Author: kannadanewsnow09

ಬೆಂಗಳೂರು: ಏಪ್ರಿಲ್ 20, 21ರಂದು ನಿಗದಿಯಾಗಿದ್ದಂತ ಸಿಇಟಿ-2024ರ ಪರೀಕ್ಷೆಯನ್ನು ಎರಡು ದಿನ ಮೊದಲೇ ನಿಗದಿ ಪಡಿಸಲಾಗಿದೆ. ಏಪ್ರಿಲ್.18, 19ರಂದೇ ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮುಂಚಿತವಾಗಿ, ಏಪ್ರಿಲ್‌ 18 ಮತ್ತು 19ರಂದು ಪರೀಕ್ಷೆಯನ್ನು ನಿಗದಿ ಮಾಡಿದೆ ಎಂದು ತಿಳಿಸಿದೆ. ಏಪ್ರಿಲ್‌ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರ್ಜಿ ಸಲ್ಲಿಸಲು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಅಂತ ಹೇಳಿದೆ. ಈ ಮೊದಲು ಏಪ್ರಿಲ್.20, 21ಕ್ಕೆ ಪರೀಕ್ಷಎ ನಿಗದಿಯಾಗಿತ್ತು. ಈಗ ಈ ಪರೀಕ್ಷೆಯನ್ನು ಏಪ್ರಿಲ್.18, 19ಕ್ಕೆ ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23460460, 9741388123. https://twitter.com/KarnatakaVarthe/status/1745021433804460084

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳ ಲಾಭ ಪಡೆದವರಲ್ಲಿ ಮುಸ್ಲಿಂ ಮಹಿಳೆಯರು ಹೆಚ್ಚಿದ್ದಾರೆ. ಮುದ್ರಾ, ಆಯುಷ್ಮಾನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವು ಯೋಜನೆಯ ಫಲಾನುಭವಿಗಳಾಗಿದ್ದು, ಅವರು ಸುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುತ್ತಿದ್ದು, ಅದು ಅತ್ಯಂತ ಯಶಸ್ವಿಯಾಗಲಿದೆ. ಇದು ಬದಲಾವಣೆ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಯೋಜನೆಗಳ ಫಲಾನುಭವಿಗಳಾಗಿರುವ ಆ ತಾಯಂದಿರಿಗೆ ಅದರ ಅರಿವಿದೆ, ಆದರೆ, ಅದನ್ನು ಅದುಮಿಡುವ ಕೆಲಸ ಮಾಡುತ್ತಿದ್ದಾರೆ. ಅದರಿಂದ ಹೊರ ಬಂದು ಶುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುದ್ದಾರೆ. ಇದು ಅತ್ಯಂತ ಯಶಸ್ವಿಯಾಗಲಿದೆ. ಇಂಡಿ ಒಕ್ಕೂಟಕ್ಕೆ ಇದು ಹಿನ್ನಡೆ ಆಗಲಿದೆ ಎಂದು ಹೇಳಿದರು. ಟ್ಯಾಬ್ಲೋ ವಿಚಾರ ಅನಗತ್ಯ ಆರೋಪ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕರ್ನಾಟಕದ ಟ್ಯಾಬ್ಲೋ ಆಯ್ಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾ ಕಾರಾಣ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೆ ನಮ್ಮ‌ ಸರ್ಕಾರ ಇದ್ದಾಗ ಕೇಂದ್ರದ…

