Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ 2023ನೇ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದಿದಂ ಬರ ನಿರ್ವಹಣೆಗಾಗಿ NDRF ಅನುದಾನವನ್ನು ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 17-07-2023ರಲ್ಲಿ ಹೊರಡಿಸಿರುವ SDRF ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ಇನ್ ಪುಡ್ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿ, ಅದಕ್ಕಾಗಿ ರಾಜ್ಯ ಸರ್ಕಾರವು 105 ಕೋಟಿಯನ್ನು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿದೆ. ಪ್ರತಿ ರೈತರಿಗೆ ಗರಿಷ್ಠ…

Read More

ಬೆಂಗಳೂರು: ನಗರದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ಮೂಲಕ ಮತ್ತೊಮ್ಮೆ ರಾಜ್ಯ ರಾಜಧಾನಿ ಬೆಂಗಳೂರು ಬೆಚ್ಚಿ ಬೀಳಉವಂತೆ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬೆದರಿಕೆ ಇ-ಮೇಲ್ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/shivamogga-power-outage-in-these-areas-of-tomorrow/ https://kannadanewsnow.com/kannada/karsevak-shrikant-poojary-granted-bail/

Read More

ಬೆಂಗಳೂರು: “ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  “ಇಲ್ಲಿಗೆ ನಾನೊಬ್ಬನೇ ಬಂದಿಲ್ಲ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ. ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಋಣ ತೀರಿಸುವ ವಿಚಾರದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ತಂದೆ ತಾಯಿ, ದೇವರು, ಗುರುಗಳು ಹಾಗೂ ಸಮಾಜ ಈ ನಾಲ್ಕು ಋಣವನ್ನು ನಾವು ತೀರಿಸಬೇಕಂತೆ. ಇವರ ಋಣವನ್ನು ಧರ್ಮದಿಂದ ತೀರಿಸಬೇಕು ಎಂದರು. ಈ ಹಿಂದೆ ಅನೇಕರು ಬೆಂಗಳೂರಿನ ಮಂತ್ರಿಯಾಗಿ ಅವರ ಶೈಲಿಯಲ್ಲಿ ಕೆಲಸ ಮಾಡಿದ್ದಾರೆ. ನಾನು 35 ವರ್ಷಗಳ ಹಿಂದೆ ಶಾಸಕನಾದಾಗ ಪ್ರತಿ ವರ್ಷ ಪ್ರತಿ ಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಕಷ್ಟ…

Read More

ರಾಂಚಿ: 2017ರ ಕ್ರಿಕೆಟ್ ಅಕಾಡೆಮಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಆರ್ಕಾ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಮಿಹಿರ್ ದಿವಾಕರ್ ಮತ್ತು ಸೌಮ್ಯ ವಿಶ್ವಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಜಾಗತಿಕವಾಗಿ ಕ್ರಿಕೆಟ್ ಅಕಾಡೆಮಿಯನ್ನು ನಡೆಸಲು ದಿವಾಕರ್ 2017 ರಲ್ಲಿ ಧೋನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಆದರೆ ಒಪ್ಪಂದದಲ್ಲಿ ಉಲ್ಲೇಖಿಸಲಾದ ನಿಯಮಗಳಿಗೆ ಬದ್ಧರಾಗಿಲ್ಲ ಎಂದು ಆರೋಪಿಸಲಾಗಿದೆ. ಒಪ್ಪಂದದ ನಿಯಮಗಳ ಪ್ರಕಾರ ಫ್ರ್ಯಾಂಚೈಸ್ ಶುಲ್ಕವನ್ನು ಪಾವತಿಸಲು ಮತ್ತು ಲಾಭವನ್ನು ಹಂಚಿಕೊಳ್ಳಲು ಆರ್ಕಾ ಸ್ಪೋರ್ಟ್ಸ್ ಬದ್ಧವಾಗಿತ್ತು, ಅದನ್ನು ಗೌರವಿಸಲಾಗಿಲ್ಲ ಎಂದು ಆರೋಪಿಸಲಾಗಿದೆ. ಪದೇ ಪದೇ ಜ್ಞಾಪನೆಗಳ ಹೊರತಾಗಿಯೂ, ಒಪ್ಪಂದದಲ್ಲಿ ನಿರ್ದಿಷ್ಟಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದರಿಂದಾಗಿ ಧೋನಿ ಆಗಸ್ಟ್ 15, 2021 ರಂದು ಸಂಸ್ಥೆಗೆ ನೀಡಲಾದ ಅಧಿಕಾರ ಪತ್ರವನ್ನು ಹಿಂತೆಗೆದುಕೊಳ್ಳಲು ಪ್ರೇರೇಪಿಸಿದರು. ಧೋನಿ ಹಲವಾರು ಕಾನೂನು ನೋಟಿಸ್ಗಳನ್ನು ಸಹ ಕಳುಹಿಸಿದ್ದಾರೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ. ವಿಧಿ ಅಸೋಸಿಯೇಟ್ಸ್ ಮೂಲಕ ಧೋನಿಯನ್ನು ಪ್ರತಿನಿಧಿಸುವ…

Read More

ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಅವರಿಗೆ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಶ್ರೀಕಾಂತ್ ಪೂಜಾರಿ ಹುಬ್ಬಳ್ಳಿಯಲ್ಲಿ  1992ರಲ್ಲಿ ನಡೆದಿದ್ದಂತ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದರು. ಅವರ ಬಂಧನ ವಿರೋಧಿಸಿ ಬಿಜೆಪಿ ನಾಯಕರು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಸಿದ್ದರು. https://kannadanewsnow.com/kannada/opposition-leader-r-ashoka-demands-siddaramaiahs-resignation/ https://kannadanewsnow.com/kannada/tamil-nadu-minister-v-muraleedharan-says-decision-to-remove-him-is-only-for-cm-big-relief-for-senthil-balaji-from-supreme-court/

Read More

ಬೆಂಗಳೂರು: ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಜೊತೆಗೆ ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಮುಖ್ಯಮಂತ್ರಿಯವರಿಗೆ ಒಂದೋ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈ ತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಇವೆರಡರಲ್ಲಿ ಯಾವುದು ಸತ್ಯವಾದರೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರ್ಥ. ಆದ್ದರಿಂದ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಶ್ರೀಕಾಂತ್ ಪೂಜಾರಿ ಅವರ…

Read More

ಶಿವಮೊಗ್ಗ: ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಾಳೆ ಹಾಗೂ ನಾಡಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ…

Read More

ಬೆಂಗಳೂರು: ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (Karnataka Soap and Detergents Limited-KSDL) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. 100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (KSDL) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂ ಕೆಎಸ್ಡಿಎಲ್ ನಲ್ಲೂ ಅಳವಡಿಸಿಕೊಳ್ಳಲಾಗುವುದು. ಕೆಎಸ್ಡಿಎಲ್ ವತಿಯಿಂದಲೇ…

Read More

ನವದೆಹಲಿ: ಒಂಬತ್ತು ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ 60 ರಾಜ್ಯಸಭಾ ಸಂಸದರು ಈ ವರ್ಷ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದು, ಅವರಲ್ಲಿ ಹಲವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪರಿಸರ ಸಚಿವ ಭೂಪೇಂದರ್ ಯಾದವ್, ಆರೋಗ್ಯ ಸಚಿವ ಮನ್ಸುಖ್ ಮದವಿಯಾ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ 57 ನಾಯಕರು ಏಪ್ರಿಲ್ನಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ. ಉತ್ತರ ಪ್ರದೇಶದಲ್ಲಿ 10, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಕರ್ನಾಟಕ ಮತ್ತು ಗುಜರಾತ್ನಲ್ಲಿ ತಲಾ 4, ಒಡಿಶಾ, ತೆಲಂಗಾಣ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ತಲಾ 3, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ತಲಾ 2, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಛತ್ತೀಸ್ಗಢದಲ್ಲಿ ತಲಾ 1 ಹುದ್ದೆಗಳು ಖಾಲಿ ಇವೆ. ನಾಲ್ವರು ನಾಮನಿರ್ದೇಶಿತ ಸದಸ್ಯರು ಜುಲೈನಲ್ಲಿ ನಿವೃತ್ತರಾಗಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಮ್ಮ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲಾಗಿತ್ತು. ಅಲ್ಲದೇ ಲೋಕಾಯುಕ್ತ ತನಿಖೆಗೆ ವಹಿಸೋ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಬಿಐ ಇಂದು ಹೈಕೋರ್ಟ್ ಗೆ ತನ್ನ ಮನವಿಯನ್ನು ಪ್ರಕರಮ ಸಂಬಂಧ ಸಲ್ಲಿಸಲಿದೆ. ಈ ಕುರಿತಂತೆ ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರೋ ಅರ್ಜಿಯನ್ನು ಕೂಡ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಇದೇ ಸಂದರ್ಭದಲ್ಲಿ ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ವೇಳೆಯಲ್ಲೇ ಇಂದು ಹೈಕೋರ್ಟ್ ಗೆ ಸಿಬಿಐ ತನ್ನ ಮನವಿಯನ್ನು ತಲ್ಲಿಸಲಿದೆ. ಇಂದು ಮಧ್ಯಾಹ್ನ 2.30ಕ್ಕೆ ಸಿಬಿಐ ತುರ್ತು ಅರ್ಜಿಯ ವಿಚಾರಣೆಗೆ ಮನವಿ ಮಾಡಲಿದ್ದು, ಸಿಬಿಐ ಮನವಿಯ ಬಳಿಕ ಕೋರ್ಟ್ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆಯಾಗಿ ರಾಜ್ಯ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆದ ನಿರ್ಧಾರವನ್ನು ಸಿಬಿಐ ಹೈಕೋರ್ಟ್ ನಲ್ಲಿ ಪ್ರಶ್ನಿಸಿ…

Read More