Author: kannadanewsnow09

ಬೆಂಗಳೂರು: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್‌ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1847650325387416059 ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ. ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ…

Read More

ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಸಂಹಿತೆಯನ್ವಯ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. https://kannadanewsnow.com/kannada/karnataka-assembly-bypolls-bjp-announces-candidates-for-sandur-shiggaon/ https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/

Read More

ಬೆಂಗಳೂರು: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಮೂರು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ಕೇಂದ್ರ ಬಿಜೆಪಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ವಯನಾಡಿನ ಒಂದು ಕ್ಷೇತ್ರ, ಅಸ್ಸಾಂನ ಮೂರು, ಬಿಹಾರದ ಎರಡು, ಛತ್ತೀಸ್ ಗಡದ ಒಂದು, ಕರ್ನಾಟಕದ ಶಿಗ್ಗಾವಿಯ ವಿಧಾನಸಭಾ ಉಪ ಚುನಾವಣೆಗೆ ಭರತ್ ಬಸವರಾಜ ಬೊಮ್ಮಾಯಿ ಹಾಗೂ ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೂ ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ್ದರೇ, ಮಧ್ಯಪ್ರದೇಶದ ಎರಡು, ರಾಜಸ್ಥಾನದ 6 ಕ್ಷೇತ್ರಗಳು ಪಶ್ಚಿಮ ಬಂಗಾಳದ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಇಂದು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಸಂಡೂರು ಕ್ಷೇತ್ರ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದ್ದರೇ,  ಶಿಗ್ಗಾಂವಿ ಕ್ಷೇತ್ರ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಾಂತ್ರಿಕ ಕಾರಣ ನೀಡಿ ಪಾವತಿ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಉಂಟಾಗಿದೆ. ಕೂಡಲೇ ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಮನವಿ ಮಾಡಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮುಖಾಂತರ ಪ್ರತಿ ವರ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಕರೆಯಲಾಗುತ್ತದೆ. 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಕರೆಯಲಾಗಿತ್ತು. ನಿಯಮಾನುಸಾರ ಆನ್ಲೈನ್ ಮುಖಾಂತರ ಜನವರಿ/ಫೆಬ್ರವರಿ 2023ರಲ್ಲಿ…

Read More

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಾಳೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ. ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ,…

Read More

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಗ್ರಾಹಕರ ವೇದಿಕೆಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನು ನಿಯಮಾನುಸಾರ ಮಾಡಬೇಕಾಗಿರುತ್ತದೆ ಖಾಲಿ ಇರುವ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳಿಗೆ ನೇಮಕಾತಿ ಕೋರಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗ 02-05-2024 ರಂದು ಪ್ರಸ್ತಾವನೆ ಸಲ್ಲಿಸಿರುತ್ತದೆ ಮುತ್ತದ ನಂತರವೂ ಅನೇಕ ಹುದ್ದೆಗಳು ಖಾಲಿಯಾಗಿದ್ದು ಇಲಿಯವರೆಗೆ ನೇಮಕಾತಿ ಆಗಿರುವುದಿಲ್ಲ ಇದರಿಂದ ವಿವಿಧ ಗ್ರಾಹಕರ ನ್ಯಾಯಾಲಯದಲ್ಲಿ ಸಾವಿರಾರು ಪ್ರಕರಣಗಳು ವಿಚಾರಣೆಗೆ ಬಾಕಿ ಇರುತ್ತದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಗ್ರಾಹಕರ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಹೈಕೋರ್ಟ್ ನ ನಿವೃತ್ತ…

Read More

ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ 2024ಕ್ಕೆ ಬಿಜೆಪಿಯಿಂದ ಇಂದು 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ತನ್ನ ಹುರಿಯಾಳುಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶನಿವಾರ ಸಂಜೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಚಂಪೈ ಸೊರೆನ್ ಅವರನ್ನು ಸೆರೈಕೆಲಾದಿಂದ ನಾಮನಿರ್ದೇಶನ ಮಾಡಿದೆ. ಸೊರೆನ್ 1991 ರಿಂದ ಸೆರೈಕೆಲಾದಲ್ಲಿ ಗೆಲ್ಲುತ್ತಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ ತಮ್ಮ ಮಾಜಿ ಪಕ್ಷ ಮತ್ತು ಅದರ ಸಮ್ಮಿಶ್ರ ಪಾಲುದಾರ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಏತನ್ಮಧ್ಯೆ, ಜಾರ್ಖಂಡ್ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ ಧನ್ವಾರ್ ನಿಂದ ಸ್ಪರ್ಧಿಸಲಿದ್ದಾರೆ. ಪಕ್ಷದ ರಾಜ್ಯ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಧನ್ವಾರ್ನಿಂದ, ಲೋಬಿನ್ ಹೆಂಬ್ರೋಮ್ ಬೊರಿಯೊದಿಂದ, ಸೀತಾ ಸೊರೆನ್ ಜಮ್ತಾರಾದಿಂದ, ಮಾಜಿ ಸಿಎಂ ಚಂಪೈ ಸೊರೆನ್ ಸರೈಕೆಲ್ಲಾದಿಂದ, ಗೀತಾ ಬಾಲ್ಮುಚು ಚೈಬಾಸಾದಿಂದ, ಗೀತಾ ಬಾಲ್ಮುಚು ಜಗನ್ನಾಥಪುರದಿಂದ, ಮೀರಾ ಮುಂಡಾ ಪೋಟ್ಕಾದಿಂದ ಸ್ಪರ್ಧಿಸಲಿದ್ದಾರೆ.…

Read More

ಹುಬ್ಬಳ್ಳಿ:  ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಯಾವುದೇ ಪಾತ್ರವಿಲ್ಲ ಎಂಬುದಾಗಿ ದೂರುದಾರೆ ಸುನೀತಾ ಚೌವ್ಹಾಣ್ ಸ್ಪಷ್ಟ ಪಡಿಸಿದ್ದಾರೆ. ಇಂದು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಯಾವುದೇ ಪಾತ್ರವಿಲ್ಲ. ಬದಲಾಗಿ ಅವರ ಹೆಸರನ್ನು ಸಹೋದರ ಗೋಪಾಲ್ ಜೋಶಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದರು. ತಾನು ಪ್ರಕರಣ ಸಂಬಂಧ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಆ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗಿದ್ದೆನು. ವಂಚನೆ ಪ್ರಕರಣ ಸಂಬಂಧ ಪೊಲೀಸರು ಕೇಳಿದಂತ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ.  ಟಿಕೆಟ್ ಕೊಡಿಸುವುದಾಗಿ ಗೋಪಾಲ್​ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ.…

Read More

ಹಾಸನ: ಜಿಲ್ಲೆಯ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತವಾಗಿದೆ. ಈ ಅಪಘಾತದಲ್ಲಿ ಸಿಐಡಿ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ನಗರದಿಂದ ಅರಕಲಗೂಡಿಗೆ ಖಾಸಗಿ ಕೆಲಸ ನಿಮಿತ್ತ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಎರಿಟಿಗಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನದ ಕಡೆಯಿಂದ ಬರುತ್ತಿದ್ದಂತ ಇನ್ನೋವಾ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾಗಿದೆ. ಇನ್ನೋವಾ ಕಾರು ಹಾಗೂ ಎರಿಟಿಗಾ ಕಾರಿನ ನಡುವೆ ನಡೆದಂತ ಅಪಘಾತದಲ್ಲಿ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More