Author: kannadanewsnow09

ಬೆಂಗಳೂರು: ಪ್ರಿಯಕರನ ಮೊಬೈಲ್ ನಲ್ಲಿದ್ದಂತ ತನ್ನ ಖಾಸಗಿ ಪೋಟೋ, ವೀಡಿಯೋ ಡಿಲೀಟ್ ಮಾಡೋ ಸಲುವಾಗಿ ಚಾಲಾಕಿ ಪ್ರಿಯತಮೆಯೊಬ್ಬಳು ಆತನ ಮೊಬೈಲ್ ರಾಬರಿ ಮಾಡಿಸಿ, ತಗಲಾಕಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಿಯಕರನನ್ನೇ ರಾಬರಿ ಮಾಡಿದಂತ ಪ್ರಿಯತಮೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಂತ ಶೃತಿ ಎಂಬಾಕೆ ಪ್ರಿಯಕರ ವಂಶಿಕೃಷ್ಣನನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಕೆಲ ದಿನಗಳಿಂದ ಅವರಿಬ್ಬರ ನಡುವೆ ವೈಮನಸ್ಸು ಉಂಟಾಗಿ ದೂರಾಗುವಂತ ಪ್ಲಾನ್ ಮಾಡಿದ್ದಳು. ಆದರೇ ವಂಶಿಕೃಷ್ಣ ಮೊಬೈಲ್ ನಲ್ಲಿ ಆಕೆಯ ಖಾಸಗಿ ಪೋಟೋ, ವೀಡಿಯೋಗಳು ಇದ್ದವು. ಅವುಗಳನ್ನು ಡಿಲಿಟ್ ಮಾಡುವಂತ ಪ್ಲಾನ್ ಮಾಡಿದ್ದಳು. ಈ ಕಾರಣದಿಂದಲೇ ಸೆಪ್ಟೆಂಬರ್.20ರಂದು ವಂಶಿಕೃಷ್ಣ ಭೇಟಿಯಾಗುವಂತೆ ಟೆಕ್ಕಿ ಸೂಚಿಸಿದ್ದರು. ಆಕೆಯ ಸೂಚನೆಯಂತೆ ಕಾರಿನಲ್ಲಿ ವಂಶಿಕೃಷ್ಣ ತೆರಳುತ್ತಿದ್ದಾಗ ಆತನ ಕಾರಿಗೆ ಬೈಕ್ ನಲ್ಲಿ ಬಂದಂತವರು ತಾಗಿಸಿ ಕಿರಿಕ್ ತೆಗೆದಿದ್ದರು. ಈ ಗಲಾಟೆಯಲ್ಲಿ ವಂಶಿಕೃಷ್ಣ ಅವರ ಒಂದೂವರೆ ಲಕ್ಷ ಬೆಲೆಯ ಮೊಬೈಲ್ ಪೋನ್ ರಾಬರಿ ಮಾಡಿದ್ದರು. ರಾಬರಿ ಮಾಡಿದ್ದಂತ ಮೊಬೈಲ್ ನಲ್ಲಿದ್ದಂತ ಟೆಕ್ಕಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ ಶಾಸಕರು, ಸಚಿವರು ಇದನ್ನೇ ಮಾಡುತ್ತಿದ್ದಾರೆ ಎಂದು ಅವರು ದೂರಿದರು. ಕಾಂಗ್ರೆಸ್ ನಾಯಕರದ್ದು ಹಂಸರಾಜ್ ಭಾರಧ್ವಾಜ್ ಅವರು ರಾಜ್ಯಪಾಲರು ಆಗಿದ್ದ ವೇಳೆ ಒಂದು ವರಸೆ, ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಪಾಲರಾಗಿರುವ ವೇಳೆ ಇನ್ನೊಂದು ವರಸೆ. ಅದಕ್ಕೆ ಇಲ್ಲಿದೆ ನೋಡಿ ಸಾಕ್ಷಿ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ರಾಜ್ಯಪಾಲರ ಹೊಣೆಗಾರಿಕೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು. ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ…

