Author: kannadanewsnow09

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ, ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇನೆಂದರೇ ಬಗರ್ ಹುಕುಂ ವಿಲೇ ಪ್ರಕ್ರಿಯೆ ಆರಂಭಗೊಳಿಸಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಗರ್ ಹುಕುಂ ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9.80ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಅಧಿಕ. ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳೂ ಕನಿಷ್ಟ ಮಟ್ಟದ ಅರ್ಜಿ ವಿಲೇ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಬೇಕು. ಅಲ್ಲದೆ, ಅರ್ಹರಿಗೆ ಭೂ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯಾದ್ಯಂತ ಶೇ. 81.74 ರಷ್ಟು ಆಧಾರ್ ಸೀಡಿಂಗ್ ರಾಜ್ಯಾದ್ಯಂತ ಈವರೆಗೆ ಶೇ. 81.74 ರಷ್ಟು ಆಧಾರ್ ಸೀಡಿಂಗ್ ಕೆಲಸವನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವ…

Read More

ಬೆಂಗಳೂರು: ರಾಜ್ಯದ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯಾಧ್ಯಂತ ಖಾಸಗಿ ಸರ್ವೇಯರ್ ಮೂಲಕ ನಂಬರ್ ಪೋಡಿ ಅಭಿಯಾನ ಆರಂಭಿಸಲಾಗುತ್ತಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ 22 ಲಕ್ಷ ಖಾಸಗಿ ಸರ್ವೇ ನಂಬರ್ಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದಾರೆ. ಪ್ರತಿಯೊಬ್ಬರ ಹಿಸ್ಸಾಗೆ ತಕ್ಕಂತೆ ಪ್ರತ್ಯೇಕ ಪಹಣಿ ಮಾಡಿಕೊಡಬೇಕಾದ್ದು ಕಂದಾಯ ಇಲಾಖೆಯ ಮೂಲಕ ಕರ್ತವ್ಯ. ಆದರೆ, ಈವರೆಗೆ ಆ ಕೆಲಸ ಆಗಿಲ್ಲ. ನಾವು ಹೀಗೆ ಪಹಣಿ ಮಾಡಿಕೊಡಲು ಮುಂದಾದರೆ ಕನಿಷ್ಟ 60 ಲಕ್ಷ ಜನರಿಗೆ ಮಾಡಿಕೊಡಬೇಕಾಗುತ್ತದೆ ಎಂದರು. ನಾವೂ ದರ್ಖಾಸ್ತು ಪೋಡಿ ಕೆಲಸದ ಜೊತೆಗೆ ಅದನ್ನೂ ಮಾಡಿಕೊಡಲು ತೀರ್ಮಾನಿಸಿದ್ದೇವೆ. ಅದೇ ಕಾರಣಕ್ಕೆ ಹಿಂದೆ ಪೋಡಿ ಮುಕ್ತ ಅಭಿಯಾನ ಆರಂಭಿಸಲಾಗಿತ್ತು. ಆದರೆ, ನಮ್ಮನ್ನು ಹುಡುಕಿ ಬಂದವರಿಗೆ ಪಹಣಿ ಮಾಡಿಕೊಡಲಾಯಿತೇ ವಿನಃ ಎಲ್ಲರಿಗೂ ಮಾಡಿಕೊಡಲಾಗಿಲ್ಲ. ಆದರೆ, ಈ ಬಾರಿ ಒಟ್ಟು ಎಷ್ಟು ಬಾಕಿ ಇದೆ ಅದನ್ನೆಲ್ಲ ಟಾರ್ಗೆಟ್ ಆಗಿ ತಗೊಂಡು ಎಲ್ಲರಿಗೂ ಕೆಲಸ ಮಾಡಿಕೊಡಲಾಗುವುದು…

