Author: kannadanewsnow09

ಸನಾತನ ಹಿಂದೂ ಧರ್ಮದಲ್ಲಿ ಬಹುತೇಕ ಆಚರಣೆಗಳು, ಸಂಪ್ರದಾಯಗಳು ಪ್ರಕೃತಿ, ಖಗೋಳದೊಂದಿಗೆ ಬೆಸೆದುಕೊಂಡಿವೆ. ಈ ಪೂಜಾ ವಿಧಿ, ಧಾರ್ಮಿಕ ಕೈಂಕರ್ಯಗಳಿಗೆ ಅದರದ್ದೇ ಆದ ನಿಯಮಾವಳಿಗೂ ಇವೆ. ಅಂತೆಯೇ, ದಿಕ್ಕುಗಳಿಗೆ ಸಂಬಂಧಿಸಿದಂತೆಯೂ ಸಾಕಷ್ಟು ನಂಬಿಕೆ, ನಿಯಮಗಳನ್ನು ಶ್ರದ್ಧೆ ಭಕ್ತಿಯಿಂದ ಪಾಲಿಸಿಕೊಂಡು ಬರಲಾಗುತ್ತದೆ. ನಿರ್ದಿಷ್ಟ ದಿಕ್ಕಿನಲ್ಲಿ ಒಂದಷ್ಟು ಧಾರ್ಮಿಕ ಕಾರ್ಯಗಳನ್ನು ಮಾಡಬೇಕು ಎಂಬ ನಿಯಮವಿದೆ. ಹೀಗೆ ಮಾಡಿದರೆ ಮಾತ್ರ ಅದರ ಶುಭ ಫಲ ಸಿಗುತ್ತದೆ ಎಂಬುದು ನಂಬಿಕೆ. *ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ದಶ ದಿಕ್ಕುಗಳು ಇವೆ. ಅಂದರೆ, ನಾಲ್ಕು ಮುಖ್ಯ ದಿಕ್ಕುಗಳು, ನಾಲ್ಕು ಉಪ ದಿಕ್ಕುಗಳು ಮತ್ತು…

Read More

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮದ್ದೂರು ತಾಲೂಕು ಘಟಕಕ್ಕೆ ಮಂಗಳವಾರ ಚುನಾವಣೆ ಜರುಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಶಿವನಂಜಯ್ಯ ಅವಿರೋಧವಾಗಿ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆಗೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ವಿವಿಧ ಸ್ಥಾನಗಳಿಗೆ ಪ್ರತಿಸ್ಪರ್ಧಿಯಾಗಿ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಶಿವನಂಜಪ್ಪ, ಉಪಾಧ್ಯಕ್ಷರಾಗಿ ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಚಕ್ರಪಾಣಿ, ಕಾರ್ಯದರ್ಶಿಯಾಗಿ ವೆಂಕಟೇಶ್, ಖಜಾಂಚಿಯಾಗಿ ನಂದೀಶ್ ಅವರುಗಳು ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಇದೀಗ ಆಯ್ಕೆಯಾದವರು ಸಂಘದ ಎಲ್ಲಾ ಸದಸ್ಯರನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು. ಚುನಾವಣೆಯೇ ನಮ್ಮ ಧ್ಯೇಯವಲ್ಲ, ಅದು ನೆಪ ಮಾತ್ರ ಆದರೆ ಅದನ್ನೇ ಯಾರೂ ಮನದಲ್ಲಿಟ್ಟುಕೊಳ್ಳಬಾರದು ಎಂದು ಸಲಹೆ ನೀಡಿದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಉಪಾಧ್ಯಕ್ಷ ಚಿನಕುರಳಿ ಲೋಕೇಶ್ ಕಾರ್ಯನಿರ್ವಹಿಸಿದರು. ಇದೇ ವೇಳೆ ರಾಜ್ಯ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ್, ರವಿ ಸಾವಂಧಿಪುರ, ನಾಗಮಂಗಲ ಮಂಜುನಾಥ್, ಪುಟ್ಟಸ್ವಾಮಿ…

Read More

ಬಾಂಗ್ಲಾದೇಶ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆಯ ಸರಣಿ ಮುಂದುವರೆದಿದೆ. ಇಂದು ಮತ್ತೊಬ್ಬ ಹಿಂದೂ ವ್ಯಾಪಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮತ್ತೊಬ್ಬ ಹಿಂದೂ ವ್ಯಾಪಾರಿಯನ್ನು ದುರುಳರು ಕೊಂದು ಹಾಕಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರೂ ಬಿಡದೇ ಹಂತಕರು ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿಯನ್ನು ಮುಂದುವರೆಸಲಾಗಿದೆ. ಈ ಹಿಂದೆ ಜೀವಂತವಾಗಿಯೇ ಹಿಂದೂಗಳನ್ನು ಸುಟ್ಟಿ ಹಾಕಲಾಗಿತ್ತು. ಈಗ ಮಾರಕಾಸ್ತ್ರಗಳಿಂದ ಕೊಚ್ಚಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. https://kannadanewsnow.com/kannada/court-grants-bail-to-mp-pappu-yadav/

