Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 53 ಸಹಾಯಕಿರು ಸೇರಿ 64 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್ಸೈಟ್ https://karnemakaone.kar.inc.in/abcd/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು. ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ನಗರದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಭವನದ ಕಟ್ಟಡದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಈ ವರ್ಷದಿಂದ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು. https://twitter.com/KarnatakaVarthe/status/1957419072628379860
ಬೆಂಗಳೂರು : ಜಂಗಲ್ ಅಥವಾ ಬಿ-ಖರಾಬು ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಇಂತಹ ಕೆಲವು ಪ್ರಕರಣಗಳು ಕಂಡು ಬಂದಿದ್ದು ಈ ಬಗ್ಗೆ ತನಿಖೆಯನ್ನೂ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ” ಜಂಗಲ್ ಅಥವಾ ಬಿ-ಖರಾಬು ಜಮೀನು ಮಂಜೂರಾತಿ ವಿಚಾರದಲ್ಲಿ ಯಾವುದೋ ಕಾಲದಲ್ಲಿ ತಪ್ಪಾಗಿದೆ. ಆಗಿನ ಸರ್ಕಾರ ಸರಿಯಾದ ಹೆಚ್ಚೆ ಇಟ್ಟಿಲ್ಲ.ಆದರೆ, ಅದನ್ನು ನಾವು ಸರಿ ಮಾಡುವ ಕೆಲಸಕ್ಕೆ ಮುಂದಾಗಿದ್ದೇವೆ. ಈಗಾಗಲೇ ಬೆಂಗಳೂರು ವಿಭಾಗ ಪ್ರದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಇದರ ನೈಜತೆ ಪರಿಶೀಲನೆಯ ಜವಾಬ್ದಾರಿ ಕೊಟ್ಟಿದ್ದೇವೆ. ತನಿಖೆ ಆರಂಭವಾಗಿದೆ. ಆದರೆ, ಪ್ರಗತಿ ಆಗಿಲ್ಲ. ತನಿಖೆಯನ್ನು ಶೀಘ್ರದಲ್ಲಿ ಮುಗಿಸಲು ಸೂಚಿಸಿದ್ದೇನೆ” ಎಂದು ತಿಳಿಸಿದರು. ಏತನ್ಮಧ್ಯೆ ಇಂತಹ ಜಮೀನುಗಳು ಪೋಡ್ ಆಗುವುದು ಅಥವಾ ಭೂ ವ್ಯವಹಾರ ನಿಲ್ಲಿಸಬೇಕು ಎಂಬ ಕೂಗೂ ಕೇಳಿಬರುತ್ತಿದೆ. ಆದರೆ,…
ಬೆಂಗಳೂರು: ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಸವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು…
ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಮಾಜಿ ಸೈನಿಕನೊಬ್ಬ ಹಾರಿದ್ದಾನೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆ ಹಿಡಿದುಕೊಂಡು ಜೋತಾಡಿ ನೆರವಿಗಾಗಿ ಮೊರೆಯಿಟ್ಟ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಬಳಿಯ ಕಾವೇರಿ ನದಿಗೆ ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಮಾಜಿ ಸೈನಿಕ ಭೃಂಗೇಶ್ ಹಾರಿದ್ದಾನೆ. ಆದರೇ ಕಾವೇರಿ ನದಿಗೆ ಹಾರಿದ ಬಳಿಕ ಮನಸ್ಸು ಬದಲಾಗಿ ಬದುಕೋದಕ್ಕೆ ನಿರ್ಧರಿಸಿದ್ದಾನೆ. ಬದುಕೋದಕ್ಕೆ ನಿರ್ಧರಿಸಿದಂತ ಮಾಜಿ ಸೈನಿಕ ಭೃಂಗೇಶ್ ಸಮೀಪದಲ್ಲೇ ಇದ್ದಂತ ಮರದ ಕೊಂಬೆ ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಿದ್ದಾನೆ. ಈ ಮೊರೆಯನ್ನು ಕೇಳಿದಂತ ಅಂಬಿಗನೊಬ್ಬ ಮಾಜಿ ಸೈನಿಕ ಭೃಂಗೇಶ್ ರಕ್ಷಿಸಿದ್ದಾರೆ. ಅಂದಹಾಗೇ ಸಾಲದ ಬಾಧೆಯಿಂದ ಮಾಜಿ ಸೈನಿಕ ಭೃಂಗೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾವೇರಿ ನದಿ ದಡಕ್ಕೆ ತೆರಳಿ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ಕೊಚ್ಚಿ ಹೋಗಿದ್ದಾರೆ. ನಂತ್ರ ಮನಸ್ಸು ಬದಲಿಸಿ ಮರದ ಕೊಂಬೆಯನ್ನು ಹಿಡಿದುಕೊಂಡು ರಕ್ಷಣೆಗಾಗಿ ಮೊರೆಯಿಟ್ಟಾಗ ಅಂಬಿಗನ ಸಹಾಯದಿಂದ ಬದುಕಿ ಬಂದಿದ್ದಾರೆ. https://kannadanewsnow.com/kannada/bengaluru-cylinder-explosion-case-two-more-die-today-without-treatment-death-toll-rises-to-3/ https://kannadanewsnow.com/kannada/tomorrow-there-will-be-a-power-outage-in-the-areas-of-ballari-district/
