Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಯದುರ್ಗ-ತುಮಕೂರು ಹೊಸ ಮಾರ್ಗದ ಭಾಗವಾಗಿ ರಾಯದುರ್ಗ ಯಾರ್ಡ್ ನಲ್ಲಿ ಎರಡನೇ ಹಂತದ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗೆ ತಿಳಿಸಲಾದ ರೈಲು ಸೇವೆಗಳನ್ನು ರದ್ದು ಮತ್ತು ಬೇರೆ ಮಾರ್ಗದ ಮೂಲಕ ಸಂಚರಿಸಲಿವೆ. • ರೈಲುಗಳ ಸಂಚಾರ ರದ್ದು: ರೈಲು ಸಂಖ್ಯೆ 07585 ಚಿಕ್ಕಜಾಜೂರು-ಗುಂತಕಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ & ಗುಂತಕಲ್-ಚಿಕ್ಕಜಾಜೂರು (07586) ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ಸಂಚಾರ ಆಗಸ್ಟ್ 8, 2024 ರಂದು ರದ್ದಾಗಲಿದೆ. ರೈಲುಗಳ ಮಾರ್ಗ ಬದಲಾವಣೆ: 1. ಆಗಸ್ಟ್ 9 ರಂದು ಪ್ರಯಾಣ ಬೆಳೆಸುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಚಿಕ್ಕಜಾಜೂರ, ದಾವಣಗೆರೆ, ಅಮರಾವತಿ ಕಾಲೋನಿ, ಹೊಸಪೇಟೆ ಮಾರ್ಗದ ಮೂಲಕ ಸಂಚರಿಸಲಿದೆ. ಈ ರೈಲು ಚಿತ್ರದುರ್ಗದಿಂದ ತೋರಣಗಲ್ಲು ನಿಲ್ದಾಣಗಳವರೆಗೆ ತನ್ನ ನಿಗದಿತ ನಿಲುಗಡೆ ಇರುವುದಿಲ್ಲ. 2. ಆಗಸ್ಟ್ 9 ರಂದು ಪ್ರಯಾಣ ಬೆಳೆಸುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಹೊಸಪೇಟೆ, ಅಮರಾವತಿ…
ಬೆಂಗಳೂರು: ಮುಡಾ ಅಕ್ರಮ ಕುರಿತಂತೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ ಬಳಿಕ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮದ ಬಗ್ಗೆ ವಿರೋಧ ಪಕ್ಷಗಳಿಂದ ದೂರು ನೀಡಲಾಗಿದೆ. ಇಂದು ವಿಧಾನಸೌಧದಿಂದ ಪಾದಯಾತ್ರೆಯ ಮೂಲಕ ಸಾಗಿದಂತ ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದಂತ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಡಾ ಅಕ್ರಮದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದರು. ಅಲ್ಲದೇ ಈ ಅಕ್ರಮದ ಬಗ್ಗೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಕೋರಿದರು. ಒಟ್ಟಾರೆಯಾಗಿ ರಾಜ್ಯದ ಕಾಂಗ್ರೆಸ್ ಸರಕಾರವು ಇಂದು ಸದನದಲ್ಲಿ ಮುಡಾ ವಿಚಾರದಲ್ಲಿ ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಜನಪ್ರತಿನಿಧಿಗಳುÀ ರಾಜಭವನ ಚಲೋ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ 14 ಜಿಲ್ಲೆಗಳಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಹೀಗಾಗಿ 1,119 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೂದು ನೀರು ನಿರ್ವಹಣೆಗೆ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಕೊಳಚೆ ನೀರು ಕೆರೆ, ಹಳ್ಳ ಸೇರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದೆ. ಒಟ್ಟಾರೆಯಾಗಿ ಗ್ರಾಮಗಳ ಸ್ವಚ್ಛತೆಯನ್ನು ಆದ್ಯತೆಯಾಗಿರಿಸಿ ಬೂದು ನೀರು ನಿರ್ವಹಣೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 14 ಜಿಲ್ಲೆಯಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರಿಂದಾಗಿ 1,199 ಗ್ರಾಮ ಪಂಚಾಯಿತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ. https://kannadanewsnow.com/kannada/no-insurance-company-can-deny-crop-insurance-to-farmers-minister-krishna-byre-gowda/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/