Read More

ನವದೆಹಲಿ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಸಂಸದ ಪಪ್ಪು ಯಾದವ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 31 ವರ್ಷಗಳ ಹಳೇ ಕೇಸ್ ನಲ್ಲಿ ಸಂಸದ ಪಪ್ಪು ಯಾದವ್ ಬಂಧಿಸಲಾಗಿತ್ತು. 1995ರ ಪೋರ್ಜರಿ ಕೇಸಲ್ಲಿ ಪಪ್ಪು ಯಾದವ್ ಅವರನ್ನು ಪೊಲೀಸರು ಕಳೆದ ಶುಕ್ರವಾರ ರಾತ್ರಿ ಅರೆಸ್ಟ್ ಮಾಡಿದ್ದರು. ಬಿಹಾರದ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದರಾಗಿದ್ದಂತ ಪಪ್ಪು ಯಾದವ್ ಆ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/a-sinful-mother-killed-her-11-year-old-daughter-for-telling-her-to-stop-drinking/

Read More

ಯಾದಗಿರಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಪಾಪಿ ಕೊಂದಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ರಾಜೀವ್ ಗಾಂಧಿ ನಗರದಲ್ಲಿ ಎಣ್ಣೆ ಕುಡಿಯೋದು ಬಿಡು ಎಂದಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಮಗಳನ್ನೇ ಕತ್ತು ಹಿಸುಕಿ ಕೊಂದಿರುವಂತ ಘಟನೆ ನಡೆದಿದೆ. ಕೊಲೆಯಾದಂತ ಬಾಲಕಿಯನ್ನು ಪ್ರತಿಭಾ(11) ಎಂಬುದಾಗಿ ಗುರುತಿಸಲಾಗಿದೆ. ಆಕೆಯ ತಾಯಿ ನಿರ್ಮಲಾ ಎಂಬುವರೇ ಕೊಲೆ ಮಾಡಿದಂತ ಪಾಪಿ ತಾಯಿಯಾಗಿದ್ದಾಳೆ. ಪುತ್ರಿಯನ್ನು ಕೊಂದಿದ್ದಂತ ತಾಯಿ ನಿರ್ಮಲಾ ಮಾತ್ರ ಕತೆ ಕಟ್ಟಿದ್ದಳು. ಜ್ಯೂಸ್ ಕುಡಿಯೋದಕ್ಕೆ ಹಣ ನೀಡಿಲ್ಲ ಎಂಬುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಾಗಿ ಹೇಳಿದ್ದಳು. ಆದರೇ ಮದ್ಯ ಸೇವನೆ ಮಾಡಿ ಹಣ ಖರ್ಚು ಮಾಡಿದರೇ ನಮಗೆ ಊಟಕ್ಕೆ ತೊಂದರೆಯಾಗುತ್ತೆ. ನೀನು ಕುಡಿದು ಸತ್ತರೇ ನಮ್ಮನ್ನು ನೋಡಿಕೊಳ್ಳೋರು ಯಾರು? ಅಮ್ಮ ಕುಡಿಯಬೇಡ. ಕುಡಿಯೋದು ಬಿಡು ಅಂತ ಪುತ್ರಿ ಪ್ರತಿಭಾ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡು ತಾಯಿ ನಿರ್ಮಲಾ ಕತ್ತು ಹಿಸುಕಿ ಕೊಲೆಗೈದಿರೋದು ತನಿಖೆಯ ವೇಳೆಯಲ್ಲಿ ಬಯಲಾಗಿದೆ. ಯಾದಗಿರಿ ನಗರ ಠಾಣೆಯ ಪೊಲೀಸರು…

Read More

ಬೆಂಗಳೂರು: ಕೆಪಿಟಿಸಿಎಲ್ ನಿಂದ ಹೆಬ್ಬಾಳ ವಿಭಾಗದ 66/11 ಕೆವಿಎ ಸಹಕಾರನಗರ ಕೇಂದ್ರದಲಿಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2026 (ಬುಧವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಜಯಸರ‍್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸರ‍್ಯೋದಯ ನಗರ. 2 , ಅಗ್ರಹಾರ…

