Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು CISCO ಸಹಯೋಗದೊಂದಿಗೆ “ಸೈಬರ್‌ ಸೆಕ್ಯೂರಿಟಿ ಪಾಲಿಸಿ 2024 ಹಾಗೂ ಕೌಶಲ್ಯ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಸೈಬರ್ ಅಪರಾಧ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಹೊಸ ಸೈಬರ್ ಭದ್ರತಾ ನೀತಿಯನ್ನು ಕೈಗೊಂಡಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ & ಟಿ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಗೃಹ ಇಲಾಖೆ ಹಾಗೂ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ಸಂಬಂಧಿತ ಪಾಲುದಾರರೊಂದಿಗೆ ಸಮಾಲೋಚಿಸಿ ಈ ನೀತಿಯ ಕರಡನ್ನು ಜಂಟಿಯಾಗಿ ರಚಿಸಲಾಗಿದೆ. ಈ ನೀತಿಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಹ ಪರಿಶೀಲಿಸಿದ್ದು, ಇದು ರಾಜ್ಯದ K-ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯುರಿಟಿ (CYSECK) ಇನ್‌ಸ್ಟಿಟ್ಯೂಟ್ ಆಗಿದೆ. ಈ ನೀತಿಯು ಎರಡು ಭಾಗವನ್ನು ಹೊಂದಿದ್ದು, ಮೊದಲ ಭಾಗವು ಸಾರ್ವಜನಿಕ, ಶೈಕ್ಷಣಿಕ, ಉದ್ಯಮ, ಸ್ಟಾರ್ಟ್-ಅಪ್‌, ರಾಜ್ಯದ ಐಟಿ ಸ್ವತ್ತುಗಳು ಮತ್ತು ಸರ್ಕಾರ ಸೇರಿದಂತೆ ಸಮಾಜದ…

Read More

ಪ್ಯಾರಿಸ್: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಪಿ.ವಿ.ಸಿಂಧು ಅವರ ಮೂರನೇ ಒಲಿಂಪಿಕ್ಸ್ ಅಭಿಯಾನವು ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ ನೇರ ಗೇಮ್ ಸೋಲಿನೊಂದಿಗೆ ಕೊನೆಗೊಂಡಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ರ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯ 16ನೇ ಸುತ್ತಿನಲ್ಲಿ ಪಿ.ವಿ.ಸಿಂಧು ಆರನೇ ಶ್ರೇಯಾಂಕದ ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ 19-21, 14-21 ಅಂತರದಲ್ಲಿ ಸೋತು ಹೊರನಡೆದರು.

Read More

ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಂ | ಅನೇಕ ದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ ||ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಶಿವಮೊಗ್ಗ: ಲಿಂಗನಮಕ್ಕೆ ಜಲಾಶಯದಿಂದ 10,000 ಕ್ಯೂಸೆಕ್ಸ್ ನೀರನ್ನು ಶರಾವದಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ನದಿ ತೀರದ ಜನರ ಮುಂಜಾಗ್ರತಾ ಕ್ರಮದಂತೆ ಇಷ್ಟು ನೀರು ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಡ್ಯಾಂನಿಂದ ಐದು ಗೇಟ್ ಗಳ ಮೂಲಕ ಶರಾವತಿ ನದಿಗೆ ಬಿಡುಗಡೆ ಮಾಡಿದ ಬಳಿಕ, ಕಾರ್ಗಲ್ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 10,000 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ ಈ ವರ್ಷ ಉತ್ತಮ ಮಳೆಯಿಂದಾಗಿ ಲಿಂಗನಮಕ್ಕಿ ಡ್ಯಾಂ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಯಾಗಲು 6 ಅಡಿ ಮಾತ್ರವೇ ಬಾಕಿ ಇದೆ. ಆದರೇ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಶರಾವತಿ ನದಿಗೆ 10,000 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಲಿಂಕನಮಕ್ಕಿ ಡ್ಯಾಂ ಐದು ಗೇಟ್ ಓಪನ್ ಮಾಡಿ, ನದಿ ತೀರದ ಜನರ ಸುರಕ್ಷತೆಯ ದೃಷ್ಠಿಯಿಂದ 10,000 ಕ್ಯೂಸೆಕ್ಸ್ ನೀರನ್ನು ಮಾತ್ರವೇ ಬಿಡುಗಡೆ ಮಾಡಲಾಗುತ್ತಿದೆ. ಇನ್ನೂ ಹೆಚ್ಚಿನ ನೀರು ಮುಂದಿನ ದಿನಗಳಲ್ಲಿ ಬಿಡಗಡೆ ಮಾಡಬಹುದು.…

