Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಹಾಗೂ ಇಂಧನ ಬಾಕಿ ಹೊಣೆಗಾರಿಕೆಯನ್ನು ಪಾವತಿಸಲು ಸರ್ಕಾರದ ಖಾತರಿ, ಗ್ಯಾರಂಟಿಯೊಂದಿಗೆ ಹಣಕಾಸು ಸಂಸ್ಥೆಗಳಿಂದ 2000 ಕೋಟಿ ಸಾಲವನ್ನು ಪಡೆಯಲು ಅನುಮೋದನೆ ನೀಡಿದೆ. ಇಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳ ಕ್ರೋಢೀಕೃತ ಪತ್ರದಲ್ಲಿ ಹಾಗೂ ಮೇಲೆ ಓದಲಾದ ಕ್ರಮ ಸಂಖ್ಯೆ (2)ರಿಂದ (4)ರ ಪತ್ರಗಳಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರು ನಾಲ್ಕು ಸಾರಿಗೆ ನಿಗಮಗಳು ರಾಜ್ಯದ ಜನತೆಗೆ ಉತ್ತಮ ಗುಣಮಟ್ಟದ, ವ್ಯವಸ್ಥಿತ, ಸುರಕ್ಷಿತ ಹಾಗೂ ಮಿತವ್ಯಯದಲ್ಲಿ ಸಾರಿಗೆ ಸೇವೆಯನ್ನು ನೀಡುವಲ್ಲಿ ಸತತ ಪರಿಶ್ರಮವನ್ನು ವಹಿಸುತ್ತಿದ್ದು, ಸಂಸ್ಥೆಗಳ ಕಾರ್ಯಚರಣೆಯ ಸಮರ್ಪಕ ನಿರ್ವಹಣೆ ಹಾಗೂ ಶಕ್ತಿ ಯೋಜನೆಯ ಅನುಷ್ಠಾನದಿಂದಾಗಿ ಸಂಸ್ಥೆಗಳ ಆದಾಯ ಗಳಿಕೆಯಲ್ಲಿ ಹೆಚ್ಚಳ ಉಂಟಾಗಿದ್ದರೂ ಸಹ,…
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದರು. ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ , ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೀಗೆ ಹೇಳಿದರು. ಶೇಕಡಾ 18ರಷ್ಟು ಜಿ.ಎಸ್.ಟಿ.ಯಿಂದಾಗಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳು ತಲಾ ಒಂದೂವರೆ ಲಕ್ಷ ರೂಪಾಯಿ ಪಾವತಿಸಬೇಕಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಹೊರೆಯಾಗಿ ಪರಿಣಾಮಿಸಿದ್ದು, ಅಧಿಕ ಹಣ ಪಾವತಿ ಸಾಧ್ಯವಾಗುತ್ತಿಲ್ಲ ಹೀಗಾಗಿ ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಜಿ.ಎಸ್.ಟಿ. ತೆರಿಗೆ ರದ್ದುಗೊಳಿಸಬೇಕಾದ ತುರ್ತು ಅಗತ್ಯವಿರುವುದನ್ನು ಕೇಂದ್ರ ಸರ್ಕಾರದ…
ಸುರತ್ಕಲ್: ಕೌಟುಂಬಿಕ ಕಲಹದ ಕಾರಣದಿಂದಾಗಿ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿದ್ದನು. ಈ ಪ್ರಕರಣದಲ್ಲಿ ಪಾಪಿ ತಂದೆಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಜೂನ್.22, 2022ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಕೋಡಿ ಬಳಿಯಲ್ಲಿ ತಂದೆ ವಿಜೇಶ್ ಶೆಟ್ಟಿಗಾರ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿತ್ತು. ಕೌಟುಂಬಿಕ ಕಲಹ ತೀವ್ರಗೊಂಡ ಸಂದರ್ಭದಲ್ಲಿ ತನ್ನ ಮಕ್ಕಳಾದಂತ ರಶ್ಮಿತಾ (14), ಉದಯ್ (11) ಹಾಗೂ ದಕ್ಷಿತ್ (4) ಎಂಬುವರನ್ನು ಬಾವಿಗೆ ತಳ್ಳಿ ಕೊಂದಿದ್ದನು. ಈ ಬಳಿಕ ಆರೋಪಿ ಪತ್ನಿಯನ್ನು ಎಳೆದುಕೊಂಡು ಹೋಗಿ ಆಕೆಯನ್ನು ಬಾವಿಗೆ ತಳ್ಳಿ, ತಾನು ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನು. ಆದರೇ ಪತಿ, ಪತ್ನಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೇ ಮೂವರು ಮಕ್ಕಳನ್ನು ಅದಾಗಲೇ ಸಾವನ್ನಪ್ಪಿದ ಕಾರಣ ಮೃತದೇಹವನ್ನು ಬಾವಿಯಿಂದ ಹೊರ ತೆಗೆಯಲಾಗಿತ್ತು. ಈ ಘಟನೆ ಕುರಿತಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಿಯ ಕುರಿತಂತೆ…
