Author: kannadanewsnow09

ಮಂಡ್ಯ: ಜಿಲ್ಲೆಯ ರೈತ ಜೀವನಾಡಿಯಾಗಿರುವಂತ ಕೃಷ್ಣರಾಜ ಸಾಗರ ಜಲಾಶಯ( KRS Dam) ಹಾಗೂ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಜುಲೈ.29ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಡ್ಯಾಂಗೆ ತೆರಳಿ ಭಾಗೀನವನ್ನು ಅರ್ಪಿಸಲಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಮೂಲಗಳು ತುಂಬಿ ಹರಿಯುತ್ತಿವೆ. ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಸಮೃದ್ಧಿಯ ಸಂಕೇತದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಬೆಳಗ್ಗೆ 11 ಗಂಟೆಗೆ ಕೃಷ್ಣರಾಜಸಾಗರದ ಶ್ರೀ ಕಾವೇರಿ ಮಾತೆ ಪ್ರತಿಮೆಯ ಬಳಿ ನಡೆಯಲಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಬೀಚನಹಳ್ಳಿಯ ಕಬಿನಿ ಜಲಾಶಯದ ಬಳಿ ನಡೆಯಲಿದೆ. https://kannadanewsnow.com/kannada/karnataka-has-the-second-highest-number-of-start-ups-registered-in-the-country/ https://kannadanewsnow.com/kannada/fire-breaks-out-over-178000-acres-in-northern-california-destroys-134-buildings/

Read More

ನವದೆಹಲಿ: ಭಾರತದಲ್ಲಿ ಸ್ಟಾರ್ಟ್ಅಪ್ಗಳ ಸಂಖ್ಯೆ 1.4 ಲಕ್ಷಕ್ಕೂ ಹೆಚ್ಚಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ರಾಜ್ಯಸಭೆಯಲ್ಲಿ ಒತ್ತಿ ಹೇಳಿದರು. ಈ ಅಂಕಿ ಅಂಶಗಳ ಮಾಹಿತಿಯಂತೆ ದೇಶದಲ್ಲೇ ಅತಿ ಹೆಚ್ಚು ಸ್ಟಾರ್ಟ್ ಅಪ್ ನೋಂದಣಿಯಾಗಿರುವಂತ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಶುಕ್ರವಾರ ಸದನದಲ್ಲಿ ಸಚಿವರು ನೀಡಿದ ಲಿಖಿತ ಉತ್ತರದ ಪ್ರಕಾರ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ( Department for Promotion of Industry and Internal Trade -DPIIT) ಮಾನ್ಯತೆ ಪಡೆದ ಸ್ಟಾರ್ಟ್ಅಪ್ಗಳ ಸಂಖ್ಯೆ ರಾಜ್ಯ / ಕೇಂದ್ರಾಡಳಿತ ಪ್ರದೇಶವಾರು ಮಹಾರಾಷ್ಟ್ರವು 25,044 ನೋಂದಾಯಿತ ಸ್ಟಾರ್ಟ್ಅಪ್ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ತೋರಿಸಿದೆ. 15,019 ನೋಂದಾಯಿತ ಸ್ಟಾರ್ಟ್ಅಪ್ಗಳೊಂದಿಗೆ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೆ, ದೆಹಲಿ 14,734 ಸ್ಟಾರ್ಟ್ಅಪ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ 13,299 ಸ್ಟಾರ್ಟ್ ಅಪ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಗುಜರಾತ್ 11,436 ಸ್ಟಾರ್ಟ್ ಅಪ್ ಗಳೊಂದಿಗೆ ಐದನೇ ಸ್ಥಾನದಲ್ಲಿದೆ. ದೇಶದಲ್ಲಿ ಸ್ಟಾರ್ಟ್ಅಪ್ಗಳನ್ನು…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಆಟೋ ಜಖಂ ಆಗಿದ್ದರೇ, ಚಾಲಕ ಸೇರಿ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿ ಆಟೋ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದರಿಂದಾಗಿ ಆಟೋ ಚಾಲಕ ದಿವಾಕರ್ ಎಂಬುವರ ಕಾಲು ಮುರಿದಿದೆ. ಅಲ್ಲದೇ ಮತ್ತೋರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬಿಬಿಎಂಪಿಯ ನಿರ್ಲಕ್ಷ್ಯವೇ ಆಟೋ ಮರದ ಮೇಲೆ ಉರುಳಿ ಬೀಳುವುದಕ್ಕೆ ಕಾರಣ ಎನ್ನಲಾಗುತ್ತಿದೆ. ಮರ ಒಣಗಿದ್ದ ಸ್ಥಿತಿಯಲ್ಲಿ ಇದ್ದರೂ ತೆರವುಗೊಳಿಸದೇ ಇರುವುದೇ ಆಟೋ ಮೇಲೆ ಮುರಿದು ಬೀಳರು ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ ಗಾಯಗೊಂಡಿರುವಂತ ಆಟೋ ಚಾಲಕ ದಿವಾಕರ್ ಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ತಂದೆ ಕ್ಯಾನ್ಸರ್ ಪೀಡಿತರಾಗಿದ್ದರು, ಇವರೇ ಮನೆಯ ಹೊಣೆಗಾರಿಕೆಯನ್ನು ಆಟೋ ಚಲಾನೆ ಮಾಡಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. https://kannadanewsnow.com/kannada/kumaraswamys-daily-thought-is-to-destroy-us-dk-shivakumar-shivakumars-spark/ https://kannadanewsnow.com/kannada/fire-breaks-out-over-178000-acres-in-northern-california-destroys-134-buildings/

