Author: kannadanewsnow09

ಬೆಂಗಳೂರು: ಹೊಸ ಬಿಲ್ಡಿಂಗ್ ಒಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬೆಸ್ಕಾಂ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಬಸನಗರದ ಬೆಸ್ಕಾಂ ಸಹಾಯಕ ಎಂಜಿನಿಯರ್ ಯೋಗರಾಜ್.ಎಲ್ ಹಾಗೂ ಬೆಸ್ಕಾಂ ಖಾಸಗಿ ಚಾಲಕ ಮುರಳಿ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಮಧು ಗೌಡ ಎಂಬುವರು ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ಬೆಸ್ಕಾಂನಿಂದ ಹೊಸ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೆಸ್ಕಾಂ ಎಇ ಯೋಗರಾಜ್.ಎಲ್ ಅವರು ಲಂಚದ ಮೊತ್ತವನ್ನು ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ. ಬೆಂಗಳೂರು ನಗರದ ಲೋಕಾಯುಕ್ತ ಎಸ್ಪಿ ಡಾ.ಕೆ ವಂಶಿಕೃಷ್ಣ ಅವರ ಮೇಲ್ವಿಚಾರಣೆಯಲ್ಲಿ ಪಿಐ ಆಂಜನ್ ಕುಮಾರ್.ವಿ, ಪಿಐ ವಿಜಯ ಕೃಷ್ಣ, ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/ksrtc-conductor-suspended-for-issuing-tickets-to-passengers-from-passengers/ https://kannadanewsnow.com/kannada/the-state-government-has-given-green-signal-to-fill-up-the-vacant-posts-of-teachers-in-private-aided-high-schools/

Read More

ಬೆಂಗಳೂರು: ಪ್ರಯಾಣಿಕರಿಂದಲೇ ಪ್ರಯಾಣಿಕರಿಗೆ ಟಿಕೆಟ್ ಕೊಡಿಸಿದಂತ ಕೆ ಎಸ್ ಆರ್ ಟಿಸಿ ಕಂಡಕ್ಟರ್ ಒಬ್ಬರನ್ನು ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ. ಕೆ ಎಸ್ ಆರ್ ಟಿ ಸಿ ರಾಮನಗರ ವಿಭಾಗಕ್ಕೆ ಸಂಬಂಧಿಸಿದಂತ ಬಸ್ಸಿನಲ್ಲಿ ನಿರ್ವಾಹಕ ಬೇರೊಬ್ಬರಿಂದ ಟಿಕೇಟ್ ವಿತರಣೆ ಮಾಡಿಸುತ್ತಿರುವ ವಿಡಿಯೋ ಹಾಗೂ ಸುದ್ದಿಗೆ ಸಂಬಂಧಪಟ್ಟಂತೆ ಸದರಿ ನಿರ್ವಾಹಕರನ್ನು ಅಮಾನತು ಮಾಡಲಾಗಿದ್ದು, ವಿಚಾರಣೆ ಮುಂದುವರೆದಿದೆ. ರಾಮನಗರ ಡಿಪೋಗೆ ಸಂಬಂಧಿಸಿದಂತ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಚಾಲಕ ಕಂ ನಿರ್ವಾಹಕ ನವೀನ್.ಟಿಎನ್ ಎಂಬುವರು ಪ್ರಯಾಣಿಕರಿಂದಲೇ ಪ್ರಯಾಣಿಕರಿಗೆ ಟಿಕೆಟ್ ಕೊಡಿಸಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ, ನವೀನ್ ಟಿ ಎಸ್, ಚಾಲಕ ಕಂ ನಿರ್ವಾಹಕ, ರಾಮನಗರ ವಿಭಾಗ ಅವರು ಮೇಲ್ನೋಟಕ್ಕೆ ಸಾಭೀತಾಗುವಂತಹ ಮತ್ತು ಕೆ ಎಸ್ ಆರ್ ಟಿಸಿ ನಡತೆ ಹಾಗೂ ಶಿಸ್ತು ನಿಯಮಾವಳಿಗಳು 1971ರ ಪ್ರಕಾರ ದಂಡನಾರ್ಹವಾದ ಅಪರಾಧಗಳನ್ನು ಎಸಗಿದ್ದಾರೆಂದು ವರದಿಯಿಂದ ತಿಳಿದಿರುತ್ತದೆ. ಈ ಹಿನ್ನಲೆಯಲ್ಲಿ…

