Subscribe to Updates
Get the latest creative news from FooBar about art, design and business.
Author: kannadanewsnow09
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿದೆ. ಮಂಡಿ ಜಿಲ್ಲೆಯಲ್ಲಿ ಇನ್ನೂ ಎರಡು ಶವಗಳು ಪತ್ತೆಯಾಗಿವೆ. ಮೃತರನ್ನು ಸೋನಮ್ (23) ಮತ್ತು ಮೂರು ತಿಂಗಳ ಮಾನ್ವಿ ಎಂದು ಗುರುತಿಸಲಾಗಿದ್ದು, ಮಂಡಿ ಜಿಲ್ಲೆಯ ಪಧರ್ ಪ್ರದೇಶದ ರಾಜ್ಭಾನ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜುಲೈ 31 ರ ರಾತ್ರಿ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾದಲ್ಲಿ ಸಂಭವಿಸಿದ ಸರಣಿ ಮೇಘಸ್ಫೋಟದ ನಂತರ 40 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ; ಮಂಡಿಯ ಪದಾರ್; ಮತ್ತು ಶಿಮ್ಲಾದ ರಾಂಪುರ ಉಪವಿಭಾಗ. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ನಿಫರ್ ನಾಯಿಗಳು, ಡ್ರೋನ್ಗಳು ಮತ್ತು ಇತರ ಉಪಕರಣಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸೇನೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಐಟಿಬಿಪಿ, ಸಿಐಎಸ್ಎಫ್, ಹಿಮಾಚಲ ಪ್ರದೇಶ ಪೊಲೀಸರು ಮತ್ತು ಗೃಹರಕ್ಷಕರು ಸೇರಿದಂತೆ ವಿವಿಧ ತಂಡಗಳ ಸುಮಾರು 410 ರಕ್ಷಕರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ರಾಂಪುರ ಉಪವಿಭಾಗದ ಗ್ರಾಮ ಪಂಚಾಯತ್ ಸರ್ಪಾರಾ ವ್ಯಾಪ್ತಿಯ ಸಮೇಜ್…
ಚನ್ನಪಟ್ಟಣ: “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹರಿಹಾಯ್ದರು. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ನೀವು ರಾಮನಗರದಲ್ಲಿ ಉತ್ತರ ನೀಡಬೇಕು. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲುಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಸವಾಲೆಸೆದರು. “ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ…
ಚನ್ನಪಟ್ಟಣ: ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ನೀನು ಬ್ಲಾಕ್ ಮೇಲ್ ಕುಮಾರಸ್ವಾಮಿ. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ.ಟಿ ದೇವೆಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ನನ್ನ ಅಧ್ಯಕ್ಷತೆಯಲ್ಲಿ ನನ್ನ ಪಕ್ಷಕ್ಕೆ 136 ಸೀಟು ಬಂದಿದೆ. ನಿನ್ನ ಅಧ್ಯಕ್ಷತೆಯಲ್ಲಿ ನಿನ್ನ ಪಕ್ಷಕ್ಕೆ 19 ಸೀಟು ಬಂದಿದೆ. ಈಗ ನಿನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಸೇರಿದ್ದೀಯ. ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ನೀನು ಬ್ಲಾಕ್ ಮೇಲ್ ಕುಮಾರಸ್ವಾಮಿ. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ.ಟಿ ದೇವೆಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನಿನ್ನ ಮಗನ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನೀನು ಒಂದು ಹೇಳಿಕೆ ನೀಡಿದೆ. ಈ ನಾಟಕ ಏಕೆ?” ಎಂದು…
ಚನ್ನಪಟ್ಟಣ : “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹರಿಹಾಯ್ದರು. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ನೀವು ರಾಮನಗರದಲ್ಲಿ ಉತ್ತರ ನೀಡಬೇಕು. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲುಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಸವಾಲೆಸೆದರು. “ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ…
ಬಾಂಗ್ಲಾದೇಶ: ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗ್ರೆನೇಡ್ಗಳನ್ನು ಎಸೆದಿದ್ದರಿಂದ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರವನ್ನು ಪ್ರೇರೇಪಿಸಿದ ಅಶಾಂತಿ, ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಹಸೀನಾ ಸತತ ನಾಲ್ಕನೇ ಬಾರಿಗೆ ಗೆದ್ದಾಗ ಮಾರಣಾಂತಿಕ ಪ್ರತಿಭಟನೆಗಳ ನಂತರದ ಅತಿದೊಡ್ಡ ಪರೀಕ್ಷೆಯಾಗಿದೆ. ಮುನ್ಸಿಗಂಜ್ನ ಕೇಂದ್ರ ಜಿಲ್ಲೆಯಲ್ಲಿ ಪ್ರತಿಭಟನಾಕಾರರು, ಪೊಲೀಸರು ಮತ್ತು ಆಡಳಿತ ಪಕ್ಷದ ಕಾರ್ಯಕರ್ತರ ನಡುವೆ ನಡೆದ ಮೂರು ಮಾರ್ಗಗಳ ಘರ್ಷಣೆಯಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾಗ ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. “ಗುಂಡೇಟಿನ ಗಾಯಗಳೊಂದಿಗೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು” ಎಂದು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಅಬು ಹೆನಾ ಮೊಹಮ್ಮದ್ ಜಮಾಲ್ ಹೇಳಿದ್ದಾರೆ. ಆದಾಗ್ಯೂ, ಕೆಲವು ಸುಧಾರಿತ ಸ್ಫೋಟಕಗಳನ್ನು ಸ್ಫೋಟಿಸಿದಾಗ ಮತ್ತು ಈ ಪ್ರದೇಶವು ಯುದ್ಧಭೂಮಿಯಾಗಿ ಮಾರ್ಪಟ್ಟಾಗ ಅವರು ಯಾವುದೇ ಗುಂಡುಗಳನ್ನು…
