Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ. ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ‘ನಡೆಸಲು ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ / ಸ್ಮಶಾನ/ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ / ಸ್ಮಶಾನದ ಸಿಬ್ಬಂದಿಯು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು (N -95 ಮಾಸ್ಕ್, ಗೊವ್ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡುವುದು) ಅಂತ್ಯಕ್ರಿಯೆಯನ್ನು…
ನವದೆಹಲಿ: ದೆಹಲಿ ಎನ್ ಸಿಆರ್ ಸೇರಿದಂತೆ ಜಮ್ಮು-ಕಾಶ್ಮೀರದಲ್ಲೂ ಇಂದು ಭೂ ಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಮಿ ಕಂಪಿಸಿದೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೂ ಕಂಪನದ ಅನುಭವ ಉಂಟಾಗಿದೆ. ಹೀಗಾಗಿ ಮನೆಯಿಂದ ಹೊರಗೆ ಜನರು ಓಡಿ ಬಂದು ಕೆಲ ಕಾಲ ಆತಂಕದಲ್ಲಿ ಕಳೆದಿದ್ದಾರೆ ಎನ್ನಲಾಗಿದೆ. ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್) ಮತ್ತು ಉತ್ತರ ಭಾರತದ ಇತರ ಕೆಲವು ಭಾಗಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲೂ ಭೂಕಂಪನದ ಅನುಭವವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1745376460905554224
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿನ ಕಾಲದಲ್ಲಿ ಬಹುತೇಕ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿರ್ತಾರೆ. ಊಟವಂತೂ ಮೊಬೈಲ್ ಇಲ್ಲದೇ ಮಾಡೋದೇ ಇಲ್ಲ. ಮೊಬೈಲ್ ನಲ್ಲಿ ವೀಡಿಯೋ ನೋಡುತ್ತ ಊಟ ಮಾಡುತ್ತಾ ಇರುತ್ತಾರೆ. ಆದ್ರೇ ಇದು ಮಕ್ಕಳ ಆರೋಗ್ಯ, ಕಣ್ಣಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಊಟ ಮಾಡೋ ವೇಳೆ ಮಕ್ಕಳು ಮೊಬೈಲ್ ನೋಡದೇ ಊಟ ಮಾಡೋದಕ್ಕೆ ಕೆಲ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ. ಅವುಗಳ ಬಗ್ಗೆ ಮುಂದೆ ಓದಿ. ಮಕ್ಕಳು ಊಟ ಮಾಡುವಾಗ ಮೊಬೈಲ್ ನೋಡೋದ್ರಿಂದ ಕಣ್ಣಿಗೆ ಹಾನಿಯುಂಟಾಗಲಿದೆ. ಜೊತೆಗೆ ಮೆದುಳಿನ ಮೇಲೆ ಪ್ರಭಾವ ಬೀರಿ, ಬೆಳೆಯುವ ಕುಡಿ ಮೊಳಕೆಯಲ್ಲೇ ವಿವಿಧ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ನೀವು ಮಕ್ಕಳ ಕೈಗೆ ಮೊಬೈಲ್ ಕೊಡೋದನ್ನು ತಪ್ಪಿಸಬೇಕಿದೆ. ಮಕ್ಕಳು ಮೊಬೈಲ್ ನೋಡೋದರಿಂದ ಉಂಟಾಗೋ ಸಮಸ್ಯೆಗಳು ತಲೆನೋವು ದೂರ ದೃಷ್ಠಿ ಅಸ್ಪಸ್ಟ ಗೋಚರತೆ ಕಣ್ಣುಗಳ ಆಯಾಸ ಕಣ್ಣಿನ ರಪ್ಪೆ ಹೆಚ್ಚಾಗಿ ಬಡಿಯೋದು ಕಣ್ಣಿನ ನೋವು ಕಣ್ಣು ಉರಿ ಈ ಸಮಸ್ಯೆಗಳನ್ನು ಪರಿಹಾರಕ್ಕೆ ಮಕ್ಕಳಿಗೆ ಮೊಬೈಲ್ ಕೊಡೋದನ್ನು ತಪ್ಪಿಸೋದು ಒಂದೇ…
ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವ ದಿನವಾದ ಜ.12ರ ನಾಳೆ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ ನೀಡುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಯುವಜನತೆ, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕರೆ ನೀಡಿದರು. ಯುವನಿಧಿ ಯೋಜನೆ ಉದ್ಘಾಟನಾ ಸಮಾರಂಭದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪದವಿ/ಡಿಪ್ಲೊಮಾ ಉತ್ತೀರ್ಣರಾದ ನಂತರ ಆರು ತಿಂಗಳಲ್ಲಿ ಉದ್ಯೋಗ ದೊರೆಯದಿದ್ದವರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ. ಪದವಿ ಮುಗಿದ ನಂತರ ಮುಂದೇನು ಮಾಡುವುದು ಎಂಬ ಯೋಚನೆ ಜೊತೆಗೆ ಆರ್ಥಿಕ ಒತ್ತಡವೂ ಇರುತ್ತದೆ. ಉದ್ಯೋಗ ಹುಡುಕಲು, ಅರ್ಜಿಗಳನ್ನು ಹಾಕಲು ಯುವನಿಧಿ ನಿರುದ್ಯೋಗ ಭತ್ಯೆ ಸಹಾಯ ಮಾಡುವುದರೊಂದಿಗೆ ಒಂದು ವಿಶ್ವಾಸ ಮತ್ತು ಭರವಸೆಯನ್ನು ಯುವಜನತೆಯಲ್ಲಿ ತುಂಬಲಿದೆ. ಯುವನಿಧಿ ಯೋಜನೆ ಅನುಷ್ಟಾನದ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ,…
ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. https://twitter.com/BSBommai/status/1745361901419430255 ಈ ಬಗ್ಗೆ ಇಂದು ಎಕ್ಸ್ ಮಾಡಿರೋ ಅವರು, ನೈತಿಕ ಪೊಲಿಸ್ ಗಿರಿ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂತಹ ಹೀನ ಕೃತ್ಯ ನಡೆದರೂ ಮೌನ ವಹಿಸಿರುವುದೇಕೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ ? ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂಬುದಾಗಿ ಹೇಳಿದ್ದಾರೆ. https://twitter.com/BSBommai/status/1745361908725919812 ಹಾವೇರಿ ‘ನೈತಿಕ ಪೊಲೀಸ್ ಗಿರಿ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಗೃಹಿಣಿ ಮೇಲೆ ಯುವಕರಿಂದಲೇ ‘ಗ್ಯಾಂಗ್ ರೇಪ್’.? ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ…
ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ವೈರಲ್ ಆದ ಬಳಿಕ, ಸಂತ್ರಸ್ತ ಗೃಹಿಣಿ ಪೊಲೀಸರಿಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಗೃಹಿಣಿಯನ್ನ ಕರೆದೊಯ್ದ ಯುವಕರು, ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾವೇರಿಯಲ್ಲಿ ಜನವರಿ.8ರಂದು ಲಾಡ್ಜ್ ಒಂದಕ್ಕೆ ನುಗ್ಗಿರುವಂತ ಗುಂಪೊಂದು, ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಳಿಕ ಮಹಿಳೆ ಹಾನಗಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನೀಡಿದಂತ ದೂರಿನಲ್ಲಿ ನನ್ನ ಖಾಸಗಿ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ. ಮನಸೋ ಇಚ್ಛೆ ಹೋಟೆಲ್ ನಲ್ಲಿ ಥಳಿಸಿದ್ದಾರೆ. ಅಂತವರ ವಿರುದ್ಧ…
ಪ್ರಪಂಚದಲ್ಲಿ ಹುಟ್ಟುವ ಪ್ರತಿಯೊಂದು ಮನುಷ್ಯನು ಹುಟ್ಟುವಾಗಲೇ ಐದು ಋಣವುಳ್ಳವನಾಗುತ್ತಾನೆ. ದೇವಋಣ, ಋಷಿಋಣ, ಪಿತೃಋಣ, ಮನುಷ್ಯಋಣ ಮತ್ತು ಭೂತಋಣ. ದೇವತೆಗಳು, ಋಷಿಗಳು, ಪಿತೃಗಳು, ಮಾನವರು ಮತ್ತು ಪ್ರಾಣಿಗಳು ಇವರೆಲ್ಲರಿಂದ ನಾವು ನಾನಾವಿಧದ ಉಪಕಾರಗಳನ್ನು ಪಡೆಯತ್ತೇವೆ. ಅವರ ಹಂಗಿಲ್ಲದೆ ಬದುಕುವ ಸಾಮರ್ಥ್ಯ ನಮಗಾರಿಗೂ ಇಲ್ಲವಾದ್ದರಿಂದ ಇವರೆಲ್ಲರ ಉಪಕಾರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…
ಬೆಂಗಳೂರು: ನಗರದ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರಿಗೆ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿತ್ತು. ಈ ಯೋಜನೆಗೆ ನೋಂದಣಿಗಾಗಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಹೌದು ಬೆಂಗಳೂರು ನಗರ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರಿಗೆ ವಿಮಾ ಸೌಲಭ್ಯ ನೋಂದಣಿ ಕಾರ್ಯಕ್ರಮವನ್ನು ಜನವರಿ 11 ಇಂದು ಮತ್ತು ಜನವರಿ.12ರ ನಾಳೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿರುವಂತ ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಪತ್ರಿಕಾ ವಿತರಕರು, ಪತ್ರಿಕೆ ಹಂಚುವವರು ವಿಮಾ ಸೌಲಭ್ಯಕ್ಕಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜನವರಿ.11 ಮತ್ತು 12ರ ಇಂದು ಮತ್ತು ನಾಳೆ ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ನ 6ನೇ ಮುಖ್ಯರಸ್ತೆಯಲ್ಲಿರುವ ಗಣೇಶ ದೇವಸ್ಥಾನ ಪಕ್ಕದ ಸಭಾಂಗಣದಲ್ಲಿ ವಿಮಾ ಸೌಲಭ್ಯಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೋ ಬೆಂಗಳೂರು ನಗರದ ಪತ್ರಿಕಾ ವಿತರಕರು, ಹಂಚುವವರು ತಪ್ಪದೇ ಇಂದು ಮತ್ತು ನಾಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 9880217133 ಅಥವಾ 9972534666ಗೆ ಕರೆ ಮಾಡಿ.
ಬೆಂಗಳೂರು: ‘ಸಕಾಲ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸರ್ಕಾರಿ ಸೇವೆಗಳನ್ನು ಅಧಿಕಾರಿಗಳು ವಿಳಂಭವಿಲ್ಲದೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರದಂದು ನಡೆದ “ಸಕಾಲ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, “ಸರ್ಕಾರ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಲು ಇರುವ ಏಕೈಕ ಮಾರ್ಗ ಸಕಾಲ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು, ಜನರಿಗೆ ವಿಳಂಭವಿಲ್ಲದೆ ಎಲ್ಲಾ ಸೇವೆಗಳೂ ಲಭ್ಯವಾಗುವಂತಿರಬೇಕು ಎಂಬುದೇ ಸರ್ಕಾರ ಉದ್ದೇಶ. ಆದರೆ, ಕೆಲವು ಸೇವೆಗಳು ವಿಳಂಭವಾಗುತ್ತಿರುವುದು ಸರಿಯಲ್ಲ” ಎಂದು ಎಚ್ಚರಿಕೆ ನೀಡಿದರು. ಮುಂದುವರೆದು, “ಸಕಾಲ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆದರೆ, ಸುಧಾರಣೆಯಾಗಬೇಕಾದ್ದು ಇನ್ನೂ ಬಹಳಷ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಭವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ನಮಗೆ ವರ ಕೊಟ್ಟು ಇಲ್ಲಿ ಕೂರಿಸಿದವರನ್ನೇ ಮನೆಯ ಹೊರಗೆ ಕೂರಿಸಿ ಸತಾಯಿಸುವ ಕೆಲಸ ಆಗಬಾರದು. ಸಕಾಲ ಸೇವೆಯನ್ನು ಅಧಿಕಾರಿಗಳು ನಾಮಕಾವಸ್ತೆಯಂತೆ ಹಗುರವಾಗಿ…
ಬೆಂಗಳೂರು: ಸಕಾಲ ಕಾಯ್ದೆಯ ಅಡಿಯಲ್ಲಿ ಈಗಾಗಲೇ ಹಲವಾರು ಸೇವೆಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಮತ್ತಷ್ಟು ಸೇವೆಗಳನ್ನು ಹೊಸದಾಗಿ ಸೇರಿಸಲಾಗಿದೆ. 130 ಹೊಸ ಸೇವೆಗಳನ್ನು ಸಕಾಲಕ್ಕೆ ಸೇರ್ಪಡೆ ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರದಂದು ನಡೆದ “ಸಕಾಲ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಧೀನ ಇಲಾಖೆಗಳಾದ ಕರ್ನಾಟಕ ರಾಜ್ಯ ಶುಶ್ರೂಷೆ ಪರಿಷತ್ತು, ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ, ಕರ್ನಾಟಕ ರಾಜ್ಯ ಶುಶ್ರೂಷೆ ಪರೀಕ್ಷಾ ಮಂಡಳಿ ಹಾಗೂ ರಾಜೀವ್ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 130 ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಅಧೀನ ಇಲಾಖೆಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ 65 ಸೇವೆಗಳನ್ನು ನೀಡುತ್ತಿದ್ದು, ಹೊಸದಾಗಿ 63 ಸೇವೆಗಳನ್ನು ನೀಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ…