Author: kannadanewsnow09

ಬೀದರ್: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತವರಲ್ಲೇ ಧಾರುಣ ಘಟನೆಯೊಂದು ನಡೆದಿದೆ. ಜೋಳ ಕಟಾವು ಮಾಡೋದಕ್ಕೆ ಜಮೀನಿಗೆ ತೆರಳಿದ್ದಂತ ಮಹಿಳೆಯ ಮೇಲೆ ಕಾಡು ಹಂದಿ ದಾಳಿ ಮಾಡಿದ ಪರಿಣಾಮ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೀದರ್ ತಾಲೂಕಿನ ಹೊಕ್ರಾಣ(ಕೆ) ಗ್ರಾಮದಲ್ಲಿ ಕವಿತಾ ರವಿಕುಮಾರ್(45) ಎಂಬ ಮಹಿಳೆ, ಅಹಮ್ಮದ್ ಆಲಿ ಖಾನ್ ಸಾಬ್ ಎಂಬುವರ ಜಮೀನಿಗೆ ಜೋಳ ಮುರಿಯುವುದಕ್ಕೆ ತೆರಳಿದ್ದರು. ಈ ವೇಳೆಯಲ್ಲಿ ಕಾಡು ಹಂದಿ ಏಕಾಏಕಿ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿತ್ತು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ  ಕೊಡೊಯ್ಯುವ ವೇಳೆಯಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಹೊಕ್ರಾಣ(ಕೆ) ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂಬಂಧ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/rs-17836-crore-investment-in-karnataka-27067-new-jobs-created-siddaramaiah/ https://kannadanewsnow.com/kannada/breaking-good-news-for-bank-employees-iba-signs-agreement-with-bank-unions-salary-hike/

Read More

ನವದೆಹಲಿ: ಉಕ್ರೇನ್ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿ ಕೆಲಸ ಮಾಡಲು ಹಲವಾರು ಭಾರತೀಯ ಪ್ರಜೆಗಳನ್ನು ವಂಚಿಸಲಾಗಿದೆ ಮತ್ತು ಸುಳ್ಳು ನೆಪಗಳಲ್ಲಿ ಅವರನ್ನು ನೇಮಕ ಮಾಡಿದ ಏಜೆಂಟರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ. ಅಂತಹ ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ರಷ್ಯಾದ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಬಲವಾಗಿ ಎತ್ತಲಾಗಿದೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಸಿಬಿಐ ನಿನ್ನೆ ಹಲವಾರು ನಗರಗಳಲ್ಲಿ ಶೋಧ ನಡೆಸಿದ ಮತ್ತು ದೋಷಾರೋಪಣೆ ಪುರಾವೆಗಳನ್ನು ಸಂಗ್ರಹಿಸುವ ಪ್ರಮುಖ ಮಾನವ ಕಳ್ಳಸಾಗಣೆ ಜಾಲವನ್ನು ಭೇದಿಸಿದೆ. ಹಲವಾರು ಏಜೆಂಟರ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣ ದಾಖಲಿಸಲಾಗಿದೆ. ರಷ್ಯಾದ ಸೇನೆಯಲ್ಲಿ ಬೆಂಬಲ ಉದ್ಯೋಗಗಳಿಗಾಗಿ ಏಜೆಂಟರು ನೀಡುವ ಕೊಡುಗೆಗಳಿಗೆ ಮಾರುಹೋಗದಂತೆ ನಾವು ಮತ್ತೊಮ್ಮೆ ಭಾರತೀಯ ಪ್ರಜೆಗಳಿಗೆ ಮನವಿ ಮಾಡುತ್ತೇವೆ. ಇದು ಜೀವಕ್ಕೆ ಅಪಾಯದಿಂದ ಕೂಡಿದೆ ಎಂದು ಜೈಸ್ವಾಲ್ ಪತ್ರಿಕಾ ಘೋಷಿಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/breaking-president-nominates-sudha-murthy-to-rajya-sabha/ https://kannadanewsnow.com/kannada/breaking-good-news-for-bank-employees-iba-signs-agreement-with-bank-unions-salary-hike/