Read More

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಎ1 ಆರೋಪಿಯಾಗಿ, ಎ2 ಆರೋಪಿಯಾಗಿ ಇಡಿ, ಎ3 ಆರೋಪಿಯಾಗಿ ಬಿಜೆಪಿ ಪದಾಧಿಕಾರಿಗಳು, ಎ4 ಆರೋಪಿಯಾಗಿ ನಳೀನ್ ಕುಮಾರ್ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಎ5 ಆರೋಪಿಯಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿದೆ. ಆದರ್ಶ್ ಅಯ್ಯರ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ತಿಲಕ್ ನಗರದಲ್ಲಿ ಐಪಿಸಿ ಸೆಕ್ಷನ್ 384, 120ಬಿ, 34ರಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. https://kannadanewsnow.com/kannada/breaking-muslims-say-hum-paanch-hamara-punchis-mla-yatnal/ https://kannadanewsnow.com/kannada/that-mother-never-came-out-she-was-innocent-what-ks-eshwarappa-said-about-cms-wife-parvathi/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲಿಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುವುದು. ಯೋಜನೆಯ ಜಾರಿ ವಿಧಾನ: ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲಿಕರನ್ನು…

Read More

ಮೈಸೂರು : ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. 1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು. ಹಬ್ಬ ಬಂದಾಗ ಮಾತ್ರ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆಯೂ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಒತ್ತಾಯಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಿವೇಶನ ಹಂಚಿಕೆ ಅಕ್ರಮ ಮೂಲಕ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಬಗ್ಗೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ದಿನಾಂಕ 03.07.2024ರಂದು ಮನವಿ ಸಲ್ಲಿಸಿತ್ತು. ಈ ಮನವಿ ಸಲ್ಲಿಸಿ ಸುಮಾರು…

Read More

ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಮಹಿಷ ಮಂಡಲೋತ್ಸವ ಆಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟೌನ್ ಹಾಲ್ ನ ಒಳ ಆವರಣ ಹೊರತುಪಡಿಸಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ. ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧವಿದೆ. ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ. https://kannadanewsnow.com/kannada/good-news-for-railway-passengers-6000-special-trains-to-run-on-dussehra-diwali/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/

Read More

ಬೆಂಗಳೂರು: ದುರ್ಗಾ ಪೂಜೆ, ದೀಪಾವಳಿ ಮತ್ತು ಛತ್ ಪೂಜೆಯ ಸಮಯದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಈ ವರ್ಷ ಭಾರತೀಯ ರೈಲ್ವೆಯಿಂದ 6000 ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ರೈಲ್ವೆ ಸಚಿವರು ಹೇಳಿದ್ದಾರೆ. ಈ ವಿಶೇಷ ರೈಲುಗಳು ಅಕ್ಟೋಬರ್ 1 ರಿಂದ ನವೆಂಬರ್ 30ರ ನಡುವೆ ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೆ ಪ್ರತಿ ವರ್ಷ ಹಬ್ಬಗಳ ಸಂದರ್ಭದಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವರ್ಷ ವಿಶೇಷ ರೈಲುಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದುರ್ಗಾಪೂಜೆ, ದೀಪಾವಳಿ ಮತ್ತು ಛತ್ ಹಬ್ಬಗಳಲ್ಲಿ ಲಕ್ಷಗಟ್ಟಲೆ ಪ್ರಯಾಣಿಕರು ಮನೆಗೆ ತೆರಳಲು ಪ್ರಯಾಣಿಸುತ್ತಾರೆ ಎಂಬುದು ಗಮನಾರ್ಹ. ಅಪಾರ ಸಂಖ್ಯೆಯ ಪ್ರಯಾಣಿಕರಿಗೆ ಸುಲಭ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸಲು, ಈ ವರ್ಷವೂ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಿದ್ಧತೆಗಳನ್ನು ಮಾಡಿದೆ. ಎರಡು ತಿಂಗಳ ಅವಧಿಯಲ್ಲಿ, ಈ ವಿಶೇಷ ರೈಲುಗಳು 6000 ಕ್ಕೂ ಹೆಚ್ಚು ಟ್ರಿಪ್‌ಗಳನ್ನು ಮಾಡುತ್ತವೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಸಾಗಿಸಲು ಅನುಕೂಲವಾಗುತ್ತದೆ. ಕಳೆದ…

