Author: kannadanewsnow09

ಬೆಂಗಳೂರು : ಹಾಸನ ಡಿಎಫ್ಓ ನಿಯೋಜನೆಗೆ 1 ಕೋಟಿ ಡಿಮ್ಯಾಂಡ್ ಮಾಡಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪ ಕಪೋಲ ಕಲ್ಪಿತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಾಲ್ಕು ದಿನಗಳ ಹಿಂದೆ ಸುದ್ದಿಗೋಷ್ಠಿ ಮಾಡಿ ಹಾಸನದ ಡಿ.ಸಿ.ಎಫ್. ಮೋಹನ್ ಕುಮಾರ್ ಪ್ರಾಮಾಣಿಕ ಅಧಿಕಾರಿ ಅವರನ್ನು ಅಮಾನತು ಮಾಡಿದ್ದು ಸರಿಯಲ್ಲ ಎಂದು ಎಚ್.ಡಿ.ಕೆ. ಹೇಳಿದ್ದರು, ಈಗ ಅವರೇ ಅದೇ ಡಿಸಿಎಫ್ 50 ಲಕ್ಷ ರೂ. ನೀಡಿ ಹಾಸನ ಪೋಸ್ಟಿಂಗ್ ಪಡೆದಿದ್ದಾರೆ ಎನ್ನುತ್ತಾರೆ. 50 ಲಕ್ಷ ಲಂಚ ಕೊಟ್ಟು ಪೋಸ್ಟಿಂಗ್ ಪಡೆದಿದ್ದೇ ನಿಜವಾದರೆ ಅವರು ಪ್ರಾಮಾಣಿಕ ಹೇಗೆ ಆಗ್ತಾರೆ? ಪ್ರಶ್ನಿಸಿರುವ ಖಂಡ್ರೆ, ಇದು ಕುಮಾರಸ್ವಾಮಿ ಅವರ ಕಪೋಲ ಕಲ್ಪಿತ ದ್ವಂದ್ವ ಹೇಳಿಕೆಗೆ ಜ್ವಲಂತ ಸಾಕ್ಷಿ ಎಂದು ತಿರುಗೇಟು ನೀಡಿದ್ದಾರೆ. ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ನೂರಾರು ಮರಗಳನ್ನು ಅಕ್ರಮವಾಗಿ ಕಡಿಯುತ್ತಿದ್ದರೆ, ಅರಣ್ಯ ನಾಶ ಮಾಡುತ್ತಿದ್ದರೆ ಸಹಜವಾಗೇ ವನ್ಯಜೀವಿಗಳು ನಾಡಿಗೆ ಬರುತ್ತವೆ. ಪರಿಸರ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ ಸಂಗತಿ ಎನಿಸಿಲ್ಲ; ಕಾಂಗ್ರೆಸ್ ನಿರ್ಧಾರ ರಾಮಭಕ್ತರಿಗೆ ಅನಿರೀಕ್ಷಿತವಲ್ಲ ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಪಕ್ಷದ ನಿರ್ಣಯ ನಿರೀಕ್ಷಿತವೇ ಆಗಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದ್ದ ಕಾಂಗ್ರೆಸ್ ಪಕ್ಷದವರು, ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಸರಕಾರ ವಜಾ ಮಾಡಿದ ಕಾಂಗ್ರೆಸ್, ರಾಮಭಕ್ತರಿಗೆ ತೊಂದರೆ ಕೊಡುತ್ತಿದ್ದ ಕಾಂಗ್ರೆಸ್ಸಿಗರ ಈ ನಿರ್ಣಯ ಯಾರಿಗೂ ಆಶ್ಚರ್ಯ ತಂದು ಕೊಟ್ಟಿಲ್ಲ ಎಂದರು. ಜನವರಿ 22ರಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6557 ಹಾಗೂ RAT ಮೂಲಕ 758 ಸೇರಿದಂತೆ 7315 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಅಂತ ತಿಳಿಸಿದೆ. ಇಂದು ಪರೀಕ್ಷೆಗೆ ಒಳಪಟ್ಟಂತ 7315 ಮಂದಿಯಲ್ಲಿ ಬೆಂಗಳೂರು 121, ಬಳ್ಳಾರಿ ಮತ್ತು ಬೆಳಗಾವಿ ತಲಾ 6, ಚಾಮರಾಜನಗರ 08, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರಲ್ಲಿ ತಲಾ 03, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 01, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ 03, ಮೈಸೂರು 10, ತುಮಕೂರು 14 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಇಂದು 257 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ ಓರ್ವ ಸೋಂಕಿಗೆ ಬಲಿಯಾಗಿದ್ದಾನೆ.…

