Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು; ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ? ಹೆಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು…
ನವದೆಹಲಿ: ಇಸ್ರೇಲ್-ಲೆಬನಾನ್ ಗಡಿಯ ಬಳಿ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಮತ್ತು ಇತರ ಇಬ್ಬರು ಗಾಯಗೊಂಡ ಒಂದು ದಿನದ ನಂತರ, ಕೇಂದ್ರವು ಭಾರತೀಯರಿಗೆ ಇಸ್ರೇಲ್ನ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸಲಹೆ ನೀಡಿದೆ. ಚಾಲ್ತಿಯಲ್ಲಿರುವ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವವರು ಅಥವಾ ಭೇಟಿ ನೀಡುವವರಿಗೆ ಇಸ್ರೇಲ್ನೊಳಗಿನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಯಭಾರ ಕಚೇರಿ ಇಸ್ರೇಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ” ಎಂದು ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯಲ್ಲಿ ತಿಳಿಸಿದೆ. ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಸಾವುನೋವು ಸಂಭವಿಸಿದ್ದು, ಉತ್ತರ ಇಸ್ರೇಲ್ನ ಮಾರ್ಗಲಿಯಟ್ನಲ್ಲಿ ನಿನ್ನೆ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹಿಜ್ಬುಲ್ಲಾ ನಡೆಸಿದ ಹೇಡಿತನದ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಇಂದು ಬೆಳಿಗ್ಗೆ ಹೇಳಿಕೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಲೋಕಸೇವಾ ಆಯೋಗದ ನೂತನ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಎಸ್ಸಿ ಕಾರ್ಯದರ್ಶಿಯಾಗಿದ್ದಂತ ಲತಾ ಕುಮಾರಿ.ಕೆಎಸ್ ಅವರನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದಂತ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್.ಕೆ ಅವರನ್ನು ನೇಮಿಸಿ ಆದೇಶಿಸಿದೆ. ಇನ್ನೂ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಲತಾ ಕುಮಾರಿ ಕೆಎಸ್ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಶಾಲೆಗಳ ಸೊಸೈಟಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ನೇಮಿಸಿ ಆದೇಶಿಸಿದೆ. https://kannadanewsnow.com/kannada/for-me-country-comes-first-family-comes-first-pm-narendra-modi/ https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು. ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ,…
ಬೆಂಗಳೂರು: ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (RAPDRP) ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ ಎಂದು ತಿಳಿಸಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಮೊದಲ ಪಟ್ಟಿ ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ಮೊದಲ ಪಟ್ಟಿ ಲೋಕಸಭಾ ಚುನಾವಣೆಗೆ ಬಿಡುಗಡೆ ಮಾಡೋ ಸಾಧ್ಯತೆ ಇದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಸುರ್ಜೇವಾಲ ಅವರ ಜತೆಗಿನ ಸಭೆ ಕುರಿತು ಕೇಳಿದಾಗ, “ನಿನ್ನೆ ನಾನು, ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಗ್ಯಾರಂಟಿ ಸಮಿತಿಯಲ್ಲಿ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರಲ್ಲಿ ನಾಲ್ಕು ಸಾವಿರ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಲಾಗುವುದು. ಇನ್ನು 7ರಂದು ದೆಹಲಿಯಲ್ಲಿ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ಇದರಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ” ಎಂದು ತಿಳಿಸಿದರು. ಕುಡಿಯುವ ನೀರಿನ ಕೊರತೆ ಗಂಭೀರವಾಗಿ ಪರಿಗಣಿಸಿದ್ದೇವೆ…
ಬೆಂಗಳೂರು: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉತ್ತರಿಸಿದಂತ ಅವರು, “ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ ಎಂದರು. ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ ಕೆಲ ಸಚಿವರು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, “ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೋ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ…
ಶಿವಮೊಗ್ಗ : ಜಿಲ್ಲಾ ಸೈನಿಕ ಪುನರ್ವಸತಿ ಇಲಾಖೆ ಕಛೇರಿಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಅನುಭವುಳ್ಳ ಮಾಜಿ ಸೈನಿಕರು ಹೊರ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅರ್ಜಿದಾರರು ಸೇನೆಯಲ್ಲಿ ವಾಹನ ಪರವಾನಿಗೆ ಪಡೆದಿರುವ ಮತ್ತು ಸೇನಾ ವಾಹನ ಚಲಾಯಿಸಿದ ಚಾಲಕ ಪ್ರವೃತ್ತಯುಳ್ಳವರಾಗಿರಬೇಕು ಜೊತೆಗೆ ಸರ್ಕಾರದ ಮೋಟಾರು ಕಾಯಿದೆಯಡಿಯಲ್ಲಿ ದಿನಾಂಕ 01-03-2022 ರ ಮೊದಲು ಪಡೆದ ಲಘು ಮೋಟಾರು ವಾಹನದ ಪರವಾನಿಗೆ ಹೊಂದಿರಬೇಕು. ಸೈನ್ಯದಲ್ಲಿ ದುರ್ನಡತೆ ಸಲುವಾಗಿ ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರಬಾರದು. ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಕಛೇರಿಗೆ ಸ್ವಯಂ ಲಿಖಿತ ಅರ್ಜಿ ಮತ್ತು ಸ್ವವಿವರ ದೊಂದಿಗೆ ಮಾ. 11 ರೊಳಗಾಗಿ ಕಛೇರಿಯ ವೇಳೆಯಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂ. ಸಂ. :08182-2200925 ಯನ್ನು ಕಛೇರಿಯ ವೇಳೆಯಲ್ಲಿ ಅಥವಾ ಇಮೇಲ್ soldiersshimoga@gmail.com…
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‍ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಬೆಳಗಾವಿಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು ಮೀನಮೇಷ ಎಣಿಸುವ ಸಾಧ್ಯತೆ ಇತ್ತು ಎಂದು ಅನುಮಾನ ವ್ಯಕ್ತಪಡಿಸಿದರು. ವಿಧಾನಸೌಧದ ಒಳಗೆ ಕೆಲವು ದೇಶದ್ರೋಹಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ನಂತರ ಬಿಜೆಪಿ ನಿರಂತರ ಹೋರಾಟದ ಪ್ರತಿಫಲವಾಗಿ ನಿನ್ನೆ ಮೂರು ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಆದರೆ, ರಾಜ್ಯ ಸರಕಾರ ಇನ್ನೂ ಎಫ್.ಎಸ್.ಎಲ್ ವರದಿಯನ್ನು ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿದರು. ಸರಕಾರ ಯಾವ ಕಾರಣಕ್ಕೆ ಎಫ್.ಎಸ್.ಎಲ್ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು,…
ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲಿದ್ದಾವೆ. ಈ ಮೈತ್ರಿ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯಭೇರಿಯನ್ನು ಸಾಧಿಸಲಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಸೋಮವಾರ (ಮಾರ್ಚ್ 4) ಭವಿಷ್ಯ ನುಡಿದಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. ಎನ್ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.…