Read More

ಚಾಮರಾಜನಗರ: ವಯನಾಡಿನ ಟೀ ಎಸ್ಟೇಟ್ ಒಂದರಲ್ಲಿ ಕೆಲಸಕ್ಕೆ ಇದ್ದಂತ 6 ಕನ್ನಡಿಗರು ಭೂ ಕುಸಿತದ ನಂತ್ರ, ಬದುಕುಳಿದಿದ್ದರು. ಅವರು ಇಂದು ರಾಜ್ಯಕ್ಕೆ ಸುರಕ್ಷಿತವಾಗಿ ವಾಪಾಸ್ ಆಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮ ಹಾಗೂ ಕೋಡಹಳ್ಳಿ ಗ್ರಾಮ 6 ಮಂದಿ ಕೇರಳದ ವಯನಾಡಿ ಚೋರಲ್ ಮಾಲಾ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡು ಇದ್ದರು. ವಯನಾಡು ಭೂ ಕುಸಿತದ ದುರಂತದಿಂದ ಪಾರಾದಂತ ಅವರು, ಕಾಳಜಿ ಕೇಂದ್ರದಲ್ಲಿದ್ದರು. ವಯನಾಡಿನ ಭೂ ಕುಸಿತದಲ್ಲಿ ದುರಂತದಿಂದ ಪಾರಾಗಿ ಬಂದಂತ 6 ಕನ್ನಡಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರುವಂತ ಎಲ್ಲಾ ಕೆಲಸವನ್ನು ಸರ್ಕಾರ ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಮೇಪ್ಪಾಡಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಂತ ಮಂಗಲ ಗ್ರಾಮದ ಜಯಶ್ರೀ, ಮಂಜುಳಾ, ಸಿದ್ದರಾಜು ಹಾಗೂ ಕೋಡಹಳ್ಳಿ ಗ್ರಾಮದ ನಾಗಶೆಟ್ಟಿ, ಗೌರಮ್ಮ ಮತ್ತು ದಿವ್ಯಾ ಸೇರಿದಂತೆ 6 ಮಂದಿಯನ್ನು ಚಾಮರಾಜನ ನಗರಕ್ಕೆ ಸುರಕ್ಷಿತವಾಗಿ ವಾಪಾಸ್ ಕರೆತರಲಾಗಿದೆ. ಇದಷ್ಟೇ ಅಲ್ಲದೆ ಚಾಮರಾಜನಗರ ಜಿಲ್ಲಾಡಳಿತ, ಗುಂಡ್ಲುಪೇಟೆ ತಾಲ್ಲೂಕು ಆಡಳಿತದ ಅಧಿಕಾರಿಗಳು 6…

Read More

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟೀಸ್ ವಿಚಾರವಾಗಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಪ್ರಕರಣ, ಇತರೆ ಪ್ರಕರಣಗಳಲ್ಲಿ ನ್ಯಾಯಾಲಯದ ಮಾರ್ಗದರ್ಶನ ಹಾಗೂ ತೀರ್ಪು, ಇಂತಹ ಪರಿಸ್ಥಿತಿಯಲ್ಲಿ ಬೇರೆ ರಾಜ್ಯಗಳಲ್ಲಿ ಯಾವ ಸರ್ಕಾರಗಳು ಯಾವ ರೀತಿ ನಡೆದುಕೊಂಡಿವೆ ಎಂದು ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ…

Read More

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, “ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ” ಎಂದರು. “ನೀರಿನ ಹರಿವು ಹೆಚ್ಚಿದ್ದು ನದಿ ಪಾತ್ರಗಳಲ್ಲಿ ಜನರು ಅನಗತ್ಯವಾಗಿ ಓಡಾಡದೆ ಸುರಕ್ಷಿತವಾಗಿ ಇರಬೇಕು. ಗುರುವಾರ ಸಂಜೆ ವೇಳೆಗೆ ತಮಿಳುನಾಡಿಗೆ 100 ಟಿಎಂಸಿಗೂ ಹೆಚ್ಚು ನೀರು ಹರಿದು ಹೋಗಿದೆ.” ಎಂದು ಹೇಳಿದರು. ಕೇರಳ ರಾಜ್ಯ ಸಂಕಷ್ಟದಲ್ಲಿದ್ದು ನಮ್ಮ ರಾಜ್ಯದ ಸಂಪೂರ್ಣ ಸಹಕಾರ ಅವರಿಗಿದೆ. ನಾವು ಕೇರಳ ಹಾಗೂ ಕೇರಳಿಗರ ಜೊತೆಗಿದ್ದೇವೆ. ಯಾವುದೇ ರೀತಿಯ ಸಹಾಯ ಮಾಡಲೂ ತಯಾರಿದ್ದೇವೆ. ಮೃತರ ಆತ್ಮಗಳಿಗೆ ಶಾಂತಿ…

