Author: kannadanewsnow09

ಬೆಂಗಳೂರು: ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ, ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡತ್ತಾ, ಕೊಳಕು ರಾಜಕೀಯ ಪೋಷಿಸುತ್ತಾ ಇರುವ ರಾಜ್ಯದ ಬಿಜೆಪಿ ನಾಯಕರು ಮೋದಿ ಜೀ ಅವರನ್ನು ಪ್ರಶ್ನಿಸುವ ಎದೆಗಾರಿಕೆ ತೋರುವರಾ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಂದು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು ಪತ್ರಿಕೆಯಲ್ಲಿ ಓದಿದೆ ಎಂದಿದ್ದಾರೆ. ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು‌ ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಾನು ಈ ಹಿಂದೆ ನಮ್ಮ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ…

Read More

ಬೆಳಗಾವಿ: ನಗರದಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಕಾರ್ಯಕ್ರಮದ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದಂತ ವೇಳೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿ, ಹೈಡ್ರಾಮಾ ನಡೆಸಿದಂತ ಘಟನೆ ನಡೆದಿದೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ಧರಾಮಯ್ಯ ಮಾತನಾಡುತ್ತಿದ್ದಂತ ವೇಳೆಯಲ್ಲೇ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನ ನಡೆಸಿದಂತ ಘಟನೆಯೂ ನಡೆಯಿತು. ಈ ಘಟನೆಯಿಂದ ಗರಂ ಆದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ-RSS ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು. ಕಳೆದ…

Read More

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅನುಷ್ಠಾನವನ್ನು ಮಾಡಲಾಗಿದೆ. ಈ ಮೂಲಕ ಹಾವು ಕಡಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮವನ್ನು 2023-24 ರಲ್ಲಿ ಪ್ರಾರಂಭಿಸಿ, ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ, ಮೇಲಿನ ಉಲ್ಲೇಖ (1) ರಲ್ಲಿ ಓದಲಾದ ಅಧಿಸೂಚನೆಯಲ್ಲಿ ಸರ್ಕಾರವು ಹಾವು ಕಡಿತದ ಪ್ರಕರಣಗಳು ಮತ್ತು ಹಾವು ಕಡಿತದಿಂದ ಸಂಭವಿಸುವ ವ್ಯಕ್ತಿಗಳ ಮರಣಗಳನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020 ರ ಪ್ರಕರಣ 3 ರ ಅಡಿಯಲ್ಲಿ “ಅಧಿಸೂಚಿತ ಕಾಯಿಲೆ” ಎಂದು ಘೋಷಿಸಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಇವರು ವಿಷಪೂರಿತ ಹಾವು ಕಡಿತಕ್ಕೆ ತುತ್ತಾದವರಿಗೆ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆಯನ್ನು ನೀಡದಿದ್ದಲ್ಲಿ ಮರಣ ಅಥವಾ ಶಾಶ್ವತ ಅಂಗವೈಕಲ್ಯಗಳಂತಹ ವೈದ್ಯಕೀಯ ಸಮಸ್ಯೆಗಳು ಉಂಟಾಗುತ್ತವೆ ಎಂದು ತಿಳಿಸುತ್ತಾ, ಮೇಲಿನ ಉಲ್ಲೇಖ…

Read More

ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಸಚಿವರು ಹೇಳಿದರು. ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು. 2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ…

Read More

ಬೆಂಗಳೂರು : ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌. ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು. ಬೆಲೆ ಏರಿಕೆಗೆ ಕೇಂದ್ರವೇ ಕಾರಣ “ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ…

Read More

ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ-RSS ಗೆ ನೇರವಾಗಿ ಸೆಡ್ಡು ಹೊಡೆದರು. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಜನರಿಗೆ ಎಂದು ಸವಾಲು ಹಾಕಿದರು. ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು…

Read More

ನವದೆಹಲಿ: ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ 26 ನೌಕಾ ರೂಪಾಂತರದ ರಫೇಲ್ ಫೈಟರ್ ಜೆಟ್ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವರ್ಚುವಲ್ ಈವೆಂಟ್ನಲ್ಲಿ ಒಪ್ಪಂದವನ್ನು ಮುದ್ರೆ ಹಾಕಲಾಯಿತು. ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ನಿಂದ ಜೆಟ್ಗಳನ್ನು ಖರೀದಿಸುತ್ತಿದೆ. ಸಹಿ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು ವಾರಗಳ ನಂತರ ಮೆಗಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಉಲ್ಲೇಖದ ನಿಯಮಗಳ ಪ್ರಕಾರ, ಒಪ್ಪಂದಕ್ಕೆ ಸಹಿ ಹಾಕಿದ ಸುಮಾರು ಐದು ವರ್ಷಗಳ ನಂತರ ಜೆಟ್ ಗಳ ವಿತರಣೆಯನ್ನು ಪ್ರಾರಂಭಿಸಬೇಕಾಗುತ್ತದೆ. ಜುಲೈ 2023 ರಲ್ಲಿ, ರಕ್ಷಣಾ ಸಚಿವಾಲಯವು ವೇದಿಕೆಯ ಸರಣಿ ಚರ್ಚೆಗಳು ಮತ್ತು ಪರೀಕ್ಷೆ ನಂತರ ಮೆಗಾ ಸ್ವಾಧೀನಕ್ಕೆ ಆರಂಭಿಕ ಅನುಮೋದನೆ ನೀಡಿತು. ಈ ಒಪ್ಪಂದದ ಅಡಿಯಲ್ಲಿ,…