Read More

ಬೆಂಗಳೂರು: ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು. ರೈತರ ಈ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ದೃಢವಾದ ಹೆಜ್ಜೆ ಇಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯಲ್ಲಿ ಕಳೆದ ಒಂದು ವರ್ಷದಿಂದ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ಅಧಿಕಾರಿಗಳನ್ನು ಗುರುತಿಸಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಲಾಯಿತು. ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ವಾಸ್ತವದಲ್ಲಿ ರಾಜ್ಯಾದ್ಯಂತ ಎಷ್ಟು ಜನ ರೈತರ ಪೋಡಿ ಕೆಲಸ ಬಾಕಿ ಇದೆ ಎಂಬ ಮಾಹಿತಿಯಾಗಲಿ, ಅಂಕಿಸಂಖ್ಯೆಯಾಗಲಿ ಸರ್ಕಾರದ ಬಳಿ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ಪ್ರಗತಿ ಕೆಲಸವೊಂದೇ ಬಾಕಿ ಇದ್ದು, ಸೆಪ್ಟೆಂಬರ್.2 ರಿಂದಲೇ ದರ್ಖಾಸ್ತು ಪೋಡಿ ಬಾಕಿ ಕೆಲಸ ಅಭಿಯಾನ ಮಾದರಿಯಲ್ಲಿ ಆರಂಭಿಸಲಾಗಿದೆ. ರೈತರ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಗೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವೆಸ್ಟ್ ಇಂಡೀಸ್ನ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ ಗಾಯದ ಸಮಸ್ಯೆಯಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇತಿಹಾಸದಲ್ಲಿ ಪ್ರಮುಖ ಟಿ 20 ವಿಕೆಟ್ ಪಡೆದ 40 ವರ್ಷದ ಆಟಗಾರ, ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್ ಅಭಿಯಾನದ ಕೊನೆಯಲ್ಲಿ ನಿವೃತ್ತರಾಗಲು ಯೋಜಿಸಿದ್ದರು. ಆದಾಗ್ಯೂ, ತೊಡೆಯ ಗಾಯವನ್ನು ಅನುಭವಿಸಿದ ನಂತರ, ಟ್ರಿನ್ಬಾಗೊ ನೈಟ್ ರೈಡರ್ಸ್ ಆಟಗಾರ ತಕ್ಷಣವೇ ಮುಗಿಸಲು ನಿರ್ಧರಿಸಿದ್ದಾರೆ. “ನನ್ನ ಮನಸ್ಸು ಮುಂದುವರಿಯಲು ಬಯಸುತ್ತದೆ, ಆದರೆ ನನ್ನ ದೇಹವು ಇನ್ನು ಮುಂದೆ ನೋವು, ಸ್ಥಗಿತ ಮತ್ತು ಒತ್ತಡವನ್ನು ಸಹಿಸುವುದಿಲ್ಲ” ಎಂದು ಬ್ರಾವೋ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. “ನನ್ನ ತಂಡದ ಸಹ ಆಟಗಾರರು, ನನ್ನ ಅಭಿಮಾನಿಗಳು ಅಥವಾ ನಾನು ಪ್ರತಿನಿಧಿಸುವ ತಂಡಗಳನ್ನು ನಿರಾಸೆಗೊಳಿಸುವ ಸ್ಥಿತಿಯಲ್ಲಿ ನಾನು ಇರಲು ಸಾಧ್ಯವಿಲ್ಲ. ಆದ್ದರಿಂದ, ಭಾರವಾದ ಹೃದಯದಿಂದ, ನಾನು ಅಧಿಕೃತವಾಗಿ ಕ್ರೀಡೆಯಿಂದ ನಿವೃತ್ತಿ ಘೋಷಿಸುತ್ತೇನೆ. ಇಂದು, ಚಾಂಪಿಯನ್ ವಿದಾಯ ಹೇಳಿದರು. ಎಲ್ಲಾ ಟಿ 20 ಪಂದ್ಯಗಳಲ್ಲಿ 600 ಕ್ಕೂ ಹೆಚ್ಚು ವಿಕೆಟ್ ಪಡೆದ…

Read More

ಬೆಂಗಳೂರು: SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್ಎಸ್ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ…

Read More

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ ಹಾಜರಾಗುವುದಾಗಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಅದರಂತೆ ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇಂದು ಸಂಜೆ ಎಚ್ ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ. 2007ರಲ್ಲಿ ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕೆರ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಈ ಕುರಿತು ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿತ್ತು. ಆದರೆ, 2021ರಿಂದ ಲೋಕಾಯುಕ್ತದಿಂದ ಯಾವುದೇ ಪ್ರಗತಿಯಾಗಿಲ್ಲ ಎಂದು…