Read More

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಪರಾಧ ಅಪರಾಧವೇ; ನಿವೇಶನ ಹಿಂತಿರುಗಿಸಿದ ಮಾತ್ರಕ್ಕೆ ಕಳಂಕದಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ. ಇವತ್ತು ಸ್ನೇಹಮಯಿ ಕೃಷ್ಣರ ಮೇಲೆ ಬೆದರಿಕೆ ಹಾಕಿ ಕೇಸುಗಳನ್ನು ಹಾಕುತ್ತಿದ್ದಾರೆ. ಇವೆಲ್ಲ ಷಡ್ಯಂತ್ರ, ಪಿತೂರಿ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು. ಸ್ನೇಹಮಯಿ ಕೃಷ್ಣ ನ್ಯಾಯಪರ ಹೋರಾಟ ಕೈಬಿಟ್ಟಿಲ್ಲ; ಅವರನ್ನು ಅಭಿನಂದಿಸುವೆ ಎಂದ ಅವರು, ಸ್ನೇಹಮಯಿ ಕೃಷ್ಣ ಅವರ ಕೋರಿಕೆಯಂತೆ ಹೈಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವುದೆಂಬ ವಿಶ್ವಾಸ ಇರುವುದಾಗಿ ಹೇಳಿದರು. 14 ನಿವೇಶನವಷ್ಟೇ ಅಲ್ಲ; ಇದರಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚಿನ ಹಗರಣ ನಡೆದಿದೆ. ಸಿದ್ದರಾಮಯ್ಯನವರು, ಕಾಂಗ್ರೆಸ್ ಸರಕಾರ ಬಂದಾಗಿನಿಂದ ಸಾವಿರಾರು ನಿವೇಶನಗಳನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಮಾರಿಕೊಂಡಿದ್ದಾರೆ ಎಂದು ಇನ್ನೊಂದು…

Read More

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು. ಈ ಸರಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರಕಾರದ  ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಖರ್ಗೆ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಬಿಎಂಟಿಸಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ. ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 16.01.2025 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಕ್ರ.ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 1 ಎಂ ಎಫ್-8ಎ ಮಂತ್ರಿ ಮಾಲ್‌ ಮೆಟ್ರೋ ನಿಲ್ದಾಣ ಶಿವಾಜಿನಗರ ಮಲ್ಲೇಶ್ವರಂ ಸರ್ಕಲ್‌, ಗುಟ್ಟಹಳ್ಳಿ, ಮೌಂಟ್‌ ಕಾರ್ಮೆಲ್‌ ಕಾಲೇಜು, ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣ 1 ಮಾರ್ಗ ಸಂಖ್ಯೆ : ಎಂಎಫ್-8ಎ ಬಿಡುವ ವೇಳೆ   ಮಂತ್ರಿ ಮಾಲ್‌  ಮೆಟ್ರೋ ನಿಲ್ದಾಣ   ಶಿವಾಜಿನಗರ 0715, 0845, 1215, 1330 1440, 1625 0805, 0845,…

Read More

ನವದೆಹಲಿ: ಮದ್ಯದ ಹಗರಣದಲ್ಲಿ ಛತ್ತೀಸ್ಗಢದ ಮಾಜಿ ಅಬಕಾರಿ ಸಚಿವ ಮತ್ತು ಹಾಲಿ ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸುಮಾರು 2,161 ಕೋಟಿ ರೂ.ಗಳ ಮದ್ಯ ಹಗರಣದಿಂದ ಉತ್ಪತ್ತಿಯಾದ ಅಪರಾಧದ ಆದಾಯದಿಂದ ಹಿರಿಯ ಕಾಂಗ್ರೆಸ್ ನಾಯಕ ಮಾಸಿಕ ಆಧಾರದ ಮೇಲೆ ಗಣನೀಯ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸುತ್ತಿದ್ದರು ಎಂದು ಇಡಿ ಸೋಮವಾರ ಹೇಳಿದೆ. ಏಜೆನ್ಸಿಯ ಪ್ರಕಾರ, ಕವಾಸಿ ಲಖ್ಮಾ ಅವರು ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದ ಅವಧಿಯಲ್ಲಿ ಅಪರಾಧದ ಆದಾಯವನ್ನು ನಗದು ರೂಪದಲ್ಲಿ ಸ್ವೀಕರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. https://kannadanewsnow.com/kannada/micro-finance-staff-harassed-in-cm-siddaramaiahs-hometown-people-try-to-leave-village/ https://kannadanewsnow.com/kannada/what-is-the-difference-between-heart-rate-and-pulse-rate-how-much-should-a-normal-person-have-heres-the-information/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಜನರು ಹೆಚ್ಚಾಗಿ ಹೃದಯ ಬಡಿತ ಮತ್ತು ನಾಡಿ ಬಡಿತವನ್ನು ಒಂದೇ ಎಂದು ಗೊಂದಲಗೊಳಿಸುತ್ತಾರೆ. ಅದು ತಪ್ಪು. ಇದು ಎರಡೂ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯ ಬಡಿತವು ನಿಮಿಷಕ್ಕೆ ಹೃದಯವು ಎಷ್ಟು ಬಾರಿ ಬಡಿದುಕೊಳ್ಳುತ್ತದೆ ಎಂಬುದನ್ನು ಸೂಚಿಸುತ್ತದೆ. ಇದು ಹೃದಯದ ಆರೋಗ್ಯ ಮತ್ತು ದೇಹದ ಭೌತಿಕ ಪರಿಸ್ಥಿತಿಗಳನ್ನು ಸೂಚಿಸುತ್ತದೆ. ಮೆದುಳು ಮತ್ತು ದೇಹದ ಅಗತ್ಯಗಳನ್ನು ಅವಲಂಬಿಸಿ ಹೃದಯ ಬಡಿತವು ಹೆಚ್ಚು ಅಥವಾ ಕಡಿಮೆ ಇರಬಹುದು. ಹೃದಯ ಬಡಿತವು ನಮ್ಮ ಹೃದಯದ ಬಗ್ಗೆ ಮಾಹಿತಿಯನ್ನು ನೀಡುವುದಲ್ಲದೆ ನಮ್ಮ ಜೀವನಶೈಲಿಯನ್ನು ಸಹ ಹೇಳುತ್ತದೆ. ಅದೇ ಸಮಯದಲ್ಲಿ, ನಾಡಿಮಿಡಿತವು ಅಪಧಮನಿಗಳಲ್ಲಿ ರಕ್ತದ ಹರಿವನ್ನು ಸೂಚಿಸುತ್ತದೆ. ಹೃದಯವು ರಕ್ತವನ್ನು ಪಂಪ್ ಮಾಡಿದಾಗ. ಇದು ಅಪಧಮನಿಗಳಲ್ಲಿ ತರಂಗವನ್ನು ಸೃಷ್ಟಿಸುತ್ತದೆ, ಇದನ್ನು ನಾಡಿಮಿಡಿತ ಎಂದು ಕರೆಯಲಾಗುತ್ತದೆ. ಹೃದಯ ಬಡಿತ ಮತ್ತು ನಾಡಿಮಿಡಿತ ಎರಡೂ ದೇಹದ ಕಾರ್ಯನಿರ್ವಹಣೆ ಮತ್ತು ಹೃದಯದ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತವೆ. ಹೃದಯ ಬಡಿತ ಮತ್ತು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು? ಹೃದಯ ಬಡಿತ…

