Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಶೀಘ್ರವೇ ಗುಣಮುಖರಾಗಿ ಮನೆಗೆ ಮರಳಲಿದ್ದಾರೆ ಅಂತ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸುದ್ದಿಗೋಷ್ಠಿಯ ಸಂದರ್ಭದಲ್ಲೇ ಮೂಗಿನಲ್ಲಿ ರಕ್ತಸ್ತ್ರಾವ ಆಗಿತ್ತು. ರಕ್ತ ಸೋರುತ್ತಿದ್ದರೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಲಿಂದ ಮರಳಿದ್ದರು. ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಇಲ್ಲದೇ ಹೀಗೆ ಆಗಿದೆ. ವಿಶ್ರಾಂತಿ ಪಡೆದುಕೊಳ್ಳದ ಕಾರಣ, ರಕ್ತಸ್ತ್ರಾವ ಆಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಆತಂಕ ಪಡುವಂತ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ, ಈ ನಾಡಿನ ಜನತೆಯ ಆಶೀರ್ವಾದವಿದೆ. ಏನೂ ಆಗಿಲ್ಲ. ಆರೋಗ್ಯವಾಗಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆಂತಕ ಪಡುವ…
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ನಗರದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು. 10ರಂದು ಶನಿವಾರ ಸಮಾರೋಪ ನಡೆಯಲಿದೆ; ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ ಎಂದು ತಿಳಿಸಿದರು. ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರದ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ…
‘ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ’ ಪರಿಚಯಿಸಲಿದೆ ಕೇಂದ್ರ: ಇದು ‘ಫಾಸ್ಟ್ ಟ್ಯಾಗ್’ಗಿಂತ ಹೇಗೆ ಭಿನ್ನ? ಇಲ್ಲಿದೆ ಮಾಹಿತಿ
ನವದೆಹಲಿ: ಕೇಂದ್ರ ಸರ್ಕಾರವು ( Central government ) ಪ್ರಸ್ತುತ ವಿಧಾನವನ್ನು ಬದಲಿಸಿ ಹೊಸ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ( Satellite-Based Toll Collection System ) ಪರಿಚಯಿಸಲು ಸಜ್ಜಾಗಿದೆ. ಈ ಹೊಸ ವ್ಯವಸ್ಥೆಯು ಭಾರತದ ರಾಷ್ಟ್ರೀಯ ಹೆದ್ದಾರಿಗಳನ್ನು ಯುನೈಟೆಡ್ ಸ್ಟೇಟ್ಸ್ನಂತೆಯೇ ಮಾಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (Global Navigation Satellite System -GNSS) ಅನ್ನು ಬಳಸುತ್ತದೆ ಮತ್ತು ಆರಂಭದಲ್ಲಿ ಆಯ್ದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ( National Highways ) ಜಾರಿಗೆ ತರಲಾಗುವುದು. ಈ ವ್ಯವಸ್ಥೆಯಡಿ, ಪ್ರಯಾಣಿಸಿದ ದೂರವನ್ನು ಆಧರಿಸಿ ಟೋಲ್ ಶುಲ್ಕವನ್ನು ನೇರವಾಗಿ ಚಾಲಕನ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸಲಾಗುತ್ತದೆ. ಈ ವಿಧಾನವು ವೆಚ್ಚ-ಪರಿಣಾಮಕಾರಿ ಮತ್ತು ಪರಿಣಾಮಕಾರಿಯಾಗಿರುತ್ತದೆ, ಪ್ರಯಾಣಿಕರಿಗೆ ಸಮಯ ಮತ್ತು ಇಂಧನವನ್ನು ಉಳಿಸುತ್ತದೆ ಎಂದು ಗಡ್ಕರಿ ಒತ್ತಿ ಹೇಳಿದರು. ವಿಂಡ್ಶೀಲ್ಡ್ನಲ್ಲಿ ಸ್ಟಿಕ್ಕರ್ ಓದಲು ಆರ್ಎಫ್ಐಡಿ ಸ್ಕ್ಯಾನರ್ಗಳಿಗಾಗಿ ವಾಹನಗಳು ಟೋಲ್…
ಚಿಕ್ಕಮಗಳೂರು: ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡುವ ಬಗ್ಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಪರಿಹಾರ ವಿತರಿಸಲಾಗುವುದು,” ಎಂದರು. “ಪ್ರಸ್ತುತ ಮಳೆಯಿಂದ ಕುಸಿದ ಮನೆಗಳಿಗೆ ತಕ್ಷಣದ ಪರಿಹಾರವಾಗಿ 1.20 ಲಕ್ಷ ರು. ನೀಡಲಾಗುತ್ತಿದೆ. ಇದರ ಜತೆಗೆ ಇನ್ನೂ 3.80 ಲಕ್ಷ ರೂ. ಪರಿಹಾರ ಒದಗಿಸಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು,” ಎಂದು ತಿಳಿಸಿದರು. ಮಲೆನಾಡು, ಕರಾವಳಿಗೆ ಹೆಚ್ಚಿನ ಗ್ಯಾಂಗ್…
ನವದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ( National Testing Agency-NTA)ಯಿಂದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ, ಸಿಯುಇಟಿ ಯುಜಿ 2024 ಫಲಿತಾಂಶವನ್ನು ( CUET UG 2024 result ) ಇಂದು exams.nta.ac.in ರಂದು ಬಿಡುಗಡೆ ಮಾಡಿದೆ. ಮೇ 15 ಮತ್ತು ಮೇ 29, 2024 ರ ನಡುವೆ ನಡೆದ ಸಿಯುಇಟಿ ಪದವಿಪೂರ್ವ ಪರೀಕ್ಷೆಗೆ 13 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷೆಯನ್ನು ಹೈಬ್ರಿಡ್ ಮೋಡ್ ನಲ್ಲಿ (ಪೆನ್ ಮತ್ತು ಪೇಪರ್ ಮತ್ತು ಸಿಬಿಟಿ ಮೋಡ್ ಎರಡೂ) ನಡೆಸಲಾಯಿತು. ಸ್ಕೋರ್ ಕಾರ್ಡ್ ಗಳು ಈಗ ಹೊರಬಂದಿವೆ. ಆನ್ಲೈನ್ನಲ್ಲಿ ಸ್ಕೋರ್ಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಆಗಬೇಕಾಗುತ್ತದೆ. ಸಿಯುಇಟಿ ಫಲಿತಾಂಶ 2024: ಆನ್ಲೈನ್ನಲ್ಲಿ ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ? ಸಿಯುಇಟಿ ಯುಜಿ ಅಧಿಕೃತ ವೆಬ್ಸೈಟ್ಗೆ ಹೋಗಿ exams.nta.ac.in/CUET-UG/ ಮುಖಪುಟದಲ್ಲಿ, ‘ಸಿಯುಇಟಿ ಯುಜಿ 2024 ಫಲಿತಾಂಶಗಳು’ ಲಿಂಕ್ ಅನ್ನು ಕ್ಲಿಕ್ ಮಾಡಿ ಮುಂದಿನ ಹಂತದಲ್ಲಿ, ಅಪ್ಲಿಕೇಶನ್ ಸಂಖ್ಯೆ…
ಬೆಂಗಳೂರು: ನಗರದಲ್ಲಿ ಇಂದು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಡುವ ಸಂಬಂಧ ನಡೆದಂತ ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆಯಲ್ಲಿ ಸುದ್ದಿಗೋಷ್ಠಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡೆಸಿದರು. ಈ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲೇ ಅವರ ಮೂಗಿನಿಂದ ರಕ್ತಸ್ತ್ರಾವ ಆಗಿರುವುದಾಗಿ ತಿಳಿದು ಬಂದಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೆಚ್.ಡಿ ಕುಮಾರಸ್ವಾಮಿ ಪ್ರಾರಂಭಿಸಿದಾಗ ಅವರ ಮುಗಿನಲ್ಲಿ ರಕ್ತ ಸೋರುವುದಕ್ಕೆ ಶರುವಾಯ್ತು. ಕೂಡಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದಂತ ಅವರು, ಅಲ್ಲಿಂದ ಆಸ್ಪತ್ರೆಗೆ ತೆರಳಿದ್ದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಇಂದಿನ ಈ ಸಭೆಯಲ್ಲಿ ಆಗಸ್ಟ್.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಅಕ್ರಮ ಖಂಡಿಸಿ ಪಾದಯಾತ್ರೆ ನಡೆಸುವಂತ ನಿರ್ಧಾರವನ್ನು ಕೈಗೊಳ್ಳಲಾಯಿತು. ಆಗಸ್ಟ್.10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭವನ್ನು ನಡೆಸೋದಕ್ಕೆ ನಿರ್ಧರಿಸಲಾಗಿದೆ. https://kannadanewsnow.com/kannada/muda-irregularities-bjp-jds-padayatra-to-begin-from-bengaluru-to-mysuru-from-aug-3/…
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ ನಡೆಸುವಂತ ನಿರ್ಧಾರವನ್ನು ಕಳೆದ ವಿಧಾನಮಂಡಳದ ಅಧಿವೇಶನದ ಸಂದರ್ಭದಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಸಂದರ್ಭದಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಆಗಸ್ಟ್.