Author: kannadanewsnow09

ಬೆಂಗಳೂರು : ದೃಷ್ಟಿಯಿಲ್ಲದ ಯುವತಿಗೆ ಕೆಲಸ, ಬಿಡಿಎ ಫ್ಲಾಟ್, ಬಡವರ ಜಾಗ ರಕ್ಷಣೆಗೆ ಅಧಿಕಾರಿಗಳಿಗೆ ತಾಕೀತು, ದಾಖಲೆಗಳು ಸರಿ ಇದ್ದರೂ ಖಾತೆ ಮಾಡಿಕೊಡದ ಅಧಿಕಾರಿಗಳ ತರಾಟೆ, ದಯಾಮರಣ ಕೋರಿ ಬಂದವರಿಗೆ ಸಾಂತ್ವನ, ಆರ್ಥಿಕ ನೆರವು. ಹೀಗೆ ಒಂದಾದ ಮೇಲೆ ಒಂದರಂತೆ ಸಂಕಷ್ಟ ಹೊತ್ತು ಬಂದ ಜನರಿಗೆ ಪರಿಹಾರ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾರ್ಯವೈಖರಿ ಮೂಲಕ ಜನರ ಮನಗೆದ್ದರು. ಯಲಹಂಕ ನ್ಯೂ ಟೌನ್ ನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಮನವಿ ಸಲ್ಲಿಸಲು ಬಂದಂತಹ ಸಾರ್ವಜನಿಕರ ಅಹವಾಲುಗಳನ್ನು ಕೂಲಂಕುಷವಾಗಿ ಆಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಮಸ್ಯೆಗಳಿಗೆ ಪರಿಹಾರ ಹೇಳಿದರು. ನಿನ್ನ ಭೂಮಿಯನ್ನು ಯಾರಿಗೂ ಕೊಡಬೇಡ.., ಜಾಗ ಉಳಿಸಿಕೋ…, ಅಳಬೇಡಮ್ಮ ನಮ್ಮ ಸರ್ಕಾರವಿದೆ, ನಾನಿದ್ದೇನೆ, ನಿನ್ನ ಜಾಗದಲ್ಲೇ ಇರು, ಅದನ್ನು ಬಿಡಬೇಡ, ಎಂಜಿನಿಯರ್ ಒಂದು ವಾರದಲ್ಲಿ ಈ ಸಮಸ್ಯೆ ಬಗೆಹರಿಯಬೇಕು ಎಂಬ ತಾಕೀತು ಮತ್ತು ಸಾಂತ್ವನದ ಮಾತುಗಳು ಕಂಗಾಲಾಗಿ ಬಂದವರ ಮುಖದಲ್ಲಿ ಭರವಸೆಯ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರೆಯಲಾಗಿದ್ದಂತ ತಾಂತ್ರಿಕ ಸಹಾಯಕ ಹುದ್ದೆಯ ( KSRTC Post of Technical Assistant ) ನೇಮಕಾತಿಗೆ ಸಂಬಂಧಿಸಿದಂತೆ, ಇಂದು ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಹಾಯಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿಯನ್ನು ಹಾಗೂ ಕಟ್-ಆಫ್ ವಿವರಗಳನ್ನು ದಿನಾಂಕ:05-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಸದರಿ ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ನೇರವಾಗಿ ಅಥವಾ ಅಂಚೆ ಮೂಲಕ ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕ), ಕರಾರಸಾ ನಿಗಮ, ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು ಇವರಿಗೆ ಸಲ್ಲಿಸುವುದು ಹಾಗೂ ಇ-ಮೇಲ್ dycpmrct@ksrtc.org ಮೂಲಕವೂ ಕೂಡ ಸಲ್ಲಿಸಬಹುದಾಗಿದೆ ಎಂದು ಹೇಳಿದೆ. ನಿಗದಿತ ದಿನಾಂಕದ ನಂತರ ಸ್ವೀಕರಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದನ್ನು…

Read More

ಬೆಂಗಳೂರು: ಯಾತ್ರಾರ್ಥಿಗಳ ಕನಸು ನನಸಾಗಿಸೋ ಸಲುವಾಗಿ ಕರ್ನಾಟಕ್ ಭಾರತ್ ಗೌರವ್ ದಕ್ಷಿಣ ಯಾತ್ರಾವನ್ನು ಆಯೋಜಿಸಲಾಗಿದೆ. ಈ ಯೋಜನೆಯಡಿ ರಾಮೇಶ್ವರ, ಕನ್ಯಾಕುಮಾರಿ, ಮದುರೈ, ತಿರುವನಂತಪುರಕ್ಕೆ ಯಾತ್ರೆಯನ್ನು ಆಯೋಜಿಸಲಾಗಿದೆ. ಇಲ್ಲಿಗೆ ತೆರಳೋರಿಗೆ ರಾಜ್ಯ ಸರ್ಕಾರದಿಂದಲೇ 5000 ಸಹಾಯಧನವನ್ನು ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾ ರಾಮೇಶ್ವರ, ಕನ್ನಯಾಕುಮಾರಿ, ಮದುರೈ, ತಿರುವನಂತಪುರಕ್ಕೆ ಆಯೋಜಿಸಲಾಗಿದೆ. ಯಾತ್ರೆಯು ದಿನಾಂಕ 18-01-2024ರಿಂದ ಐಆರ್ ಸಿಟಿಸಿ, ಐಟಿಎಂಎಸ್ ವೆಬ್ ಸೈಟ್ ಮೂಲಕ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ. ಈ ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ 15,000 ರೂ ಆಗಿದೆ. ಕರ್ನಾಟಕ ಸ್ರಕಾರದಿಂದ ರೂ.5000 ಸಹಾಯಧನ ನೀಡಲಾಗುತ್ತದೆ. ಯಾತ್ರಿಯು ಕೇವಲ 10000 ಮಾತ್ರವೇ ಪಾವತಿಸಬೇಕಾಗಿದೆ ಅಂತ ತಿಳಿಸಿದ್ದಾರೆ. ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾಗೆ ರೈಲು ಹತ್ತೋದಕ್ಕೆ, ಇಳಿಯೋದಕ್ಕೆ ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಅವಕಾಶ ನೀಡಲಾಗಿದೆ ಎಂದಿದ್ದಾರೆ.…

Read More

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಹಾಗೂ ಅವರನ್ನು ಲೋಕಸಭೆ ಚುನಾವಣೆ ಕಣದಿಂದ ತಪ್ಪಿಸಲು ಸ್ವತಃ ಮುಖ್ಯಮಂತ್ರಿ ಅವರೇ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೇರ ಆರೋಪ ಮಾಡಿದರು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಸರಕಾರ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ನೇರ ಆರೋಪ ಮಾಡಿದರು. ಕಳೆದ 2-3 ದಿನಗಳಿಂದ ರಾಜ್ಯ ಸರಕಾರದಿಂದ ಅಧಿಕಾರ ದುರ್ಬಳಕೆ ಆಗುತ್ತಿದೆ. ಮಾಧ್ಯಮಗಳಲ್ಲೂ ಸಹ ಬೇರೆ ಯಾವುದೇ ವಿಷಯಗಳಿಗೆ ಗಮನ ಕೊಡಲು ಆಗದಷ್ಟು ರೀತಿಯಲ್ಲಿ ಪ್ರಚಾರ ಸಿಗುತ್ತಿದೆ. ಕಾರಣ ಹುಬ್ಬಳ್ಳಿ ಘಟನೆ. 30 ವರ್ಷದ ಕೇಸ್ ‌ನಲ್ಲಿ ಕರ ಸೇವಕನ…

Read More

ಬೆಂಗಳೂರು: ಬಿಜೆಪಿ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಜೀ ಅವರ ಕೈಯನ್ನು ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷರಲ್ಲಿ ಕೇಳಿ ನಡೆಸುವ ನನ್ನ ಪ್ರವಾಸದ ವೇಳೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಮುಖರ ಜೊತೆ ಮಾತನಾಡುವೆ ಎಂದ ಅವರು, ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ವಿವರಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಲು ಅವರು ಮನವಿ ಮಾಡಿದರು. ಎಸ್‍ಸಿ ಮೋರ್ಚಾ ನೂತನ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜು, ಸಂಸದ ಮುನಿಸ್ವಾಮಿ, ರಾಜ್ಯ…

Read More

ಕಲಬುರ್ಗಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಕಲಬುರ್ಗಿಯ ಅಫಜಲಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಶಾಸಕ ಎಂ.ವೈ ಪಾಟೀಲ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ತೆರಳುತ್ತಿದ್ದಂತ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಶಾಸಕ ಎಂ.ವೈ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ತಿಳಇದು ಬಂದಿದೆ. ಜೇವರ್ಗಿ(ಬಿ) ಗ್ರಾಮದ ಬಳಿಯಲ್ಲಿ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಕಾರಿನಲ್ಲಿದ್ದಂತ ಶಾಸಕ ಎಂ.ವೈ ಪಾಟೀಲ್ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/note-register-for-yuvanidhi-scheme-as-follows/ https://kannadanewsnow.com/kannada/karsevak-shrikant-poojary-granted-bail/

Read More

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್‍ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಶಿವಮೊಗ್ಗ ದೂ.ಸಂ: 08182-255293 ಸಂಪರ್ಕಿಸಬಹುದು ಎಂದು…

Read More

ಬೆಂಗಳೂರು: ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು. ಅಲ್ಲದೆ; ಈ ಬಗ್ಗೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ ಎಂದು ಮಾಜಿ ಪ್ರಧಾನಿಗಳು ಅತೀವ ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ಏನು ಕಷ್ಟ ಇದೆಯೋ ಗೊತ್ತಿಲ್ಲ. ಅವರು ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿಗಳು ಅತ್ಯಂತ ಖಾರವಾಗಿ ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಡಿಕೆ ಶಿವಕುಮಾರ್…

Read More

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ…

Read More