Author: kannadanewsnow09

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.15ರಂದು ಪ್ರಧಾನಿ ಮೋದಿಯವರು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿಲಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು, ಮಾರ್ಚ್.15ರಂದು ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಮಾ ಪ್ರಚಾರಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಮಾರ್ಚ್.15ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿಯವರು ಚಿಕ್ಕಬಳ್ಳಾಪುರಕ್ಕೆ ಬಂದು ಚಾಲನೆ ನೀಡುವುದಾಗಿ ಮಾಹಿತಿ ನೀಡಿದರು. https://kannadanewsnow.com/kannada/good-news-for-farmers-state-govt-distributes-mini-fodder-kits-free-of-cost/ https://kannadanewsnow.com/kannada/are-you-eating-gobi-manchuri-with-your-mouth-shut-if-so-read-this-news/

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ಎಲ್ಲೆಲ್ಲೂ ನೀರು, ಮೇವಿಗೆ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಜಾನುವಾರು ಹೊಂದಿರುವಂತ ರೈತರಿಗೆ ಉಚಿತವಾಗಿ ಸರ್ಕಾರದಿಂದಲೇ ಮೇವಿನ ಮಿನಿ ಕಿಟ್ ವಿತರಣೆಗೆ ನಿರ್ಧರಿಸಿದೆ. ಈ ಯೋಜನೆಗಾಗಿ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿಯವರು, ರಾಜ್ಯದಲ್ಲಿ  ಬರ ಘೋಷಣೆಯಾಗಿರುವ ತಾಲ್ಲೂಕುಗಳಲ್ಲಿ ಮೇವಿನ ಕೊರತೆ ನೀಗಿಸುವ ಸಲುವಾಗಿ ರೈತರುಗಳಿಗೆ ಉಚಿತವಾಗಿ ಮಿನಿ ಮೇವಿನ ಕಿಟ್ ಗಳನ್ನು ಹಾಲು ನೀಡುವ ರಾಸುಗಳನ್ನು ಹೊಂದಿರುವ ಹಾಗೂ ನೀರಾವರಿ ಮೂಲವನ್ನು ಹೊಂದಿರುವ ಅರ್ಹ ರೈತರುಗಳಿಗೆ ಆದ್ಯತೆ ಮೇರೆಗೆ ವಿತರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಗ್ರಾಮ ಪಂಚಾಯ್ತಿಗಳ ಮೂಲಕ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೇಲುಸ್ತುವಾರಿಯಲ್ಲಿ ವಿತರಿಸಲು ಮಿನಿ ಮೇಲಿನ ಕಿಟ್ ಗಳ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ…

Read More

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿರುವಂತ ಅತ್ಯಾಚಾರ, ಪೋಕ್ಸೋ ಪ್ರಕರಣವನ್ನು ಮುಂದುವರೆಸಿ, ಅವರ ವಿರುದ್ಧದ ಧಾರ್ಮಿಕ ಸಂಸ್ಥೆ ದುರುಪಯೋಗ ಕೇಸನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಕುರಿತಂತೆ ಆರೋಪ ನಿಗದಿ ಪ್ರಶ್ನಿಸಿ ಮುರುಘಾ ಶ್ರೀಗಳು ಸಲ್ಲಿಸಿದ್ದಂತ ಮೇಲ್ಮನವಿಯ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠವು, ಜಾತಿ ನಿಂದನೆ, ಜೆಜೆ ಕಾಯ್ದೆ, ಸಾಕ್ಷ್ಯ ನಾಶ ಕುರಿತ ಆರೋಪ ರದ್ದುಗೊಳಿಸಿದರು. ಅತ್ಯಾಚಾರ, ಪೋಕ್ಸೋ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಮುರುಘಾ ಶಅರೀಗಳ ವಿರುದ್ಧದ ಅತ್ಯಾಚಾರ, ಪೋಕ್ಸೋ ಕೇಸ್ ವಿಚಾರಣೆಗೆ ಸಮ್ಮತಿ, ಜಾತಿ ನಿಂದನೆ, ಜೆಜೆ ಕಾಯ್ದೆ, ಸಾಕ್ಷ್ಯ ನಾಶ ಕುರಿತ ಆರೋಪ ರದ್ದುಪಡಿಸಿದೆ. ಇನ್ನೂ ಆರೋಪ ಪಟ್ಟಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಆರೋಪಿ ಮುರುಘಾ ಶ್ರೀಗಳಿಗೆ ನೀಡುವಂತೆ ಕೋರ್ಟ್ ಸೂಚಿಸಿದೆ. ಅಲ್ಲದೇ ಹೈಕೋರ್ಟ್ ಆದೇಶ ಪರಿಗಣಿಸಿ, ಆರೋಪ ಮರು ನಿಗದಿಗೆ ಆದೇಶಿಸಿದೆ. https://kannadanewsnow.com/kannada/steps-will-be-taken-to-curb-drinking-water-scarcity-in-bengaluru-deputy-cm-dk-shivakumar/ https://kannadanewsnow.com/kannada/are-you-eating-gobi-manchuri-with-your-mouth-shut-if-so-read-this-news/

Read More

ಬೆಂಗಳೂರು : “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ. ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದರು. ಕಳೆದ 30-40 ವರ್ಷಗಳಲ್ಲಿ ಇಂತಹ ಭೀಕರ ಬರಗಾಲವನ್ನು ನಾವು ನೋಡಿರಲಿಲ್ಲ. ಬೆಂಗಳೂರಿನಲ್ಲಿರುವ 13,900 ಕೊಳವೆ ಬಾವಿಗಳಲ್ಲಿ 6,900 ಕೊಳವೆ ಬಾವಿ ಬತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಖಾಸಗಿ ನೀರಿನ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದು ನೀರು ಪೂರೈಸಲು ಮುಂದಾಗಿದ್ದೇವೆ ಎಂದು ಹೇಳಿದರು. ನೀರಿನ ಪೂರೈಕೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ನಾವು ತಡೆದಿದ್ದೇವೆ. ಜನರಿಗೆ…

Read More

ಚಿಕ್ಕಮಗಳೂರು: ಕಳೆದ ಮೂರು ದಿನಗಳ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಶೃಂಗೇರಿ ಪೋಕ್ಸೋ ಪ್ರಕರಣದಲ್ಲಿ 53 ಆರೋಪಿಗಳಲ್ಲಿ ತಾಯಿ ಸೇರಿ ನಾಲ್ವರನ್ನು ದೋಷಿ ಎಂಬುದಾಗಿ ಚಿಕ್ಕಮಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯವು ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ಪ್ರಕರಣ ಸಂಬಂಧ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ತಲಾ 25 ಸಾವಿರ ದಂಡ, 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ವಿಶೇಷ ಪೋಕ್ಸೋ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿದೆ. ಬಾಲಕಿಯ ತಾಯಿ ಗೀತಾ, ಗಿರೀಶ್, ದೇವಿಶರಣ್ ಗೆ ಶಿಕ್ಷೆಯನ್ನು ವಿಧಿಸಲಾಗಿದೆ. ಅಭಿನಂದನ್ ಆಲಿಯಾಸ್ ಸ್ಮಾಲ್ ಅಭಿಗೆ ಜೈಲು ಶಿಕ್ಷೆ ವಿಧಿಸಿದೆ. ಬಾಲಕಿಯನ್ನ ತಾಯಿಯೇ ವೇಶ್ಯಾವಾಟಿಗೆ ದೂಡಿದ್ದಂತ ಪ್ರಕರಣದಲ್ಲಿ 39 ಎಫ್ಐಆರ್, 53 ಜನರ ಬಂಧನವಾಗಿತ್ತು. 2021ರಲ್ಲಿ ಶೃಂಗೇರಿ ಪಟ್ಟಣದಲ್ಲಿ ನಡೆದಿದ್ದಂತ ಘಟನೆ ಬೆಳಕಿಗೆ ಬಂದಿತ್ತು. 2020ರ ಸೆಪ್ಟೆಂಬರ್ ನಿಂದ ನಿರಂತರವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. 2021ರ ಜನವರಿಯವರೆಗೆ ಬ್ಲಾಕ್ ಮೇಲ್ ಮಾಡಿ ರೇಪ್ ಮಾಡಲಾಗಿತ್ತು. ಜನವರಿ 27ರಂದು ಪ್ರಕರಣ ದಾಖಲಾಗಿತ್ತು.…

Read More

ಬೆಂಗಳೂರು: ರಾಜ್ಯಾಧ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಒಂದು ವೇಳಎ ನಿಯಮ ಮೀರಿ ಕಲರ್ ಕ್ಯಾಂಡಿ ಮಾರಾಟ ಮಾಡಿದ್ರೇ ಅಂತವರಿಗೆ 7 ವರ್ಷ ಜೈಲು, 10 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ Cotton Candy ಗಳ ಗುಣಮಟ್ಟ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗಿ ಉತ್ತಮವಾಗಿಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ Cotton Candy ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:12.02.2024 ರಿಂದ ಇದುವರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 25 Cotton Candy ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 15 Cotton Candy ಮಾದರಿಗಳು ಕೃತಕ ಬಣ್ಣದಿಂದ (ಟಾರ್‌ಟ್ರಾಸೈನ್‌ ಕೃತಕ ಬಣ್ಣ 5 ಮಾದರಿಗಳು, ಸನ್ ಸೆಟ್ ಯೆಲ್ಲೋ 4 ಮಾದರಿಗಳು ಮತ್ತು…

Read More

ಬೆಂಗಳೂರು: “ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ “ನಂಬಿಕೆ ನಕ್ಷೆ” ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಪಾರದರ್ಶಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು. ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆ: “ನಂಬಿಕೆ ನಕ್ಷೆ” ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50X80 ವಿಸ್ತೀರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ಆನ್ ಲೈನ್ ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸಾರ್ವಜನಿಕರು ತಮ್ಮ…

Read More

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಬಡ್ತಿ ಸೇರಿದಂತೆ ವಿವಿಧ ಬಡ್ತಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( CLT) ಪಾಸ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಪಾಸ್ ಮಾಡೋದಕ್ಕೆ ನಿಗದಿ ಪಡಿಸಿದ್ದಂತ ಡೆಡ್ ಲೈನ್ ಅನ್ನು ರಾಜ್ಯ ಸರ್ಕಾರ ಡಿ.31, 2024ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ನಿಯಮ 2ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ಮುಂದೆ ಸದರಿ ನಿಯಮಗಳಎಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದಿದ್ದಾರೆ. ನಿಯಮ 3ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ದಿನಾಂಕ…

Read More

ಬೆಂಗಳೂರು: ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ. ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್. ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂಬುದಾಗಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಖತ್ ಇಲ್ಲ ಅಷ್ಟೆ ಎಂದರು. ನರೇಂದ್ರ…

Read More