ಬೆಂಗಳೂರು: ರಾಜ್ಯದ ರೈತರಿಗೆ ಯಾವುದೇ ಕಂಪೆನಿಗಳೂ ಬೆಳೆ ವಿಮೆ ನಿರಾಕರಿಸುವಂತಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಖಡಕ್ ಆದೇಶ ಮಾಡಿದ್ದಾರೆ. ಕೆಲವು ವಿಮಾ ಕಂಪೆನಿಗಳು ರೈತರಿಗೆ ಬೆಳೆ ವಿಮೆ ನೀಡಲು ನಿರಾಕರಿಸುತ್ತಿವೆ. ಈ ಬಗ್ಗೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಅವರು ಸದನದ ಗಮನ ಸೆಳೆದರು. ಈ ಪ್ರಶ್ನೆಗೂ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕೇಂದ್ರ ಸರ್ಕಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಸರ್ಕಾರದಿಂದ ಬೆಳೆ ಪರಿಹಾರ ಪಡೆಯುವ ರೈತರಿಗೆ ಬೆಳೆ ವಿಮೆ ನೀಡುವಂತಿಲ್ಲ ಎಂದು ಬರ ಕೈಪಿಡಿಯಲ್ಲಿ ಹೇಳಿದ್ದಾರೆ. ಕಳೆದ ವರ್ಷ ಕೇಂದ್ರ ಗೃಹ ಮಂತ್ರಿಗಳು ಸಭೆ ಕರೆದಿದ್ದರು. ನಾನೂ ಆ ಸಭೆಯಲ್ಲಿ ಪಾಲ್ಗೊಂಡಿದ್ದೆ. ಸಭೆಯಲ್ಲಿ ಬರ ಕೈಪಿಡಿಯಲ್ಲಿ ಉಲ್ಲೇಖಿಸಿರುವ ಬೆಳೆ ವಿಮೆ ವಿಚಾರದ ಬಗ್ಗೆ ನಾನು ಗಮನ ಸೆಳೆದಿದ್ದೆ. ಬೆಳೆ ವಿಮೆಗೂ ನಾವು ಕೊಡುವ ಪರಿಹಾರಕ್ಕೂ ಸಂಬಂಧ ಇಲ್ಲ, ಇದು ತಪ್ಪಾಗುತ್ತದೆ. ಸರ್ಕಾರದ ಇಂತಹ ನಡೆ ವಿಮಾ ಕಂಪೆನಿಗೆ ದುರ್ಲಾಭ ಮಾಡಿಕೊಟ್ಟಂತಾಗುತ್ತದೆ ಎಂದು ನಾನು ಹೇಳಿದಾಗ ಕೇಂದ್ರ ಸರ್ಕಾರ ಗಾಬರಿಯಾಗಿ…
ಬೆಂಗಳೂರು : ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು. ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಯಾವುದೇ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎರಡರಷ್ಟು ರೈತರಿಗೆ ಬರ ಪರಿಹಾರ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಮುಂದುವರೆದು, “ಅಧಿಕಾರಿಗಳು ಸ್ಥಳಕ್ಕೇ ತೆರಳಿ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆ ಆಗಿದ್ಯಾ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿಯ ಮಳಿಗೆಗಳು ಮತ್ತು ಆಸ್ತಿಗಳ ಗುತ್ತಿಗೆ ನಿಯಮಗಳ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ಬಿಬಿಎಂಪಿಯ ಮಳಿಗೆ, ಆಸ್ತಿಗಳ ಗುತ್ತಿಗೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ, 53) ರ 316 ರ ಪ್ರಕರಣಗಳೊಂದಿಗೆ ಓದಿಕೊಂಡು, 66, 67 ಮತ್ತು 130 ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ರಚಿಸಲು ಉದ್ದೇಶಿಸಿರುವ 316 ರ ಪ್ರಕರಣದ ಉಪ ಪ್ರಕರಣ (1) ರ ಕರಡನ್ನು ಸರ್ಕಾರದ ಅನುಮೋದನೆ ಪಡೆದು ಇದರಿಂದ ಭಾದಿತರಾಗುವ ಸಂಭವವಿರುವ ಎಲ್ಲ ವ್ಯಕ್ತಿಗಳ ಮಾಹಿತಿಗಾಗಿ, ಸದರಿ ಅಧಿನಿಯಮದ 316 ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅದನ್ನು ಅಧಿಕೃತ ರಾಜ್ಯಪತ್ರದಲ್ಲಿ ದಿನಾಂಕ: 20-07-2024ರಂದು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ತರುವಾಯ, ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಈ ಮೂಲಕ ಸೂಚಿಸಲಾಗಿದೆ.…
