Author: kannadanewsnow09

ಬೆಂಗಳೂರು: ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ಆದರೇ ಎನ್ನುತ್ತಲೇ ನಟಿ ರಚಿತಾ ರಾಮ್ ಅವರು ಜೈಲಲ್ಲಿ ನಟ ದರ್ಶನ್ ಸ್ಥಿತಿ ಕಂಡು ಕಣ್ಣೀರಿಟ್ಟರು. ಈ ಮೂಲಕ ಭಾವುಕರಾದರು. ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಟಿ ರಚಿತಾ ರಾಮ್ ತೆರಳಿ, ನಟ ದರ್ಶನ್ ಭೇಟಿಯಾದರು. ಅವರ ಆರೋಗ್ಯ ವಿಚಾರಿಸಿ, ಮಾತನಾಡಿಕೊಂಡ ಬಂತ ನಂದ್ರ, ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಟಿ ರಚಿತಾ ರಾಮ್ ಎಂಬುದಾಗಿ ಗುರುತಿಸಿಕೊಳ್ಳಲು ನಟ ದರ್ಶನ್ ಕಾರಣ. ಅವರು ಅಂದು ಅವರ ಬ್ಯಾನರ್ ಅಡಿಯಲ್ಲಿ ನನಗೆ ಅವಕಾಶ ನೀಡದೇ ಇದ್ದಿದ್ದರೇ, ಒಂದು ಮಾತು ನೋ ಎಂದಿದ್ದರೇ ನಾನು ಹೀಗೆ ನಟಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. ನಾನು ದರ್ಶನ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದೆ. ಅವರು ಆರೋಗ್ಯವಾಗಿದ್ದಾರೆ. ನಾನು ಅವರ ಸ್ಥಿತಿಯನ್ನು ಕಂಡು ಭಾವುಕರಾದಂತ ವೇಳೆಯಲ್ಲಿ ನಟ ದರ್ಶನ್ ಅವರೇ ನನ್ನನ್ನು ಸಮಾಧಾನಿಸಿದರು. ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ನಟ ದರ್ಶನ್ ಆದಷ್ಟು ಬೇಗ ಹೊರಗೆ ಬರ್ತಾರೆ ಅಂತ…

Read More

ಬೆಂಗಳೂರು :ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ತಿಳಿಸಿದರು. ಸಿದ್ದರಾಮಯ್ಯ ವಿರುದ್ಧ ನೀಡಿರುವುದು ಖಾಸಗಿ ದೂರು. ಎಫ್ ಐ ಆರ್ ಆಗಿಲ್ಲ, ತನಿಖೆ ನಡೆದಿಲ್ಲ. ಆದರೆ ದೂರು ನೀಡಿದ ದಿನವೇ ನೋಟಿಸ್ ನೀಡಿರುವುದು ಎಷ್ಟು ಸರಿ. ತನಿಖೆಯಲ್ಲಿ ಅಕ್ರಮ ಸಾಬೀತು ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕಿತ್ತು. ನೈತಿಕತೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ನೂರು ಸಿದ್ದರಾಮಯ್ಯ ಬಂದರೂ ಏನೂ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರು…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ. ಹೊಸ ಮಾರ್ಗದಲ್ಲಿ ದಿನಾಂಕ 26-08-2024ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಪ್ರಮುಖ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ, ಯಶವಂತಪುರ ರೈಲ್ವೆ ನಿಲ್ದಾಣದಿಂದ ಯಶವಂತಪುರ ಬಸ್‌ ನಿಲ್ದಾಣ, ದಂಡು ರೈಲ್ವೆ ನಿಲ್ದಾಣ, ಈಸ್ಟ್‌ ರೈಲ್ವೆ ನಿಲ್ದಾಣ ಹಾಗೂ ಮಾರುತಿ ಸೇವಾ ನಗರ ಮಾರ್ಗವಾಗಿ ಸರ್‌ ಎಂ.ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ನೂತನ ಮಾರ್ಗ ಸಂಖ್ಯೆ 300-ಆರ್‌ ಅನ್ನು ದಿನಾಂಕ: 26.08.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ : 300-ಆರ್ ಬಿಡುವ ವೇಳೆ ಯಶವಂತಪುರ ರೈಲ್ವೆ ನಿಲ್ದಾಣ ಸರ್‌ ಎಂ.ವಿಶ್ವೇಶ್ವರಯ್ಯ…

Read More

ಶಿವಮೊಗ್ಗ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ಸರ್ವೆ ನಂ. 19ರ ಸರ್ಕಾರಿ ಜಮೀನಿನನ್ನು ಅದೇ ಗ್ರಾಮದ ಚನ್ನಯ್ಯ ಬಿನ್ ವೀರಯ್ಯ ಎಂಬುವವರು 25 ಗುಂಟೆ ಜಮೀನು ಹಾಗೂ ಬಸಪ್ಪ ಬಿನ್ ಲೇಟ್ ಅಯ್ಯಣ್ಣ ಎಂಬುವವರು 36 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುತ್ತಾರೆ ಎಂಬ ಗ್ರಾಮಸ್ಥರ ದೂರಿನನ್ವಯ ಶಿಕಾರಿಪುರ ತಹಶೀಲ್ದಾರ್ ನೀಡಿ ದೂರನ್ನು ಪರಿಗಣಿಸಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಕ.ಭೂ.ಕಂ. ಅಧಿನಿಯಮದಡಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಸ್ವೀಕರಿಸಿ ಸಂಪೂರ್ಣ ಸಾಕ್ಷ್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿತರು ಸರ್ಕಾರಿ ಜಮೀನನ್ನು ಭೂ ಕಬಳಿಕೆ…