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆಯನ್ನು ಆರಂಭಿಸಲಿದ್ದಾರೆ. ಇಂದು ಈ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಮುಡಾ ಅಕ್ರಮ ಖಂಡಿಸಿ ಪಾದಯಾತ್ರೆಯನ್ನು ಮಾಡುವುದಕ್ಕೆ ನಿರ್ಧರಿಸಲಾಗಿದೆ. ಆಗಸ್ಟ್.3ರಿಂದ ಬಿಜೆಪಿ-ಜೆಡಿಎಸ್ ನಾಯಕರು ಸೇರಿ ಪಾದಯಾತ್ರೆಯನ್ನು ಬೆಂಗಳೂರಿನಿಂದ ಪ್ರಾರಂಭಿಸಲಾಗುತ್ತದೆ ಎಂದರು. ಆಗಸ್ಟ್.3ರಿಂದ ಪಾದಯಾತ್ರೆ ಆರಂಭಗೊಂಡು, ಆಗಸ್ಟ್.10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರಿನಲ್ಲಿ ನಡೆಯುವಂತ ಸಮಾರೋಪ ಸಮಾರಂಭದಲ್ಲಿ ಹಲವು ನಾಯಕರು ಭಾಗಿಯಾಗಲಿದ್ದಾರೆ ಎಂದರು. https://kannadanewsnow.com/kannada/womens-archery-team-in-action-in-quarterfinals/ https://kannadanewsnow.com/kannada/passengers-note-these-trains-will-be-cancelled-from-tomorrow-july-29-to-july-4/
ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ 2024ರ ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಬಿಲ್ಲುಗಾರಿಕೆ ತಂಡ ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದೆ. ಇದರ ನಡುವೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಅವರು ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತದ ಮೊದಲ ಪದಕವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮೊದಲ ದಿನ ನಿರಾಶಾದಾಯಕ ಪ್ರದರ್ಶನ ನೀಡಿದ ನಂತರ, ಭಾರತವು ಎರಡನೇ ದಿನದಂದು ಬಲವಾದ ಪುನರಾಗಮನವನ್ನು ಎದುರು ನೋಡುತ್ತಿದೆ. ಏಸ್ ಶೂಟರ್ ಮನು ಭಾರಕ್ ಅವರು ಮಹಿಳೆಯರ 10 ಮೀಟರ್ ಪಿಸ್ತೂಲ್ ಪದಕ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ, ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟಿದ್ದಾರೆ. ಮತ್ತೊಂದೆಡೆ, ಭಾರತದ ಪ್ರಮುಖ ಮಹಿಳಾ ಶಟ್ಲರ್ ಪಿ.ವಿ.ಸಿಂಧು ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಮಾಲ್ಡೀವ್ಸ್ನ ಫಾತಿಮತ್ ನಬಾಹಾ ಅಬ್ದುಲ್ ರಜಾಕ್ ವಿರುದ್ಧ ಆರಂಭಿಕ ಪಂದ್ಯದೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. https://kannadanewsnow.com/kannada/centre-has-not-done-injustice-to-karnataka-hd-kumaraswamy/ https://kannadanewsnow.com/kannada/bengaluru-and-karnataka-will-benefit-the-most-from-union-budget-nirmala-sitharaman/
ಬೆಂಗಳೂರು: ಈ ಬಾರಿಯ ಕೇಂದ್ರ ಬಜೆಟ್‍ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಶೋಧನೆ ಮತ್ತು ಅಭಿವೃದ್ಧಿ ನೆರವಿನಿಂದ ಬೆಂಗಳೂರಿಗೆ ಗರಿಷ್ಠ ಪ್ರಯೋಜನ ಸಿಗಲಿದೆ. ಖಾಸಗಿ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಗೂ ಇದರಿಂದ ಪ್ರಯೋಜನ ಲಭಿಸುತ್ತದೆ. ಕೃಷಿ ಕ್ಷೇತ್ರದ ಡಿಜಿಟಲ್ ಪಬ್ಲಿಕ್ ಇನ್‍ಫ್ರಾಸ್ಟ್ರಕ್ಚರ್ (ಡಿಪಿಐ) ಬಳಕೆಗೆ ಬೆಂಗಳೂರು ಗರಿಷ್ಠ ಕೊಡುಗೆ ನೀಡಲಿದೆ ಎಂದು ವಿವರಿಸಿದರು. ಬಾಹ್ಯಾಕಾಶ ಕೇಂದ್ರಕ್ಕೆ ದೊಡ್ಡ ಮೊತ್ತದ ನಿಧಿ (ವೆಂಚರ್ ಕ್ಯಾಪಿಟಲ್) ಕೊಟ್ಟಿದ್ದು, ಇಸ್ರೋ ಸಂಬಂಧಿತ ಕೆಲಸಗಳು ಇಲ್ಲಿಯೂ ನಡೆಯುತ್ತಿವೆ. ಇದು ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ನೆರವು ಕೊಡಲಿದೆ ಎಂದರು. ಸ್ಟಾರ್ಟಪ್‍ಗಳ ಮೇಲಿನ ಏಂಜೆಲ್ ಟ್ಯಾಕ್ಸ್ ರದ್ದು ಮಾಡಿದ್ದು, ಇದು ಗರಿಷ್ಠ ಸ್ಟಾರ್ಟಪ್‍ಗಳನ್ನು ಹೊಂದಿದ ಬೆಂಗಳೂರಿಗೆ ನೆರವು ಕೊಡಲಿದೆ. ಏಂಜೆಲ್ ಟ್ಯಾಕ್ಸ್ ಅನ್ನು ಯುಪಿಎ…