Read More

ಬೆಂಗಳೂರು: “ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು. “ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ,…

Read More

ಬೆಂಗಳೂರು: “ರಾಜಕೀಯವನ್ನು ಬೂತ್ ಮಟ್ಟದಲ್ಲಿ ಮಾಡೋಣ, ಈಗ ಎಲ್ಲಾ ಪಕ್ಷದ ನಾಯಕರು ಸೇರಿ ಬೆಂಗಳೂರನ್ನು ಕಟ್ಟೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನಾಗರೀಕರ ಧ್ವನಿ- ಅದೇ ಸರ್ಕಾರದ ಧ್ವನಿ” ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಶನಿವಾರ ನಡೆಸಲಾಯಿತು. ಈ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.…

Read More

ಬೆಂಗಳೂರು: ಸಿಲಿಕಾನ್ ಸಿಟಿಗೆ ರೈಲಿನ ಮೂಲಕ ನಾಯಿಯ ಮಾಂಸ ಸರಬರಾಜು ಮಾಡಲಾಗುತ್ತಿದೆ. ಇದನ್ನೇ ಬಿರಿಯಾನಿ ಮಾಡಿ ಗ್ರಾಹಕರಿಗೆ ತಿನ್ನಿಸಲಾಗುತ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯು, ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದಿದೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂಬುದಾಗಿ ಹೇಳಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಅಂತ ಹೇಳಿದೆ.…

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್‌ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ 2 ಕೋಟಿ ರೂ. ಧನಸಹಾಯ ವಿತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗು ಬೀದರ್‌ ಜಿಲ್ಲೆಯ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಜೈವಿಕ ತಂತ್ರಜ್ಞಾನ, ಕೃಷಿ, ಪಶುಸಂಗೋಪನೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್‌, ಎವಿಜಿಸಿ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ನವೋದ್ಯಮಿಗಳು ಆರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ.…

Read More

ಬೆಂಗಳೂರು: ರಾಜ್ಯದ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ, ಕಳ್ಳಬೇಟೆ ತಡೆ ಶಿಬಿರ, ವನ್ಯ ಪ್ರಾಣಿಗಳನ್ನು ಹಿಮ್ಮೆಟ್ಟಿಸುವ ತಂಡ, ಕ್ಷಿಪ್ರ ಸ್ಪಂದನ ಪಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸರ್ಕಾರದಿಂದ ಕಷ್ಟ ಪರಿಹಾರ ಭತ್ಯೆ ಅಂದರೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಲಾಗಿದೆ. ಈ ಮೂಲಕ ರಾಜ್ಯದ ವನ್ಯ ಜೀವಿ ಪಡೆಗಳ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿರೋ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ. ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು…

Read More

ಇಂದಿನ ಕಾಲದಲ್ಲಿ ಹಿತ ಶತ್ರುಗಳು ಗುಪ್ತ ಶತ್ರುಗಳು ಕಣ್ಣಿಗೆ ಕಾಣದಂತೆ ಪ್ರಯೋಗಾದಿಗಳನ್ನು ಮಾಡುತ್ತಲೇ ಇರುತ್ತಾರೆ ಇದರಿಂದ ರಕ್ಷಣೆ ಹೇಗೆ ಎಂಬ ಸಂಶಯ ಪ್ರತಿಯೊಬ್ಬರಲ್ಲೂ ಬರುವುದು ಸಹಜ ಅದಕ್ಕಾಗಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ. ಜುಲೈ 23 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ರಾಜಕೀಯ ಪಕ್ಷಪಾತದಿಂದ ಕೂಡಿದೆ ಎಂದು ಟಿಎಂಸಿ ಮುಖ್ಯಸ್ಥರು ಆರೋಪಿಸಿದ್ದಾರೆ. ನಾನು ಸಭೆಯನ್ನು ಬಹಿಷ್ಕರಿಸಿ ಹೊರಬಂದಿದ್ದೇನೆ. ಚಂದ್ರಬಾಬು ನಾಯ್ಡು ಅವರಿಗೆ 20 ನಿಮಿಷ, ಅಸ್ಸಾಂ, ಗೋವಾ ಮತ್ತು ಛತ್ತೀಸ್ ಗಢದ ಮುಖ್ಯಮಂತ್ರಿಗಳಿಗೆ 10-12 ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು. ನನ್ನ ಮೈಕ್ ಆಫ್ ಆಗಿತ್ತು. ನೀವು ನನ್ನನ್ನು ಏಕೆ ತಡೆದಿದ್ದೀರಿ, ಏಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ನಾನು ಕೇಳಿದೆ. ನಾನು ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ, ನೀವು ಸಂತೋಷವಾಗಿರಬೇಕು, ಅದರ ಬದಲು ನೀವು ನಿಮ್ಮ ಪಕ್ಷಕ್ಕೆ, ನಿಮ್ಮ ಸರ್ಕಾರಕ್ಕೆ ಹೆಚ್ಚಿನ ಅವಕಾಶ ನೀಡುತ್ತಿದ್ದೀರಿ. ಇದು ಬಂಗಾಳಕ್ಕೆ ಮಾತ್ರವಲ್ಲ, ಎಲ್ಲಾ ಪ್ರಾದೇಶಿಕ ಪಕ್ಷಗಳಿಗೂ ಮಾಡಿದ…

Read More