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀವ್ ಅವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಸಣ್ಣಪುಟ್ಟ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರು ತಮ್ಮ ಸ್ವಗ್ರಾಮ ಅಂದಲಗಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹಾವಳ್ಳಿ ಬಳಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ನಂತ್ರ ಕೂಡಲೇ ಕಾರಿನಲ್ಲಿದ್ದಂತ ಏರ್ ಬ್ಯಾಗ್ ಓಪನ್ ಆದ ಪರಿಣಾಮ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಯಾವುದೇ ಹೆಚ್ಚಿನ ಗಂಭೀರ ಗಾಯವಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಈ ಅಪಘಾತದಲ್ಲಿ ಚಾಲಕನ ಕಣ್ಣಿಗೆ ಗಾಯವಾಗಿದ್ದರೇ, ಮಾಜಿ ಶಾಸಕ ವಿಎಸ್ ಪಾಟೀಲ್…

Read More

ಬೆಂಗಳೂರು: ನಗರದಲ್ಲಿ ನೀರಿನ ಬಿಕ್ಕಟ್ಟು ಎದುರಾಗಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಇದರ ನಡುವೆ ನೀರಿನ ಬಿಕ್ಕಟ್ಟು ನಿವಾರಿಸಲು ಬಿಬಿಎಂಪಿಯಿಂದ ವಾರ್ಡ್ ವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಕಚೇರಿ ಆದೇಶ ಹೊರಡಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಅಭಾವ ಹೆಚ್ಚಾಗಿದ್ದು, ಸಾಕಷ್ಟು ಕೊಳವೆ ಭಾವಿಗಳು ಬತ್ತಿ ಹೋಗಿದ್ದಾವೆ ಎಂದಿದೆ. ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಹಿತದೃಷ್ಟಿಯಿಂದ ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿ ಈ ಎರಡು ಇಲಾಖೆಗಳ ಅಧಿಕಾರಿಗಳು ತುರ್ತು ಅಗತ್ಯ ಕ್ರಮ ಕೈಗೊಂಡು, ನೀರಿನ ಸಮಸ್ಯೆಯನ್ನು ಬಗೆಹರಿಸಲು ರಾಜರಾಜೇಶ್ವರಿ ವಲಯದ 14 ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಿದೆ. ಹೀಗಿದೆ ವಾರ್ಡ್ ವಾರು ನೋಡಲ್ ಅಧಿಕಾರಿಗಳ ಪಟ್ಟಿ https://kannadanewsnow.com/kannada/court-lifts-ban-on-m-lakshmanan-for-holding-press-conference-against-mp-pratap-simha/ https://kannadanewsnow.com/kannada/breaking-president-nominates-sudha-murthy-to-rajya-sabha/

Read More

ಬೆಂಗಳೂರು:ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರು ಟೀಕೆಯನ್ನು ಮುಕ್ತವಾಗಿ ಸ್ವೀಕರಿಸಬೇಕು. ಪ್ರತಿಬಂಧಕಾದೇಶ ಮೂಲಕ ವ್ಯಕ್ತಿಯೊಬ್ಬರನ್ನು ಮಾಧ್ಯಮಗಳ ಮುಂದೆ ಮಾತನಾಡದಂತೆ ತಡೆಯಲಾಗದು” ಎಂದಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಅವರು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮಾಧ್ಯಮ ಗೋಷ್ಠಿ ನಡೆಸದಂತೆ ನಿರ್ಬಂಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ತೆರವುಗೊಳಿಸಿದೆ. ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಮತ್ತು ಲಕ್ಷ್ಮಣ್‌ ಅವರು ಸಲ್ಲಿಸಿದ್ದ ಮಧ್ಯಪ್ರವೇಶ ಅರ್ಜಿಗಳ ವಿಚಾರಣೆ ನಡೆಸಿದ ಬೆಂಗಳೂರಿನ 18ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎ ಹರೀಶ ಅವರು ಸಾಮಾನ್ಯ ಆದೇಶ (ಕಾಮನ್‌ ಆರ್ಡರ್‌) ಮಾಡಿದ್ದಾರೆ. ಲಕ್ಷ್ಮಣ್‌ ಅಥವಾ ಅವರ ಬೆಂಬಲಿಗರು ತಮ್ಮ ವಿರುದ್ಧ ಮಾಧ್ಯಮಗೋಷ್ಠಿ ನಡೆಸದಂತೆ ಹಾಗೂ ಯಾವುದೇ ಮಾಹಿತಿಯನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದಕ್ಕೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡುವಂತೆ ಕೋರಿ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾ ಮಾಡಲಾಗಿದೆ. ಅಂತೆಯೇ, 2024ರ ಜನವರಿ 29ರಂದು ನ್ಯಾಯಾಲಯವು ಮಾಡಿರುವ ಏಕಪಕ್ಷೀಯ ಮಧ್ಯಂತರ ಆದೇಶ ತೆರವು ಕೋರಿ…

