Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸೆಪ್ಟೆಂಬರ್.4ರ ನಾಳೆ, ಸೆಪ್ಟೆಂಬರ್.5ರ ನಾಡಿದ್ದು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ನಿರ್ವಹಮಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ದಿನಾಂಕ 04-09-2024 ಮತ್ತು 05-09-2024ರಂದು ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. ಸೆ. 04: ವಿದ್ಯುತ್ ವ್ಯತ್ಯಯ ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯಲ್ಲಿನ ಫೀಡರ್-3ರ 11 ಕೆ.ವಿ. ಮಾರ್ಗಕ್ಕೆ ತಗುಲುವ ಮರಗಳ ಕಡಿತಲೆ ಕಾಮಗಾರಿ ಇರುವುದರಿಂದ ಸೆ. 04 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಚಿಕ್ಕಲ್, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ. ಸೆ. 05: ವಿದ್ಯುತ್ ವ್ಯತ್ಯಯ ಶಿವಮೊಗ್ಗದ ಎಂ.ಆರ್.ಎಸ್. 220 ಕೆವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೇಂದ್ರದ ಮಾರ್ಗಗಳಲ್ಲಿ ಸೆ.…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ ಮಾಡಲಿದೆ. ಅಲ್ಲದೇ ಕೃಷ್ಣರಾಜಪುರಂನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಮೆಯಲ್ಲಿ ಮಾಹಿತಿ ಹಂಚಿಕೊಂಡಿದೆ. I. ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭುವನೇಶ್ವರ-ಬೆಳಗಾವಿ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ (ರೈಲು ಸಂಖ್ಯೆ 02813/02814) ರೈಲುಗಳನ್ನು ಓಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ ರೈಲ್ವೆ ಸೂಚಿಸಿದೆ. ರೈಲು ಸಂಖ್ಯೆ 02813: ಈ ರೈಲು ಸೆಪ್ಟೆಂಬರ್ 7, 14, 21 ಮತ್ತು 28, 2024 ರಂದು ಪ್ರತಿ ಶನಿವಾರ ಭುವನೇಶ್ವರದಿಂದ ಸಾಯಂಕಾಲ 07:15 ಗಂಟೆಗೆ ಹೊರಟು, ಸೋಮವಾರ ಬೆಳಗಿನ ಜಾವ 03:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 02814: ಈ ರೈಲು ಸೆಪ್ಟೆಂಬರ್ 9, 16, 23 ಮತ್ತು 30, 2024 ರಂದು…
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಹಾವೇರಿ ಯಲ್ಲಿ ಹಾವೇರಿ -ಗದಗ ಜಿಲ್ಲೆಗಳ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಖ್ಫ್ ಬೋರ್ಡ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಯಿಂದ ಮಸೀದಿ ಅಭಿವೃದ್ಧಿ, ಕಬಾರಸ್ಥಾನ ನಿರ್ವಹಣೆ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಅನುದಾನದ ಹಣ ದುರ್ಬಳಕೆ ಆಗುತ್ತಿರುವ ದೂರುಗಳು ಬಂದಿವೆ. ಅದೇ ರೀತಿ ಅನುದಾನ ಕೊಡಿಸಿದ್ದೇವೆ ಎಂದು ಲಂಚ ಪಡೆಯುತ್ತಿರುವ ಬಗ್ಗೆಯೂ ಮಾಹಿತಿ ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು. ಯಾರಾದರೂ ಲಂಚ ಕೇಳಿದರೆ ಮೊದಲು ಪೊಲೀಸ್ ಠಾಣೆಗೆ ದೂರು ನೀಡಿ ನನ್ನ ಗಮನಕ್ಕೆ ತನ್ನಿ. ಅವರನ್ನು ಜೈಲಿಗೆ ಹಾಕಿಸುವ ಕೆಲಸ ನಾನೇ ಮಾಡುತ್ತೇನೆ. ಯಾರೇ ಆಗಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಖ್ಫ್ ಆಸ್ತಿ…
