Author: kannadanewsnow09

ಬೆಳಗಾವಿ: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ಗುರುಗಳ ದಯೆಯಿಂದ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತ ಯೋಗವಿದೆ. ಗುರುಗಳ ದಯೆ, ಬಲದಿಂದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನಲ್ಲಿ ಟೆಂಪಲ್ ರನ್ ನಡೆಸುತ್ತಿದ್ದಾರೆ. ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಟೆಂಪಲ್ ರನ್ ಮುಂದುವರೆಸಿದ್ದಾರೆ. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/i-performed-homa-for-my-protection-peace-of-mind-deputy-cm-dk-shivakumar-shivakumar/

Read More

ಬೆಂಗಳೂರು : “ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ” ಎಂದು ಹೇಳಿದರು. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, “ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ” ಎಂದು ಹೇಳಿದರು. ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ…

Read More

ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನಲ್ಲಿ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು. https://kannadanewsnow.com/kannada/los-angeles-wildfire-at-least-10-dead-1-80-lakh-evacuated/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನ ಅನೇಕ ಸ್ಥಳಗಳಲ್ಲಿ ಭೀಕರ ಕಾಡ್ಗಿಚ್ಚು ಭುಗಿಲೆದ್ದಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ 180,000 ಜನರನ್ನು ತಮ್ಮ ಮನೆಗಳನ್ನು ಖಾಲಿ ಮಾಡಲು ಆದೇಶಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಪಿ ವರದಿ ತಿಳಿಸಿದೆ. ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರೀಡಾ ವ್ಯಕ್ತಿಗಳನ್ನು ಹೊಂದಿರುವ ಹೊಗೆ ತುಂಬಿದ ಕಣಿವೆಗಳು ಮತ್ತು ಸುಂದರ ಕಣಿವೆಗಳು ಬೆಂಕಿಯ ಕೆನ್ನಾಲೆಯ ಜ್ವಾಲೆಗಳಲ್ಲಿ ಸುಟ್ಟು ಕರಕಲಾಗಿ ಹೋಗಿದ್ದಾವೆ. ಎಪಿ ವರದಿಯ ಪ್ರಕಾರ, ಜನವರಿ 7 ರಂದು, ಪ್ರಬಲ ಸಾಂಟಾ ಅನಾ ಗಾಳಿಯಿಂದಾಗಿ ಅನೇಕ ಎತ್ತರದ ಬೆಂಕಿಗಳು ವೇಗವಾಗಿ ಹರಡಿದವು. ಕೆಲವು ಸ್ಥಳಗಳಲ್ಲಿ 112 ಕಿ.ಮೀ ವರೆಗೂ ವ್ಯಾಪಿಸಿದವು. ಜನವರಿ 9 ರ ಹೊತ್ತಿಗೆ, ಮಾರುತಗಳು ಇಳಿದಿವೆ. ಆದರೆ ಈ ಮಾರುತಗಳು ಇನ್ನೂ ವೇಗವಾಗಿ ಬೆಂಕಿಯನ್ನು ಹರಡಬಹುದು ಎಂದು ರಾಷ್ಟ್ರೀಯ ಹವಾಮಾನ ಸೇವೆ ಎಚ್ಚರಿಸಿದೆ. ಜನವರಿ 14 ರಂದು (ಮಂಗಳವಾರ) ಮತ್ತೊಂದು ಸುತ್ತಿನ ಬಲವಾದ ಗಾಳಿ ರೂಪುಗೊಳ್ಳಬಹುದು ಎಂದು ಹೇಳಿದರು. ಸದ್ಯಕ್ಕೆ 10 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.…