ಬೆಂಗಳೂರು: ಡಿ.31ರ ವರ್ಷದ ಕೊನೆಯ ದಿನವೂ ಬಿಬಿಎಂಪಿ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ರವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಬ್ಯಾನರ್ ಗಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ. ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಪಾದಚಾರಿ ಒತ್ತುವರಿ ತೆರವು: ಅದರಂತೆ ಇಂದು ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು. ಫ್ಲೆಕ್ಸ್ ಬ್ಯಾನರ್ ಗಳ ತೆರವು ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ:109, ಹಳೇ ವಾರ್ಡ್ ಸಂಖ್ಯೆ: 50 ರ ಕಸ್ತೂರಿನಗರದ 2ನೇ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಸಹ ತೆರವುಗೊಳಿಸಲಾಯಿತು. ಈ ವೇಳೆ ಸಹಾಯಕ ಕಾರ್ಯಪಾಲಕ…
ಜಾಗತಿಕ ರಂಗದಲ್ಲಿ ಭಾರತದ ಉದಯವು ಪರಿವರ್ತಕ ಮಾತ್ರವಲ್ಲದೆ ವಿಶ್ವದಾದ್ಯಂತ ವಿವಿಧ ನಾಯಕರು, ಅರ್ಥಶಾಸ್ತ್ರಜ್ಞರು ಮತ್ತು ಜಾಗತಿಕ ಸಂಸ್ಥೆಗಳಿಂದ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ. ಇದು ಒಂದು ದಶಕದ ನಿರಂತರ ಪ್ರಯತ್ನ, ಕಾರ್ಯತಂತ್ರದ ಯೋಜನೆ ಮತ್ತು ದೂರದೃಷ್ಟಿಯ ಪರಿಕಲ್ಪನೆ ಹೊಂದಿದ ನಾಯಕತ್ವದ ಪರಿಣಾಮವಾಗಿದೆ. ಪ್ರಧಾನಮಂತ್ರಿ ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದ ಮಾರ್ಗದರ್ಶನ ಪಡೆದ ಭಾರತವು ಜಾಗತಿಕ ಶಕ್ತಿ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. 2024 ರಲ್ಲಿ, ಬೆಳವಣಿಗೆಯ “ಎಂಜಿನ್”, ತಾಂತ್ರಿಕ “ಆವಿಷ್ಕಾರಕ” ಮತ್ತು ಸುಸ್ಥಿರತೆಯ ನಾಯಕನೊಂದಿಗೆ ಭಾರತವು ಮುನ್ನುಗ್ಗುತ್ತಿದ್ದು, ಭಾರತದ ಪ್ರಮುಖ ಪಾತ್ರವನ್ನು ಇಡೀ ಜಗತ್ತು ಹೆಚ್ಚು ಹೆಚ್ಚು ಒಪ್ಪಿಕೊಳ್ಳುವುದನ್ನು ನಾವು ನೋಡಿದ್ದೇವೆ. ಜಾಗತಿಕ ತಜ್ಞರು, ಉದ್ಯಮ ನಾಯಕರು ಮತ್ತು ಸಂಸ್ಥೆಗಳು ನಿರಂತರವಾಗಿ ದೇಶದ ಸಾಧನೆಗಳನ್ನು ಪ್ರಶಂಸಿಸಿದ್ದಾರೆ ಹಾಗೂ ನಾನಾ ರೀತಿಯಲ್ಲಿ ಎತ್ತಿ ತೋರಿಸಿದ್ದಾರೆ. ಈ ಯಶಸ್ಸು ಕೇವಲ 2024 ರಲ್ಲಿ ಮಾತ್ರ ಸ್ಪಷ್ಟವಾಗಿರುವುದಲ್ಲ, ಇತ್ತೀಚೆಗೆ ಮಾತ್ರ ಗೋಚರಿಸಿರುವುದಲ್ಲ, ಬದಲಾಗಿ, ಕಳೆದ ಕೆಲವು ವರ್ಷಗಳಲ್ಲಿನ ಜಾಗತಿಕ ಹೇಳಿಕೆಗಳಲ್ಲಿ ಸ್ಪಷ್ಟವಾಗಿ ಪ್ರತಿಧ್ವನಿಸಿದೆ. ಉದಾಹರಣೆಗೆ, 2021 ರಲ್ಲಿ, ಫಸ್ಟ್ ಸೋಲಾರ್…
