Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಂದು – ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಯೇ ಇಲ್ಲ. ಇಂದು – ಪಾಕಿಸ್ತಾನ್ ಜಿಂದಾಬಾದ್ ಎಂದವರು ನಮಗೆ ಪರಿಚಯವೇ ಇಲ್ಲ. ಸಿಎಂ ಸಿದ್ಧರಾಮಯ್ಯ ಅವರೇ, ಡಿಸಿಎಂ ಡಿಕೆ ಶಿವಕುಮಾರ್ ಅವರೇ ಇಲ್ಲಿ ನೋಡಿ ಚಿತ್ರಗಳೇ ಮಾತನಾಡುತ್ತಿವೆ ಎಂಬುದಾಗಿ ಬಿಜೆಪಿ ವಾಗ್ಧಾಳಿ ನಡೆಸಿದೆ. https://twitter.com/BJP4Karnataka/status/1765315171562799415 ಈ ಬಗ್ಗೆ ಎಕ್ಸ್ ಮಾಡಿದ್ದು, ಪಾಕಿಸ್ತಾನ ಪರ ಸಹಾನುಭೂತಿ ಹೊಂದಿದ ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಅವಿನಾಭಾವ ಸಂಬಂಧ. ಪಾ”ಕೈ”ಸ್ತಾನಿಗಳ ಜೊತೆ ಬಿಡಿಸಲಾಗದ ನಂಟು. ಭವ್ಯ ಭಾರತಕ್ಕೆ ಇವರಿಂದ ಸದಾ ಕಳಂಕವುಂಟು ಎಂದು ಕಿಡಿಕಾರಿದೆ. https://twitter.com/BJP4Karnataka/status/1765323581276512399 https://kannadanewsnow.com/kannada/breaking-fly91-aircraft-ready-to-fly-air-operator-certificate-available-from-dgca/ https://kannadanewsnow.com/kannada/rythu-solar-shakti-mela-to-be-organised-at-gkvk-premises-in-bengaluru-on-march-9-cm-siddaramaiah/
ಗದಗ : ಬರಗಾಲ ಸಂದರ್ಭದ ಗಾಂಭೀರ್ಯತೆ ಅರಿತು ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ ಬರ ನಿರ್ವಹಣೆ ಕುರಿತ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ಸೂಚಿಸಿದರು. ಕಾಮಗಾರಿ ಸ್ಥಳ ಪರಿಶೀಲಿಸಿ : ಜಿಲ್ಲೆಯಲ್ಲಿ ಜೆಜೆಎಂ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಆಯಾ ತಾಲೂಕಾ ಕಾರ್ಯನಿರ್ವಹಣಾಧಿಕಾರಿಗಳು ಗುತ್ತಿಗೆದಾರರೊಂದಿಗೆ ಹಾಗೂ ಪಿಡಿಓ ಗಳೊಂದಿಗೆ ಖುದ್ದು ಕಾಮಗಾರಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಬರಗಾಲದ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ 110/11 ಕೆವಿ ಸೊರಬ, ಮಾವ, ಶಿರಾಳಕೊಪ್ಪ ಹಾಗೂ ಸಂಡಾ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ 11ಕೆವಿ ಫೀಡರ್ ಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸೊರಬ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ತಾಲೂಕಿನ ಎಇಇ ಮಾಹಿತಿ ನೀಡಿದ್ದು, ದಿನಾಂಕ:07.03.2024ರ ನಾಳೆ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸೊರಬ, ಮಾವಲಿ, ಶಿರಾಳಕೊಪ್ಪ ಹಾಗೂ ಸಂಡಾ ಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ನಾಳೆ ಈ ಪ್ರದೇಶಗಲ್ಲಿ ಕರೆಂಟ್ ಇರುವುದಿಲ್ಲ 07.03.2024 ರಂದು ಪ್ರಸರಣ ಮಾರ್ಗ ಉಪವಿಭಾಗ, ಕವಿಪ್ರನಿನಿ’ ಜೋಗ್ ಫಾಲ್ಸ್ ರವರಿಂದ ತುರ್ತು ಕಾಮಗಾಲಯನ್ನು ನಡೆಸಲು ಉದ್ದೇಶಿಸಿರುವುದರಿಂದ 110/ 6 ಸೊರಬ, ಮಾವಲ, ಶಿರಾಳಕೊಪ್ಪ ಹಾಗೂ ಸಂಡಾ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಫ್21 ಸೊರಬ ಪಟ್ಟಣ ಸೇರಿದಂತೆ ಎಫ್2 ಸಾರೇಕೊಪ್ಪ, ಎಫ್-3 ಬಳ್ಳಬೈಲು,…
