಜ್ಞಾನವಿಲ್ಲದ ವಿದ್ಯಾರ್ಥಿಗಳು ಪ್ರೌಢ ಶಾಲೆಗೆ ದಾಖಲಾಗುತ್ತಿದ್ದಾರೆ.  ಪ್ರೌಢಶಾಲೆಗಳಲ್ಲಿ ಸೇತುಬಂಧದ ಪೂರ್ವ ಪರೀಕ್ಷೆಯ ವಿಶ್ಲೇಷಣೆ ಗಮನಿಸಿದರೆ ಇದು ತಿಳಿಯುತ್ತದೆ. ಇಂಥ ವಿದ್ಯಾರ್ಥಿಗಳಿಗೆ 8 9ನೇ ತರಗತಿಯ ಪಠ್ಯ ವಸ್ತು ಬೋಧಿಸಬೇಕೋ ಅಥವಾ ವರ್ಣಮಾಲೆ, ಕಾಗುಣಿತ, ಒತ್ತಕ್ಷರಗಳು, ಓದುವುದು, ಬರೆಯುವುದು ಕಲಿಸಬೇಕೋ ಗೊತ್ತಾಗುತ್ತಿಲ್ಲ. ಒಂದರಿಂದ ಎಂಟನೇ ತರಗತಿಯವರೆಗೆ ಕಲಿಯಬೇಕಾದ ಮೂಲ ಕಲಿಕಾಂಶಗಳನ್ನು ಸೇತುಬಂಧದ 15 ದಿನಗಳಲ್ಲಿ ಕಲಿಸಬೇಕು. ಈ 15 ದಿನಗಳಲ್ಲಿ  ಕಲಿಯಲು ವಿಫಲನಾದರೆ ಅವರನ್ನು ಪರಿಹಾರ ಬೋಧನೆಗೆ ಒಳಪಡುವ ವಿಶೇಷ ಅಗತ್ಯವುಳ್ಳ ಮಕ್ಕಳು…

Read More

ಮೈಸೂರು: ಇಂದು ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ. ಹೌದು ಸಾರ್ವಜನಿಕರಿಗೆ ಯಾರಿಗೂ ಇಂದು ಚಾಮುಂಡಿ ತಾಯಿ ದರ್ಶನ ಪಡೆಯಲು ಅವಕಾಶವಿಲ್ಲ. ಅಲ್ಲದೇ ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ ಆಚರಣೆಗೆ ಕರೆ ನೀಡಿತ್ತು. ಇಂದು ಬೆಳಿಗ್ಗೆ 10.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ, ಪುರಭವನದ ಹೊರಾಂಗಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಆದರೇ ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ಹೀಗಾಗಿ ಐವರು ಜನರಿಗಿಂತ ಹೆಚ್ಚು ಮಂದಿ ಗುಂಪು ಗೂಡುವುದು, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ. https://kannadanewsnow.com/kannada/5-year-old-boy-dies-of-suspected-dengue-fever-in-ballari/…

Read More

ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ 5 ವರ್ಷದ ಬಾಲಕ ಪ್ರದೀಪ್ ಆಚಾರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಪುಟಾಣಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸಿದ್ದಮ್ಮನಹಳ್ಳಿ ಗ್ರಾಮದ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬಳ್ಳಾರಿಯ ವಿಮ್ಸ್, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಜನರು ಪಡೆದಿದ್ದರೇ, ಕೆಲವರು ಚಿಕಿತ್ಸೆಯ ನಂತ್ರ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯಿಂದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿನ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಸೊಳ್ಳೆನಿಯಂತ್ರಣಕ ಔಷಧ ಸೇರಿದಂತೆ ಡೆಂಗ್ಯೂ ನಿಯಂತ್ರಣ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/technical-snag-at-whitefield-metro-station-in-bengaluru-traffic-on-purple-line-suspended/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/

Read More