Read More

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದಲೇ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದ ಶಾಕಿಂಗ್ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ತಂದೆ ಅಶೋಕ್, ತಾಯಿ ಶಾರದಮ್ಮ ಎಂಬುವರನ್ನು ಅವರ ಪುತ್ರಿ ಗಂಗಾಧರಪ್ಪ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/beer-lovers-shocked-by-state-government-will-the-price-hike-be-fixed-from-january-20/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಬೆಂಗಳೂರು: ಜನವರಿ.20, 2025ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಬಿಯರ್ ದರ ಏರಿಕೆಗೆ ಮುಂದಾಗಿರುವುದಾಗಿ ತಿಳಿದು ಬಂದಿದೆ. ಆ ಮೂಲಕ ಮದ್ಯಪ್ರಿಯರಿಗೆ ಶಾಕ್ ನೀಡಲು ಸಜ್ಜಾಗಿದೆ ಎನ್ನಲಾಗುತ್ತಿದೆ.  ರಾಜ್ಯ ಸರ್ಕಾರವು ಶೀಘ್ರವೆ ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 20 ರಿಂದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಐಎಂಎಲ್‌ ಹಾಗೂ ಬಿಯರ್‌ ಸ್ಪ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್‌ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್‌ ಮೇಲಿನ…

Read More

ತಮಿಳುನಾಡು: ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ ವೈರಸ್ ದೃಢಪಟ್ಟಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಂತ ಮಗುವೊಂದಕ್ಕೆ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ ಮಗುವಿಗೆ ಹೆಚ್ ಎಂಪಿವಿ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಇನ್ನೂ ಗಿಂಡಿಯ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಮತ್ತೊಂದು ಮಗುವು ಇದೇ ಲಕ್ಷಣದಿಂದಾಗಿ ಚಿಕಿತ್ಸೆಗೆ ದಾಖಲಾಗಿ ಪಡೆಯುತ್ತಿತ್ತು. ಆ ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಹೆಚ್ ಎಂ ಪಿ ವಿ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಸೋಂಕು ದೃಢಪಟ್ಟು, ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/bjp-mla-chandru-lamanis-car-driver-commits-suicide/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಬಳಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನೀಲ್ ಲಮಾಣಿ(25) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದಂತ ನಿವಾಸದಲ್ಲೇ ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವಂತ ಚಂದ್ರು ಲಮಾಣಿ ಅವರಿಗೆ ಸೇರಿದ ನಿವಾಸದಲ್ಲಿ ಈ ಘಟನೆ ನಡೆದಿದೆ. ಸುನೀಲ್ ಲಮಾಣಿ ಅವರು ಕೌಟುಂಬಿಕ ಕಲಹದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/recruitment-rally-for-airmen-recruitment-to-be-held-in-shimoga-from-jan-29/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಶಿವಮೊಗ್ಗ : ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ಏರ್ಪಡಿಸಲಾಗಿದೆ. ಜ.29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 ಅಭ್ಯರ್ಥಿಗಳು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಹಾಜರಾಗಬಹುದು. ಫೆ.04 ರಿಂದ 05 ರವರೆಗೆ ಗುಂಪು ವೈ/ವೈದ್ಯಕೀಯ ಸಹಾಯಕ ಹುದ್ದೆ, ವಿದ್ಯಾರ್ಹತೆ ಫಾರ್ಮಸಿಯಲ್ಲಿ ಡಿಪ್ಲೊಮಾ/ಬಿಎಸ್‌ಸಿ ಹೊಂದಿರುವ ಅಭ್ಯರ್ಥಿಗಳು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು ಪುದುಚೇರಿ ಹಾಗೂ ಲಕ್ಷದ್ವೀಪಗಳು ಕೇಂದ್ರಾಡಳಿತ ಪ್ರದೇಶಗಳ ಅಭ್ಯರ್ಥಿಗಳು ಹಾಜರಾಗಬಹುದು. ವೈದ್ಯಕೀಯ ಸಹಾಯಕ ವೃತ್ತಿಗೆ 10+2 ಹೊಂದಿರುವ ಅಭ್ಯರ್ಥಿಗಳು ಅವಿವಾಹಿತರಾಗಿರೇಕು. 2004ರ ಜುಲೈ 03…

Read More

ಶಿವಮೊಗ್ಗ: ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಸಂಕ್ರಾಂತಿ ಹಬ್ಬದ ಹಿನ್ನೆಲೆ ದಿನಾಂಕ: 14-01-2025 ರ ಮಂಗಳವಾರ ಸಹ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಜ.14 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/shivamogga-anjani-tigress-found-dead-in-thyavarekoppa/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More