ಧಾರವಾಡ : ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಖ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ ಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಗಳ ವಿಚಾರದಲ್ಲಿ ಅಧಿಕಾರಿಗಳು ಗಂಭೀರ ವಾಗಿ ಪರಿಗಣಿಸಬೇಕು. ಒತ್ತುವರಿ ತಡೆದು ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಕಿ ಇದ್ದ 190 ಆಸ್ತಿಗಳ ಪೈಕಿ 100 ಆಸ್ತಿಗಳ ಖಾತೆ ಗಳನ್ನು ಇದೇ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಯಿತು. ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ವಖ್ಫ್ ಆಸ್ತಿಗಳ ವಿಚಾರದಲ್ಲಿ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಅಧಿಕಾರಿಗಳು ಸಹ ಆಸ್ತಿಗಳಿಗೆ ಖಾತೆ…
ಬೆಂಗಳೂರು: ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ಇದಲ್ಲರೇ ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಪ್ರಗತಿಪರ ಚಿತಂಕರರು, ಕರ್ನಾಟಕದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲಟ್ ಅವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜಾತಿವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ರಾಜಭವನವನ್ನು ಪರಿವರ್ತಿಸಿಕೊಂಡಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಿದೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ-ಷಡ್ಯಂತ್ರಗಳ ಭಾಗವಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ…
ಕೋಲ್ಕತಾ: ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಮೂವರನ್ನು ಕೋಲ್ಕತಾ ನ್ಯಾಯಾಲಯ ಮಂಗಳವಾರ ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ಸಂದೀಪ್ ಘೋಷ್ ಮತ್ತು ಇತರ ಮೂವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಬಿಐ ಕೋರಿತ್ತು, ಭ್ರಷ್ಟಾಚಾರ ಪ್ರಕರಣದಲ್ಲಿ ದೊಡ್ಡ ನಂಟು ಒಳಗೊಂಡಿದೆ, ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕಾಗಿದೆ ಎಂದು ವಾದಿಸಿತ್ತು. “ನಾವು ಈಗಷ್ಟೇ ನಾಲ್ವರನ್ನು ಬಂಧಿಸಿದ್ದೇವೆ. ಬಹಿರಂಗಪಡಿಸಬೇಕಾದ ದೊಡ್ಡ ಸಂಬಂಧವಿದೆ, ಆದ್ದರಿಂದ ನಾವು ಅವರ ವಿಚಾರಣೆಯನ್ನು ಕೇಳುತ್ತಿದ್ದೇವೆ. ಸಂಪೂರ್ಣ ಸಂಬಂಧವನ್ನು ಬಹಿರಂಗಪಡಿಸಲು ನಮಗೆ ಅವರ ಕಸ್ಟಡಿ ಬೇಕು” ಎಂದು ಸಿಬಿಐ ಅಲಿಪೋರ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ತಿಳಿಸಿದೆ. ಕಳೆದ ತಿಂಗಳು 31 ವರ್ಷದ ತರಬೇತಿ ವೈದ್ಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಘೋಷ್, ಅವರ ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆಗೆ ಸಾಮಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ಇಬ್ಬರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರವು ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬುದಾಗಿ ಸತ್ಯವನ್ನು ಒಪ್ಪಿಕೊಂಡಿದೆ. ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶದಲ್ಲಿ ಈ ಸತ್ಯ ಬಯಲಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಜ್ಯ ಸರ್ಕಾರವೇ ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬ ಸತ್ಯವನ್ನು ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ಆದೇಶದಲ್ಲಿ ಸತ್ಯ ಬಿಚ್ಚಿಟ್ಟಿದೆ. ಹೀಗಾಗಿ ಈ ಅಮಾನತು ಆದೇಶವೇ ಸಿಎಂ ಸಿದ್ಧರಾಮಯ್ಯ ಅವರಿಗೆ ಮತ್ತೆ ಮುಳುವಾಗುತ್ತಾ ಎನ್ನುವ ಕುತೂಹಲವನ್ನು ಮೂಡಿಸಿದೆ. ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ಆದೇಶದಲ್ಲಿ ಏನಿದೆ.? ನಗರಾಭಿವೃದ್ಧಿ ಇಲಾಖೆಯ ಕಡತದಲ್ಲಿ ಜಿ.ಟಿ.ದಿನೇಶ್ ಕುಮಾರ್, ಕೆ.ಎ.ಎಸ್. (ಸೂ.ಟೈಂ.ಸ್ಕೆ), ಹಿಂದಿನ ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಇವರು…