Read More

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿರುತ್ತಾರೆ. ಹೊರ ರಾಜ್ಯಗಳಿಂದ ಮೈಸೂರಿಗೆ ತರಿಸುವ ಸರಕು ಹಾಗೂ ಮೈಸೂರಿನಿಂದ ಹೊರರಾಜ್ಯಗಳಿಗೆ ಕಳುಹಿಸುವ ಸರಕುಗಳ ಸಂಬಮಧ ನಕಲಿ ಬಿಲ್‍ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ 14 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ್ದು, ಯಾವುದೇ ಅಧಿಕೃತ ರಶೀದಿ ಇಲ್ಲದೇ ನಕಲಿ ಘಟಕಗಳಿಗೆ ಸರಕು ಸಾಗಾಣೆ ಮಾಡಿರುವಂತೆ ತೋರಿಸ ಕೋಟ್ಯಂತರ ರೂ.ಗಳ ವಹಿವಾಟು ಕೇವಲ ಕಾಗದ ಮೇಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರಿನ ಕೇಂದ್ರೀಯ ಜಿಎಸ್‍ಟಿ ಆಯುಕ್ತಾಲಯದ ಅಧಿಕಾರಿಗಳು ವಂಚನೆಯ ಜಾಲವನ್ನು ಭೇದಿಸಿದೆ ಎಂದು ಉಪ ಆಯುಕ್ತರು, ಸೆಂಟ್ರಲ್ ಟ್ಯಾಕ್ಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/good-news-for-copra-growers-state-govt-orders-procurement-under-support-price/ https://kannadanewsnow.com/kannada/covid-test-mandatory-for-those-with-symptoms-of-high-risk-disease-minister-dinesh-gundu-rao/

Read More

ಬೆಂಗಳೂರು: 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಅನುಮತಿಸಿದೆ. ಈ ಮೂಲಕ ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ರಾಜ್ಯದಲ್ಲಿ ತೆಂಗು ಬೆಳೆಯನ್ನು 6,50 ಹಕ್ಕೇ‌ ವುದೇಶದಲ್ಲಿ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದ್ದು, 60,840 ಲಕ್ಷ ತೆಂಗಿನ ಕಾಯಿ ಉತ್ಪಾದನೆಯಾಗುವುದೆಂದು ಅಂದಾಜಿಸಲಾಗಿದೆ. ವಾರ್ಷಿಕ ಒಟ್ಟು ಉತ್ಪಾದನೆಯಲ್ಲಿ ಅಂದಾಜು 2.50 ಲಕ್ಷ ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಉತ್ಪಾದನೆಯಾಗುವ ನಿರೀಕ್ಷೆಯಿರುತ್ತದೆ, ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ಪ್ರತಿ ಕ್ವಿಂಟಾಲ್ ಉಂಡ ಕೊಬ್ಬರಿಗೆ ಬೆಂಬಲ ಬೆಲೆ ರೂ.11,750/-ಗಳನ್ನು ಘೋಷಿಸಿರುತ್ತದೆ. ಪ್ರಸ್ತುತ ಉಂಡ ಕೊಬ್ಬರಿ ಧಾರಣೆಯು ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.6,900/- ರಿಂದ ರೂ.9,500/-ಗಳ ಧಾರಣೆಯಲ್ಲಿ ಮಾರಾಟವಾಗುತ್ತಿದ್ದು, ತಂಗು ಬಹು ವಾರ್ಷಿಕ ಬೆಳೆಯಾಗಿದ್ದು, ವಾರ್ಷಿಕ ಬೆಳೆಯಾಗಿರುವುದರಿಂದ ಕೊಬ್ಬರಿ ಉತ್ಪಾದನೆಯು…

Read More

ಬೆಂಗಳೂರು: ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎರಡನೇ ಬಾರಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಸೇರಿತ್ತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನ ನಡೆಸಲಾಗ್ತಿದೆ ಎಂದರು. ಕೋವಿಡ್ ಇಳಿಮುಖ ಕಾಣುವ ವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು. ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ…

