Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟರು ಎಂಬುದಾಗಿ ಪದವೀಧರರ ಘಟಕ, ಕೆಪಿಸಿಸಿ, ಹಾಗೂ ಮುಖ್ಯ ವಕ್ತಾರರಾದಂತ ಎ.ಎನ್ ನಟರಾಜ್ ಗೌಡ ಅವರು ಕಿಡಿಕಾರಿದ್ದಾರೆ. ಸಾಂವಿಧಾನಿಕ ಪ್ರಜ್ಞೆಯ ಸಂಕೇತವಾಗಿದ್ದ ರಾಜ್ಯಪಾಲರನ್ನು ಮತ್ತವರು ಕಾರ್ಯನಿರ್ವಹಿಸುವ ರಾಜಭವನವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮ್ಮ ಪಕ್ಷ ಮತ್ತು ಸರ್ಕಾರದ ಏಜಂಟರನ್ನಾಗಿ ಮಾಡಿಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕರಣದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ಜನಾಭಿಪ್ರಾಯ ಮತ್ತು ಜನತಂತ್ರಗಳ ಭಾಗವಾಗಿ ದೇಶಾದ್ಯಂತ ಗೆದ್ದು ಬಂದಿರುವ ತಮಗೆ ರುಚಿಸದ ಸರ್ಕಾರಗಳನ್ನು ಅದರ ಮುಖ್ಯಮಂತ್ರಿಗಳನ್ನು ಕ್ಷುಲ್ಲಕ ಕಾರಣಗಳ ಮೂಲಕ ದಮನಿಸುವ ಬಿ.ಜೆ.ಪಿ ಕಾರ್ಯಸೂಚಿ ಪ್ರಜಾಪ್ರಭತ್ವಕ್ಕೆ ನಾರಕ ಎಂಬುದಯ ಈಗ ಜಗಜ್ಜಾಹಿರಾಗಿದೆ. ಇದಕ್ಕೆ ಕನ್ನಡ ನಾಡಿನ ನೆಲ ಎಂದಿಗೂ ಅವಕಾಶ ಕೊಡುವುದಿಲ್ಲ ಎಂದು ಕೆಪಿಸಿಸಿ ಪದವಿಧರರ ವಿಭಾಗದ ರಾಜ್ಯ ಅಧ್ಯಕ್ಷರಾದ ಎ.ಎನ್.ನಟರಾಜ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ಧದ ಗಣಿ ಹಗರಣದ ತನಿಖೆ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆ ಕಳೆದ 10 ತಿಂಗಳ ಹಿಂದೆಯೇ ರಾಜ್ಯಪಾಲರಿಗೆ ಅನುಮತಿ…
ಬೆಂಗಳೂರು: ಪ್ರಾಸಿಕ್ಯೂಶನ್ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ತಡ ಮಾಡದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರಲ್ಲಿ ಮನವಿ ಮಾಡುವುದಾಗಿ ಹೇಳಿದರು. ಮುಖ್ಯಮಂತ್ರಿಗಳು ಭ್ರಷ್ಟರು ಎಂಬುದು ಸಾಬೀತಾಗಿದೆ. ಇದೇ ಕಾರಣಕ್ಕೆ ನಾವು ಬೆಂಗಳೂರಿನಿAದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೆವು ಎಂದು ಗಮನ ಸೆಳೆದರು. ನಮ್ಮ ಪಾದಯಾತ್ರೆ ತೆರಳುವ ಪ್ರದೇಶದಲ್ಲೇ ಒಂದು ದಿನದ ಮೊದಲು ಕಾಂಗ್ರೆಸ್ಸಿನವರು ಸಭೆ ನಡೆಸಿದ್ದರು. ನಮ್ಮ ಆರೋಪದಲ್ಲಿ ಸತ್ಯ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದರು. ಭಯ ಇಲ್ಲದಿದ್ದರೆ ನಮ್ಮ ಜೊತೆ ಹೆಜ್ಜೆ ಹಾಕಲು ಅವರಿಗೆ ಕಾರಣ ಇರಲಿಲ್ಲ ಎಂದು ತಿಳಿಸಿದರು. ಡಾ. ಅಂಬೇಡ್ಕರ್, ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯದ ಬಗ್ಗೆ ಮಾತನಾಡುವ ಇವರು ತಕ್ಷಣ ರಾಜೀನಾಮೆ ಕೊಡಬೇಕು. ಅಧಿಕಾರಿಗಳು ನ್ಯಾಯ ಎತ್ತಿಹಿಡಿಯುವ ಕೆಲಸ ಮಾಡಬೇಕಿದೆ. ಅವರ ವಿರುದ್ಧ ಎಫ್ಐಆರ್ ಮಾಡಿ ಕಾನೂನು…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಆಗಸ್ಟ್.19ರಂದು ಜಿಲ್ಲಾ ಡಿಸಿಸಿ ಕೇಂದ್ರಗಳ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಈ ಕುರಿತಂತೆ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಪತ್ರವನ್ನು ಬರೆದಿರುವಂತ ಅವರು, ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುತ್ತಾರೆ. ರಾಜ್ಯಪಾಲರ ಈ ಪಕ್ಷಪಾತಿ ನಡೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 19-08-2024 ಬೆಳಿಗ್ಗೆ 11-00 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಈಮೈಲ್ ಮೂಲಕ (presidentofindia@rb.nic.in) ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು (Memorandum) ನೀಡಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಈ ಪ್ರತಿಭಟನೆಯ…