Read More

ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ ನೀಡುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಯುವಜನತೆ, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪ್ರಕಾಶ್ ಪಾಟೀಲ ಕರೆ ನೀಡಿದರು. ಇಂದು ಹೋಟೆಲ್ ಒಂದರಲ್ಲಿ ಯುವನಿಧಿ ಯೋಜನೆ ಉದ್ಘಾಟನಾ ಸಮಾರಂಭದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ, 2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ 2 ವರ್ಷಗಳವರೆಗೆ ನಿರುದ್ಯೊಗ ಭತ್ಯೆ ನೀಡಲಾಗುವುದು. ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿಯನ್ನು ನೀಡಲಾಗುವುದು. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆಯಾಗಿದ್ದು ಉದ್ಯೋಗವನ್ನು ಒದಗಿಸಲು ಸಹಕರಿಸುವುದು ಮತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು. ಪ್ರಸ್ತುತ 61,700 ಪದವಿ/ಡಿಪ್ಲೊಮಾ ಹೊಂದಿದ ಅಭ್ಯರ್ಥಿಗಳು ಈ ಯೋಜನೆಯಡಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2022-23 ರಲ್ಲಿ…

Read More

ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಜ.12 ರಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ಬದಲಾವಣೆ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು. ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರುವುದು. ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು ಹಾರ್ನಳ್ಳಿ ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ ನ್ಯಾಮತಿ ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ…

Read More

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದಿರಾಭವನದಲ್ಲಿ ನಡೆದ ಪಕ್ಷದ ಸಭೆ, ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. ನಾಲ್ಕು ಗ್ಯಾರಂಟಿ ಜನರನ್ನು ತಲುಪಿದ್ದು, ಐದನೇ ಗ್ಯಾರಂಟಿ ಯುವನಿಧಿಗೆ ಇದೇ 12 ರಂದು ವಿವೇಕಾನಂದರ ಜಯಂತಿ ದಿನ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಹೊಸ ಸ್ವರೂಪದ ಕಾರ್ಯಕ್ರಮ ರೂಪಿಸಿದ್ದೇವೆ. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿ ಪಾರದರ್ಶಕತೆ ಕಾಪಾಡಿಕೊಂಡಿದ್ದೇವೆ. ರಾಜ್ಯದ ಶೇ.80 ರಷ್ಟು ಕುಟುಂಬಗಳಿಗೆ ಈ ಯೋಜನೆ ತಲುಪಿದ್ದು, 3 ಕೋಟಿಗೂ ಹೆಚ್ಚು…

Read More

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ನಗರದ ಹೋಟೆಲ್ ರಮಾಡದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಕುರಿತಂತೆ ಮಾಹಿತಿ ನೀಡಿದರು. ಈ ಸಭೆಯಿಂದ ಅಲ್ಲಲ್ಲಿ ಇದ್ದ ಸಣ್ಣಪುಟ್ಟ ವ್ಯತ್ಯಾಸಗಳು ಹಾಗೂ ಚಿಕ್ಕಪುಟ್ಟ ಗೊಂದಲಗಳು ಇವತ್ತು ನಾಳೆಯೊಳಗೆ ಮುಗಿದುಹೋಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಭೆ ನಮಗೆ ಶಕ್ತಿ ನೀಡಲಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಕಾರ್ಯಾಚರಣೆ, ಯೋಚನೆ, ಯೋಜನೆಗಳು ಹೇಗೆ ಇರಬೇಕೆಂಬ ಬಗ್ಗೆ ಅಡಿಪಾಯ ಹಾಕಲಿದೆ. ಇವತ್ತು ಕ್ಲಸ್ಟರ್ ಮಟ್ಟದಲ್ಲಿ ಸಭೆ ಕರೆಯಲಾಗಿದೆ. ಮುಂದೆ ಜಿಲ್ಲಾ ಮಟ್ಟದಲ್ಲೂ ಸಭೆ ಕರೆಯಲಿದ್ದೇವೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ ಎಂದು ವಿವರಿಸಿದರು. ಒಂದು ಹೊಸ ಮಾದರಿಯ ಚಟುವಟಿಕೆ ನಮ್ಮ ಪಕ್ಷದಲ್ಲಿ ಆರಂಭವಾಗಿದೆ. ಇದೊಂದು ಹೊಸ…