Read More

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ನಾಲ್ವರು ಅಧಿಕಾರಿಗಳ ನೇತೃತ್ವದ ತಂಡವನ್ನು ಲೋಕಾಯುಕ್ತದಿಂದ ರಚಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡವನ್ನು ರಚನೆ ಮಾಡಲಾಗಿದೆ. ಮುಡಾ ಹಗರಣ ಸಂಬಂಧದ ತನಿಖೆಯ ಕುರಿತಂತೆ, ದಾಖಲಾತಿಗಳು ಸೇರಿದಂತೆ ವಿವಿಧ ವಿಚಾರಗಳನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಲೋಕಾಯುಕ್ತ ಎಸ್ಪಿ ಉದೇಶ್ ಮಾಹಿತಿ ಹಂಚಿಕೊಂಡು, ಚರ್ಚಿಸಿದರು. ಹೀಗಾಗಿ ಮುಡಾ ಹಗರಣದ ಸಂಬಂಧ ಲೋಕಾಯುಕ್ತದಿಂದ ನಾಲ್ಕು ಟೀಂ ತನಿಖೆಗೆ ರಚನೆಯಾದಂತೆ ಆಗಿದೆ. https://kannadanewsnow.com/kannada/breaking-muslims-say-hum-paanch-hamara-punchis-mla-yatnal/ https://kannadanewsnow.com/kannada/breaking-5-6-ministers-will-resign-if-my-documents-are-released-hdk-new-bomb/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ ಖರೀದಿಸಿದ್ದಂತ ನೂತನ ಬೊಲೇರೋ ವಾಹನವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಹಸ್ತಾಂತರಿಸಿ, ಹಸಿರು ನಿಶಾನೆ ತೋರಿದರು. ಈ ಬಳಿಕ ಮಾತನಾಡಿದಂತ ಅವರು, ಕಾರ್ಗಲ್ ಠಾಣೆಯ ವ್ಯಾಪ್ತಿಯು ಕಾರ್ಗಲ್, ಬಾರಂಗಿ, ಜೋಗಾ ಒಳಗೊಂಡು 170 ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಿದೆ. ಈ ಠಾಣೆಯಲ್ಲಿ ವಾಹನ ಹಳೆಯದಾಗಿದ್ದು ಕಂಡು ನಾನೇ ಒಂದು ದಿನ ಹೊಸ ವಾಹನ ಕೊಡಿಸುವುದಾಗಿ ಹೇಳಿದ್ದೆ. ಅದರಂತೆ ಇಂದು ಹೊಸ ವಾಹನವನ್ನು ಹಸ್ತಾಂತರಿಸಿದ್ದೇನೆ. ಇನ್ಮುಂದೆ ಜನತೆಯ ಕಷ್ಟಕ್ಕೆ ಸ್ಪಂದಿಸುವಂತ ಕೆಲಸ ತ್ವರಿತವಾಗಲಿ ಎಂದರು. ಬಾರಂಗಿ ಹೋಬಳಿಯ ಕಟ್ಟಿನಕಾರಿಯಲ್ಲಿ ಹೊಸದಾಗಿ ಪೊಲೀಸ್ ಠಾಣೆ ನೀಡಬೇಕು ಎಂಬುದು ಆ ಭಾಗದ ಜನರ ಒತ್ತಾಯ, ಮನವಿಯಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಒಂದು ಬಾರಿ ಮಾತನಾಡಿದ್ದೇನೆ. ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದು ಹೇಳಿದರು.…

Read More