Read More

ಬೆಂಗಳೂರು: ಕರ್ನಾಟಕ ಮತ್ತು ಜಪಾನ್ ನಡುವಿನ ಸಂಬಂಧ ಮೊದಲಿನಿಂದಲೂ ರಚನಾತ್ಮಕವಾಗಿದೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಜಪಾನಿನ ಕಂಪನಿಗಳು ಕೂಡ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಜಪಾನಿನಿಂದ ಆಗಮಿಸಿರುವ ಸಂಸದೀಯ ನಿಯೋಗದ ಸದಸ್ಯರ ಜತೆ ಬುಧವಾರ ಅವರು ಮಾತುಕತೆ ನಡೆಸಿ, ಈ ಮಾತುಗಳನ್ನಾಡಿದ್ದಾರೆ. ರಾಜ್ಯದಲ್ಲಿ ಟೊಯೋಟಾ, ಹಿಟಾಚಿ, ಮಿತ್ಸುಬಿಶಿ, ಹೋಂಡಾ, ಮಕಿಟಾ, ಮಕಿನೋ ಸೇರಿದಂತೆ ಜಪಾನಿನ 525ಕ್ಕೂ ಹೆಚ್ಚು ಕಂಪನಿಗಳು ನೆಲೆ ಹೊಂದಿದ್ದು, ಕೈಗಾರಿಕಾ ಚಟುವಟಿಕೆಗಳನ್ನು ನಡೆಸುತ್ತಿವೆ. ಹಾಗೆಯೇ, ತುಮಕೂರಿನಲ್ಲಿ ಪ್ರತ್ಯೇಕ ಜಪಾನ್ ಕೈಗಾರಿಕಾ ಟೌನ್ ಶಿಪ್ ಇದೆ. ಜೊತೆಗೆ, ಎರಡೂ ದೇಶಗಳ ನವೋದ್ಯಮಗಳ ನಡುವಿನ ನೆರವಿಗೆ ಜಪಾನ್-ಇಂಡಿಯಾ ಸ್ಟಾರ್ಟಪ್ ಹಬ್ ಎಂಬ ಆನ್ಲೈನ್ ವೇದಿಕೆಯೂ ಇದೆ. ತಂತ್ರಜ್ಞಾನ ಪರಿಣತಿಗೆ ಹೆಸರಾಗಿರುವ ಜಪಾನಿನ ಮತ್ತಷ್ಟು ಕಂಪನಿಗಳು ರಾಜ್ಯಕ್ಕೆ ಬರಬೇಕು ಎಂದು ಅವರು ಆಹ್ವಾನ ನೀಡಿದರು. ರಾಜ್ಯವು…

Read More

ಬೆಂಗಳೂರು: ಇಡೀ ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್‌ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್‌ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು. ಹಿಂದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ರಾಮ ಹುಟ್ಟಿರುವುದಕ್ಕೆ ಜನ್ಮ ಪ್ರಮಾಣ ಪತ್ರ ಇದೆಯೇ ಎಂದು ಕಾಂಗ್ರೆಸ್‌ ಕೇಳಿತ್ತು. ರಾಮಜನ್ಮಭೂಮಿಯ ಕುರುಹುಗಳ ಬಗ್ಗೆ ಸಂದೇಹವನ್ನೂ ವ್ಯಕ್ತಪಡಿಸಿದ್ದರು. ರಾಮಾಯಾಣ ಕಾಲ್ಪನಿಕ, ಅದು ನಡೆದೇ ಇಲ್ಲ ಎಂದು ಅವರು ವಾದಿಸಿದ್ದರು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್‌ಗೆ ಮೊದಲಿಂದಲೂ ಅಲರ್ಜಿ.…

Read More

ಬೆಂಗಳೂರು : ಹಾಸನ ಡಿಎಫ್ಓ ನಿಯೋಜನೆಗೆ 1 ಕೋಟಿ ಡಿಮ್ಯಾಂಡ್ ಮಾಡಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪ ಕಪೋಲ ಕಲ್ಪಿತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಾಲ್ಕು ದಿನಗಳ ಹಿಂದೆ ಸುದ್ದಿಗೋಷ್ಠಿ ಮಾಡಿ ಹಾಸನದ ಡಿ.ಸಿ.ಎಫ್. ಮೋಹನ್ ಕುಮಾರ್ ಪ್ರಾಮಾಣಿಕ ಅಧಿಕಾರಿ ಅವರನ್ನು ಅಮಾನತು ಮಾಡಿದ್ದು ಸರಿಯಲ್ಲ ಎಂದು ಎಚ್.ಡಿ.ಕೆ. ಹೇಳಿದ್ದರು, ಈಗ ಅವರೇ ಅದೇ ಡಿಸಿಎಫ್ 50 ಲಕ್ಷ ರೂ. ನೀಡಿ ಹಾಸನ ಪೋಸ್ಟಿಂಗ್ ಪಡೆದಿದ್ದಾರೆ ಎನ್ನುತ್ತಾರೆ. 50 ಲಕ್ಷ ಲಂಚ ಕೊಟ್ಟು ಪೋಸ್ಟಿಂಗ್ ಪಡೆದಿದ್ದೇ ನಿಜವಾದರೆ ಅವರು ಪ್ರಾಮಾಣಿಕ ಹೇಗೆ ಆಗ್ತಾರೆ? ಪ್ರಶ್ನಿಸಿರುವ ಖಂಡ್ರೆ, ಇದು ಕುಮಾರಸ್ವಾಮಿ ಅವರ ಕಪೋಲ ಕಲ್ಪಿತ ದ್ವಂದ್ವ ಹೇಳಿಕೆಗೆ ಜ್ವಲಂತ ಸಾಕ್ಷಿ ಎಂದು ತಿರುಗೇಟು ನೀಡಿದ್ದಾರೆ. ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ನೂರಾರು ಮರಗಳನ್ನು ಅಕ್ರಮವಾಗಿ ಕಡಿಯುತ್ತಿದ್ದರೆ, ಅರಣ್ಯ ನಾಶ ಮಾಡುತ್ತಿದ್ದರೆ ಸಹಜವಾಗೇ ವನ್ಯಜೀವಿಗಳು ನಾಡಿಗೆ ಬರುತ್ತವೆ. ಪರಿಸರ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ನಗರದ ಹೋಟೆಲ್ ರಮಾಡದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ ಸಂಗತಿ ಎನಿಸಿಲ್ಲ; ಕಾಂಗ್ರೆಸ್ ನಿರ್ಧಾರ ರಾಮಭಕ್ತರಿಗೆ ಅನಿರೀಕ್ಷಿತವಲ್ಲ ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಪಕ್ಷದ ನಿರ್ಣಯ ನಿರೀಕ್ಷಿತವೇ ಆಗಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದ್ದ ಕಾಂಗ್ರೆಸ್ ಪಕ್ಷದವರು, ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಸರಕಾರ ವಜಾ ಮಾಡಿದ ಕಾಂಗ್ರೆಸ್, ರಾಮಭಕ್ತರಿಗೆ ತೊಂದರೆ ಕೊಡುತ್ತಿದ್ದ ಕಾಂಗ್ರೆಸ್ಸಿಗರ ಈ ನಿರ್ಣಯ ಯಾರಿಗೂ ಆಶ್ಚರ್ಯ ತಂದು ಕೊಟ್ಟಿಲ್ಲ ಎಂದರು. ಜನವರಿ 22ರಂದು ರಾಜ್ಯದ ಎಲ್ಲ ದೇವಾಲಯಗಳಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6557 ಹಾಗೂ RAT ಮೂಲಕ 758 ಸೇರಿದಂತೆ 7315 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಅಂತ ತಿಳಿಸಿದೆ. ಇಂದು ಪರೀಕ್ಷೆಗೆ ಒಳಪಟ್ಟಂತ 7315 ಮಂದಿಯಲ್ಲಿ ಬೆಂಗಳೂರು 121, ಬಳ್ಳಾರಿ ಮತ್ತು ಬೆಳಗಾವಿ ತಲಾ 6, ಚಾಮರಾಜನಗರ 08, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರಲ್ಲಿ ತಲಾ 03, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 01, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲಿ 03, ಮೈಸೂರು 10, ತುಮಕೂರು 14 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಇಂದು 257 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ ಓರ್ವ ಸೋಂಕಿಗೆ ಬಲಿಯಾಗಿದ್ದಾನೆ.…

Read More