Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದಿದ್ದಾರೆ. 2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓರ್ವ ಹಿಜ್ಬುಲ್ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ದುಷ್ ಕೃತ್ಯಕ್ಕೆ ಸಂಚು ರೂಪಿಸಿದ್ದಂತ ಭಯೋತ್ಪಾದಕನನ್ನು ಎಡೆಮುರಿ ಕಟ್ಟಿಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ಗೆ ( Hizbul Mujahideen ) ಸಂಬಂಧಿಸಿದ ಶಂಕಿತ ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ( Delhi Police Special Cell ) ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬೇಕಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಜಾವೇದ್ ಮಟ್ಟೂನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಯಶಸ್ವಿಯಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಜೆ 5 ಗಂಟೆಗೆ ವಿಶೇಷ ಕೋಶದಿಂದ ಪತ್ರಿಕಾಗೋಷ್ಠಿ ನಡೆಯಲಿದೆ. https://twitter.com/TheNewIndian_in/status/1742866358696657398 https://kannadanewsnow.com/kannada/note-the-deadline-for-online-application-for-class-6-entrance-examination-of-residential-schools-has-been-extended/ https://kannadanewsnow.com/kannada/good-news-rbis-big-decision-on-minimum-balance-big-relief-for-these-account-holders/
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು. ಕರಸೇವಕ ಶ್ರೀಕಾಂತ ಪೂಜಾರಿ…
ಬೆಂಗಳೂರು: ಶಿವಮೊಗ್ಗ ನಗರದಲ್ಲಿ ಈ ತಿಂಗಳ 12ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ʼಯುವನಿಧಿʼ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಈ ಸಂಬಂಧ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಫಲಾನುಭವಿಗಳಿಗೆ ನೇರ ಹಣ ಪಾವತಿಸುವ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಉನ್ನತ ಮಟ್ಟದ ಸಭೆಯಲ್ಲಿ ರೂಪುರೇಷೆಗಳನ್ನು ರೂಪಿಸಲಾಯಿತು. ಘೋಷಿಸಿದ್ದಂತೆ ಈಗಾಗಲೆ ನಾಲ್ಕು ಮಹತ್ತರ ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಜನಪ್ರಿಯಗೊಂಡಿದ್ದು, ಯುವಜನರ ಆಶೋತ್ತರಗಳಿಗೆ ಪೂರಕವಾದ ʼಯುವಶಕ್ತಿʼ ಯೋಜನೆಯನ್ನು ರಾಜ್ಯದ ಯುವಜನರಿಗೆ ಸಮರ್ಪಿಸುವ ಕಾರ್ಯಕ್ರಮವನ್ನು ಆಕರ್ಷಕವಾಗಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳಾದ ಉಮಾ ಮಹೇಶ್ವರನ್, ಡಾ.ಏಕರೂಪ್ ಕೌರ್, ಡಾ.ಹೇಮಂತ ನಿಂಬಾಳ್ಕರ್ ಮುಂತಾದವರು ಭಾಗವಹಿಸಿದ್ದರು. https://kannadanewsnow.com/kannada/good-news-rbis-big-decision-on-minimum-balance-big-relief-for-these-account-holders/ https://kannadanewsnow.com/kannada/note-the-deadline-for-online-application-for-class-6-entrance-examination-of-residential-schools-has-been-extended/
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಸಂಚಾಲಕರು, ಸಹ-ಸಂಚಾಲಕರು ಹಾಗೂ ವಕ್ತಾರರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗ, ಸಹ ಸಂಚಾಲಕರು ಮತ್ತು ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಸಾಮಾಜಿ ಜಾಲತಾಣದ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರನ್ನಾಗಿ ನರೇಂದ್ರ ಮೂರ್ತಿಯವರನ್ನು, ಮಾಹಿತಿ ತಂತ್ರಜ್ಞಾನ ವಿಭಾಗ(IT)ಯ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ನೇಮಿಸಲಾಗಿದೆ. ಮಾಧ್ಯಮ ವಿಭಾಗದ (IT)ಯ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಇದಲ್ಲದೇ ಬಿಜೆಪಿಯ ಮುಖ್ಯ ವಕ್ತಾರರನ್ನಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ನೇಮಕ ಮಾಡಲಾಗಿದೆ. ವಕ್ತಾರರನ್ನಾಗಿ ಹರಿಪ್ರಕಾಶ್ ಕೊಣೆಮನೆ, ಛಲವಾದಿ ನಾರಾಯಣಸ್ವಾಮಿ,…
ಶಿವಮೊಗ್ಗ: ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮದಲ್ಲಿ ಕರೆಟ್ ಇರೋದಿಲ್ಲ. ಇನ್ನೂ ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ,…
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಕರಸೇವಕರ ಕುರಿತು ನೀಡಿರುವ ಹೇಳಿಕೆಯಂತೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿರುವುದು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿರುವುದು ಸ್ಪಷ್ಟವಾಗಿದೆ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಬ್ಬ ಎಂ ಎಲ್ ಸಿ ಗೆ ಇರುವ ಮಾಹಿತಿ ಗೃಹ ಇಲಾಖೆಗೆ ಮಾಹಿತಿ ಇಲ್ಲ ಎಂದರೆ ಇಂಟ್ಲಿಜೆನ್ಸ್ ವಿಫಲವಾಗಿದೆ. ಗೃಹ ಸಚಿವರು ಅಗತ್ಯ ಬಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹರಿಪ್ರಸಾದ್ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದು, ಬೇರೆಯವರು ಮಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು. ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇವರ ಅವಧಿಯಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿತ್ತಿವೆ ಎಂದರು. ಮಹಿಳೆಯರ ಮೇಲೆ ದೌರ್ಜನ್ಯ, ಅಕ್ರಮ ಸಾರಾಯಿ ದಂಧೆ, ಇಸ್ಪೀಟ್ ಅಡ್ಡೆಗಳು ಅವ್ಯಾಹತವಾಗಿ ನಡೆಯುತ್ರಿವೆ. ಈ ವರ್ಷ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಆದರೆ, ಅಪರಾಧ ಪತ್ತೆಹಚ್ಚುವ ಕಾರ್ಯ…
ಬೆಂಗಳೂರು: ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ. ಸರ್ಕಾರ ತಕ್ಷಣ ರೈತರ ಖಾತೆಗಳಿಗೆ 2000. ರೂ. ಹಣ ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಹುತೆಕ ತಾಲುಕುಗಳು ಬರ ಅಂತ ಘೊಷಣೆ ಆಗಿದೆ. ಮುಂಗಾರು, ಹಿಂಗಾರು ವಿಫಲವಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಕಾಮಗಾರಿ ಆರಂಭಿಸಿಲ್ಲ. ಆರು ತಿಂಗಳು ಕಳೆದರೂ ಯಾವುದೇ ಕೆಲಸ ಮಾಡದ ಸಿದ್ದರಾಮಯ್ಯ ಸರ್ಕಾರ ಈಗ ಆಧಾರ ಜೋಡಣೆಯ ನೆಪ ಹೇಳಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಈ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಆಹಾರ ಉತ್ಪಾದನೆ ಕಡೆಮೆಯಾಗಲಿದೆ ಅಂತ ಕೃಷಿ ಇಲಾಖೆ…
ಬೆಂಗಳೂರು: ಈಗಾಗಲೇ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದಿಂದ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ಈಗ ರೀ ಓಪನ್ ಮಾಡಲಾಗಿದೆ. 2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಗೋರಿ ಧ್ವಂಸಗೊಳಿಸಿದಂತ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೇ ಈ ಹಿಂದಿನ ಬಿಜೆಪಿ ಸರ್ಕಾರ ಈ ಕೇಸ್ ಕ್ಲೋಸ್ ಮಾಡಲಾಗಿತ್ತು. ಬರೋಬ್ಬರಿ 7 ವರ್ಷಗಳ ಬಳಿಕ ಇದೀಗ ರಾಜ್ಯ ಸರ್ಕಾರ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ರೀ ಓಪನ್ ಮಾಡಲಾಗಿದೆ. 14 ಜನರ ವಿರುದ್ಧದ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ. ದತ್ತಪೀಠ ಹೋರಾಟಗಾರರಾದಂತ ನಾಗೇಂದ್ರ ಪೂಜಾರಿ, ಲೋಕೇಶ್, ಮಹೇಂದ್ರ, ಸಂದೀಪ್, ರಾಮು, ತುಡುಕೂರು ಮಂಜು, ಶಿವರಾಜ್, ಸಂದೇಶ್ ಸೇರಿದಂತೆ 14 ಮಂದಿಯ ವಿರುದ್ಧದ ಕೇಸ್ ರೀ ಓಪನ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.8ರಂದು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಖಾಸಗಿ ಬಸ್ ಹಾಗೂ ಬುಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗಡಿಕಲ್ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಬೊಲೆರೋ ವಾಹನದ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ 25ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಖಾಸಗಿ ಬಸ್ ನಲ್ಲಿದ್ದಂತ 23 ಮಂದಿ ಹಾಗೂ ಬೊಲೆರೋ ವಾಹನದಲ್ಲಿದ್ದಂತ ಮೂವರಿಗೆ ಗಾಯಗಳಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಆನಂದಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/police-verification-of-drivers-working-in-school-vehicles-mandatory-state-govt/ https://kannadanewsnow.com/kannada/good-news-for-sc-entrepreneurs-applications-invited-for-subsidy-for-setting-up-msme-unit/