ರಾಮನಗರ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು. ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು. ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ.…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ಸರ್ಜರಿ ಆಗಲಿದೆ ಎನ್ನಲಾಗುತ್ತಿತ್ತು. ಹಲವು ಸಚಿವರು ಕೂಡ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದರು. ಆದರೇ ಸಿದ್ಧರಾಮಯ್ಯ ಮಾತ್ರ ನಾನು ಸಿಎಂ ಹೇಳ್ತಾ ಇದ್ದೀನಿ, ಸಂಪುಟ ಪುನರ್ ರಚನೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಅವಧಿಯವರೆಗೆ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ನಾನೇ ಚೀಫ್ ಮಿನಿಸ್ಟರ್ ಎಂಬುದಾಗಿ ಸ್ಪಷ್ಟ ಪಡಿಸಿದರು. ಇನ್ನೂ ಸಂಪುಟ ಪುನರ್ ರಚನೆ ಆಗಲಿದ್ಯಾ ಎನ್ನುವ ಮಾತಿಗೆ ಪ್ರತಿಕಿರ್ಯಿಸಿದಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆಯಿಲ್ಲ. ಸಂಪುಟ ಸರ್ಜರಿಯೂ ಇಲ್ಲ. ನಾನೇ ಸಿಎಂ ಹೇಳ್ತಾ ಇದ್ದೀನಿ ಅಂತ ತಿಳಿಸಿದರು. ಮುಡಾ ಅಕ್ರಮ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವಂತ ಮೈೂರು ಪಾದಯಾತ್ರೆಯೆಲ್ಲ ರಾಜಕೀಯ ಪ್ರೇರಿತವಾಗಿದೆ. ಇದು ರಾಜಕೀಯ…
ಬೆಂಗಳೂರು: ರಾಜ್ಯದ 12 ಕ್ರೀಡಾ ಪಟುಗಳು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪದಕ ಗೆದ್ದು, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದರು. ಇಂತಹ ರಾಜ್ಯದ 12 ಕ್ರೀಡಾಪಟುಗಳಿಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು. ಈ ಬಳಿಕ ಮಾತನಾಡಿದಂತ ಅವರು ನಾನು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸುವಂತ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದೆ. 2016-17ರಲ್ಲಿ ಒಲಂಪಿಕ್ಸ್ ಗೇಮ್ಸ್ ನಲ್ಲಿ ಗೆದ್ದಂತವರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದೆ. ನನ್ನ ಅಧಿಕಾರಾವಧಿಯ ಬಳಿಕ ಆ ಕಾರ್ಯ ಅಲ್ಲಿಗೆ ನಿಂತಿತ್ತು ಎಂದರು. ನಾನು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಘೋಷಣೆ ಮಾಡಿದಂತ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದೇನೆ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದುಕೊಡುವಂತ ಕೆಲಸ ಮಾಡಬೇಕು ಎಂದರು. ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ನಡೆ ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ…
ರಾಮನಗರ: ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು. ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು. ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ…
ಬೆಂಗಳೂರು: ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ಕಾರ್ಯವನ್ನು ಮಾಡಲಾಗಿದೆ. ರಾಜ್ಯದ ಕ್ರೀಡಾಪಟುಗಳಿಗೆ ಉದ್ಯೋಗ ಭಾಗ್ಯವನ್ನು ನೀಡಲಾಗಿದೆ. ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿಯನ್ನು ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ. ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/decision-to-remove-sirigere-swamiji-from-chair-coordination-committee-formed-under-the-chairmanship-of-shamanur/ https://kannadanewsnow.com/kannada/breaking-major-fire-breaks-out-at-andhra-pradeshs-visakhapatnam-railway-station-trains-gutted-in-fire/