Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಗೊಂಡ, ರಾಜಗೊಂಡ, ಕಾಡುಕುರುಬ ಹಾಗೂ ಕೊಡಗು ಜಿಲ್ಲೆಯ ಕುರುಬ ಜನಾಂಗಕ್ಕೆ ಸೇರಿದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ವಿತರಣೆಗೆ ಆದೇಶಿಸಿದೆ. ಈ ಕುರಿತಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 25.08.2023 ರಂದು ಸನ್ಮಾನ್ಯ ಮುಖ್ಯ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಗೊಂಡ, ರಾಜಗೊಂಡ, ಕಾಡು ಕುರುಬ ಹಾಗೂ ಕೊಡಗು ಜಿಲ್ಲೆಯ ಕುರುಬ ಜಾತಿಗಳ ಜನಾಂಗಕ್ಕೆ, ಜಾತಿ ಪ್ರಮಾಣ ಪತ್ರ/ಸಿಂಧುತ್ವ, ಪ್ರಮಾಣ ಪತ್ರ ವಡೆಯಲು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಚರ್ಚಿಸಿ ತೆಗೆದುಕೊಂಡ ನಿರ್ಣಯಗಳ ಸಭಾ ನಡವಳಿಯನ್ನಯ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಇತರ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಕೆಳಕಂಡಂತೆ ಕ್ರಮವಹಿಸುವುದು ಎಂದಿದ್ದಾರೆ. 1.ಕರ್ನಾಟಕ ರಾಜ್ಯದಲ್ಲಿ ಜಾತಿ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಲು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆ-ಸೆಟ್ 2023ರ ಪರೀಕ್ಷೆಗೆ ಪ್ರವೇಶ ಪತ್ರವನ್ನು ಜನವರಿ 2, 2024 ರಂದು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು kea.kar.nic.in ಕೆಇಎ ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಬಹುದು. ಕೆ-ಸೆಟ್ ಪರೀಕ್ಷೆಯನ್ನು ಜನವರಿ 13, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಎರಡೂ ಪತ್ರಿಕೆಗಳು ವಸ್ತುನಿಷ್ಠ ಮಾದರಿಯ ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯೂ) ಮಾತ್ರ ಒಳಗೊಂಡಿರುತ್ತವೆ. ಅಭ್ಯರ್ಥಿಯು ಪೇಪರ್ -1 ಮತ್ತು ಪೇಪರ್ -2 ರ ಪ್ರಶ್ನೆಗಳಿಗೆ ಉತ್ತರಗಳನ್ನು ಪರೀಕ್ಷಾ ಕಿರುಪುಸ್ತಕದೊಂದಿಗೆ ಒದಗಿಸಲಾದ ಆಪ್ಟಿಕಲ್ ಮಾರ್ಕ್ಸ್ ರೀಡರ್ (ಒಎಂಆರ್) ಶೀಟ್ ನಲ್ಲಿ ಗುರುತಿಸಬೇಕಾಗುತ್ತದೆ. ತಪ್ಪು ಉತ್ತರಗಳಿಗೆ ಯಾವುದೇ ನಕಾರಾತ್ಮಕ ಅಂಕಗಳಿಲ್ಲ. ಕೆಸೆಟ್ 2023 ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ? ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು. -kea.kar.nic.in ಕೆಇಎ ಅಧಿಕೃತ…
ಬೆಂಗಳೂರು: ಕೆಪಿಟಿಸಿಎಲ್ ನಿಂದ ಕರೆಯಲಾಗಿದ್ದಂತ ವಿವಿಧ ನೇಮಕಾತಿಗಳ ಸಂಬಂಧ, ಅಭ್ಯರ್ಥಿಗಳಿಗೆ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕವಿಪನಿನಿ ಮತ್ತು ಎಸ್ಕಾಂಗಳಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಖಾಲಿ ಇರುವ ವಿವಿಧ ಪದವೃಂದದ ಸಹಾಯಕ ಇಂಜಿನಿಯರ್ (ವಿದ್ಯುತ್), ಸಹಾಯಕ ಇಂಜಿನಿಯರ್(ಸಿವಿಲ್), ಕಿರಿಯ ಇಂಜಿನಿಯರ್(ವಿದ್ಯುತ್), ಕಿರಿಯ ಇಂಜಿನಿಯರ್(ಸಿವಿಲ್) ಹಾಗೂ ಕಿರಿಯ ಸಹಾಯಕ, ಒಟ್ಟು 1492 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 01.02.2022 ರಂದು ಉದ್ಯೋಗ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಆಯ್ಕೆಯನ್ನು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಮಾಡಲಾಗುತ್ತಿದೆ. ಆಪ್ಟಿಟ್ಯೂಡ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಆಪ್ಟಿಟ್ಯೂಡ್ ಪರೀಕ್ಷೆಯನ್ನು ಪ್ರಾಧಿಕಾರವು ಸಫಲವಾಗಿ ಪೂರ್ಣಗೊಳಿಸಿ, ಫೆಬ್ರವರಿ-2023 ರಲ್ಲಿ ಅರ್ಹ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಪ್ರಕಟಿಸಿರುತ್ತದೆ ಎಂದು ತಿಳಿಸಿದೆ. ಈ ಮಧ್ಯೆ, ಕೆಲವು ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಮೀಸಲಾತಿ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊರಡಿಸಲಾದ ಸರ್ಕಾರದ ದಿನಾಂಕ: 01.02.2023 ರ…