ಬೆಂಗಳೂರು: ಕೋಲ್ಕತಾದಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು, ದಾದಿಯರು ಮತ್ತು ಎಲ್ಲಾ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಗಸ್ಟ್.20 ರಂದು ಸಭೆ ಕರೆಯಲಾಗಿದೆ ಎಂದು ಹೇಳಿದರು. ಈ ಘಟನೆಯನ್ನು ‘ಭಯಾನಕ’ ಎಂದು ಬಣ್ಣಿಸಿದ ಅವರು, ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಜನರ, ವಿಶೇಷವಾಗಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ, ಏಕೆಂದರೆ ಅವರು ಶೇಕಡಾ 50 ಕ್ಕಿಂತ ಹೆಚ್ಚು ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ಆದ್ದರಿಂದ, ಅವರಿಗೆ ಸುರಕ್ಷಿತ ವಾತಾವರಣ ಇರಬೇಕು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ನಾನು ಮಂಗಳವಾರ ಎಲ್ಲಾ ವಿವಿಧ ಸಂಘಗಳು, ವೈದ್ಯರು, ದಾದಿಯರು ಮತ್ತು ನಿರ್ವಹಣಾ ಸಿಬ್ಬಂದಿಗಳ ಸಭೆಯನ್ನು ಕರೆದಿದ್ದೇನೆ… ಅಸ್ತಿತ್ವದಲ್ಲಿರುವ ಕಾನೂನಿನಲ್ಲಿ ಏನಿದೆ, ನಾವು ಏನು ಮಾಡಬಹುದು ಮತ್ತು ಪ್ರೋಟೋಕಾಲ್ಗಳು ಯಾವುವು ಮತ್ತು ನಾವು ಅನುಸರಿಸಬೇಕಾದ ಮಾರ್ಗಸೂಚಿಗಳು ಯಾವುವು ಎಂದು ನಾವು…
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ. ಈ ಬೆನ್ನಲ್ಲೇ ಸರ್ಕಾರಿ ನೌಕರರ ಮತ್ತೊಂದು ಬೇಡಿಕೆಯಾದಂತ ಹಳೆ ಪಿಂಚಣಿ ಯೋಜನೆ ( Old Pension Scheme-OPS ) ಜಾರಿಗೊಳಿಸೋದಕ್ಕೆ ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್ ಕುಮಾರ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ( National Pension Scheme – NPS ) ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿರುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ರಚಿಸಿರುವಂತ ಸಮಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಮಿತಿಯ ಸದಸ್ಯರನ್ನಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾದಂತ ಅಮಲಾನ್ ಆದಿತ್ಯ ಬಿಸ್ವಾಸ್, ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ವಿಶಾಲ್.ಆರ್ ಹಾಗೂ ಆರ್ಥಿಕ ಇಲಾಖೆಯ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದಕ್ಕೆ ತಡೆ ನೀಡದಂತೆ ಕೇವಿಟ್ ಅನ್ನು ಹೈಕೋರರ್ಟ್ ಗೆ ಸಲ್ಲಿಸುವುದಾಗಿ ದೂರುದಾರ ಟಿಜೆ ಅಬ್ರಹಾಂ ತಿಳಿಸಿದ್ದಾರೆ. ಇಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ದೂರುದಾರ ಹಾಗೂ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಾಹಂ ಅವರು, ಸೋಮವಾರ ಕೇವಿಟ್ ಅನ್ನು ಕೋರ್ಟ್ ಗೆ ಸಲ್ಲಿಸಲಾಗುತ್ತದೆ ಎಂದರು. ರಾಜಕೀಯ ಆರೋಪಗಳಿಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾವು ಕೇಳಿಲ್ಲ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ಕೇಳಿದ್ದೇವೆ. ನಮ್ಮ ಮನವಿಯಂತೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು. https://kannadanewsnow.com/kannada/congress-calls-for-state-wide-protest-on-august-19/ https://kannadanewsnow.com/kannada/muda-crisis-for-siddaramaiah-by-vijayendra-demands-resignation/ https://kannadanewsnow.com/kannada/breaking-kuruba-community-backs-cm-siddaramaiah-allows-prosecution/