2024 ನೇ ವರ್ಷವು ಇಂದು ಕೊನೆಗೊಳ್ಳುತ್ತದೆ. ನಾಳೆ ಹೊಸ ವರ್ಷವನ್ನು ಸ್ವಾಗತಿಸಲು ನಾವೆಲ್ಲರೂ ಕಾಯುತ್ತಿದ್ದೇವೆ. ಈ ದಿನದಂದು ನಾವು ಮಾಡಬಹುದಾದ ಪೂಜೆಯು 2025 ರ ವರ್ಷವಿಡೀ ನಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಮತ್ತು ಈ ವರ್ಷದ ಎಲ್ಲಾ ಕಷ್ಟಗಳು ಇಂದು ನಮ್ಮನ್ನು ಹಾದುಹೋಗಲಿ. ಹುಟ್ಟಲಿರುವ ಹೊಸ ವರ್ಷವು ಎಲ್ಲರಿಗೂ ಹೊಸ ವಸಂತವನ್ನು ತರಲಿ, ಮತ್ತು ದೇವರ ಆಶೀರ್ವಾದವು ಎಲ್ಲರಿಗೂ ನೆರವೇರಲಿ ಎಂಬ ಪ್ರಾರ್ಥನೆಯೊಂದಿಗೆ ಇಂದಿನ ಆಧ್ಯಾತ್ಮಿಕ ಪೋಸ್ಟ್ಗೆ ಪ್ರಯಾಣಿಸೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ…
ಬೆಂಗಳೂರು: ಇಪಿಎಫ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ಬಂಧನ ವಾರಂಟ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿಂದೆ ಡಿಸೆಂಬರ್ 21 ರಂದು ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪುಲಕೇಶಿನಗರ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಸೆಂಚುರಿ ಲೈಫ್ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಯನ್ನು ನಿರ್ವಹಿಸುತ್ತಿದ್ದ ಉತ್ತಪ್ಪ, ಉದ್ಯೋಗಿಗಳ ವೇತನದಿಂದ ಪಿಎಫ್ ಕೊಡುಗೆಗಳನ್ನು ಕಡಿತಗೊಳಿಸಿದ್ದಾರೆ ಆದರೆ ಮೊತ್ತವನ್ನು ಜಮಾ ಮಾಡಲು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 4ರಂದು ಪತ್ರ ಬರೆದಿರುವ ಕಮಿಷನರ್ ರೆಡ್ಡಿ, ವಾರಂಟ್ ಜಾರಿಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಆದಾಗ್ಯೂ, ಉತ್ತಪ್ಪ ತನ್ನ ಹಿಂದಿನ ವಿಳಾಸದಲ್ಲಿ ವಾಸಿಸುತ್ತಿಲ್ಲ ಎಂದು ವರದಿಯಾಗಿದ್ದರಿಂದ ವಾರಂಟ್ ಅನ್ನು ಪಿಎಫ್ ಕಚೇರಿಗೆ ಹಿಂದಿರುಗಿಸಲಾಯಿತು. ಉತ್ತಪ್ಪ ಅವರು ಪುಲಕೇಶಿನಗರದ ನಿವಾಸದಲ್ಲಿ ಇಲ್ಲದ ಕಾರಣ ಡಿಸೆಂಬರ್ 4ರಂದು ಹೊರಡಿಸಲಾಗಿದ್ದ ವಾರಂಟ್ ಅನ್ನು ವಾಪಸ್ ಪಡೆಯಲಾಗಿದೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಡುಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಇಡಿಗಂಟು ಸೌಲಭ್ಯಕ್ಕೆ ಸರ್ಕಾರ ಅವಕಾಶ ನೀಡಿದೆ. ಈ ಇಡುಗಂಟು ಪಡೆಯಲು ಕಡ್ಡಾಯವಾಗಿ ಕೆಲ ದಾಖಲೆಗಳನ್ನು ಸಲ್ಲಿಸಬೇಕಿದೆ. ಅವು ಯಾವುವು ಅಂತ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಸುತ್ತೋಲೆ ಹೊರಡಿಸಿದ್ದು, ಪ್ರಧಾನಮಂತ್ರಿ ಪೋಷಣೆ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಕಾರ್ಯಕ್ರಮದಡಿ ಆಯ್ಕೆಗೊಂಡು ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ದಿನಾಂಕ:31.03.2022 ರಂದು 60 ವರ್ಷಗಳ ವಯೋಮಿತಿಯನ್ನು ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದಿರುವ ಮತ್ತು ಈ ದಿನಾಂಕದ ನಂತರದ ಅವಧಿಯಲ್ಲಿ 60 ವರ್ಷ ವಯೋಮಾನ ಪೂರೈಸಿ ಕೆಲಸದಿಂದ ಬಿಡುಗಡೆ ಹೊಂದುವ ಅಡುಗೆ ಸಿಬ್ಬಂದಿಗೆ ಒಂದು ಬಾರಿಯ ಇಡಿಗಂಟು ಸೌಲಭ್ಯವನ್ನು ಸರ್ಕಾರವು ಮಂಜೂರು ಮಾಡಿ ಆದೇಶವನ್ನು ಉಲ್ಲೇಖದ ರೀತ್ಯಾ ನೀಡಿರುತ್ತದೆ. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ನೀಡಿರುವ ಷರತ್ತುಗಳನ್ನು ಮತ್ತು ಕೆಳಕಂಡ ಸೂಚನೆಗಳನ್ನು ಅನ್ವಯಿಸಿಕೊಂಡು ಅಡುಗೆ ಸಿಬ್ಬಂದಿಗೆ ಅವರು ಸಲ್ಲಿಸಿರುವ ತಾತ್ಕಾಲಿಕ…
ಇಂಫಾಲ್: ಮಣಿಪುರದಲ್ಲಿ 250 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮತ್ತು ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಜನಾಂಗೀಯ ಸಂಘರ್ಷಕ್ಕಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ ಮತ್ತು “ಹಿಂದಿನ ತಪ್ಪುಗಳನ್ನು ಮರೆತು ಕ್ಷಮಿಸಿ ಶಾಂತಿಯುತ ಮತ್ತು ಸಮೃದ್ಧ ರಾಜ್ಯದಲ್ಲಿ ಒಟ್ಟಿಗೆ ಬದುಕುವಂತೆ” ಎಲ್ಲಾ ಸಮುದಾಯಗಳಿಗೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಕಳೆದ ಮೂರು-ನಾಲ್ಕು ತಿಂಗಳುಗಳಿಂದ ರಾಜ್ಯದಲ್ಲಿ ಸಾಪೇಕ್ಷ ಶಾಂತಿ ಇದೆ, ಇದು ಹೊಸ ವರ್ಷದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸುತ್ತದೆ ಎಂಬ ಭರವಸೆಯನ್ನು ನೀಡುತ್ತದೆ ಎಂದು ಹೇಳಿದರು. “ರಾಜ್ಯದಲ್ಲಿ ನಡೆದ ಘಟನೆಗೆ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅನೇಕರು ತಮ್ಮ ಮನೆಗಳನ್ನು ತೊರೆಯಬೇಕಾಯಿತು. ನಾನು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸಲು ಬಯಸುತ್ತೇನೆ. ಆದರೆ ಕಳೆದ ಮೂರು-ನಾಲ್ಕು ತಿಂಗಳುಗಳಲ್ಲಿ ಸಾಪೇಕ್ಷ ಶಾಂತಿಯನ್ನು ನೋಡಿದ ನಂತರ, ಮುಂಬರುವ ವರ್ಷದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಭಾವಿಸುತ್ತೇನೆ. “ಏನಾಗಿದೆಯೋ ಅದು ಸಂಭವಿಸಿದೆ… ಶಾಂತಿಯುತ ಮತ್ತು ಸಮೃದ್ಧ…
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ಕೆಳಕಂಡ ಮಾರ್ಗಗಳಲ್ಲಿ ತಡರಾತ್ರಿಯವರೆಗೆ BMTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಇಂದು ಬೆಂಗಳೂರಲ್ಲಿ ಹೊಸ ವರ್ಷಾಚರಣೆಯಲ್ಲಿ ತೊಡಗೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. 1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ 2 G-4 ಜಿಗಣಿ 3 G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ 4 G-6 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್ 5 G-7 ಜನಪ್ರಿಯ ಟೌನ್ ಶಿಪ್ 6 G-8 ನೆಲಮಂಗಲ 7 G-9 ಯಲಹಂಕ ಉಪನಗರ 5ನೇ ಹಂತ 8 …