Read More

ಬೆಂಗಳೂರು: ಬ್ರಾಹ್ಮಣ ಮುಂದುವರಿದ ಸಮಾಜ ಎಂಬ ಕಾರಣಕ್ಕೆ ಸಮುದಾಯದಲ್ಲಿರುವ ಬಡವರಿಗೆ ಅನ್ಯಾಯವಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯವತಿಯಿಂದ ಆಯೋಜಿಸಿದ್ದ ವಿಶ್ಚಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಬ್ರಾಹ್ಮಣ ಸಮುದಾಯದ ಮಕ್ಕಳು ಪಬ್ಲಿಕ್ ಸರ್ವೀಸ್ ಹುದ್ದೆಗಳತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಇದೆ.‌ ನಮಗೆ ಸರ್ಕಾರಿ ಕೆಲಸಗಳು ಸಿಗಲ್ಲ ಎಂದು ಬಹುತೇಕರು ಇಂದು ಡಾಕ್ಟರ್, ಎಂಜಿನಿಯರ್ ಆಗುವುದಕ್ಕೆ ಆಸಕ್ತಿ ತೋರುತ್ತಿದ್ದಾರೆ. ಆದರೆ ಕೆ.ಎ.ಎಸ್, ಐಎಎಸ್ ಹುದ್ಧೆಗಳನ್ನ ಅಲಂಕರಿಸಲು ಪ್ರಯತ್ನಿಸಬೇಕು. ಇದರಿಂದ ಸಾರ್ವಜನಿಕ ಕಾರ್ಯದಲ್ಲಿ ನಿಮ್ಮನ್ನ ನೀವು ತೊಡಗಿಸಿಕೊಳ್ಳುವುದರ ಜೊತೆಗೆ ಸಮಾಜದ ಬಡವರಿಗು ನೀವು ಸಹಾಯ ಮಾಡಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಈ ಹಿಂದೆ ಬ್ರಾಹ್ಮಣ ಸಮುದಾಯದವರು ಎಲ್ಲ ಸಿದ್ಧಾಂತಗಳ ರಂಗಗಳಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರು. ಹಾಗೆ ನೋಡಿದರೇ ಬ್ರಾಹ್ಮಣರು ನಿಜವಾದ ಜಾತ್ಯಾತೀತರು. ಬ್ರಾಹ್ಮಣ ಸಮುದಾಯದ ಶಾಸಕರು ಗೆದ್ದು ಬರುವ ಕ್ಷೇತ್ರಗಳಲ್ಲಿ ಸಮುದಾಯದ ಮತಗಳು ತೀರಾ ಕಡಿಮೆ.. ಇತರ ಸಮುದಾಯದ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ಸೋಮವಾರ ವಿಚಾರಣೆಗೆ ನಡೆಸಲು ನಿಗದಿ ಪಡಿಸಿದೆ. ಅಂದಹಾಗೇ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಿದ್ಧರಾಮಯ್ಯ ಎ-1 ಆರೋಪಿಯಾಗಿದ್ದರೇ, ಅವರ ಪತ್ನಿ ಪಾರ್ವತಿ ಎ-2 ಆರೋಪಿಯಾಗಿದ್ದಾರೆ. ಅವರ ಭಾಮೈದ ಮಲ್ಲಿಕಾರ್ಜುನ ಎ-3 ಆಗಿದ್ದಾರೆ.…

Read More

ಬೆಂಗಳೂರು : “ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂದಕ್ಕೆ ತೆಗದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸಿಬಿಐ ಮುಕ್ತ ತನಿಖೆಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿರುವ ಬಗ್ಗೆ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರಿಸಿದ ಅವರು, “ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ, ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದರು. ಕಾಂಗ್ರೆಸ್ ಬ್ಯೂರೋ ಏಜೆನ್ಸಿ ಎಂದವರು ಯಾರು? “ಸಿಬಿಐ ಬಗ್ಗೆ ಜನತಾದಳದ ದೇವೇಗೌಡರು, ಕುಮಾರಸ್ವಾಮಿ ಏನು ಮಾತನಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಏಜೆನ್ಸಿ ಎಂದು ಕರೆದಿದ್ದರು. ಸಿಬಿಐಗೆ ಯಾವ, ಯಾವ ಪ್ರಕರಣಗಳನ್ನು ನೀಡಲಾಗಿತ್ತು. ಅವುಗಳು ಏನಾಗಿವೆ, ಐಎಂಎ ಪ್ರಕರಣ ಏನಾಗಿದೆ ಎಂಬುದರ ಬಗ್ಗೆ ನಾನು ಚರ್ಚಿಸುವುದಿಲ್ಲ” ಎಂದು ಹೇಳಿದರು. ಸಿದ್ದರಾಮಯ್ಯ…

Read More

ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ನಾವು ನೋಡುತ್ತೇವೆ ಎಂದು ಎಚ್ಚರಿಸಿದರು. ಇಲ್ಲಿಯ ತನಕ ನಾವ ಮಾತನಾಡಬಾರದೆಂದು ಸುಮ್ಮನಿz?ದÉ?ವೆ. ಆದರೆ ಕೆಲವರು ಪಕ್ಷದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ವರಿಷ್ಠರು. ಅವರನ್ನು ವಿರೋಧ ಮಾಡುತ್ತಿರುವುದು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಗುಡುಗಿದರು. ವಿಜಯೇಂದ್ರ ಅನುಭವ, ಸಂಘಟನೆ, ಅವರ ಉಪ ಚುನಾವಣೆ ಗೆಲುವು ಎಲ್ಲಾ ನೋಡಿದ ಮೇಲೆ ಹೈಕಮಾಂಡ್ ರಾಜ್ಯಾಧ್ಯಕ್ಷರಾಗಿ ಮಾಡಿದ್ದಾರೆ.ಅ ವರ ವಿರುದ್ದ ಏಕೆ ಮಾತಾಡುತ್ತಾರೆ? ಯಾವುದೇ ಕಾರಣಕ್ಕೂ ಅವರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ. ಅಷ್ಟಕ್ಕೇನೂ ಅವರು…

Read More