Read More

ಬೆಂಗಳೂರು: ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ “ಬಿಜೆಪಿ, ದಳದ ಕಿಡಿಗೇಡಿಗಳು ಕಲ್ಲು ಹೊಡಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ದಳ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ನಮಗೆ ರಾಜ್ಯಪಾಲರ ಮೇಲೆ ಗೌರವವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಂದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿಸಿ ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು, ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇವೆ” ಎಂದು…

Read More

ಬೆಂಗಳೂರು: ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಹೀಗಿದ್ದೂ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗ ರಾಜ್ಯಪಾಲರಿಗೆ ಬಾಕಿ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಸಲಹೆ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಸಲಹೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ನಾಯಕರ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. https://kannadanewsnow.com/kannada/nifty-above-24800-sensex-up-148-pts/ https://kannadanewsnow.com/kannada/as-long-as-i-am-there-there-will-be-no-scope-for-privatisation-of-bwssb-dk-shivakumar/

Read More

ನವದೆಹಲಿ: ಕೆಲ ದಿನಗಳಿಂದ ಕುಸಿತಗೊಂಡಿದ್ದಂತ ಶೇರು ಮಾರುಕಟ್ಟೆ ಇಂದು ಕೊಂಚ ಚೇತರಿಕೆ ಕಂಡಿದೆ. ನಿಫ್ಟಿ 24,800 ಅಂಕವನ್ನು ಏರಿಕೆ ಕಂಡರೇ, ಸೆನ್ಸೆಕ್ಟ್ 148 ಅಂಕಗಳಿಗೆ ಜಿಗಿದಿದೆ. ಭಾರತೀಯ ಬೆಂಚ್ ಮಾರ್ಕ್ ಸೂಚ್ಯಂಕಗಳು ಆಗಸ್ಟ್ 22 ರಂದು ನಿಫ್ಟಿ 24,800 ಕ್ಕಿಂತ ಹೆಚ್ಚಾಗಿದೆ. ಸೆನ್ಸೆಕ್ಸ್ 147.89 ಪಾಯಿಂಟ್ ಅಥವಾ ಶೇಕಡಾ 0.18 ರಷ್ಟು ಏರಿಕೆ ಕಂಡು 81,053.19 ಕ್ಕೆ ತಲುಪಿದೆ ಮತ್ತು ನಿಫ್ಟಿ 41.30 ಪಾಯಿಂಟ್ ಅಥವಾ 0.17 ಶೇಕಡಾ ಏರಿಕೆ ಕಂಡು 24,811.50 ಕ್ಕೆ ತಲುಪಿದೆ. ಸುಮಾರು 2111 ಷೇರುಗಳು ಮುಂದುವರಿದವು, 1299 ಷೇರುಗಳು ಕುಸಿದವು ಮತ್ತು 92 ಷೇರುಗಳು ಬದಲಾಗಲಿಲ್ಲ. ಗ್ರಾಸಿಮ್ ಇಂಡಸ್ಟ್ರೀಸ್, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಟಾಟಾ ಸ್ಟೀಲ್, ಭಾರ್ತಿ ಏರ್ಟೆಲ್ ಮತ್ತು ಅಪೊಲೊ ಹಾಸ್ಪಿಟಲ್ಸ್ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದರೆ, ಟಾಟಾ ಮೋಟಾರ್ಸ್, ಡಾ.ರೆಡ್ಡೀಸ್ ಲ್ಯಾಬ್ಸ್, ಎನ್ಟಿಪಿಸಿ, ವಿಪ್ರೋ ಮತ್ತು ಎಂ & ಎಂ ನಷ್ಟ ಅನುಭವಿಸಿದ ಷೇರುಗಳಾಗಿವೆ. ವಲಯಗಳ ಪೈಕಿ ವಿದ್ಯುತ್ ಸೂಚ್ಯಂಕವು ಶೇಕಡಾ 1 ರಷ್ಟು…

Read More

ಬೆಂಗಳೂರು: ಬಿಡಬ್ಲ್ಯೂ ಎಸ್ ಎಸ್ ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಹೆಚ್ ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ…

Read More

ಬೆಂಗಳೂರು : “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ”…

Read More

ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಈ ದೇಶದ ಪ್ರಧಾನಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಅವರು ನಿಮ್ಮ ಥರ ಕರಿಕಾಗೆ ಅಲ್ಲ. ಅವರು ಕಳಂಕವೇ ಇಲ್ಲದವರು ಎಂದು ವಿವರಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರಕಟಿಸಿದ ಅವರು, ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ. ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದು ತಿಳಿಸಿದರು. ನಿಮ್ಮ…

Read More