Subscribe to Updates
Get the latest creative news from FooBar about art, design and business.
Author: kannadanewsnow09
ಬೀದರ್: ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಕಳೆದ 3 ದಿನಗಳ ಹಿಂದೆ ಎದೆಬಡಿತದಲ್ಲಿ ಏರುಪೇರಾಗಿ ಮುಂಬೈನ ಬಾಂದ್ರಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎದೆ ಬಡಿತದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಔರಾದ್ ನ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಎದೆಬಡಿತದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. 2022ರಲ್ಲೇ ಇದೇ ರೀತಿ ಎದೆಬಡಿತದಲ್ಲಿ ಏರುಪೇರಾಗಿ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಮಾಜಿ ಸಚಿವ, ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.…
ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 100 ರೂ.ಗಳಷ್ಟು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಬೆಲೆ ಕಡಿತವು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಚಂಚಲತೆ, ಭೌಗೋಳಿಕ ರಾಜಕೀಯ ಸವಾಲುಗಳು ಮತ್ತು ಕಂಪನಿಗಳ ಆರ್ಥಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಪೆಟ್ರೋಲ್ ಮತ್ತು ಡೀಸೆಲ್ನ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು “ಬಹಳ…
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ…
ಬೆಂಗಳೂರು: ಪಾಕಿಸ್ತಾನದ ಪರವಾಗಿ ವಿಧಾನಸೌಧದಲ್ಲಿ ಘೋಷಣೆ ಕೂಗಿದ್ದಂತ ಪ್ರಕರಣ ಸಂಬಂಧ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 27, 2024ರಂದು ವಿಧಾನಸೌಧದಲ್ಲಿ ನಾಸಿರ್ ಹುಸೇನ್ ಗೆಲುವಿನ ಬಳಿಕ ಮೂವರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನು ಕೂಗಲಾಗಿತ್ತು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಬಳಿಕ ಆ ವೀಡಿಯೋವನ್ನು ಎಫ್ಎಸ್ಎಲ್ ತನಿಖೆಗೂ ಕಳುಹಿಸಿಕೊಡಲಾಗಿತ್ತು. ಇದರ ನಡುವೆ ವಿಧಾನಸೌಧ ಠಾಣೆಯ ಪೊಲೀಸರಿಂದ ಮೊಹಮ್ಮದ್ ಶಫಿ ನಾಶಿಪುಡಿ, ಮಿಜಾಮಿಲ್ ಹಾಗೂ ಇಮ್ತಿಯಾಜ್ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಲಾಗಿತ್ತು. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಮೂವರು ಆರೋಪಿಗಳಿಗೆ ಇಬ್ಬರ ಶೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. https://kannadanewsnow.com/kannada/former-mlc-ramesh-babu-appointed-chairman-of-d-devaraj-urs-truck-terminals-limited/ https://kannadanewsnow.com/kannada/major-surgery-from-state-government-to-administrative-machinery-five-ias-officers-transferred/
ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದು, ರಮೇಶ್ ಬಾಬು ಇವರನ್ನು ಅಧ್ಯಕ್ಷರು, ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್, ಬೆಂಗಳೂರು ಹುದ್ದೆಗೆ ನೇಮಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ಬಗ್ಗೆ ಕೂಡಲೇ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/west-bengal-cm-mamata-banerjee-injured-after-slipping-at-home-hospitalised/ https://kannadanewsnow.com/kannada/election-commission-uploads-electoral-bonds-data-shared-by-sbi-on-its-website/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಿದ್ದು, ಡಾ.ಅಜಯ್ ನಾಗಭೂಷಣ್ ಎಂ.ಎನ್., ಐಎಎಸ್ (ಕೆಎನ್: 2004) ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿ ವಹಿಸಲಾಗಿದೆ. ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ (ಕೆಎನ್: 2005) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ…
ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಹಣೆಗೆ ಹೊಲಿಗೆ ಹಾಕಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಮತಾ ಅವರ ಹಣೆ ಒಡೆಯುವ ಚಿತ್ರಗಳನ್ನು ತೃಣಮೂಲದ ಎಕ್ಸ್-ಹ್ಯಾಂಡಲ್ (ಮಾಜಿ ಟ್ವಿಟರ್) ನಿಂದ ಬಹಿರಂಗಗೊಳಿಸಲಾಗಿದೆ. ಟಿಎಂಸಿ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಮ್ಮ ಕಾಲಿಘಾಟ್ ನಿವಾಸದ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಬಿದ್ದನು. ಆಪ್ತ ಮೂಲಗಳ ಪ್ರಕಾರ, ಅವರ ಹಣೆ ಒಡೆದು ರಕ್ತ ಹೊರಬರಲು ಪ್ರಾರಂಭಿಸಿತು. ತಕ್ಷಣ ಅವರನ್ನು ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅಲ್ಲಿಗೆ ತಲುಪಿದ್ದಾರೆ ಎಂದಿದೆ. https://twitter.com/AITCofficial/status/1768286010264502610 https://kannadanewsnow.com/kannada/election-commission-uploads-electoral-bonds-data-shared-by-sbi-on-its-website/
ಶಿವಮೊಗ್ಗ: ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದ್ದು ದಿ: 31-03-2022 ರವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಕ್ಕೀಡಾದ ಫಲಾನುಭವಿಗಳಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿರುತ್ತದೆ. ಫಲಾನುಭವಿ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್, ಪಂಚನಾಮ, ಇತರೆ ಸೂಕ್ತ ದಾಖಲಾತಿಗಳನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಇಲ್ಲಿ ನೀಡಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಎಸ್ ಸುಮ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೇ ದಿನಾಂಕ 14-3-2019 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಮುಂದೆ ಓದಿ. ಆಗ್ರಿ ಇನ್ನೋವೇಷನ್ ಸೆಂಟರ್ ಕೃಷಿ ಕ್ಷೇತ್ರದಲ್ಲಿ ರೈತರ ಉತ್ಪಾದನೆ ಹೆಚ್ಚಾಗಲು ಹೊಸ ತಂತ್ರಜ್ಞಾನ ತರಲು ನವೋದ್ಯಮವನ್ನು ಪ್ರೋತ್ಸಾಹಿಸಬೇಕು. ಅಗ್ರೀ ಬಯೋ ಟೆಕ್ ಸಂಸ್ಥೆಗಳನ್ನು ರೈತರಿಗೆ ತಲುಪಿಸಲು , ಉತ್ಪಾದಕತೆ ಹೆಚ್ಚಿಸಲು, ಬೆಳೆ ಸಂರಕ್ಷಣೆಗಾಗಿ ಹೊಸ ನವೋದ್ಯಮಗಳನ್ನು ಪ್ರೋತ್ಸಾಹಿಸಲು ‘ಆಗ್ರಿ ಇನ್ನೋವೇಷನ್ ಸೆಂಟರ್ ನ್ನು ’ 67.50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಇದನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪೋಲೀಸ್ ನೇಕಾತಿ ಹಗರಣ: ಹೆಚ್ಚಿನ ತನಿಖೆಗೆ ಎಸ್.ಐ.ಟಿ ರಚನೆ ಪೋಲೀಸ್ ನೇಮಕಾತಿ ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳು ಬಿ.ವೀರಪ್ಪ ಅವರ ನೇತೃತ್ವದ ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ.…
ಬೆಂಗಳೂರು: ನಗರದಲ್ಲಿ 50,000 ಲಂಚ ಸ್ವೀಕರಿಸುತ್ತಿದ್ದಾಗೇ ಲೋಕಾಯುಕ್ತ ಬಲೆಗೆ ಕೆಆರ್ ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ( PI) ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಬಿದ್ದಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಆಣೆಯ ಇನ್ಸ್ ಪೆಕ್ಟರ್ ವಜ್ರಮುನಿ ಹಾಗೂ ಪಿಎಸ್ಐ ರಮ್ಯಾ ಅವರು ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಂತ ಆರೋಪಿಯೊಬ್ಬನ ಬಿಡುಗಡೆಗಾಗಿ ವ್ಯಕ್ತಿಯೊಬ್ಬರಿಗೆ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇಂದು ಕೆಆರ್ ಪುರಂ ಠಾಣೆಯ ಇನ್ಸ್ ಪೆಕ್ಟರ್ ವಜ್ರಮುನಿ ಹಾಗೂ ಪಿಎಸ್ಐ ರಮ್ಯಾ ಅವರಿಗೆ 5 ಲಕ್ಷದಲ್ಲಿ 50,000 ಮೊದಲ ಕಂತಿನ ಹಣವನ್ನು ಈಗಾಗಲೇ ಪಡೆದಿದ್ದರು. ಇಂದು 1 ಲಕ್ಷ ಹಣವನ್ನು ವ್ಯಕ್ತಿ ನೀಡೋದಕ್ಕೆ ತೆರಳಿದ್ದರು. ಈ ಮಾಹಿತಿಯನ್ನು ಲೋಕಾಯುಕ್ತ ಪೊಲೀಸರಿಗೂ ನೀಡಿದ್ದರು. ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಂತ ಆರೋಪಿಯನ್ನು ಬಿಡುಗಡೆ ಮಾಡೋದಕ್ಕೆ 1 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.…