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕೆಇಎ ಕರೆಯಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು,  ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್ ಲೈನ್ ಮೂಲಕ ದಿನಾಂಕ 04-03-2024ರಿಂದ ಅರ್ಜಿ ಸಲ್ಲಿಸಬಹುದೆಂದು 21-02-2024ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು ಎಂದಿದೆ. ಶುಲ್ಕ ಪಾವತಿಯ ಇಂಟರ್ ಫೇಸ್ ಅನ್ನು ಸಿದ್ಧ ಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದ್ದರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ ಎಂದು ತಿಳಿಸಿದೆ. ಇತ್ತೀಚಿನ ಮಾಹಿತಿಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪಡೆಯುವಂತೆ ಅಭ್ಯರ್ಥಿಗಳಿಗೆ ಸೂಚಿಸಿದೆ. https://twitter.com/KEA_karnataka/status/1765725940406231374 https://kannadanewsnow.com/kannada/school-girl-raped-on-international-womens-day/ https://kannadanewsnow.com/kannada/breaking-president-nominates-sudha-murthy-to-rajya-sabha/

Read More

ನವದೆಹಲಿ : “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು. ಖರ್ಗೆ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ಅವರು ಎಐಸಿಸಿ ಅಧ್ಯಕ್ಷರು. ಅನೇಕರು ಅವರ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಕೀಚಕ ಕೃತ್ಯವೊಂದು ಬೆಳಕಿಗೆ ಬಂದಿದೆ. 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರೊಬ್ಬರೇ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಶಾಲಾ ಬಾಲಕಿ 6 ತಿಂಗಳ ಗರ್ಭಿಣಿಯಾಗಿರೋ ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. 7ನೇ ತರಗತಿ ವಿದ್ಯಾರ್ಥಿನಿ ಓದುವ ವಯಸ್ಸಿನಲ್ಲಿ ಈಗ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಸಂಬಂಧಿಕ ಯುವಕನೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿರೋದಾಗಿ ಆರೋಪಿಸಲಾಗುತ್ತಿದೆ. ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದಂತ ಇಲಾಖೆಯ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಬಾಲ ಮಂದಿರಕ್ಕೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ. ಈ ಕುರಿತಂತೆ ಚಿಕ್ಕಬಳ್ಳಾಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/i-have-withdrawn-from-lok-sabha-elections-former-minister-mtb-nagaraj/ https://kannadanewsnow.com/kannada/bengaluru-water-crisis-residents-of-posh-gated-community-go-to-nearby-mall-to-use-washrooms/

Read More

ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ಮಾತನಾಡಿದಂತ ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ನನಗೆ ಪಕ್ಷದ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದರು. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ನಾನು ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ಈಗಾಗಲೇ ನಮ್ಮ ವರಿಷ್ಠರು ಯಾರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬುದು ಗೊತ್ತಿದೆ. ಈ ಬಗ್ಗೆ ಪಕ್ಷದಿಂದ ಅಭಿಪ್ರಾಯ ಸಂಗ್ರಹಿಸಿ ಗೆಲ್ಲುವವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಕರ್ನಾಟಕದ ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಾಗಿ ತಿಳಿಸಿದರು. https://kannadanewsnow.com/kannada/breaking-president-nominates-sudha-murthy-to-rajya-sabha/ https://kannadanewsnow.com/kannada/bengaluru-water-crisis-residents-of-posh-gated-community-go-to-nearby-mall-to-use-washrooms/ https://kannadanewsnow.com/kannada/ramzan-urdu-primary-high-school-timings-changed-in-the-state/

Read More

ಬೆಂಗಳೂರು: ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ:31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ( Standing Order ) ನ್ನು…

Read More