ಬೆಂಗಳೂರು: ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ ಹೊಸದಾಗಿ 148 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೋ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಸಕ್ರೀಯ ಸೋಂಕಿತರ ಸಂಖ್ಯೆ 1,144ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಆರ್.ಟಿ ಪಿಸಿಆರ್ ಮೂಲಕ 6,237, RAT ಮೂಲಕ 1068 ಸೇರಿದಂತೆ 7,305 ಮಂದಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ ಅಂತ ಹೇಳಿದೆ. ಇಂದು ಬೆಂಗಳೂರು ನಗರದಲ್ಲಿ 75, ಗ್ರಾಮಾಂತರ 03, ಬಳ್ಳಾರಿ 04, ಚಿಕ್ಕಬಳ್ಳಾಪುರ 05, ಚಿತ್ರದುರ್ಗ 03, ದಕ್ಷಿಣ ಕನ್ನಡ 03, ಧಾರವಾಡ 01, ಗದಗ 03, ಹಾಸನ 18, ಕಲಬುರ್ಗಿ 01, ಕೋಲಾರ 01, ಮೈಸೂರು 02, ರಾಯಚೂರು 03, ತುಮಕೂರು 01, ಉತ್ತರ ಕನ್ನಡ 07 ಹಾಗೂ ವಿಜಯನಗರ 08 ಸೇರಿದಂತೆ 148 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ…
ಬೆಂಗಳೂರು: ದಿನಾಂಕ 13-01-2024 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ-2023 (K-SET-2023) ನಡೆಯಲಿದೆ. ಈ ಪರೀಕ್ಷೆಗಾಗಿ ಕೆಇಎಯಿಂದ ಪ್ರವೇಶಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ದಿನಾಂಕ 13-01-2024ರಂದು ಕೆಸೆಟ್ ಪರೀಕ್ಷೆ-2023 ಅನ್ನು ನಿಗದಿ ಪಡಿಸಲಾಗಿದೆ. ಇಂತಹ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವಂತ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, https://cetonline.karnataka.gov.in/examcenter2023/Forms/hallticket.aspx ಲಿಂಕ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. ಪ್ರವೇಶ ಪತ್ರ ಡೌನ್ ಲೋಡ್ ಹೇಗೆ.? ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳು ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿದಂತ ಇಲಾಖೆ ಎಂಬಲ್ಲಿ ಕೆಸೆಟ್-2024 ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ಬಳಿಕ ಅಭ್ಯರ್ಥಿಗಳು KEA ಅರ್ಜಿ ಸಂಖ್ಯೆಯನ್ನು ನಮೂದಿಸಿಬೇಕು. ಆನಂತ್ರ ಅಭ್ಯರ್ಥಿಯ ಹೆಸರು (ಮೊದಲ ನಾಲ್ಕು ಅಕ್ಷರಗಳು) ಅನ್ನು ನಮೂದಿಸಿಬೇಕು. ಈ ಬಳಿಕ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿದ್ರೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗಲಿದ್ದು, ಡೌನ್ ಲೋಡ್ ಆಗಲಿದೆ.…
ನವದೆಹಲಿ: ಅದಾನಿ-ಹಿಂಡೆನ್ಬರ್ಗ್ ವಿವಾದದ ( Adani-Hindenburg Case ) ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ (ಜನವರಿ 3) ತನ್ನ ತೀರ್ಪನ್ನು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಅದಾನಿ ಗ್ರೂಪ್ ಆಫ್ ಕಂಪನಿಗಳು ಷೇರು ಬೆಲೆ ತಿರುಚುವಿಕೆಗೆ ಸಂಬಂಧಿಸಿದಂತೆ ಹಿಂಡೆನ್ಬರ್ಗ್ ಸಂಶೋಧನಾ ವರದಿಯಲ್ಲಿ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೇಲಿನ ತೀರ್ಪನ್ನು ನವೆಂಬರ್ 24 ರಂದು ಕಾಯ್ದಿರಿಸಿತ್ತು. ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ನಡೆಸಿದ ತನಿಖೆಯನ್ನು ಅನುಮಾನಿಸಲು ಯಾವುದೇ ಪುರಾವೆಗಳಿಲ್ಲ ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಪೀಠ ಮೌಖಿಕವಾಗಿ ಹೇಳಿತ್ತು. ಈ ವಿಷಯವನ್ನು ಪರಿಶೀಲಿಸಲು ನ್ಯಾಯಾಲಯವು ರಚಿಸಿದ ತಜ್ಞರ ಸಮಿತಿಯ ಸದಸ್ಯರ ನಿಷ್ಪಕ್ಷಪಾತದ ವಿರುದ್ಧದ ವಾದಗಳನ್ನು ಸ್ವೀಕರಿಸಲು ನ್ಯಾಯಪೀಠ ಹಿಂಜರಿಯಿತು. ಜನವರಿ 24 ರಂದು, ಯುಎಸ್ ಮೂಲದ ಕಿರು ಮಾರಾಟ…