Read More

ನವದೆಹಲಿ: ಬೀರ್ ಬೈಸೆಪ್ಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರ ಪಾಸ್ಪೋರ್ಟ್ ಅನ್ನು ಅವರಿಗೆ ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೇ ಪೊಲೀಸರ ತನಿಖೆಯ ಬಳಿಕ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇಂಡಿಯಾಸ್ ಗಾಟ್ ಲೇಟೆಂಟ್ ಸಂಚಿಕೆಯಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳಿಗಾಗಿ ಅಲ್ಲಾಬಾಡಿಯಾ ಮತ್ತು ಇತರರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ತನಿಖೆಯ ಮಧ್ಯೆ ಅವರ ಪಾಸ್ಪೋರ್ಟ್ ಅನ್ನು ಈ ಹಿಂದೆ ಹಸ್ತಾಂತರಿಸಲಾಗಿತ್ತು. ದೇಶಾದ್ಯಂತ ಅವರ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಅವರ ಮನವಿಯನ್ನು ಆಲಿಸುವಾಗ ಸುಪ್ರೀಂ ಕೋರ್ಟ್ ಈ ಹಿಂದೆ ವಿವಿಧ ಷರತ್ತುಗಳಿಗೆ ಒಳಪಟ್ಟು ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು. ನ್ಯಾಯಾಲಯದ ಅನುಮತಿಯಿಲ್ಲದೆ ಭಾರತವನ್ನು ತೊರೆಯದಂತೆ ನ್ಯಾಯಾಲಯವು ಅಲ್ಲಾಬಾಡಿಯಾಗೆ ಸೂಚಿಸಿತು. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್.ಕೆ.ಸಿಂಗ್ ಅವರ ಪೀಠವು ಇಂದು ಅಲ್ಲಾಬಾಡಿಯಾ ವಿರುದ್ಧದ ಪೊಲೀಸ್ ತನಿಖೆ ಪೂರ್ಣಗೊಂಡಿರುವುದರಿಂದ ಅವರ ಪಾಸ್ಪೋರ್ಟ್ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತು. ತನಿಖೆಯ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಏಪ್ರಿಲ್ 27-28 ರ ರಾತ್ರಿ, ಪಾಕಿಸ್ತಾನ ಸೇನಾ ಪೋಸ್ಟ್ಗಳು ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಲಾಗಿದೆ ಎಂದು ರಕ್ಷಣಾ ವಕ್ತಾರರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕ್ ನಡುವಿನ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನವು ನಿಯಂತ್ರಣ ರೇಖೆಯ ಉದ್ದಕ್ಕೂ ಸತತ ನಾಲ್ಕನೇ ರಾತ್ರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಏಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ “ಮಿನಿ ಸ್ವಿಟ್ಜರ್ಲ್ಯಾಂಡ್” ನಲ್ಲಿ ತಮ್ಮ ಕುಟುಂಬಗಳೊಂದಿಗೆ ರಜಾದಿನಗಳನ್ನು…

Read More

ನವದೆಹಲಿ: ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳ ಸ್ಟ್ರೀಮಿಂಗ್ ಅನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ, ಏಪ್ರಿಲ್ 28 ರಂದು ಕೇಂದ್ರ ಸರ್ಕಾರ, ಪ್ರೈಮ್ ವಿಡಿಯೋ, ನೆಟ್‌ಫ್ಲಿಕ್ಸ್, ಎಎಲ್‌ಟಿಟಿ (ಆಲ್ಟ್ ಬಾಲಾಜಿ), ಉಲ್ಲು ಮತ್ತು ಸಾಮಾಜಿಕ ವೇದಿಕೆಗಳಿಗೆ ನೋಟಿಸ್ ಜಾರಿ ಮಾಡಿದೆ. ಒಟಿಟಿ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರದಿಂದ ನಿರ್ದೇಶನ ಕೋರಿ ಪಿಐಎಲ್ ಸಲ್ಲಿಸಿದ ನಂತರ ಇದು ಬಂದಿದೆ. ಅಂತಹ ವಿಷಯವು ಗಮನಾರ್ಹ ಕಳವಳವನ್ನು ಉಂಟುಮಾಡಿದೆ ಎಂದು ನ್ಯಾಯಾಲಯವು ಕೇಂದ್ರವನ್ನು ಒತ್ತಾಯಿಸಿತು. ನೀವು ಅದರ ಬಗ್ಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸಿತು. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು, ನಿಜವಾದ ಕಳವಳ ವ್ಯಕ್ತಪಡಿಸಿದ ಪಿಐಎಲ್ ಅನ್ನು ಗಮನಿಸಿತು. ಪೀಠವು ತನ್ನ ಆದೇಶದಲ್ಲಿ, ಈ ಅರ್ಜಿಯು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ಆಕ್ಷೇಪಾರ್ಹ, ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಮುಖ ಕಳವಳವನ್ನು…

Read More