Read More

ಮೈಸೂರು: ಚಾಮರಾಜನಗರದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಕ್ಷೇತ್ರ ವರುಣಾ, ನಂಜನಗೂಡಿನಲ್ಲೂ ಮೈಕ್ರೋ ಫೈನಾನ್ಸರ್ ಸಿಬ್ಬಂದಿಗಳ ಕಿರುಕುಳ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆಯಲು ಜನರು ಮುಂದಾಗಿದ್ದಾರೆ. ಮೈಸೂರು ಜಿಲ್ಲೆಯ ವರುಣ ಹಾಗೂ ನಂಜನಗೂಡು ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಹೆಚ್ಚಾಗಿದೆ. ಕೊಟ್ಟ ಸಾಲ ವಾಪಾಸ್ ಕಟ್ಟದೇ ಇದ್ದಕ್ಕೆ ಗ್ರಾಮದ ಜನರ ಮನೆಯ ಬಾಗಿಲ ಮೇಲೆಯೇ ನೋಟಿಸ್ ಬೋರ್ಡ್ ರೀತಿಯಲ್ಲಿ ಈ ಸ್ವತ್ತಿನ ಮೇಲೆ ಸಾಲ ಪಡೆದಿರುವುದಾಗಿ ಕಪ್ಪು ಶಾಹಿರಿಯಿಂದ ಬರೆಯಲಾಗಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಈ ಬರವಣಿಗೆಯಿಂದಾಗಿ ಗ್ರಾಮದ ಜನರು ಮಾನಸಿಕವಾಗಿ ನೋಂದು ಹೋಗಿದ್ದು, ಕಿರುಕುಳಕ್ಕೆ ಬೇಸತ್ತಿದ್ದಾರೆ. ಬಲವಂತವಾಗಿ ಸಾಲ ವಾಪಾಸ್ಸು ನೀಡುವಂತೆಯೂ ಫೈನಾನ್ಸ್ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಈ ಕಾರಣಕ್ಕೆ ವರುಣ, ನಂಜನಗೂಡು ಕ್ಷೇತ್ರದ ಜನರು ಗ್ರಾಮವನ್ನೇ ತೊರೆಯಲು ಮುಂದಾಗಿದ್ದಾರೆ. ಜೊತೆಗೆ ಈ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿದ್ದಾರೆ. https://kannadanewsnow.com/kannada/issue-of-caste-census-report-will-not-be-tabled-in-tomorrows-cabinet-meeting-siddaramaiah/ https://kannadanewsnow.com/kannada/bpl-apl-cardholders-in-the-state-e-kyc-and-mapping-mandatory-jan-31-last-date/

Read More

ಬಳ್ಳಾರಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ…

Read More

ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು. ಎಐಸಿಸಿ ಕಚೇರಿ ಉದ್ಘಾಟನೆ ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ…

Read More