ಮೈಸೂರು: ಜಿಲ್ಲೆಯಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣಾಗಿರುವಂತ ಘಟನೆ ಇಂದು ನಡೆದಿದೆ. ಈ ಮೂಲಕ ಪರಸ್ಪರ ಪ್ರೀತಿಸುತ್ತಿದ್ದಂತ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿ ಮನೆಯಲ್ಲಿ ಮೋನಿಕಾ(20) ನೇಣಿಗೆ ಶರಣಾಗಿದ್ದಾರೆ. ಈ ವಿಷಯ ತಿಳಿದಂತ ಪ್ರಿಯಕರ ಮನು (22) ತಾನು, ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಮೋನಿಕಾ ಹಾಗೂ ಮನು ಇಬ್ಬರು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮನಸ್ತಾಪ ಉಂಟಾಗಿತ್ತು. ಇಂದು ಕ್ಷುಲ್ಲಕ ಕಾರಣಕ್ಕೆ ಬೇಸತ್ತು ಮೋನಿಗಾ ಮಂಡಕಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ವಿಷಯ ತಿಳಿದಂತ ಮನು ಕೂಡ ತಮ್ಮ ಜ್ಯೋತಿ ನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. https://kannadanewsnow.com/kannada/gold-prices-drop-again-in-india-july-25-22k-100-grams-yellow-metal-price-falls-by-rs-9500/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/
ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ 22k/100 ಗ್ರಾಂ ಚಿನ್ನದ ಬೆಲೆ ರೂ.9,500 ರಷ್ಟು ಕುಸಿತ | Gold Prices Drop
ನವದೆಹಲಿ: ಜುಲೈ 24, 2024 ರಂದು ಸ್ಥಿರವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ತೀವ್ರ ಕುಸಿತ ಕಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 6 ಕ್ಕೆ ಇಳಿಸಿದ ನಂತರ ದೇಶದಲ್ಲಿ ಚಿನ್ನದ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ಮತ್ತೆ 22k/100 ಗ್ರಾಂ ಚಿನ್ನದ ಬೆಲೆ ರೂ 9,500 ರಷ್ಟು ಕುಸಿತಗೊಂಡಿದೆ. ಹಣಕಾಸು ಸಚಿವರ ಈ ಕ್ರಮವು ದಾಖಲೆಯ ಉನ್ನತ ಮಟ್ಟಕ್ಕೆ ಏರುತ್ತಿರುವ ಹಳದಿ ಲೋಹದ ಬೆಲೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಗ್ರಾಹಕರು ಹಳದಿ ಲೋಹವನ್ನು ಖರೀದಿಸುವುದನ್ನು ತಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆ ಕಂಡು 64,000ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 ರು ಇಳಿಕೆಯಾಗಿ 68,000ರು ನಷ್ಟಿದೆ. 22 ಕ್ಯಾರೆಟ್ ಅಮೂಲ್ಯ ಲೋಹದ ಬೆಲೆಗಳು ಶೇಕಡಾವಾರು ಲೆಕ್ಕದಲ್ಲಿ 1.48% ರಷ್ಟು ತೀವ್ರ ಕುಸಿತಕ್ಕೆ ಸಾಕ್ಷಿಯಾಗಿವೆ. ಜುಲೈ 22, 2024 ರಿಂದ…
ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು. “ನಿಗಮ ಮಂಡಳಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ನಾವು ಅವಕಾಶ ಕಲ್ಪಿಸಿದ್ದೆವು. ಅವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಬಿಜೆಪಿಯವರು ತಮ್ಮ ಕಾಲದಲ್ಲಿ ಆಗಿದ್ದ ಹಗರಣಗಳನ್ನು ಬಚ್ಚಿಟ್ಟಿದ್ದರು. ಅವುಗಳು ಬಹಿರಂಗವಾಗಬಾರದು…
ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು. ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ…