Subscribe to Updates
Get the latest creative news from FooBar about art, design and business.
Author: kannadanewsnow09
ಇಸ್ಲಾಮಾಬಾದ್: ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ಪ್ರಮಾಣ ವಚನ ಸ್ವೀಕರಿಸಿದರು. ಐವಾನ್-ಇ-ಸದರ್ನಲ್ಲಿ ಅಧ್ಯಕ್ಷ ಆರಿಫ್ ಅಲ್ವಿ ಅವರು ಶೆಹಬಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ನವಾಜ್ ಷರೀಫ್, ಮರಿಯಮ್ ನವಾಜ್ ಮತ್ತು ಇತರ ಪಿಎಂಎಲ್-ಎನ್ ಕಾರ್ಯಕರ್ತರು ಭಾಗವಹಿಸಿದ್ದರು. ಪಿಪಿಪಿಯ ಮುರಾದ್ ಅಲಿ ಶಾ ಮತ್ತು ಸರ್ಫರಾಜ್ ಬುಗ್ತಿ ಕೂಡ ಹಾಜರಿದ್ದರು. https://kannadanewsnow.com/kannada/forest-fire-at-historic-biligiri-rangana-hills-fire-spreads-to-remote-areas/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಇದು ನಿಜವೋ ಇಲ್ಲವೋ ಎನ್ನುವ ಬಗ್ಗೆ ಎಫ್ಎಸ್ಎಲ್ ತನಿಖೆಗೆ ವೀಡಿಯೋ ದೃಶ್ಯಾವಳಿಯನ್ನು ಕಳುಹಿಸಿಕೊಡಲಾಗಿತ್ತು. ಈ ತನಿಖೆಯ ವರದಿಯನ್ನು ಇನ್ನೂ ಬಹಿರಂಗಪಡಿಸದ ಕಾರಣ, ಶೀಘ್ರದಲ್ಲೇ ಬಹಿರಂಗ ಪಡಿಸುವಂತೆ ಒತ್ತಾಯಿಸಿದ ಬಿಜೆಪಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಫೆಬ್ರವರಿ 27, 2024 ರಂದು ವಿಧಾನಸೌಧದ ಕಾರಿಡಾರ್ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸಿರ್ ಹುಸೇನ್ ಅವರ ಬೆಂಬಲಿಗರು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆಗಳನ್ನು ಕೂಗಿದರು, ನಂತರ ಗೌರವಾನ್ವಿತ ಗೃಹ ಸಚಿವರಾದ ಡಾ ಜಿ. ಪರಮೇಶ್ವರ್ ಅವರು ಎಫ್ಎಸ್ಎಲ್ ವರದಿಯನ್ನು ಶೀಘ್ರದಲ್ಲಿ ಬಹಿರಂಗ ಮಾಡುವುದಾಗಿ ಭರವಸೆ ನೀಡಿದರು ಎಂದಿದೆ. ಘಟನೆ ನಡೆದು ಒಂದು ವಾರ ಕಳೆದರೂ ಇಲ್ಲಿಯವರೆಗೆ ಎಫ್ಎಸ್ಎಲ್ ವರದಿಯ ಬಗ್ಗೆ ಯಾವುದೇ ಏಕೆ? ತಿಳಿಸಲು ಇಷ್ಟು ವಿಳಂಬ ಮಾಹಿತಿ ಇಲ್ಲ. ಸತ್ಯವನ್ನು ಸಾರ್ವಜನಿಕರಿಗೆ ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸದಿರಲು, ವಾಸ್ತವಿಕ ಸಂಗತಿಯನ್ನು…
ಚಾಮರಾಜನಗರ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬಿಸಿಲ ಬೇಗೆಯ ಜೊತೆಗೆ ಬೀಸುವ ಗಾಳಿಯಿಂದಾಗಿ ಕಾಳ್ಗಿಚ್ಚು ಬಿಳಿಗಿರಿರಂಗನ ಬೆಟ್ಟದ ದುರ್ಗಮ ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುಣಜನೂರು ವಲಯದ ಕುರಿಮಂದೆ ಸೇರಿದಂತೆ 3-4 ಕಡೆಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಅರಣ್ಯದ ದುರ್ಗಮ ಪ್ರದೇಶಗಳಿಗೆ ಬೆಂಕಿ ವ್ಯಾಪಿಸಿದ್ದು, ಕಾಡ್ಗಿಚ್ಚಿನಿಂದ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಬೆಂಕಿ ಕಾಡಿನ ಮತ್ತಷ್ಟು ಭಾಗಕ್ಕೆ ವ್ಯಾಪಿಸುತ್ತಿದ್ದು, ಹತೋಟಿಗೆ ಬಾರದಷ್ಟು ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. https://kannadanewsnow.com/kannada/good-news-for-those-going-to-srisaila-mallikarjuna-deva-fair-kkrtc-arranges-225-additional-special-buses/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/
