Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20 ರವರೆಗೆ ವಿಸ್ತರಿಸಿದೆ ಎಂದು ಎಎನ್ಐ ವರದಿ ಮಾಡಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಅಬಕಾರಿ ನೀತಿ ಸಿಬಿಐ ಪ್ರಕರಣ ಸಂಬಂಧ ರೂಸ್ ಅವೆನ್ಯೂ ನ್ಯಾಯಾಲಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಹಾಜರುಪಡಿಸಲಾಯಿತು. ಈ ಮೂಲಕ ಜೈಲೇ ಗತಿ ಎನ್ನುವಂತಾಗಿದೆ. https://twitter.com/ANI/status/1821472579590541658 https://kannadanewsnow.com/kannada/deputy-cm-dk-shivakumar-visits-kanakapura-on-2nd-and-4th-saturday-of-every-month/ https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭೆ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/ https://kannadanewsnow.com/kannada/court-summons-cm-deputy-cm-to-appear-before-it-in-person/
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ದಾಖಲಾಗಿದ್ದಂತ ಪ್ರಕರಣದಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ಧರಾಮಯ್ಯ ಅವರು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಿದೆ. ಅಂದಹಾಗೇ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಡಿಯಿಂದ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಹಿನ್ನಲೆಯಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಮನ್ಸ್ ನೀಡಿದೆ. https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/ https://kannadanewsnow.com/kannada/good-news-for-govt-employees-awaiting-7th-pay-commission-7th-pay-commission/
ಬೆಂಗಳೂರು: ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.55ಕ್ಕಿಂತಲೂ ಹೆಚ್ಚು ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಹೊಂದಿದ ರಾಜ್ಯ ಕರ್ನಾಟಕವಾಗಿದ್ದು, ಶೇ. 45% ಕ್ಕಿಂತಲೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿ.ಸಿ.ಸಿ) ಹೊಂದಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದೇವೆ, 7 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಭಾರತದ ಉದ್ಯಮ ಎದುರಿಸುತ್ತಿರುವ ಕೌಶಲ್ಯದ ಅಂತರವನ್ನು ಪರಿಹರಿಸಲು ಮತ್ತು ಜಾಗತಿಕ ಉದ್ಯಮಕ್ಕೆ ಕರ್ನಾಟಕದ ನಾಯಕತ್ವದ ಸ್ಥಾನವನ್ನು ಕಾಪಾಡಿಕೊಳ್ಳಲು ನೆರವಾಗುವ ಸಲುವಾಗಿ ಭವಿಷ್ಯದ ತಂತ್ರಜ್ಞಾನಗಳ ಕೌಶಲ್ಯದ ಅಗತ್ಯತೆಗಳನ್ನು ಕೇಂದ್ರೀಕರಿಸಲು ಉದಯೋನ್ಮುಖ ತಂತ್ರಜ್ಞಾನಗಳ ಕೌಶಲ್ಯ ಸಲಹಾ ಮಂಡಳಿಯನ್ನು ಪ್ರಾರಂಭಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಕರ್ನಾಟಕದಲ್ಲಿನ ಜಾಗತಿಕ ಕಂಪೆನಿಗಳ ಪ್ರಧಾನ ಮಾನವ ಸಂಪನ್ಮೂಲ ಅಧಿಕಾರಿಗಳ (CHRO) ದುಂಡುಮೇಜಿನ ಸಭೆಯನ್ನು ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು. ಕರ್ನಾಟಕ ಸರ್ಕಾರವು ಜಯೊನ್ ಗ್ರೂಪ್, ನಾಸ್ಕಾಮ್, ಐಸಾ ಮತ್ತು ಎನ್.ಹೆಚ್.ಆರ್.ಡಿ (Zyoin…
ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಹಗರಣದಲ್ಲಿ ಮತ್ತೊಂದು ಸಂಕಷ್ಟ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಮೈಸೂರಿನ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದ್ದಾರೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಲಾಗಿದ್ದು, ಈ ಖಾಸಗಿ ದೂರಿನ ಪ್ರಕರಣದ ವಿಚಾರಣೆಯನ್ನು ಆಗಸ್ಟ್.9ರ ನಾಳೆಗೆ ವಿಚಾರಣೆ ಬರುವ ನಿರೀಕ್ಷೆಯಿದೆ. ಫಿರ್ಯಾದುದಾರರ ಪರವಾಗಿ ಹೈಕೋರ್ಟ್ ನ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಗುರುವಾರ ಮಧ್ಯಾಹ್ನ 1 ಗಂಟೆಗೆ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳನ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಮುಡಾ ಹಗರಣ ಸಂಬಂಧ ದಾಖಲಿಸಿದ್ದಾರೆ. ಹೈಕೋರ್ಟ್ ವಕೀಲ ವಸಂತ ಕುಮಾರ್ ವಕಾಲತ್ತು ವಹಿಸಿದ್ದಾರೆ. ನಾಳೆ ಸಿಎಂ ಸಿದ್ಧರಾಮಯ್ಯ ವಿರುದ್ಧ…
ನವದೆಹಲಿ: ಆಗಸ್ಟ್ 11 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ ಪರೀಕ್ಷೆ, 2024 ಅನ್ನು ಮುಂದೂಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಗಸ್ಟ್ 9 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಅರ್ಜಿದಾರರ ಪರ ವಕೀಲರು ಈ ವಿಷಯದಲ್ಲಿ ತುರ್ತು ಇದೆ ಎಂದು ವಾದಿಸಿದ್ದರಿಂದ ಅರ್ಜಿಯನ್ನು ಪಟ್ಟಿ ಮಾಡಲು ನಿರ್ಧರಿಸಿತು. ಅರ್ಜಿದಾರರಾದ ವಿಶಾಲ್ ಸೊರೆನ್ ಮತ್ತು ಇತರರು ಎಲ್ಲಾ ಅಭ್ಯರ್ಥಿಗಳಿಗೆ ಏಕರೂಪದ ಮತ್ತು ನ್ಯಾಯಯುತ ಪರೀಕ್ಷಾ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಯನ್ನು ಮರು ನಿಗದಿಪಡಿಸಲು ಮತ್ತು ಒಂದೇ ಬ್ಯಾಚ್ನಲ್ಲಿ ನಡೆಸಲು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ಪರೀಕ್ಷಾ ಕೇಂದ್ರ ಹಂಚಿಕೆ ಸಮಸ್ಯೆಗಳನ್ನು ಸರಿಪಡಿಸಲು ಮತ್ತು ಹತ್ತಿರದ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಸಮಾನವಾಗಿ ಮತ್ತು ಪಾರದರ್ಶಕವಾಗಿ ಹಂಚಿಕೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅವರು ನ್ಯಾಯಾಲಯವನ್ನು ಕೇಳಿದರು. “ಪರೀಕ್ಷಾ ನಗರಗಳ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್ ಬಾಗ್ ಪ್ಲವರ್ ಶೋಗೆ ಚಾಲನೆ ನೀಡಿದು. ಈ ಸಂದರ್ಭದಲ್ಲಿ ಅಂಬೇಡ್ಕರ್ ಮೊಮ್ಮಗ ಕೂಡ ಬಾಗಿಯಾಗಿದ್ದರು. ಹಾಗಾದ್ರೆ ಟಿಕೆಟ್ ದರ ಎಷ್ಟು ಅಂತ ಮುಂದೆ ಓದಿ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ…
ಜಪಾನ್: ದಕ್ಷಿಣ ಜಪಾನ್ನಲ್ಲಿ 6.9 ತೀವ್ರತೆಯ ಮತ್ತು 7.1 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದ್ದು, ಜನರು ಜೀವಕ್ಕಾಗಿ ಓಡಿ ಪೀಠೋಪಕರಣಗಳ ಕೆಳಗೆ ಆಶ್ರಯ ಪಡೆಯುತ್ತಿದ್ದಂತೆ ನಾಟಕೀಯ ದೃಶ್ಯಗಳು ಹೊರಬಂದವು. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಳ್ಳಲಾದ ತುಣುಕಿನಲ್ಲಿ, ಜನರು ಭಯಭೀತರಾಗಿದ್ದರು ಮತ್ತು ಅವರ ಸುತ್ತಲಿನ ಭೂ ಪ್ರದೇಶಗಳು ನಡುಗಿದ್ದು, ಭಯಗೊಂಡಿದ್ದಾರೆ. ಅಲ್ಲದೇ ಭೂ ಕಂಪನದಿಂದ ಕೆಲವು ವಸ್ತುಗಳು ನೆಲದ ಮೇಲೆ ಬಿದ್ದವು. ಪ್ರಸಾರಕ ಎನ್ಎಚ್ಕೆ ವರದಿ ಮಾಡಿದಂತೆ, ಕ್ಯುಶು ಮತ್ತು ಶಿಕೊಕು ದ್ವೀಪಗಳ ಕರಾವಳಿ ಪ್ರದೇಶಗಳನ್ನು ಸುನಾಮಿ ತಲುಪುವ ನಿರೀಕ್ಷೆಯಿದೆ. ಆಗಸ್ಟ್ 8 ರಂದು ದಕ್ಷಿಣ ಜಪಾನ್ನಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜುಲೈ ಮಧ್ಯದಲ್ಲಿ ಜಪಾನ್ನ ಹೊಕ್ಕೈಡೋದಲ್ಲಿ 5.62 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿತ್ತು. https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/ https://kannadanewsnow.com/kannada/good-news-for-govt-employees-awaiting-7th-pay-commission-7th-pay-commission/
ಬೆಂಗಳೂರು: ನಿನ್ನೆ ನಾನು ಕೋರ್ಟ್ ಹಾಲ್ ಬಿಟ್ಟು ಹೋಗೋದಿಲ್ಲ. ನನಗೆ ಬೆದರಿಕೆ ಇದೆ. ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಮುಂದೆ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅಲವತ್ತುಕೊಂಡಿದ್ದರು. ಇಂದು ವಿಚಾರಣ ನಡೆಸಿದಂತ ನ್ಯಾಯಪೀಠದ ಮುಂದೆ ಎಎಸ್ ಪಿಪಿ ಅವರು ಅವರಿಗೆ ಯಾರೂ ಕಿರುಕುಳ ನೀಡಿಲ್ಲ ಎಂಬುದಾಗಿ ವಿವರಣೆ ನೀಡಿದ್ದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಕೆಪಿಟಿಸಿಎಲ್ ನಲ್ಲಿ ಸಹಾಯ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಶಾಂತಕುಮಾರ ಸ್ವಾಮಿ ಎಂ.ಜಿ ಎನ್ನುವವರು, ನಿನ್ನೆ ಹೈಕೋರ್ಟ್ ನಲ್ಲಿ ಹೈಡ್ರಾಮಾವನ್ನೇ ನಡೆಸಿದ್ದರು. ಸಾಗರ ಡಿವೈಎಸ್ಪಿ ಕಿರುಕುಳ ನೀಡುತ್ತಿದ್ದಾರೆ. ನ್ಯಾಯಾಲಯ ಬಿಟ್ಟು ಹೋಗಲ್ಲ. ನನ್ನನ್ನು ಕಾಪಾಡಿ ಅಂತ ಗೋಗರೆದಿದ್ದರು. ಈ ಘಟನೆಯ ಕುರಿತಂತೆ ಸಮಗ್ರ ಮಾಹಿತಿಯನ್ನು ನ್ಯಾಯಪೀಠದ ಮುಂದೆ ಹಿಡುವಂತೆ ಇಂದಿಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಪೀಠವು ಸೂಚಿಸಿತ್ತು. ನ್ಯಾಯಾಲಯದ ಸೂಚನೆಯಂತೆ ಇಂದು ಪ್ರಕರಣದ ವಿಚಾರಣೆ ಆರಂಭಗೊಂಡಾಗ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್ ಜಗದೀಶ್ ಅವರು,…
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದಲ್ಲಿ ಅನುಮತಿಸಲಾದ ಮಿತಿಗಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ನಿಂದ ಆಘಾತದಿಂದ ಅನರ್ಹಗೊಂಡ ನಂತರ ತಮ್ಮನ್ನು ಭೇಟಿಯಾದ ಭಾರತೀಯ ತರಬೇತುದಾರರಿಗೆ “ಇದು ಆಟದ ಒಂದು ಭಾಗವಾಗಿದೆ” ಎಂದು ಧೈರ್ಯಶಾಲಿ ವಿನೇಶ್ ಫೋಗಟ್ ಬುಧವಾರ ಇಲ್ಲಿ ನಡೆದ ಭಾರತೀಯ ತರಬೇತುದಾರರಿಗೆ ತಿಳಿಸಿದರು. ಮಹಿಳಾ ರಾಷ್ಟ್ರೀಯ ತರಬೇತುದಾರ ವೀರೇಂದ್ರ ದಹಿಯಾ ಮತ್ತು ಮಂಜೀತ್ ರಾಣಿ ಮಂಗಳವಾರ ನಡೆದ ಆರಂಭಿಕ ಸುತ್ತಿನಲ್ಲಿ ವಿಶ್ವದ ನಂ.1 ಮತ್ತು ಹಾಲಿ ಚಾಂಪಿಯನ್ ಯುಯಿ ಸುಸಾಕಿ ಅವರನ್ನು ಸೋಲಿಸುವ ಮೂಲಕ ಕುಸ್ತಿ ಅಖಾಡದಲ್ಲಿ ಸಂಚಲನ ಮೂಡಿಸಿದ್ದ ಉತ್ಸಾಹಿ ಕುಸ್ತಿಪಟುವನ್ನು ಭೇಟಿಯಾದರು. ವಿನೇಶ್ ಅವರ ಪದಕ ವಿಜೇತ ಓಟವನ್ನು ಆಚರಿಸಲು ರಾಷ್ಟ್ರವು ತಯಾರಿ ನಡೆಸುತ್ತಿರುವಾಗ – ಅವರಿಗೆ ಕನಿಷ್ಠ ಬೆಳ್ಳಿ ಪದಕದ ಭರವಸೆ ನೀಡಲಾಯಿತು – ವಿನೇಶ್ ಎರಡನೇ ತೂಕವನ್ನು ಏರಲು ಸಾಧ್ಯವಾಗದಿದ್ದಾಗ ಅವರನ್ನು ಅನರ್ಹಗೊಳಿಸಲಾಯಿತು. ಇದು ಕುಸ್ತಿ ತಂಡದಲ್ಲಿ ಆಘಾತವನ್ನುಂಟು ಮಾಡಿತು. ಸುದ್ದಿ ಹೊರಬಂದ ನಂತರ ಹುಡುಗಿಯರು ತುಂಬಾ ಖಿನ್ನತೆಗೆ…