Read More

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿ ಆಗುತ್ತಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿದ್ದೇನೆ. ಆದರೇ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಒತ್ತಾಯವನ್ನು ಮಾಡಿಲ್ಲ. ಹಾಗಂತ ನಾನೇನು ಸನ್ಯಾಸಿಯೂ ಅಲ್ಲ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ  ಪ್ರದೇಶಗಳಿಗೆ ಭೇಟಿ ನೀಡುವುದನ್ನು ಆರಂಭಿಸಿದ್ದೇನೆ. ಸಂತ್ರಸ್ತರಿಗೆ ಸ್ಥಳದಲ್ಲೇ ಪರಿಹಾರವನ್ನು ಒದಗಿಸೋ ಕೆಲಸ ಮಾಡುತ್ತಿದ್ದೇನೆ. ಇನ್ನೂ ಅನೇಕ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿದೆ ಎಂದರು. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸರ್ಜರಿ ಆಗುವ ಮಾತು ಕೇಳಿ ಬರುತ್ತಿದೆ. ನೀವು ಸಚಿವ ಸ್ಥಾನದ ಆಕಾಂಕ್ಷಿಗಳೇ ಅಂತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದಂತ ಅವರು, ನಾನು ಆ ರೀತಿಯ ಆಕಾಂಕ್ಷೆ ಹೊಂದಿಲ್ಲ. ವರಿಷ್ಠರಲ್ಲಿ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ, ಒತ್ತಾಯವನ್ನು ಮಾಡಲ್ಲ. ಹಾಗಂತ ನಾನು ಸನ್ಯಾಸಿನೂ ಅಲ್ಲ ಎಂಬುದಾಗಿ ಹೇಳಿದರು. ವರದಿ: ವಸಂತ ಬಿ…

Read More

ಬೆಂಗಳೂರು: ಇದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ರಾಜ್ಯಪಾಲರು ನೀಡಿದಂತ ನೋಟಿಸ್ ಕುರಿತಂತೆ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಯಿತು. ಅದು ಏನು ಎನ್ನುವ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ.  ಕನ್ನಡಿಗರ ಆಶೀರ್ವಾದದೊಂದಿಗೆ ಮತ್ತು ಕಾನೂನ್ಮಾತಕವಾಗಿ ಆಯ್ಕೆವಾಗಿರುವಂತಹ ಬಹುಮತ ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತು ಬುಡಮೇಲು ಮಾಡುವ ಕ್ರಮಕ್ಕೆ ಮತ್ತೊಮ್ಮೆ ಕೇಂದ್ರ ಸರ್ಕಾರ ಮುಂದಾಗಿದ್ದು ಈ ಬಾರಿ ರಾಜ್ಯಪಾಲರನ್ನು ಅವರ ಕೈಗೊಂಬೆಯಾಗಿ ಬಳಸಿಕೊಳ್ಳುತ್ತಿದ್ದಾರೆ.  ರಾಜ್ಯಪಾಲರು ಮಾನ್ಯ ಮುಖ್ಯ ಮಂತ್ರಿಯವರಿಗೆ ನೊಟೀಸು ಕಾನೂನು ಹಾಗೂ ಸಂವಿಧಾನ ಬಾಹಿರವಾಗಿದೆ. ಟಿ.ಜೆ. ಅಬ್ರಾಹಂ, ಒಬ್ಬ ಅಪರಾಧ ಹಿನ್ನೆಲೆಯುಳ್ಳ ಮತ್ತು ಕಾನೂನನ್ನು ದುರ್ಬಳಕೆಗೆ ಪ್ರಸಿದ್ದವಾಗಿದ್ದು, ಈಗಾಗಲೇ ಮಾನ್ಯ ಸರ್ವೊಚ್ಚ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ವೇದಿಕೆಯನ್ನು ದುರ್ಬಳಕೆಗೊಳಿಸಿರುವ ಹಿನ್ನೆಲೆಯಲ್ಲಿ ರೂ.25.00 ಲಕ್ಷ ದಂಡ ವಿಧಿಸಿದೆ. ಈ ಹಿನ್ನೆಲೆಯ ವ್ಯಕ್ತಿಯ ಅರ್ಜಿಯ ಮೇಲೆ…

Read More

ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಇದೇ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಭಾಗವಹಿಸುತ್ತಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಹಿರಿಯರಾದ ಬಿ.ಎಸ್.ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ಕೊಡಲಿದ್ದಾರೆ ಎಂದು ನುಡಿದರು. ಭ್ರಷ್ಟ, ಹಗರಣಗಳ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನ ಇದಾಗಿರಲಿದೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಹೇಳಿದರು. ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣವನ್ನು ಮುಂದಿಟ್ಟು ಬಿಜೆಪಿ ಮತ್ತು ಜೆಡಿಎಸ್ ಸದನದಲ್ಲಿ ಒಟ್ಟಾಗಿ ಹೋರಾಟ ಮಾಡಿದ್ದೆವು. ಸದನ ಮುಗಿದ ಬಳಿಕ ಈ ಹೋರಾಟ ಮುಂದುವರೆಸಲು ನಿರ್ಧರಿಸಲಾಗಿತ್ತು. ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ದಾಸ್ ಅಗರ್‌ವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ನಾವೆಲ್ಲರೂ ಕುಳಿತು ಚರ್ಚಿಸಿದ್ದೇವೆ. ಎಲ್ಲವೂ ಇತ್ಯರ್ಥ ಆಗಿದೆ. ಮುಂದಿನ ಶನಿವಾರ ಬೆಳಿಗ್ಗೆ 8.30ಕ್ಕೆ ನೈಸ್ ರಸ್ತೆ ಜಂಕ್ಷನ್‌ನಿಂದ ಪಾದಯಾತ್ರೆ…

Read More