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.” ಎಂದು ಗಮನ ಸೆಳೆದಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು. ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ…
ಬೆಂಗಳೂರು : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ಎಂದರು. ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು,…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಸಿಡಿದೆದ್ದಿದ್ದು, ರಾಜ್ಯಾಧ್ಯಂತ ಆಗಸ್ಟ್.19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿಯನ್ನು ನೀಡಿದ್ದರು. ಇದು ಕಾನೂನು ಬಾಹಿರವಾಗಿದೆ. ಬಿಜೆಪಿ-ಜೆಡಿಎಸ್ ನಡೆಸಿದಂತ ಷಡ್ಯಂತ್ರವಾಗಿದೆ ಅಂತ ಸಿದ್ಧರಾಮಯ್ಯ ಅವರೇ ಗುಡುಗಿದ್ದರು. ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗೇ ಖಂಡಿಸಿರುವಂತ ಕಾಂಗ್ರೆಸ್ ಪಕ್ಷವು, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದಿಂದ ಸೋಮವಾರದಂದು ರಾಜ್ಯಾಧ್ಯಂತ ಪ್ರತಿಭಟನೆಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. https://kannadanewsnow.com/kannada/security-breach-at-cm-siddaramaiahs-event-youth-barges-into-stage/ https://kannadanewsnow.com/kannada/breaking-kuruba-community-backs-cm-siddaramaiah-allows-prosecution/ https://kannadanewsnow.com/kannada/breaking-this-is-a-politically-motivated-complaint-dcm-dk-shivakumar-to-governors-prosecution/ https://kannadanewsnow.com/kannada/big-conspiracy-has-been-hatched-against-me-there-is-no-question-of-me-resigning-siddaramaiah/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂತಹ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲೇ ಭದ್ರತಾ ವೈಫಲ್ಯ ಉಂಟಾಗಿರುವುದು ಕಂಡು ಬಂದಿದೆ. ಯುವಕನೊಬ್ಬ ವೇದಿಕೆಯ ಬಳಿಗೆ ನುಗ್ಗಿ ಬಂದಾಗ, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ “ಮುಖ್ಯಮಂತ್ರಿಗಳಿಗೆ ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ. ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರುತ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಇದು ನಿಮ್ಮೆಲ್ಲರ ಸರ್ಕಾರ. ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮಸಮಾಜದ ಕನಸು ಕಂಡಿದ್ದರು. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ. ಸಮ…