Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್), ನೇರಳೆ ಮಾರ್ಗದ ಹಾಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಜು 22, 2025ರಂದು ಭಾನುವಾರ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಮೆಟ್ರೋ ಸೇವೆಗಳನ್ನು, ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗು ತ್ತಿದೆ. ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಹಾಗೂ ಹಸಿರು ಮಾರ್ಗದ ರೆಸ್ಮ್ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಿಗ್ಗೆ 7:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ. ಬಿಎಂಆರ್‌ಸಿಎಲ್ ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವತಯಾರಿಗೆ ಯೋಜಿಸಿಕೊಳ್ಳುವಂತೆ ವಿನಂತಿಸಿಕೊಳ್ಳುತ್ತದೆ. ಸಾರ್ವಜನಿಕರ ತಿಳುವಳಿಕೆ ಮತ್ತು ಸಹಕಾರವನ್ನು ಬಿಎಂಆರ್‌ಸಿಎಲ್ ಪ್ರಾಮಾಣಿಕವಾಗಿ ಗೌರವಿಸುತ್ತದೆ. ಸಾರ್ವಜನಿಕ ಮತ್ತು ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ನಿಮ್ಮ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಪತ್ರಿಕಾ ಮತ್ತು ಮಾಧ್ಯಮವನ್ನು ವಿನಂತಿಸಲಾಗಿದೆ.…

Read More

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ವಿವಿ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 26 ವರ್ಷಗಳ ಹಿಂದೆ ಬಡವರಿಗೆ ಆರೋಗ್ಯ ಚಿಕಿತ್ಸಾ ವೆಚ್ಚ ಭರಿಸುವುದು ಬಹುದೊಡ್ಡ ಸವಾಲು ಎಂದು ಚಿಂತಿತರಾಗಿದ್ದರು. ಆ ಸವಾಲನ್ನು ಇದೀಗ ಕೇಂದ್ರ ಸರ್ಕಾರ ಸಾಕಾರಗೊಳಿಸಿದೆ. 60 ಕೋಟಿ ಜನರಿಗೆ ಪ್ರಧಾನಮಂತ್ರಿ ಆಯುಷ್ಮಾನ್ ಆರೋಗ್ಯ…

Read More

ಬೆಂಗಳೂರು: “ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ” ಎಂದು ವ್ಯಂಗ್ಯವಾಡಿದರು. ಯಾರ ಅವಕಾಶವನ್ನು ನಾವು ಕಿತ್ತುಕೊಂಡಿಲ್ಲ “ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ” ಎಂದು ಡಿಸಿಎಂ ಸ್ಪಷ್ಟನೆ ನೀಡಿದರು. “ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ 10 ರಷ್ಟು…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರೌಢ ಶಾಲೆಯಲ್ಲಿ ತಾಯಂದಿರ ಸಭೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿರುವಂತ ಕಾರ್ಯಕ್ರಮವ ಯಶಸ್ವಿಯಾಗಿ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಉಳವಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 180 ತಾಯಂದಿರು ಭಾಗವಹಿಸಿದ್ದರು. ಮಕ್ಕಳು ಸುರಕ್ಷತೆಯ ಬಗ್ಗೆ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಾಸ್ತವಿಕವಾಗಿ ಮಾತನಾಡಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿಗಳವರ ಮಾರ್ಗದರ್ಶನದಲ್ಲಿ ನಡೆದ ಸಭಾ ನಡಾವಳಿಯ ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಲಾಯಿತು. ಈ ವೇಳೆಯಲ್ಲಿ ಉಳವಿ ಪ್ರಾಥಮಿಕ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಗುರುಕಿರಣ್ ಮಾತನಾಡಿ ಮಕ್ಕಳ ಕಾಯಿದೆ ಹಾಗೂ ಮಕ್ಕಳ ಸಹಾಯವಾಣಿ 1098ರ ಬಗ್ಗೆ ಮಕ್ಕಳ ತಾಯಂದಿರಿಗೆ, ವಿದ್ಯಾರ್ಥಿಗಳಿಗೆ ಮಾಹಿತಿ ಹಂಚಿಕೊಂಡರು. ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಶ್ರುಶೂಷಾಧಿಕಾರಿ ನಿರ್ಮಲ ಅವರು ಮಕ್ಕಳಿಗೆ ವೈಯಕ್ತಿಕ ಸ್ವಚ್ಚತೆ, ಆರೋಗ್ಯ, ಸಮಾಜಿಕ ನಡಾವಳಿಕೆಯ ಬಗ್ಗೆ ತಿಳಿಸಿಕೊಟ್ಟರು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ…

Read More

ಬೆಂಗಳೂರು: ನಗರದ ನಿಮ್ಯಾನ್ಸ್, ಜಯದೇವ ಮತ್ತು ಪದ್ಮನಾಭನಗರ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 21 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 17.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಿಮ್ಯಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾಡðನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟಿರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವೆ, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ ಯಂಡ್, ಎಬಿಸಿಡಿ ರಸ್ತೆ, ಬಿಹೆಚ್ಇಎಲ್ ಲೇಔಟ್, ಎಸ್ ಆರ್ ಕೆ ಗಾಡðನ್, ಎನ್ಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಸುತ್ತಮುತ್ತಲ ಪ್ರದೇಶಗಳು, ಎನ್ ಎಸ್, ಪಾಳ್ಯ ಮೇನ್ ರೋಡ್, ಜಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಅವರು; ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು. ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು…

Read More

ಬೆಂಗಳೂರು : ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. 2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10…

Read More

ಬೆಂಗಳೂರು : ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇಂದು ರಸ್ತೆ ಬದಿಯ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರಾಶಾಯಿ ಆಗುತ್ತವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಲಾಗಿರುವ ಕಾಂಕ್ರೀಟ್, ಕಲ್ಲಿನ ಚಪ್ಪಡಿ, ಟೈಲ್ಸ್ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವೂ ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನೇ ಹೊರಡಿಸಿದೆ ಎಂದರು. ನಿನ್ನೆ ಬಿಬಿಎಂಪಿ…

Read More

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

Read More

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳನ್ನು ಸಿಐಡಿಗೆ ತನಿಖೆಗಾಗಿ ವರ್ಗಾಯಿಸಿದಾಗ ಈ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಡೈರೆಕ್ಟರ್ ಜನರಲ್ ಮುತ್ತು ಇನ್ಸ್ ಪೆಕ್ಟರ್ ಜನರಲ್ ಆಫ್‌ ಪೊಲೀಸ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಐಡಿಯು ಪ್ರಮುಖ ಅಪರಾಧ ತನಿಖಾ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆಯಿಂದ ಪ್ರಕರಣಗಳನ್ನು ತನಿಖೆಗಾಗಿ ಕರ್ನಾಟಕ ಸರ್ಕಾರ, ಸರ್ವೋಚ್ಛ ನ್ಯಾಯಾಲಯ ಅಥವಾ ಡಿಜಿ&ಐಜಿಪಿ ಕಛೇರಿಯಿಂದ ಆದೇಶವಾದ ಉಚ್ಛನ್ಯಾಯಾಲಯಗಳು ಅಥವಾ ಪರಿಣಾಮವಾಗಿ ವರ್ಗಾವಣೆಗೊಳ್ಳುತ್ತವೆ. ಈ ಹಿನ್ನಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಸಿಐಡಿಗೆ ಪ್ರಕರಣದ ತನಿಖೆಯು ವರ್ಗಾವಣೆಯಾದಾಗ ಸ್ಥಳೀಯ ಹಾಗೂ ಸಿಐಡಿ ತನಿಖಾಧಿಕಾರಿಗಳು ಈ ಕೆಳಗಿನ ಕಾರ್ಯವಿಧಾನಗಳನ್ನು ತಪ್ಪದೇ ಅಳವಡಿಸಿಕೊಳ್ಳಬೇಕು ಎಂದಿದ್ದಾರೆ. ಸ್ಥಳೀಯ ತನಿಖಾಧಿಕಾರಿಗಳು ಕೈಗೊಳ್ಳಬೇಕಾದ ಕಾರ್ಯವಿಧಾನಗಳು:- 1) ತಮ್ಮ ಘಟಕದಲ್ಲಿ ದಾಖಲಾಗಿ ತನಿಖೆಯಲ್ಲಿರುವ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದರ ಬಗ್ಗೆ ಪೊಲೀಸ್‌ ಪ್ರಧಾನ ಕಛೇರಿಯಿಂದ ಸೂಚನೆ ಅಥವಾ ಆದೇಶ ಸ್ವೀಕರಿಸಿದ ಘಟಕದ ಮುಖ್ಯಸ್ಥರು, ಕೂಡಲೇ ಸಂಬಂಧಿಸಿದ ತನಿಖಾಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಜೊತೆಗೆ ಆ ತನಿಖಾಧಿಕಾರಿಗೆ ತನಿಖೆಯಲ್ಲಿ…

Read More