Read More

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕಳೆದ ವರ್ಷ ಶಿವಸೇನೆಯನ್ನು ವಿಭಜಿಸಿದ ಬಂಡಾಯ ಎದ್ದ ಹಲವಾರು ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನರ್ವೇಕರ್ ಇಂದು ತೀರ್ಪು ನೀಡಿದ್ದಾರೆ. ಶಿಂಧೆ ಅವರನ್ನು ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್ ಠಾಕ್ರೆಗೆ ಇರಲಿಲ್ಲ ಎಂಬುದಾಗಿ ಮಹಾ ಸ್ವೀಕರ್ ಮಹತ್ವದ ತೀರ್ಪು ನೀಡಿದ್ದಾರೆ. ಏಕನಾಥ್ ಶಿಂಧೆ ಬಂಡಾಯವೆದ್ದು ರಾಜ್ಯದ ಮುಖ್ಯಮಂತ್ರಿಯಾದ ಕಾರಣ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ವಿಭಜನೆಯನ್ನು ಅನುಭವಿಸಿದ 18 ತಿಂಗಳ ನಂತರ ಈ ತೀರ್ಪು ಬಂದಿದೆ. ಇಂದಿನ ತೀರ್ಪಿಗೆ ಮುಂಚಿತವಾಗಿ ಸ್ಪೀಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ ನಂತರ ಉದ್ಧವ್ ಬಣವು ಈಗಾಗಲೇ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ. “ಮೊದಲನೆಯದಾಗಿ, ತೀರ್ಪಿಗೆ ಮುಂಚಿತವಾಗಿ ಸ್ಪೀಕರ್ ಮುಖ್ಯಮಂತ್ರಿಯನ್ನು ಭೇಟಿಯಾಗುವುದನ್ನು ನಾವು ನೋಡಿದ್ದೇವೆ. ನಂತರ ಅದು ನ್ಯಾಯವನ್ನು ನೀಡಬೇಕಾದವನು ಆರೋಪಿಗೆ ಹೋದನು ಎಂಬ ಭಾವನೆಯನ್ನು ನೀಡಲು ಪ್ರಯತ್ನಿಸುತ್ತದೆ. ಇದು ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ” ಎಂದು ಮಾಜಿ…

Read More

ಬೆಂಗಳೂರು : ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಮಧ್ಯಾಹ್ನದ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ ಎಂದರು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಬೆಂಗಳೂರು ನಗರ 5000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ,…

Read More

ಬೆಂಗಳೂರು: ಈಗಾಗಲೇ ಕೇಂದ್ರೀಕೃತ ದಾಖಲಾತಿ ಘಟಕದಿಂದ ಮೊದಲ ಸುತ್ತಿನ ಬಿ.ಎಡ್ ದಾಖಲಾತಿಗೆ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ 2ನೇ ಹಂತದ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 12-01-2024ರಂದು ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದಿಂದ ನೀಡಿದ್ದು, 2023-24ನೇ ಸಾಲಿನ ಬಿ.ಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ದಿನಾಂಕ 12-01-2024ರಂದು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದಿದೆ. ಸೀಟು ಹಂಚಿಕಾಯದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಚಲನ್ ಡೌನ್ ಲೋಡ್ ಮಾಡಿಕೊಂಡು ದಾಖಲಾತಿ ಶುಲ್ಕವನ್ನು ಎಸ್ ಬಿಐ ಬ್ಯಾಂಕಿನಲ್ಲಿ ಪಾವತಿಸಿ ದಿನಾಂಕ 16-01-2024 ರಿಂದ 18-01-2024ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್ ನಲ್ಲಿ ಸಲ್ಲಿಸಿ, ಪ್ರವೇಶಾತಿ ಪತ್ರವನ್ನು ಪಡೆಯುವಂತೆ ಸೂಚಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.schooleducation.karnataka.gov.in ಅಥವಾ ಸಿಟಿಇ, ಡಯೆಟ್ ನೋಡಲ್ ಕೇಂದ್ರಗಳನ್ನು ಸಂಪರ್ಕಿಸುವಂತೆ ತಿಳಿಸಿದೆ. https://kannadanewsnow.com/kannada/breaking-it-is-clear-that-it-is-rss-bjp-programme-congress-skips-ram-mandir-prana-pratishtha/ https://kannadanewsnow.com/kannada/virat-kohli-opts-out-of-1st-t20i-vs-afghanistan-due-to-personal-reasons-confirms-rahul-dravid/

Read More