ರಾಯಚೂರು: ಶ್ರೀಶೈಲದ ಮಲ್ಲಿಕಾರ್ಜನ ದೇವರ ಜಾತ್ರೆಗೆ ತೆರಳುವಂತ ಭಕ್ತರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು. ಶ್ರೀಶೈಲ ಜಾತ್ರೆ -2024(ಶಿವರಾತ್ರಿ) ಶಿವರಾತ್ರಿ ಹಬ್ಬದ ಪ್ರಯುಕ್ತ ಮಲ್ಲಿಕಾರ್ಜುನ ದೇವರ ಜಾತ್ರೆಗೆ ದಿನಾಂಕ 01.03-2024 ರಿಂದ 10-03-2024 ವರೆಗೆ 225 ಹೆಚ್ಚುವರಿ ವಿಶೇಷ ಬಸ್ಸುಗಳ ಕಾರ್ಯಾಚರಣೆ ಮಾಡಲಿದ್ದಾವೆ ಎಂದಿದೆ. ಪ್ರಮುಖವಾಗಿ ರಾಯಚೂರು ವಿಭಾಗದಿಂದ 160 ಹಾಗೂ ಬಳ್ಳಾರಿ ವಿಭಾಗದಿಂದ 30 ಇತರೆ ವಿಭಾಗಗಳಿಂದ ಸೇರಿ ಒಟ್ಟು 225 ಹೆಚ್ಚುವರಿ ವಿಶೇಷ ಬಸ್ಸುಗಳ ಕಾರ್ಯಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದೆ. ಎಲ್ಲಿಂದ ಎಷ್ಟು ಬಸ್ ಶ್ರೀಶೈಲಕ್ಕೆ ಸಂಚಾರ ಗೊತ್ತಾ.? ಇಲ್ಲಿದೆ ಡೀಟೆಲ್ಸ್ ರಾಯಚೂರು ಘಟಕ-2 30 ರಾಯಚೂರು ಘಟಕ-3 – 30 ಲಿಂಗಸುಗೂರು- 30 ಸಿಂಧನೂರು…
ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಬಾಂಬ್ ಇಟ್ಟಂತ ಬಾಂಬರ್ ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್ ಮಾಡಿ, ಅದನ್ನು ರಾಮೇಶ್ವರಂ ಕೆಫೆಯ ಬಳಿಗೆ ತಂದು ಇಟ್ಟಿರೋ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತಂತೆ ತನಿಖೆಯನ್ನು ನಡೆಸುತ್ತಿರುವಂತ ತನಿಖಾಧಿಕಾರಿಗಳ ತಂಡಕ್ಕೆ ಮಾಹಿತಿ ದೊರೆತಿದೆ. ಸುಮಾರು 1000ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಂತ ತನಿಖಾ ತಂಡಕ್ಕೆ ಈ ಶಾಕಿಂಗ್ ಮಾಹಿತಿ ದೊರೆತಿದೆ. ದೊರೆತಿರುವಂತ ಮಾಹಿತಿಯಂತೆ ಐಟಿಪಿಎಲ್ ನಿಂದ ಬಸ್ ನಲ್ಲಿ ಬಸ್ ನಲ್ಲಿ ಆಗಮಿಸಿರುವಂತ ಬಾಂಬರ್, ಬೆಳಿಗ್ಗೆ 10.45ಕ್ಕೆ ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಇಳಿದಿದ್ದಾನೆ. ಅಲ್ಲಿಯೇ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಕಾಲ ಕಳೆದಿರೋದಾಗಿ ತಿಳಿದು ಬಂದಿದೆ. ಕಪ್ಪು ಮಾಸ್ಕ್, ಬಿಳಿ ಹ್ಯಾಟ್ ಧರಿಸಿದ್ದಂತ ಶಂಕಿತ ಬಾಂಬರ್ ನಡೆದು ಬರುವಾಗ ಎಲ್ಲಿಯೂ ಪಾದಚಾರಿ ಮಾರ್ಗವನ್ನು ಬಳಸಿಲ್ಲ. ಬದಲಾಗಿ ರಸ್ತೆಯಲ್ಲೇ ಹೆಜ್ಜೆಹಾಕಿದ್ದಾನೆ. ಕಾರಣ ಪಾದಚಾರಿ ಮಾರ್ಗದಲ್ಲಿ ನಡೆದು ಹೋದ್ರೇ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅವರು ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. https://kannadanewsnow.com/kannada/modi-ka-parivar-after-2019s-chowkidar-campaign-bjp-launches-another-campaign-in-x/ https://kannadanewsnow.com/kannada/big-breaking-isro-chief-somnath-diagnosed-with-cancer/
ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಮಂಜುನಾಥ್ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಆದರೇ ಈ ಕುರಿತಂತೆ ಅವರ ಮಾವ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಡಾ.ಮಂಜುನಾಥ್ ಅವರು ಇಡೀ ದೇಶಾದ್ಯಂತ ತಮ್ಮದೇ ಆದಂತ ಹೆಸರು ಮಾಡಿದ್ದಾರೆ. ಮುಗಿಲೆತ್ತರಕ್ಕೆ ಹೆಸರು ಮಾಡಿರುವಂತ ಅವರು, ಈ ರಾಜಕೀಯ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ. ಅವರಿಗೆ ಈಗ ಒಂದು ಒಳ್ಳೇ ಸ್ಥಾನವಿದೆ ಎಂಬುದಾಗಿ ತಿಳಿಸಿದರು. ನಾನು ರಾಜಕೀಯ ಪ್ರವೇಶ ಮಾಡಿ ಅಂತ ಅವರನ್ನು ಈ ಸಮಯದಲ್ಲಿ ಒತ್ತಾಯ ಮಾಡುತ್ತಿಲ್ಲ. ನಾವು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ಮಾಡುವುದಿಲ್ಲ. ನಾನು ಅವರು ರಾಜಕೀಯಕ್ಕೆ ಬರೋದಕ್ಕೆ ಸಮ್ಮತಿ ಸೂಚಿಸುವುದಿಲ್ಲ ಅಂದುಕೊಂಡಿದ್ದೇನೆ ಎಂಬುದಾಗಿ ತಿಳಿಸಿದರು. ಇನ್ನೊಂದು ವಾರದಲ್ಲಿ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ತೀರ್ಮಾನ ಆಗಲಿದೆ. ಈ ಕುರಿತಂತೆ ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ…
ನಿಮ್ಮ ಸರ್ಕಾರವೇ ವಾಸಿ, ಈ ಕಾಂಗ್ರೆಸ್ ಸರ್ಕಾರದಲ್ಲಿ 50% ಕಮೀಷನ್ ಅಂತ ಗುತ್ತಿಗೆದಾರರು ಹೇಳ್ತಿದ್ದಾರೆ- ಶಾಸಕ ಯತ್ನಾಳ್
ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.50ರಷ್ಟು ಕಮೀಷನ್ ದಂಧೆ ನಡೆಯುತ್ತಿದೆ. ನಮ್ಮ ವಿರುದ್ಧ ಆರೋಪ ಮಾಡಿದ ಸರ್ಕಾರದಲ್ಲೇ ಅದಕ್ಕಿಂತ ಹೆಚ್ಚು ದಂಧೆ ನಡೆಯುತ್ತಿದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅರು ಶೇ.13ರಷ್ಟು ಕಮೀಷನ್ ಇಲ್ಲದೇ ಗುತ್ತಿಗೆದಾರರಿಗೆ ಎನ್ಒಸಿಯನ್ನೇ ಈ ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ. ಎಲ್ಲವೂ ಸೇರಿದರೇ ಶೇ.50ರಷ್ಟು ಕಮೀಷನ್ ಗೆ ಬಂದಿದೆ ಎಂಬುದಾಗಿ ಆರೋಪಿಸಿದರು. ನಮ್ಮ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿದ್ದರು. ಆದರೇ ಇವರು 50 ಪರ್ಸೆಂಟ್ ಕಮೀಷನ್ ಪಡೆಯುತ್ತಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ಬಿಬಿಎಂಪಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇಂದು ಬಂದಿದೆ. ನಮ್ಮ ಸರ್ಕಾರವೇ ಉತ್ತಮ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ವಿಜಯೇಂದ್ರ ಉತ್ತಮವಾಗಿದ್ದರು ಎಂದು ಗುತ್ತಿಗೆದಾರರು ತಿಳಿಸುತ್ತಿದ್ದಾರೆ ಎಂದರು. https://kannadanewsnow.com/kannada/im-sorry-google-apologises-to-modi-govt-do-you-know-the-reason/ https://kannadanewsnow.com/kannada/aim-to-grow-1-trillion-economy-in-state-by-2032-m-b-patil/
ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ. ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು. ಗಣ್ಯ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, `ರಾಜ್ಯದ ಆರ್ಥಿಕ ಬೆಳವಣಿಗೆಯ…
ಬೆಂಗಳೂರು : ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಅವರು ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರು ಇಲ್ಲದೇ ಸರ್ಕಾರ ನಡೆಸಲು ಸಾಧ್ಯವಿಲ್ಲ. ನಾವು ಸರ್ಕಾರ ನಡೆಸುತ್ತೇವೆ, ನೀವು ಕಾಮಗಾರಿ ನಡೆಸುತ್ತೀರ. ಈ ಎರಡೂ ದೇಶದ ಕೆಲಸಗಳು. ರಾಜ್ಯದ ಅಭಿವೃದ್ಧಿಯ ಭಾಗಗಳು ನೀವೆಲ್ಲ ಎಂದರು. ಹಿಂದಿನ ಸರ್ಕಾರ ಸರಿಯಾದ ಯೋಜನೆ ಮಾಡದೆ ನಿಮ್ಮ ಮೇಲೆ ಹೊರೆ ಹಾಕಿದೆ. ನೀರಾವರಿ ಇಲಾಖೆಯ ಬಜೆಟ್ 16 ಸಾವಿರ ಕೋಟಿ ಇದೆ. ಆದರೆ ಕಳೆದ ಬಾರಿ 25 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು. ಒಟ್ಟು ನನ್ನ ಇಲಾಖೆಯಲ್ಲಿ 1 ಲಕ್ಷ 25…