ಮಂಗಳೂರು: ಇಲ್ಲಿನ ಸುರತ್ಕಲ್ ನ ಕೈಕಂಬ ಬಳಿಯ ಪೊಳಲಿ ದ್ವಾರ ಸಮೀಪ ಖಾಸಗಿ ಬಸ್ ಪಲ್ಟಿಯಾದಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಂಗಳೂರಿನ ಸುರತ್ಕಲ್ ಬಳಿಯ ಕೈಕಂಬದ ಪೊಳಲಿ ದ್ವಾರದ ಬಳಿಯಲ್ಲಿ ಇಂದು ಸಂಜೆ 7.15ರ ಸುಮಾರಿಗೆ ಖಾಸಗಿ ಬಸ್ ವೊಂದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ, ಹಲವರಿಗೆ ಗಾಯವಾಗಿರೋದಾಗಿ ಹೇಳಲಾಗುತ್ತಿದೆ. ಖಾಸಗಿ ಬಸ್ ಪಲ್ಟಿಯಾದಂತ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಚಾಲನ ನಿಯಂತ್ರಣ ತಪ್ಪಿದ್ರೂ, ಸುಮಾರು 100 ಮೀಟರ್ ದೂರ ಬಸ್ ಚಾಲಕ ದೊಡ್ಡ ಅನಾಹುತ ಆಗದಂತೆ ಬಸ್ ನಿಧಾನವಾಗಿ ಪಲ್ಟಿಯಾಗುವಂತೆ ಜಾಗ್ರತೆ ವಹಿಸಿದ್ದಾನೆ ಎನ್ನಲಾಗಿದೆ. ಚಾಲಕನ ಮುಂಜಾಗ್ರತೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು 12 ವಾರಗಳ ಕಾಲ ಮುಂದೂಡಿಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತದಾರರಿಗೆ ಉಚಿತ ಗ್ಯಾರಂಟಿಯ ಮೂಲಕ ಆಮಿಷ ಒಡ್ಡಲಾಗಿದೆ. ಇವುಗಳನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಗೆ ಬ್ರಿಗೆಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಇದೇ ರೀತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೂ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ 12 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಂದಹಾಗೇ ಹೈಕೋರ್ಟ್ ಗೆ ಸಲ್ಲಿಸಲಾಗಿರುವಂತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ, ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಇದಲ್ಲದೇ ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.…
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನು ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಬೆಳವಣಿಗೆಯನ್ನು ತಿಳಿಸುವ ಅಧಿಸೂಚನೆಯನ್ನು ಕೇಂದ್ರ ನ್ಯಾಯಾಂಗ ಇಲಾಖೆ ಡಿಸೆಂಬರ್ 29, 2023 ರಂದು ಹೊರಡಿಸಿತು. ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ, 1987 ರ ಸೆಕ್ಷನ್ 3 ಎ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳು, 1995 ರ ನಿಯಮ 10 ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ನ್ಯಾಯಮೂರ್ತಿ ಗವಾಯಿ ಅವರನ್ನು ಕೇಂದ್ರ ಪ್ರಾಧಿಕಾರವು ಈ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಕಾನೂನು ಸೇವೆಗಳ ಪ್ರಾಧಿಕಾರಗಳು ಸಮಾಜದ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಕಾನೂನು ನೆರವು ಮತ್ತು ಸಹಾಯವನ್ನು ಒದಗಿಸುವ ಕಾರ್ಯವನ್ನು ನಿರ್ವಹಿಸುತ್ತವೆ. ಈ ಹಿಂದೆ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಈ ಹುದ್ದೆಯನ್ನು ಅಲಂಕರಿಸಿದ್ದರು. ನ್ಯಾಯಮೂರ್ತಿ ಖನ್ನಾ ಅವರನ್ನು ಇತ್ತೀಚೆಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ನಲ್ಸಾ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನೇಮಿಸಲಾಯಿತು. https://kannadanewsnow.com/kannada/they-are-plotting-to-kill-me-vidyadharanathasri/ https://kannadanewsnow.com/kannada/ram-janmabhoomi-activist-shrikant-poojary-arrested-15-cases-registered/
ಬೆಂಗಳೂರು : ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ ವಿಷಯ ಎಂದರು. ದೊಡ್ಡ ಒತ್ತುವರಿ ತೆರವಿಗೆ ಸೂಚನೆ ಯಾರೇ ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅದು ಅಪರಾಧ. ಬೆಂಗಳೂರು ನಗರದ ಸುತ್ತಮುತ್ತ ಮತ್ತು ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು. ಈಗಾಗಲೇ ಕೊತ್ತನೂರಿನಲ್ಲಿ 400ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು…