Author: kannadanewsnow09

ವರದಿ: ವಸಂತ ಬಿ ಈಶ್ವರಗೆರೆ ರಾಯಚೂರು: ಆ ವಸತಿ ಯೋಜನೆ, ಈ ವಸತಿ ಯೋಜನೆ ಅಂತ ರಾಜ್ಯ, ಕೇಂದ್ರ ಸರ್ಕಾರದಿಂದ ವರ್ಷ ವರ್ಷವೂ ಮನೆ ಮಂಜೂರು ಆಗ್ತಿದ್ದಾವೆ. ತಲುಪ ಬೇಕಾದವರಿಗೆ ತಲುಪುತ್ತಿಲ್ಲ ಅನ್ನುವುದಕ್ಕೆ ರಾಜ್ಯದ ಈ ಕರುಣಾಜನಕ ಕಥೆಯೇ ಸಾಕ್ಷಿ. ರಾಯಚೂರಿನ ಒಂದಿಡೀ ಕುಟುಂಬ ತಗಡಿನ ಶೆಡ್ ನಲ್ಲಿಯೇ ಕಳೆದ 10 ವರ್ಷಗಳಿಂದ ಜೀವನ ನಡೆಸುತ್ತಿದೆ ಎಂದ್ರೇ ನೀವೇ ಊಹಿಸಿಕೊಳ್ಳಿ. ಆ ಮರುಕ ಪಡುವ ಕತೆ ಮುಂದೆ ಓದಿ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೊಳಬಾಳ ಗ್ರಾಮದಲ್ಲಿ ಕಳೆದ 10 ವರ್ಷಗಳಿಂದ ತಗಡಿನ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿರೋ ಕುಟುಂಬಲೇ ಯಂಕಪ್ಪ ಉಪ್ಪಾ ಹಾಗೂ ಸುಜಾತ ಎಂಬುವರಾಗಿದ್ದಾರೆ. ಇಬ್ಬರು ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳೊಂದಿಗೆ ಬದುಕು ನಡೆಸುತ್ತಿರುವಂತ ಈ ಕುಟುಂಬಕ್ಕೆ ಕೂಲಿಯೇ ಆಸಲೆ. ಕೂಲಿಯಿಂದ ಬಂದಂತ ಹಣದಿಂದಲೇ ಜೀವನ ನಿರ್ವಹಣೆ ಮಾಡುತ್ತಿದೆ. ಕೊಳಬಾಳು ಗ್ರಾಮದಲ್ಲೇ ಗ್ರಾಮ ಪಂಚಾಯ್ತಿ ಇದೆ. ನಮಗೆ ಮನೆ ಕೊಡಿ, ತಗಡಿನಲ್ಲೇ ಎಷ್ಟು ದಿನ ಅಂತ ವಾಸ ಮಾಡೋದು. ಮಕ್ಕಳು…

Read More

ಬೆಂಗಳೂರು: ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ. ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.…

Read More

ಬೆಂಗಳೂರು: ಕಂದಾಯ ಇಲಾಖೆಯ ಸೇವೆಯಾಗಿರುವಂತ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ದಾಖಲಾಗೋದಕ್ಕೆ ಗ್ರಾಮಾಧಿಕಾರಿಗಳು ದೃಢೀಕರಣದ ನಂತ್ರ ದಾಖಲಾಗುತ್ತಿದ್ದವು. ಆದ್ರೇ ಇದಕ್ಕೆ ತಿಲಾಂಜನಿ ನೀಡಲಾಗಿದೆ. ಇನ್ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿದ್ದಾವೆ. ಈ ಕುರಿತಂತೆ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಧಿಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಹೇಳಿದರು. ಆಯಾ ಪಹಣಿ ಮೇಲೆ ಬ್ಯಾಂಕ್‌ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಧಿಕಾರಿಗಳ ಸಮಯ ಪೋಲಾಗುವುದು ಮತ್ತು…

Read More

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇನ್ಮುಂದೆ ಭಾನುವಾರವೂ ಉಪ ನೋಂದಣಾಧಿಕಾರಿಗಳ ಕಚೇರಿ ತೆರೆದಿರಲಿದೆ. ಈ ಮೂಲಕ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸಬ್ ರಿಜಿಸ್ಟರ್ ಕಚೇರಿ ಸೇವೆಗಳು ದೊರೆಯಲಿದ್ದಾವೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. https://kannadanewsnow.com/kannada/shocking-incident-in-namma-metro-unidentified-person-stops-movement-for-some-time/ https://kannadanewsnow.com/kannada/breaking-iafs-tejas-aircraft-crashes-in-rajasthan-pilot-safe/

Read More

ಬೆಂಗಳೂರು : ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು. ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು. ಈ ಸಂಬಂಧ ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ…

Read More

ಬೆಂಗಳೂರು: ಇಂದು ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ, ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ , ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಗೌರಿ ನಾಯಕ್ ರವರ ಸಮಾಜಮುಖಿ ಸೇವೆಯನ್ನು ಪ್ರಶಂಸಿಸಿ, ಇದೇ ರೀತಿಯಲ್ಲಿ ಅವರು ಕಾರ್ಯವನ್ನು ಮುಂದುವರೆಸಲು ದೇವರು ಶಕ್ತಿ ಮತ್ತು ಆಯಸ್ಸನ್ನು ನೀಡುವಂತೆ ಹಾರೈಸಿದರು.  ಅಂಗನವಾಡಿ ಆವರಣದಲ್ಲಿ ಅವರು ತೆರೆದಿರುವ ಬಾವಿಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಟ್ಟೆಯನ್ನು…

Read More

ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ. ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ…

Read More

ಬೆಂಗಳೂರು: ಮಾರ್ಚ್ 13 ರಿಂದ 16 ರವರೆಗೆ ಮುರುಡೇಶ್ವರ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಸೂಚಿಸಿದೆ. 1. ಮಾರ್ಚ್ 12, 13, 14 & 15, 2024 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಭಟ್ಕಳ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. 2. ಮಾರ್ಚ್ 13, 14, 15 & 16, 2024 ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. https://kannadanewsnow.com/kannada/job-news-applications-invited-for-medical-and-paramedical-posts/ https://kannadanewsnow.com/kannada/shocking-incident-in-namma-metro-unidentified-person-stops-movement-for-some-time/

Read More

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ಪಡೆದುಕೊಳ್ಳಬೇಕು. ಅದೇ ದಿನ ಈ ಎಲ್ಲ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30ರ ವರೆಗೆ ನಡೆಸಲಾಗುವುದು. ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು ಮತ್ತು ಕೆ.ಎಂ.ಸಿಯ ನೋಂದಣೆಯನ್ನು ಹೊಂದಿರತಕ್ಕದ್ದು. ಸರ್ಕಾರದ ನಿಯಮಾವಳಿ ಎನ್.ಹೆಚ್.ಎಂ ಮಾರ್ಗಸೂಚಿಯಂತೆ ಹುದ್ದೆವಾರು…

Read More

ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಒಂದು ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಟ್ಟಾಗ ನಮ್ಮ ಕಷ್ಟಗಳೆಲ್ಲ ದೂರವಾಗಬೇಕು ಎಂದು ಅನಿಸುವುದಿಲ್ಲವೇ? ಅಂತೆಯೇ. ಪ್ರತಿ ತಿಂಗಳು ಮುಗಿಯುತ್ತಿದ್ದಂತೆ ಮತ್ತು ಮುಂದಿನ ತಿಂಗಳು ಪ್ರಾರಂಭವಾಗುತ್ತಿದ್ದಂತೆ, ಕಳೆದ ತಿಂಗಳು ನಮ್ಮನ್ನು ಕಾಡಿದ ಎಲ್ಲಾ ಕಷ್ಟಗಳು ಆ ತಿಂಗಳೊಂದಿಗೆ ಕೊನೆಗೊಳ್ಳಲಿ. ಮುಂಬರುವ ಹೊಸ ತಿಂಗಳು ನಮ್ಮ…

Read More