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳ ಸಂಖ್ಯೆ ನಿಯಂತ್ರಣ ಮಾಡುವುದಕ್ಕೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಹೆದ್ದಾರಿಯಲ್ಲಿ ತೆರಳುವಂತ ವಾಹನಗಳ ಸವಾರರಿಗೆ ವೇಗದ ಮಿತಿಯನ್ನು ನಿಗದಿ ಪಡಿಸಲಾಗಿದೆ. ಆ ವೇಗವನ್ನು ಮೀರಿದ್ದೇ ಆದರೇ ಎಫ್ಐಆರ್ ಜೊತೆಗೆ, ದಂಡ ಫಿಕ್ಸ್ ಆಗಿದೆ. ಈ ಕುರಿತಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅತ್ಯಾಧುನಿಕ ಸಿಸಿಟಿವಿ ಅಳವಡಿಸಲಾಗಿದೆ. ಹೆದ್ದಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ 100 ಕಿಲೋಮೀಟರ್ ಮಿತಿ ನಿಗದಿ ಪಡಿಸಲಾಗಿದೆ. 130 ಕಿಲೋಮೀಟರ್ ವೇಗದಲ್ಲಿ ಚಲಿಸುವಂತ ವಾಹನಗಳ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ದಂಡವನ್ನು ಹಾಕಲಾಗುತ್ತದೆ ಎಂದಿದ್ದಾರೆ. ಐಟಿಎಂಎಸ್ ಕ್ಯಾಮರಾಗಳ ಮೂಲಕ ವಾಹನಗಳ ಮೇಲೆ, ವೇಗ ಮಿತಿ ಮೀರುವವರ ಮೇಲೆ ನಿಗಾ ವಹಿಸಲಾಗಿದೆ. ಈವರೆಗೆ 193 ವಾಹನಗಳ ಮಾಲೀಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. 2 ಲಕ್ಷಕ್ಕೂ ಅಧಿಕ ವಾಹನ…
ಬೆಂಗಳೂರು: ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ ಎಂದಿದ್ದಾರೆ. ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಹೇಳಿದ್ದಾರೆ. ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ…
ಮೈಸೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾಗಿರುವಂತ, ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಸೌಲಭ್ಯವನ್ನು ಒದಗಿಸುವ ದೃಷ್ಠಿಯಿಂದ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದರು. ದಸರಾ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಭಕ್ತರಿಗೆ ಸೌಲಭ್ಯ ಒದಗಿಸಿಕೊಡಬೇಕಿದೆ. ಸ್ವಚ್ಥತೆ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದಂತ ಅವರು, ಸುರಕ್ಷತೆಯ ದೃಷ್ಠಿಯಿಂದ ಸಿಸಿಟಿವಿ ಅಳವಡಿಕೆಗೂ ಸೂಚಿಸಿದರು. ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವ ಸಲುವಾಗಿ ಧೂಮಪಾನ, ಮಧ್ಯಪಾನ, ಗುಟ್ಕಾ ನಿಷೇಧವಿದೆ. ಇದಲ್ಲದೇ ಚಾಮುಂಡಿ ತಾಯಿಯ ದರ್ಶನದ ವೇಳೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/cm-siddaramaiah-appropriate-action-will-be-taken-against-those-concerned-if-quality-arrangements-are-not-provided-at-chamundeshwari-sannidhi-cm-siddaramaiah/ https://kannadanewsnow.com/kannada/shimoga-dc-orders-ban-on-use-of-djs-during-ganesha-eid-milad-festivals-across-the-district/ https://kannadanewsnow.com/kannada/big-news-what-media-actor-darshan-who-is-accused-of-murder-wants-a-tv-in-jail/