Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಹಾಜರಾತಿ ಕಡ್ಡಾಯ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇದು ಕನ್ನಡ ತಾಯಿಯ ಹಬ್ಬವಾಗಿದ್ದು, ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದ ಕೆಲಸಗಳು ಸುಸೂತ್ರವಾಗಿ ನಡೆಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು. ಸ್ವಾಗತ ಸಮಿತಿಯು ತಪ್ಪದಂತೆ ಕನ್ನಡಪರ ಸಂಘ ಸಂಸ್ಥೆ ಹಾಗೂ ಸಂಘಟನೆಗಳು, ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ಚಾನಿಸಿ ಎಂದರು. ಪಥ ಸಂಚಲನ ಪೊಲೀಸ್, ಗೃಹ ರಕ್ಷಕ, ಅಬಕಾರಿ,…
ಬೆಂಗಳೂರು: ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಾಯವು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ನಟ ದರ್ಶನ್ ಅವರು ಪ್ರಕರಣದಲ್ಲಿ ಜಾಮೀನು ಕೋರಿ, ನಾಳೆ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಇಂದು ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ ಬಿಗ್ ಶಾಕ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ನಾಳೆ ನಟ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. https://kannadanewsnow.com/kannada/cm-siddaramaiah-gives-good-news-to-gram-panchayat-members-employees/ https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದ್ದು, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ. ಜೈಲೇ ಗತಿ ಎನ್ನುವಂತೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಈಗ ತೀರ್ಪು ಪ್ರಕಟಿಸಿರುವಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಲಾಯವು ಎ.1 ಆರೋಪಿ ಪವಿತ್ರಾ ಗೌಡ, ಎ.2…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದ್ದರು. ಇಂದು ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಎ.13 ಆರೋಪಿ ದೀಪಕ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸುತ್ತಾ, ಎ8 ರವಿಶಂಕರ್ ಜಾಕನಾದರೂ ಅಪಹಣದಲ್ಲಿ ಪಾತ್ರವಿದೆ. ಆತ ಬಟ್ಟೆಯಲ್ಲಿಯೂ ರೇಣುಕ್ಸಾವಮಿ ರಕ್ತದ ಕೆಲೆಗಳು ಪತ್ತೆಯಾಗಿವೆ. ಷಡ್ಯಂತ್ರ ಸಾಭೀತಿಗೆ ಒಂದೇ ಬಾರಿಗೆ ಎಲ್ಲ ಒಪ್ಪಂದವಾಗಬೇಕಿಲ್ಲ. ಎಲ್ಲಾ ಗೌಪ್ಯತೆಗಳೂ ಎಲ್ಲರಿಗೂ ತಿಳಿದಿರಬೇಕೆಂದಿಲ್ಲ. ಹೀಗಾಗಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು. ಎ12 ಲಕ್ಷ್ಮಣ್ ಗೆ ಜಾಮೀನು…
ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಪವಿತ್ರಗೌಡ ಪರ ಟಾಮಿ ಸ್ಟಾಮಿನ್ ಅವರು ವಾದ ಮಂಡನೆ ಮಾಡಿದ್ದರು, ಪವಿತ್ರಗೌಡ ಅವರು ಕೊಲೆಯಲ್ಲಿ ಪಾತ್ರವಹಿಸಿಲ್ಲ ಎನ್ನುವುದನ್ನು ನ್ಯಾಯಾಧೀಶರಿಗೆ ತಿಳಿಸುವುದಕ್ಕೆ ಮುಂದಾದರು ಆದರೆ ಅದು ಯಶಸ್ವಿಯಾಗಿಲ್ಲ.
ಸವದತ್ತಿ : ತಿರುಪತಿ ಮಾದರಿಯಲ್ಲೇ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು. ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ.…
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ ಬೆಳಿಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಇವರುಗಳು ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ/ವಿಧಾನಪರಿಷತ್ ಶಾಸಕರು, ಪಾಲಿಕೆ…
ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ಒಂದು ವರ್ಷ ಅವಧಿಯ ತರಬೇತಿ ಪಡೆಯಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2025 ರಿಂದ ಡಿಸೆಂಬರ್-2025ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ. ಅರ್ಹರು ತಮ್ಮ ಸ್ವವಿವರ…
ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸಲು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಅ.16 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ನಗರ, ಕೆಹೆಚ್ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಅ.15ರಂದು ತೀರ್ಥಹಳ್ಳಿಯಲ್ಲಿ ಮೆಸ್ಕಾಂನಿಂದ ಜನಸಂಪರ್ಕ ಸಭೆ ತೀರ್ಥಹಳ್ಳಿ ಮೆಸ್ಕಾಂ ಉಪ ವಿಭಾಗ ಕಛೇರಿಯಲಿ ಅ. 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508. https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/ https://kannadanewsnow.com/kannada/three-killed-as-lorry-collides-with-car-in-raichur/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/
ರಾಯಚೂರು: ಜಿಲ್ಲೆಯಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ದುರ್ಮರಣಹೊಂದಿರುವಂತ ಘಟನೆ ನಡೆಡಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಕಲ್ಲೂರು ಬಳಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಲಾರಿಯೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎಂಬುದಾಗಿ ಮಾಹಿತಿಯಿಂದ ತಿಳಿದು ಬಂದಿದೆ. ಮಾನ್ವಿಯಿಂದ ರಾಯಚೂರಿಗೆ ಕಾರು ಹೊರಟಿದ್ದರೇ, ಲಾರಿ ರಾಯಚೂರಿನಿಂದ ಮಾನ್ವಿಗೆ ತೆರಳುತ್ತಿತ್ತು. ಲಾರಿ ಕಾರಿಗೆ ಡಿಕ್ಕಿಯಾದ ಬಳಿಕ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಸಿರಿವಾರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/