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದಂತ ಘಟನೆ ಆಗಸ್ಟ್.15ರಂದು ನಡೆದಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದಂತ ಇಬ್ಬರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಆಗಸ್ಟ್.15ರಂದು ಬೆಂಗಳೂರಿನ ಚನ್ನಯ್ಯನಪಾಳ್ಯದಲ್ಲಿ ಸಿಲಿಂಡರ್ ಸ್ಪೋಟ ಘಟನೆ ನಡೆದಿತ್ತು. ಅಂದೇ ತೀವ್ರವಾಗಿ ಗಾಯಗೊಂಡಿದ್ದಂತ ಬಾಲಕ ಮುಬಾರಕ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಗಂಭೀರವಾಗಿ ಗಾಯಗೊಂಡಿದ್ದಂತ ತಾಯಿ, ಪುತ್ರಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ, ಪುತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸುಟ್ಟಗಾಯಗಳ ಚಿಕಿತ್ಸಾ ವಿಭಾಗದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ತಾಯಿ ಕಸ್ತೂರಿ(28) ಹಾಗೂ ಪುತ್ರಿ ಕಯಾಲ್(8) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/tomorrow-there-will-be-a-power-outage-in-the-areas-of-ballari-district/ https://kannadanewsnow.com/kannada/good-news-for-the-people-of-the-state-tele-ecg-system-in-taluk-hospitals-and-community-health-centers/
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 33/11 ಕೆವಿ ರ್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-01 ಡಿ.ಎನ್.ಹಳ್ಳಿ ಎನ್ಜೆವೈ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು. ಎಫ್-02 ಜಿ.ಎನ್.ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ, ಕೃಷಿ ಪ್ರದೇಶಗಳು. ಎಫ್-03 ಹಳೆ ರ್ರಗುಡಿ, ಹೊಸ ರ್ರಗುಡಿ, ಸಿಂಧುವಾಳ, ಬೆಣಕಲ್ಲು ಹಾಗೂ ಕೃಷಿ ಪ್ರದೇಶಗಳು. ಎಫ್-05 ಸಿಂಧುವಾಳ ಸೋಲಾರ್ ಮಾರ್ಗದ ಹಳೆ ರ್ರಗುಡಿ, ಹೊಸ ರ್ರಗುಡಿ, ಸಿಂಧುವಾಳ, ಬೆಣಕಲ್ಲು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು ಮತ್ತು ಎಫ್-06 ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ…
ಬೆಂಗಳೂರು: ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯ ಕಾರಣದಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆ ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ನಾಳೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ,…
ಬೆಂಗಳೂರು: ಕರ್ನಾಟಕ ಸರ್ಕಾರ ಕೊಡಮಾಡುವ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿರುವ ತೋಂಬತ್ತೈದು ವರ್ಷದ ಹಿರಿಯ ಪತ್ರಕರ್ತ ಕಲ್ಲೇಶಿವೋತ್ತಮರಾವ್ ಅವರಿಗೆ ಅಭಿನಂದನೆಗಳು. ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರಸಂಘ (ಕೆಯುಡಬ್ಲ್ಯೂಜೆ) ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ಅವರನ್ನು ಗೌರವಿಸಿದ್ದು ಅಭಿಮಾನದ ಸಂಗತಿಯಾಗಿತ್ತು. ಮನೆಯಂಗಳದಲ್ಲಿ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ನಮನ ಕಾರ್ಯಕ್ರಮವನ್ನು ಕಲ್ಲೇ ಅವರ ಮನೆಯಿಂದಲೇ ಪ್ರಾರಂಭಿಸಲಾಗಿತ್ತು. ಅಷ್ಟೂ ಪತ್ರಕರ್ತರ ಅನುಭವವನ್ನು ಅಮೃತಬೀಜ ಕೃತಿ ಮೂಲಕ ಕೆಯುಡಬ್ಲ್ಯೂಜೆ ದಾಖಲೀಕರಣ ಮಾಡಿದ್ದು ಈ ಕೃತಿಯನ್ನು ಬಹುರೂಪಿ ಸಂಸ್ಥೆ ಹೊರತಂದಿದೆ. ಹಿರಿಯ ಪತ್ರಕರ್ತರಾದ ಕಲ್ಲೇ ಶಿವೋತ್ತಮರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ. https://kannadanewsnow.com/kannada/a-passenger-died-on-the-spot-when-a-ksrtc-bus-collided-with-a-bike-near-the-maddur-bus-station/ https://kannadanewsnow.com/kannada/lalbagh-flower-show-opens-viewed-by-580000-people-so-far/