Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಒದಗಿಸುತ್ತಿರುವಂತ ಬಿಎಂಟಿಸಿ ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರ ವಿರುದ್ಧ ಸಮರವನ್ನೇ ಸಾರಿ ಬರೋಬ್ಬರಿ 2,778 ಕೇಸ್ ಪತ್ತೆ ಹಚ್ಚಿ 5.58 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದ್ದು, ತನ್ನ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜುಲೈ-2024 ರ ಮಾಹೆಯಲ್ಲಿ ಒಟ್ಟು 18,489 ಟ್ರಿಪ್ಗಳನ್ನು ತಪಾಸಿಸಿ 2778 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 5,58,910/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1699 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 550 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 55,000/-ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ…
ತಿರುವನಂತಪುರಂ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು ಟಿಎನ್ಎಂಗೆ ಖಚಿತಪಡಿಸಿದ್ದಾರೆ. ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ನಿವಿನ್ ಪೌಲಿಯನ್ನು ಆರನೇ ಆರೋಪಿ ಎಂದು ಹೆಸರಿಸಲಾಗಿದೆ. ಮಹಿಳೆ ಎರ್ನಾಕುಲಂ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಅವರಿಗೆ ದೂರು ನೀಡಿದ್ದರು. ದೂರಿನಲ್ಲಿ, ಅವರು ಚಲನಚಿತ್ರದಲ್ಲಿ ಪಾತ್ರದ ಭರವಸೆ ನೀಡಿದ್ದರು, ಇದಕ್ಕಾಗಿ ನವೆಂಬರ್ 2023 ರಲ್ಲಿ ದುಬೈಗೆ ಬರಲು ಕೇಳಲಾಯಿತು ಎಂದು ಆರೋಪಿಸಿದ್ದಾರೆ. ನಂತರ ದುಬೈನ ಹೋಟೆಲ್ ಕೋಣೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.…
ಬೆಂಗಳೂರು: ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು. ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು. ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ…
ಬೆಂಗಳೂರು: ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿವೆ. ಇದರಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ಹೊರೆ ಆಗುವುದನ್ನು ತಪ್ಪಿಸಲು ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು. ನರ್ಸಿಂಗ್ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್ ಸರ್ಟಿಫಿಕೇಟ್ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸೂಚನೆ…
ಬೆಂಗಳೂರು: 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ದಿನಾಂಕ 22-09-2024ರಂದು 402 ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸುವುದಾಗಿ ಕೆಇಎ ತಿಳಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, 402 PSI ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ KEA ಸಕಲ ಸಿದ್ಧತೆ ನಡೆಸಿದೆ. 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KEA_karnataka/status/1830605665028690239 ಇನ್ನೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. 1000 VAO ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ ಎಂದು ಹೇಳಿದ್ದಾರೆ. https://twitter.com/KEA_karnataka/status/1830605666798723434 https://kannadanewsnow.com/kannada/what-is-kissing-disease-how-does-it-spread-what-are-the-symptoms-how-is-the-treatment-heres-the-information/ https://kannadanewsnow.com/kannada/complaint-against-mlc-chalavadi-narayanasamy-to-governor-whats-in-congress-leaders-complaint/
ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರಾದ ಟಿ.ನಾರಾಯಣಸ್ವಾಮಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿಯನ್ನು ಸಲ್ಲಿಸಿದ್ದಾರೆ. ಇಂದು ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿರುವಂತ ಕಾಂಗ್ರೆಸ್ ಮುಖಂಡರು,ವಿಷಯ: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮತ್ತು ಸದಸ್ಯರಾದ ಟಿ.ನಾರಾಯಣಸ್ವಾಮಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲಿ ಏನಿದೆ.? 1) ಛಲವಾದಿ ಟಿ ನಾರಾಯಣಸ್ವಾಮಿ (MLC) ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುತ್ತಾರೆ. ಅವರು ಕರ್ನಾಟಕ ವಿಧಾನಸಭೆಯಿಂದ ಚುನಾಯಿತರಾದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. 2) MLC ಅವರು 28/11/2002 ರಿಂದ 05/05/2005 ರ ಅವಧಿಯಲ್ಲಿ ಕರ್ನಾಟಕ ಗೃಹ ಮಂಡಳಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸತ್ಯವನ್ನು ರುಜುವಾತುಪಡಿಸುವ RTI ಅರ್ಜಿಯ ನಕಲನ್ನು ಅನುಬಂಧ “A” ಎಂದು ಒದಗಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ನಾಗರಿಕ ನಿವೇಶನದ ಭೂಸ್ವಾಧೀನ. 3) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭೂ…
ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…
ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಕನೀಜ್ ಫಾತೀಮಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಚರ್ಚಿಸಲಾಯಿತು. ಪಾರ್ಕ್ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯಲು…
ಬೆಂಗಳೂರು: ಭಾರತದ ನಗರಗಳನ್ನು ವಾಸಯೋಗ್ಯ ಮಾಡದೇ ಹೋದರೆ ಜನರು ಗ್ರಾಮೀಣ ಪ್ರದೇಶಗಳಿಗೆ ಮರಳುತ್ತಾರೆ ಹಾಗೂ ಅಲ್ಲಿನ ಭೂಮಿಯನ್ನು ಕಸಿದು ಹಳ್ಳಿಗಳನ್ನು ನಗರಗಳಾಗಿ ಪರಿವರ್ತಿಸುತ್ತಾರೆ ಎಂದು ಲೇಖಕಿ ಮತ್ತು ಸರೋವರ ಕಾರ್ಯಕರ್ತೆ ಉಷಾ ರಾಜಗೋಪಾಲನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ 27ರಿಂದ 29ರವರೆಗೆ ಹೊಸದಿಲ್ಲಿಯ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ (ಡಿಎಐಸಿ) ನಡೆದ ಕಾಮನ್ಸ್ ಕನ್ವೀನಿಂಗ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಮನ್ಸ್ (ಮುಕ್ತ ಭೂವಲಯ) ಎಂಬ ಪದವನ್ನು ಸಾಮಾನ್ಯವಾಗಿ ಗ್ರಾಮೀಣ ಪ್ರದೇಶದ ಜನಜೀವನಕ್ಕೆ ಸಂಬಂಧಿಸಿದಂತೆ ಅರ್ಥೈಸಲಾಗುತ್ತದೆ. ಆದರೆ ಅದು ಅರಣ್ಯ ಮತ್ತು ಗ್ರಾಮೀಣ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳಿಗೆ ಸೀಮಿತವಾಗಿಲ್ಲ. ನಗರ ಪ್ರದೇಶಕ್ಕೂ ಅದು ಅನ್ವಯವಾಗುತ್ತದೆ. ಹೀಗಾಗಿ ನಗರ ಪ್ರದೇಶವನ್ನೂ ಜನರ ವಾಸಕ್ಕೆ ಯೋಗ್ಯವಾಗಿ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಜನರು ತಮ್ಮ ಮೂಲಕ್ಕೆ ಮರಳಿ ಅಲ್ಲಿನ ನೈಸರ್ಗಿಕ ಸಂಪತ್ತುಗಳನ್ನು ಕಬಳಿಸಲಿದ್ದಾರೆ ಎಂದು ಹೇಳಿದರು. ‘ಚೇಂಜ್ ಮೇಕರ್ಸ್ ಫಾರ್ ಕಾಮನ್ಸ್: ಸೆಲೆಬ್ರೇಟಿಂಗ್ ಅಂಡ್ ಲರ್ನಿಂಗ್ ಫ್ರಮ್ ದಿ ಕಾಮನ್ಸ್ ಕನ್ವೀನಿಂಗ್’ ಎಂಬ ಶೀರ್ಷಿಕೆಯಡಿ ನಡೆದ ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ,…
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ತಿಳಿಸಿದ್ದಾರೆ. https://twitter.com/KarnatakaVarthe/status/1830906396788822484 https://kannadanewsnow.com/kannada/shivamogga-power-supply-will-be-disrupted-in-these-areas-of-nadadu-district-tomorrow-adds/ https://kannadanewsnow.com/kannada/big-news-what-media-actor-darshan-who-is-accused-of-murder-wants-a-tv-in-jail/