ನವದೆಹಲಿ: ಟಿಎಂಸಿ ಉಚ್ಚಾಟಿತ ನಾಯಕ ಮತ್ತು ಸಂದೇಶ್ಖಾಲಿ ಪ್ರಕರಣದ ಆರೋಪಿ ಶೇಖ್ ಶಹಜಹಾನ್ ಅವರನ್ನು ಕಲ್ಕತ್ತಾ ಹೈಕೋರ್ಟ್ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಶಹಜಹಾನ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ನಂತರ ಹೈಕೋರ್ಟ್ ಇಂದು ಪಶ್ಚಿಮ ಬಂಗಾಳ ಸಿಐಡಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಉತ್ತರಿಸುವಂತೆ ಕೇಳಿದೆ. ಆರೋಪಿ ಶೇಖ್ ಶಹಜಹಾನ್ ನನ್ನು ಬುಧವಾರ ಸಂಜೆ 4.30 ರೊಳಗೆ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಪಶ್ಚಿಮ ಬಂಗಾಳ ಪೊಲೀಸರನ್ನು ಸಂಪೂರ್ಣವಾಗಿ ಪಕ್ಷಪಾತದ ನಡವಳಿಕೆಗಾಗಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಆರೋಪಿಗಳನ್ನು ರಕ್ಷಿಸಲು ತನಿಖೆಯನ್ನು ವಿಳಂಬಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದೆ. ಪಡಿತರ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜನವರಿ 5 ರಂದು ಸಂದೇಶ್ಖಾಲಿಯಲ್ಲಿರುವ ಶೇಖ್ ಅವರ ಆವರಣವನ್ನು ಶೋಧಿಸಲು ಹೋದಾಗ ಇಡಿ ಅಧಿಕಾರಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿ ಗಾಯಗೊಳಿಸಿದೆ. ಇಡಿ ಅಧಿಕಾರಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಫೆಬ್ರವರಿ…
ಶಿವಮೊಗ್ಗ : ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ. ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು. ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು. https://kannadanewsnow.com/kannada/breaking-fly91-aircraft-ready-to-fly-air-operator-certificate-available-from-dgca/ https://kannadanewsnow.com/kannada/rythu-solar-shakti-mela-to-be-organised-at-gkvk-premises-in-bengaluru-on-march-9-cm-siddaramaiah/
ಶಿವಮೊಗ್ಗ: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವಾಹನಗಳ ಮಾರ್ಗ ಬದಲಾವಣೆ ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ. ತೀರ್ಥಹಳ್ಳಿ ಮಾರ್ಗವಾಗಿ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದಿದೆ. ಈ ವಿಶೇಷ ರೈಲು (06237) ಮಾರ್ಚ್ 11, 2024 ರಂದು ಮೈಸೂರು ನಿಲ್ದಾಣದಿಂದ ಸಂಜೆ 06:35 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 09:10 ಗಂಟೆಗೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಇದೇ ರೈಲು (06238) ಮಾರ್ಚ್ 12, 2024 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 01:55 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರಂ, ಕೆಂಗೇರಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು,…
ಬೆಂಗಳೂರು: ನಗರದಲ್ಲಿ ಈಗಾಗಲೇ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸೇವೆ ಇದೆ. ಈಗ ಚಾಲಕ ರಹಿತ ಮೆಟ್ರೋ ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಅಲ್ಲದೇ ಬೆಂಗಳೂರಲ್ಲಿ ಚಾಲಕ ರಹಿತ ಮೆಟ್ರೋ ಸಂಚಾರದ ಟೈಮ್ ಬಂದೇ ಬಿಡ್ತು ಎನ್ನುವಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ಚೀನಾದ ಸಿ.ಆರ್.ಆರ್.ಸಿ (CRRC) ತಯಾರಿಸಿದ ಮೊದಲ ಮಾದರಿಯ ಆರು ಬೋಗಿ ಮೆಟ್ರೋ ರೈಲು ಎಲೆಕ್ಟ್ರಾನಿಕ್ ಸಿಟಿ ಹತ್ತಿರದಲ್ಲಿರುವ ಹೆಬ್ಬಗೋಡಿ ಮೆಟ್ರೋ ಡಿಪೋ ಗೆ ದಿನಾಂಕ 14 ಫೆಬ್ರವರಿ 2024 ರಂದು ಆಗಮಿಸಿದೆ ಎಂದು ತಿಳಿಸಿದೆ. ಹೊಸ ರೋಲಿಂಗ್ ಸ್ಟಾಕ್ ಆಗಿರುವುದರಿಂದ ಬಹು ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. ಸ್ಟ್ಯಾಟಿಕ್ ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಪರೀಕ್ಷೆಗಾಗಿ ಪರೀಕ್ಷಾ ಟ್ರ್ಯಾಕ್‌ಗೆ ತೆರಳುವ ಮೊದಲು ಬೋಗಿಗಳನ್ನು ಜೋಡಿಸಲಾಗಿದೆ. ನಂತರ, ಅದನ್ನು ಮುಖ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸುಮಾರು 37 ಮಾದರಿಯ ಪರೀಕ್ಷೆಗಳು ನಾಲ್ಕು ತಿಂಗಳವರೆಗೆ…
ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್ 9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು. “ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು…
ಬೆಂಗಳೂರು: ನಗರದಲ್ಲಿ ಬೇಸಿಗೆಯ ಈ ಹೊತ್ತಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ನೀರಿನ ಆಹಾಕಾರ ತೀರಿಸೋದಕ್ಕೆ ರಾಜ್ಯ ಸರ್ಕಾರದಿಂದಲೇ ನೀರಿನ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಇದರ ನಡುವೆಯೂ ಟೆಕ್ನಾಲಜಿ ಮುುಂದುವರೆದಂತೆ ನೀರಿನ ಟ್ಯಾಂಕರ್ ಅನ್ನು ಈಗ ಆನ್ ಲೈನ್ ನಲ್ಲಿ ಆರ್ಡರ್ ಮಾಡಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಕರ್ನಾಟಕವು ನಿಜವಾಗಿಯೂ ಕಷ್ಟದ ಸಮಯವನ್ನು ಎದುರಿಸುತ್ತಿದೆ. ನೀರಿನ ಕೊರತೆಯು ನಾಗರಿಕರ ಜೀವನೋಪಾಯದಲ್ಲಿ ತೊಂದರೆಗಳಿಗೆ ಕಾರಣವಾಗಿದೆ. ವರದಿಗಳ ಪ್ರಕಾರ, ನೀರಿನ ಕೊರತೆಯನ್ನು ಉಲ್ಲೇಖಿಸಿ ಖಾಸಗಿ ನೀರಿನ ಟ್ಯಾಂಕರ್ಗಳು ಮತ್ತು ಬೋರ್ವೆಲ್ಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ನಾಗರಿಕರಿಗೆ ಸಮಾನವಾಗಿ ನೀರನ್ನು ವಿತರಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟು ಸ್ಥಳೀಯರನ್ನು ನೀರಿನ ಟ್ಯಾಂಕರ್ ಗಳಿಗೆ ಹೆಚ್ಚಿನ ಮೊತ್ತವನ್ನು ಪಾವತಿಸುವಂತೆ ಮಾಡಿದೆ. ಈ ಹಿಂದೆ ನಗರದಲ್ಲಿ 500 ರೂ.ಗಳಿದ್ದ 5,000 ಲೀಟರ್ ನೀರಿನ ಟ್ಯಾಂಕರ್ ಈಗ 2,000 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿನ ಏಕೈಕ ಮೂಲವಾದ ಮಂಡ್ಯ…