Subscribe to Updates
Get the latest creative news from FooBar about art, design and business.
Author: kannadanewsnow09
ಮುಂಬೈ: ಮನೆಗೆ ನುಗ್ಗಿ ದುಷ್ಕರ್ಮಿಯೊಬ್ಬನಿಂದ ಚಾಕು ಇರಿತಕ್ಕೆ ಒಳಗಾಗಿದ್ದಂತ ನಟ ಸೈಫ್ ಆಲಿಖಾನ್ ಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆನ್ನಿನಲ್ಲಿ ಹೊಕ್ಕಿದ್ದಂತ ಚಾಕುವನ್ನು ಹೊರ ತೆಗೆಯಲಾಗಿತ್ತು. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತಂತೆ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ಸೈಫ್ ಆಲಿಖಾನ್ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡಗಡೆ ಮಾಡಲಾಗಿದೆ. ಅದರಲ್ಲಿ ಬೆನ್ನುಹುರಿಯಲ್ಲಿ ಇನ್ನೂ ಗಾಯ ಹಸಿಯಾಗಿದೆ. ಹೀಗಾಗಿ ಅವರು ಕೆಲ ದಿನಗಳವರೆಗೆ ರೆಸ್ಟ್ ತೆಗೆದುಕೊಳ್ಳುವ ಅವಶ್ಯಕತೆ ಇರುವುದಾಗಿ ತಿಳಿಸಿದೆ. ಸದ್ಯ ನಟ ಸೈಫ್ ಆಲಿಖಾನ್ ಚೇತರಿಸಿಕೊಳ್ಳುತ್ತಿದ್ದಾರೆ. ನಡೆದಾಡಲು ಯಾವುದೇ ತೊಂದರೆ ಇಲ್ಲ. ಆದ್ರೆ ಸೋಂಕಿನ ಭೀತಿ ಹಿನ್ನಲೆಯಲ್ಲಿ ನಡೆದಾದಂತೆ ಸಲಹೆ ನೀಡಿದ್ದೇವೆ ಎಂಬುದಾಗಿ ಹೇಳಿದೆ. ಇದೀಗ ನಟ ಸೈಫ್ ಆಲಿಖಾನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡ ಕಾರಣ ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಹಣ್ಣಿನ ಜ್ಯೂಸ್ ಸೇವಿಸುವುದಕ್ಕೆ ತಿಳಿಸಲಾಗಿದೆ. ವಿಶ್ರಾಂತಿ ಅಗತ್ಯವಿದೆ ಎಂಬುದಾಗಿ ಮುಂಬೈನ…
ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂಗೆ ತುಂಬಲು ತಂದಿದ್ದಂತ ಹಣವನ್ನು ದೋಚಿ ದರೋಡೆಕೋರರು ಪರಾರಿಯಾಗಿದ್ದ ಘಟನೆ ಹಸಿರಾಗಿರೋ ಮುನ್ನವೇ, ಮಂಗಳೂರಲ್ಲಿ ಇಂತದ್ದೇ ಘಟನೆ ನಡೆದಿದೆ. ಈ ದರೋಡೆ ಪ್ರಕರಣದಲ್ಲಿ ಬರೋಬ್ಬರಿ 10 ರಿಂದ 12 ಕೋಟಿಯಷ್ಟು ಚಿನ್ನ, ಹಣ ದೋಚಿ ಪರಾರಿಯಾಗಿರೋದಾಗಿ ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಂಗಳೂರಿನ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿರುವಂತ ಐವರು ದರೋಡೆಕೋರರ ತಂಡವು, ಬಂದೂಕು ತೋರಿಸಿ ಹಾಡಹಗಲೇ ಚಿನ್ನ, ಒಡವೆ ನಗದು ದೋಚಿ ಪರಾರಿಯಾಗಿದೆ. ಫಿಯೇಟ್ ಕಾರಿನಲ್ಲಿ ಬಂದಂತ ಐವರ ತಂಡ ಈ ಕೃತ್ಯವೆಸಗಿ ಪರಾರಿಯಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನೂ ಬ್ಯಾಂಕ್ ನಲ್ಲಿ ಪೊಲೀಸರಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರಾಥಮಿಕ ಮಾಹಿತಿಯಂತೆ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಂದ ಬರೋಬ್ಬರಿ 10 ರಿಂದ 12 ಕೋಟಿ ಮೌಲ್ಯದ ಚಿನ್ನ, ನಗದನ್ನು ದರೋಡೆಕೋರರು…
ಮಂಗಳೂರು: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ರಿಪೇರಿ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಅರ್ಜಿಯನ್ನು ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು https://forms.gle/9LUE1UvHMAv21vRS7 ಲಿಂಕ್ ಕ್ಲಿಕ್ ಮಾಡುವ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಗೆ ಕರೆ ಮಾಡಿ ಪಡೆಯಬಹುದು. ಇಲ್ಲವೇ ಉಜಿರೆಯ ರುಡ್ ಸೆಟ್ ಸಂಸ್ಥೆಯ…
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ.…
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ…
ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂಗೆ ತುಂಬಲು ತಂದಿದ್ದಂತ ಹಣವನ್ನು ದೋಚಿ ದರೋಡೆಕೋರರು ಪರಾರಿಯಾಗಿದ್ದ ಘಟನೆ ಹಸಿರಾಗಿರೋ ಮುನ್ನವೇ, ಮಂಗಳೂರಲ್ಲಿ ಇಂತದ್ದೇ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿರುವಂತ ಐವರು ದರೋಡೆಕೋರರ ತಂಡವು, ಬಂದೂಕು ತೋರಿಸಿ ಹಾಡಹಗಲೇ ಚಿನ್ನ, ಒಡವೆ ನಗದು ದೋಚಿ ಪರಾರಿಯಾಗಿದೆ. ಫಿಯೇಟ್ ಕಾರಿನಲ್ಲಿ ಬಂದಂತ ಐವರ ತಂಡ ಈ ಕೃತ್ಯವೆಸಗಿ ಪರಾರಿಯಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು: ದಿನಾಂಕ 18.01.2025 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಸ್ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ 1ನೇ ಕ್ರಾಸ್, ಎ.ಎಂ. ಲೇನ್, ಕಲಾಸಿಪಾಳ್ಯ ಮುಖ್ಯ ರಸ್ತೆ, ಎಂಟಿಬಿ ರಸ್ತೆ, ಕುಂಬಾರ ಗುಂಡಿ ರಸ್ತೆ, ಶಿವಾಜಿ ರಸ್ತೆ, ಸಿಟಿ ಮರ್ಕೆಟ್ ಕಾಂಪ್ಲೆಕ್ಸ್, ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಗ್ರೇನ್ ಬಜಾರ್ ರಸ್ತೆ, ನಗರತ್ ಪೇಟೆ, ತಿಗಳರಪೇಟೆ, ಎನ್, ಆರ್ ರಸ್ತೆ, ಒಟಿಸಿ ರಸ್ತೆಯ ಭಾಗ, ಪಿಸಿ ಲೇನ್, ಪಿಪಿ ಲೇನ್, ಊಸ್ಮಾನ್ ಖಾನ್ ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ. ಎಸ್ಜೆಪಿ ಪರ್ಕ್, ಬಸಪ್ಪ ವೃತ್ತ,…
ಬೆಂಗಳೂರು: ರಾಜ್ಯ ಸರ್ಕಾರದಿದಂ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಸ್ತೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ ಎಂದಿದೆ. ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿತ್ತು. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದಿದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಯೋಜನೆ) ಅವರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ) ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್ನಲ್ಲಿ ದಾಖಲಿಸಬೇಕಾಗಿದೆ ಎಂದಿದ್ದಾರೆ. ಈ ಕುರಿತು ಈಗಾಗಲೇ ಉಲ್ಲೇಖ(5)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಮುಂದುವರೆದು ಈ ಮೊದಲು ಆನ್-ಲೈನ್ ಪೋರ್ಟ್ಲ್ನಲ್ಲಿ 01 ಯು-ಡೈಸ್…
ಹೈದರಾಬಾದ್: ಬೀದರ್ ನಲ್ಲಿ ಇಂದು ಬೆಳಿಗ್ಗೆ ಹಾಡಹಗಲೇ ಎಟಿಎಂಗೆ ಹಣ ತುಂಬುತ್ತಿದ್ದಂತ ವ್ಯಾನ್ ಮೇಲೆ ಗುಂಡಿನ ದಾಳಿ ನಡೆಸಿ, ಇಬ್ಬರನ್ನು ಕೊಂದು, 83 ಲಕ್ಷ ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಹೈದರಾಬಾದ್ ನಲ್ಲಿ ಖಾಸಗಿ ಬಸ್ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಕೋರರು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಬೀದರ್ ನಲ್ಲಿ 83 ಲಕ್ಷ ಹಣ ದರೋಡೆ ಮಾಡಿಕೊಂಡು ಹೈದರಾಬಾದ್ ಗೆ ತೆರಳಿದ್ದಂತ ದರೋಡೆಕೋರರು, ಖಾಸಗಿ ಬಸ್ ಟಿಕೆಟ್ ಖರೀದಿಸಿ ಹಣ ಸಹಿತ ಅದರಲ್ಲಿ ಕುಳಿತಿದ್ದರು. ಈ ವೇಳೆಯಲ್ಲಿ ಖಾಸಗಿ ಬಸ್ ಮ್ಯಾನೇಜರ್ ಪ್ರಯಾಣಿಕರ ಬ್ಯಾಗ್ ಚೆಕ್ ಮಾಡುವಾಗ ಬೀದರ್ ಶೂಟೌಟ್ ದರೋಡೆಕೋರರು ಅವರ ಮೇಲೆ ಫೈರಿಂಗ್ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಟ್ರಾವೆಲ್ಸ್ ಮ್ಯಾನೇಜರ್ ಜಹಾನ್ ಮೇಲೆ ಗುಂಡಿನ ದಾಳಿ ನಡೆಸಿ ಹಣ ಸಮೇತ ಸ್ಥಳದಿಂದ ಪರಾರಿಗಾಯಿಗಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಬೀದರ್ ನಿಂದ ಹಣ ದೋಚಿ ಪರಾರಿಯಾಗಿದ್ದಂತ ದರೋಡೆಕೋರರು ಹೈದರಾಬಾದ್ ಗೆ ತೆರಳಿದ್ದರು. ಈ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕದ ಪೊಲೀಸರು…