Read More

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನ ಉಂಟಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬಯಲಿನಲ್ಲಿ ಕಾಲ ಕಳೆಯುವಂತಾದ ಘಟನೆ ವರದಿಯಾಗಿದೆ. ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವ ಉಂಟಾಗಿದೆ. ಮನೆಯಲ್ಲಿದ್ದಂತ ಪಾತ್ರೆಗಳು ಕೆಳಗೆ ಬಿದ್ದು ಸದ್ದು ಮಾಡಿದ್ದಾವೆ. ಕಿಟಕಿ-ಬಾಗಿಲು ಗಳು ಕೂಡ ಅಲುಗಾಡಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಏಕಾಏಕಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದರಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕೆಲ ಕ್ಷಣ ಬಯಲಿನಲ್ಲಿ ಆತಂಕ, ಭಯದಿಂದ ಕಾಲ ಕಳೆದಿದ್ದಾರೆ ಎನ್ನಲಾಗಿದೆ. ಭೂಕಂಪ ಎಷ್ಟು ಪ್ರಮಾಣದಲ್ಲಿ ಆಗಿದೆ ಎನ್ನುವ ಬಗ್ಗೆ ಕೆ ಎಸ್ ಎನ್ ಡಿ ಎಂ ಸಿ ಮಾಹಿತಿ ನೀಡಿದಾಗಲೇ ಖಚಿತವಾಗಬೇಕಿದೆ. https://kannadanewsnow.com/kannada/kengal-hanumantaiyya-was-an-honest-passionate-politician-who-saw-the-state-chief-minister-siddaramaiah/

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿ ಗೆ ಸಲ್ಲುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು…

Read More

ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ” ಎಂದರು. ಪ್ರತಿದಿನವೂ ಶುಭದಿನ: ಒಂದಷ್ಟು ಕಾಂಗ್ರೆಸ್ ನಾಯಕರು ನೀವು ಶುಭಸುದ್ದಿ ತರುವಿರಿ ಎಂದಿರುವ ಬಗ್ಗೆ ಕೇಳಿದಾಗ, “ಪ್ರತಿದಿನವೂ ನನಗೆ ಶುಭದಿನ, ಶುಭ ಜೀವನ, ಶುಭ ಪ್ರಾರಂಭ, ಯಶಸ್ಸಿನ ದಿನ, ಪ್ರತಿದಿನವೂ ಕಷ್ಟದ ದಿನವೇ. ಪ್ರತಿದಿನವೂ ಏನೂ ಸುಲಭವಾಗಿ ಇರುವುದಿಲ್ಲ. ಜನರ ಕಷ್ಟಗಳನ್ನು ಬಗೆಹರಸಿಬೇಕಾದರೆ ಕಷ್ಟ ಕಾರ್ಪಣ್ಯಗಳು, ಅಡಚಣೆಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇ ಬೇಕು.…

Read More

ಬೆಂಗಳೂರು : ಸಾಲ ಕೊಡಿಸುವ ನೆಪದಲ್ಲಿ ನೂರಾರು ಉದ್ಯಮಿಗಳಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಪೀಟರ್ ಕ್ಯಾಡಿ ಎಂಬುವರ ಮನೆ ಮೇಲೆ ಸಿಐಡಿ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಫುಲಿಕೇಶಿನಗರದ ಕೋಲ್ಸ್ ಪಾರ್ಕ್ ಸಮೀಪ ಇರುವ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಅಧಿಕಾರಿಗಳ ತಂಡ ಬೆಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಸುಮಾರು ಹದಿನೈದು ವರ್ಷಗಳಿಂದ ಉದ್ಯಮಿಗಳಿಗೆ ವಂಚಿಸಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡಿರುವ ಪೀಟರ್ ಕ್ಯಾಡಿ ವಂಚನೆಗೆ ಓಳಗಾದವರ ವಿರುದ್ಧವೇ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿ ನಾಟಕವಾಡುತ್ತಿದ್ದರು ಎನ್ನಲಾಗಿದೆ.. ಈತನಿಂದ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ವಂಚನೆಗೆ ಒಳಗಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳ ಮೂಲಗಳ ಮಾಹಿತಿಯಾಗಿದೆ. ಸಾಲ ಅಗತ್ಯ ಇರುವವರಿಗೆ ಗಾಳ ಹಾಕುತ್ತಿದ್ದ ಪೀಟರ್ ಕ್ಯಾಡಿ, ತಾನು ಬ್ಯಾಂಕ್ ಬಡ್ಡಿಗಿಂತಲೂ ಕಡಿಮೆಗೆ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸುತ್ತಿದ್ದ. ಅರಂಭದಲ್ಲಿ ಈತ ಕೋಟ್ಯಂತರ ರೂಪಾಯಿ ಮೊತ್ತದ ಡಿಡಿಯನ್ನು ಉದ್ಯಮಿಗಳ ಹೆಸರಿನಲ್ಲಿ ತೆಗೆದುಕೊಂಡು ತೋರಿಸುತ್ತಿದ್ದ. ಪೀಟರ್…

Read More