Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಬಿಎಂಪಿಯಿಂದ ಬರಬೇಕಿರುವಂತ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ನಾಳೆಯಿಂದ ಗುತ್ತಿಗೆದಾರರು ಎಲ್ಲಾ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಪ್ರತಿಭಟನೆಗೆ ಇಳಿಯುತ್ತಿದ್ದಾರೆ. ಈ ಮೂಲಕ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಗುತ್ತಿಗೆದಾರರ ಸಂಘದಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿಯಿಂದ ಶೇ.75ರಷ್ಟು ಕಾಮಗಾರಿಯ ಬಿಲ್ ಬಿಡುಗಡೆ ಮಾಡಲಾಗಿದೆ. ಇನ್ನೂ ಶೇ.25ರಷ್ಟು ಬಿಲ್ ಬಾಕಿ ಇದೆ. ಇದನ್ನು ಬಿಡುಗಡೆ ಮಾಡುವವರೆಗೂ ಎಲ್ಲಾ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ. ಗುತ್ತಿಗೆದಾರರು ನಡೆಸಿದಂತ ಕಾಮಗಾರಿಯ ಬರೋಬ್ಬರಿ 1600 ಕೋಟಿ ಹಣ ಬಾಕಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಳಿಸಿಕೊಂಡಿದೆ. ಕಳೆದ 2 ವರ್ಷದಿಂದ ಬಿಲ್ ಬಾಕಿ ಉಳಿಸಿಕೊಂಡಿದೆ. ಬಾಕಿ ಬಿಲ್ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಮನವಿ ಮಾಡಲಾಗಿತ್ತು ಎಂದಿದೆ. ಈವರೆಗೆ ಶೇ.25ರಷ್ಟು ಬಾಕಿ ಇರುವಂತ ಕಾಮಗಾರಿ ಬಿಲ್ ಅನ್ನು ಬಿಬಿಎಂಪಿ ಬಿಡುಗಡೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ಬಾಕಿ ಬಿಲ್ ಪಾವತಿಯಾಗುವವರೆಗೂ ನಾಳೆಯಿಂದ ಮುಷ್ಕರ ನಡೆಸಲಾಗುತ್ತಿದೆ. ಗುತ್ತಿಗೆದಾರರಿಂದ ಎಲ್ಲಾ ಕಾಮಗಾರಿ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/free-lpg-cylinder-for-women-what-are-the-applying-eligibility-criteria-documents-heres-the-information/…
ನವದೆಹಲಿ: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಚಿತವಾಗಿ ಎಲ್ ಪಿ ಜಿ ಸಿಲಿಂಡರ್ ನೀಡಲಾಗುತ್ತಿದೆ. ಇದಕ್ಕಾಗಿ ಪಿಎಂ ಉಜ್ವಲ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೆ ಈ ಯೋಜನೆಯ ಲಾಭ ಪಡೆಯಲು ಅರ್ಹತಾ ಮಾನದಂಡಗಳು ಏನು? ದಾಖಲೆಗಳು ಏನು ಎನ್ನುವ ಬಗ್ಗೆ ಮುಂದೆ ಓದಿ. ಪಿಎಂ ಉಜ್ವಲ್ ಯೋಜನಾ 2.0 ಅಡಿ, ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು, ಮಹಿಳೆಯರು ನೋಂದಾಯಿಸಿಕೊಳ್ಳಬೇಕಿದೆ. ಹೀಗೆ ನೋಂದಾಯಿಸಿಕೊಂಡಂತ ಅರ್ಹ ಮಹಿಳೆಯರಿಗೆ ಉಚಿತ ಸಿಲಿಂಡರ್ ಮತ್ತು ಒಲೆ ನೀಡಲಾಗುತ್ತದೆ. ಅರ್ಹತಾ ಮಾನದಂಡಗಳು ಏನು? ಅರ್ಜಿದಾರರು ಮಹಿಳೆಯಾಗಿರಬೇಕು. ಅರ್ಜಿದಾರ ಮಹಿಳೆಯು ಮನೆಯ ಮುಖ್ಯಸ್ಥೆಯಾಗಿರಬೇಕು 18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರವೇ ಅರ್ಜಿಯನ್ನು ಸಲ್ಲಿಸಬಹುದು. ದಾಖಲೆಗಳು ಏನೇನು ಬೇಕು? ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯ ಪಾಸ್ ವಿವರ ಮೊಬೈಲ್ ಸಂಖ್ಯೆ ಪಾಸ್ ಪೋರ್ಟ್ ಅಳತೆಯ ಪೋಟೋ ಪಡಿತರ ಚೀಟಿ ನೋಂದಣಿ ಮಾಡಿಕೊಳ್ಳುವುದು ಹೇಗೆ? ಉಜ್ವಲ ಯೋಜನೆ 2.0 ಗಾಗಿ ನೋಂದಾಯಿಸಲು ಹಲವಾರು ಮಾರ್ಗಗಳಿವೆ: ಜನ ಸೇವಾ ಕೇಂದ್ರ: ನಿಮ್ಮ ಹತ್ತಿರದ ಜನ ಸೇವಾ ಕೇಂದ್ರಕ್ಕೆ ಭೇಟಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಪ್ರತಿ ತಿಂಗಳು ರೂ.2000 ಯಜಮಾನಿ ಮಹಿಳೆಯರ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ. ಬರೋಬ್ಬರಿ ಒಂದು ವರ್ಷ ಪೂರೈಸಿರುವಂತ ಗೃಹಲಕ್ಷ್ಮಿ ಯೋಜನೆ ಆರಂಭದ ಬಳಿಕ, ಯಜಮಾನಿಯರಿಗೆ ನೆರವಾಗಿದ್ದು ಮಾತ್ರ ವಿವಿಧ ರೀತಿಯಲ್ಲಿ ಆಗಿದೆ. ಹಾಗಾದ್ರೇ ಆ ಯಶೋಗಾಥೆ ಓದಿ, ನೀವೇ ಅಚ್ಚರಿ ಪಡ್ತೀರಿ. ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ನೆರವಾಗಿದ್ದು ಗೃಹಲಕ್ಷ್ಮಿ ಯೋಜನೆಯ ಹಣವಾಗಿದೆ. ಗೃಹ ಲಕ್ಷ್ಮೀ ಯೋಜನೆಯ ಹಣ ಆಸರೆಯಾಗಿ, ಶಿಕ್ಷಣ ಪಡೆಯಲು ನೆರವಾಗಿದ್ದು, ಈ ಯೋಜನೆಯ ಸಾರ್ಥಕತೆಗೆ ಮತ್ತೊಂದು ಸಾಕ್ಷಿಯಾಗಿದೆ. ತಂದೆಯನ್ನು ಕಳೆದುಕೊಂಡ ಕುಟುಂಬಕ್ಕೆ ತಾಯಿಯೇ ಆಸರೆಯಾಗಿದ್ದರು. ಅವರಿಗೆ ಬರುತ್ತಿದ್ದ ಗೃಹಲಕ್ಷ್ಮಿ ಹಣವು ವೇದಾಂತ್ ಅವರ ಅಧ್ಯಯನ ಮತ್ತು ಹಾಸ್ಟೆಲ್ ವಾಸ್ತವ್ಯ ಹಾಗೂ ಇತರೆ ಖರ್ಚುಗಳಿಗೆ ಸಹಕಾರಿಯಾಗಿದೆ. ಒಟ್ಟಾರೆಯಾಗಿ ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು. ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ…
ಬೆಂಗಳೂರು: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್ ಎನ್ನುವಂತೆ, ಬೆಂಗಳೂರಿನ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಬಳಿ ಇರುವಂತ ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್ ಇರಲಿದೆ. ಈ ಕುರಿತಂತೆ ಜಯದೇವ ಆಸ್ಪತ್ರೆಯ ನಿರ್ದೇಶಕರಾದಂತ ಡಾ.ಕೆಎಸ್ ರವೀಂದ್ರನಾಥ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿಯಲ್ಲಿನ ಜಯದೇವ ಆಸ್ಪತ್ರೆ 24 ಗಂಟೆಗಳ ಕಾಲ ಓಪನ್ ಇರಲಿದೆ. ಸಂಜೆ 4 ಗಂಟೆಗೆ ಕ್ಲೋಸ್ ಆಗುತ್ತಿದ್ದಂತ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. ದಿನಾಂಕ 01-09-2024ರಿಂದ ಜಾರಿಗೆ ಬರುವಂತೆ ಜಯದೇವ ಸ್ಯಾಟಲೈಟ್ ಸೆಂಟರ್, ಕೆಸಿ ಜನರಲ್ ಆಸ್ಪತ್ರೆ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು ಇದು 24 ಗಂಟೆ ಹೃದ್ರೋಗಿಗಳ ಸೇವೆಗೆ ತೆರೆದಿರಲಿದೆ. ರೋಗಿಗಳು ಈ ಅವಕಾಶವನ್ನು ಉಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅಂದಹಾಗೇ ಈಗಾಗಲೇ ಬನ್ನೇರುಘಟ್ಟ ರಸ್ತೆಯಲ್ಲಿರುವಂತ ಜಯದೇವ ಹೃದ್ರೋಗ ಆಸ್ಪತ್ರೆ 24 ಗಂಟೆ ತೆರದು ರೋಗಿಗಳಿಗೆ ಸೇವೆ ಒದಗಿಸಲಾಗುತ್ತಿದೆ. ಈಗ…
ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಮಾಹಿತಿ ನೀಡಿದರು. “ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ” ಎಂದು ತಿಳಿಸಿದರು. “ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಅಲ್ಲದೇ ಇದರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂಬುದಾಗಿ ರಾಜಭವನದ ಕಚೇರಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜಭವನವು ಮಾಹಿತಿ ಬಿಡುಗಡೆ ಮಾಡಿದ್ದು, ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿಗಳು ಬಾಕಿ ಇಲ್ಲ ಎಂಬುದಾಗಿ ತಿಳಿಸಿದೆ. ಈ ಮೂಲಕ ರಾಜಭವನ ಚಲೋ ನಡೆಸಿದ್ದ ಬೆನ್ನಲ್ಲೇ ಅಚ್ಚರಿಯ ಮಾಹಿತಿ ರಾಜಭವನದಿಂದ ಹೊರ ಬಿದ್ದಿದೆ. ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ಧನ ರೆಡ್ಡಿ ವಿರುದ್ದದ ಪ್ರಕರಣಗಳಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಯನ್ನೇ ನೀಡಿಲ್ಲ. ಆ ಪ್ರಕರಣಗಳಿಗೂ ಸಿದ್ಧರಾಮಯ್ಯ ವಿರುದ್ಧ ಅನುಮತಿ ನೀಡಿದಂತೆ ನೀಡುವಂತೆ ಆಗ್ರಹಿಸಲಾಗಿತ್ತು. ಈ ಬೆನ್ನಲ್ಲೇ ರಾಜಭವನದ ಈ ಸ್ಪಷ್ಟನೆ ಅಚ್ಚರಿಕೆ ಕಾರಣವಾಗಿದೆ. https://kannadanewsnow.com/kannada/cm-siddaramaiah-is-like-a-tiger-no-one-will-ever-be-afraid-minister-zameer-ahmed/…
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಟಗರು ಇದ್ದಂತೆ. ಅವರು ಯಾರಿಗೂ, ಯಾವತ್ತಿಗೂ ಭಯ ಬೀಳೋದಿಲ್ಲ ಎಂಬುದಾಗಿ ಸಿಎಂ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾತ್ರ ಏನೂ ಇಲ್ಲ. ಸಿದ್ದರಾಮಯ್ಯ ಹುಲಿ ಇದ್ದಂತೆ ಎಂದರು. ಬಿಜೆಪಿಯವರಿಗೆ ಹಿಂದುಳಿದ ನಾಯಕನಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಸಹಿಸಲು ಆಗ್ತಿಲ್ಲ. ಈ ಕಾರಣಕ್ಕೆ ಮುಡಾ ಹಗರಣ ಹೊರತಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಟಗರು ಇದ್ದಂತೆ. ಯಾರಿಗೂ ಯಾವತ್ತಿಗೂ ಭಯ ಬೀಳೋದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/a-youth-of-jk-will-show-exit-gate-to-modi-company-on-1st-kharge/ https://kannadanewsnow.com/kannada/for-those-who-have-included-their-names-in-the-ration-card-check-your-name-on-the-ration-card-like-this/
ಕಲಬುರ್ಗಿ: ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಆರೋಪಿಯನ್ನು ಬಂಧಿಸಿರುವಂತ ಘಟನೆ ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಎಂಬಾತನನ್ನು ಬಂದಿಸೋದಕ್ಕೆ ಕಲಬುರ್ಗಿ ಸಬ್ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ತೆರಳಿದ್ದಾರೆ. ಪೊಲೀಸರು ಬಂಧಿಸೋದಕ್ಕೆ ಬಂದಿರುವಂತ ವಿಷಯ ತಿಳಿದಂತ ದರೋಡೆಕೋರ ಅವತಾರ್ ಸಿಂಗ್ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನಿಸಿದ್ದಾನೆ. ಅಲ್ಲದೇ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದಂತ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಕಾಲಿಗೆ ಕಲಬುರ್ಗಿ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಸಂತೋಷ್ ತಟ್ಟೆಪಲ್ಲಿ ಅವರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಅಂದಹಾಗೇ ದರೋಡೆಕೋರ ಅವತಾರ್ ಸಿಂಗ್ ವಿರುದ್ಧ ಕಲಬುರ್ಗಿಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದಾವೆ. ಈ ಪ್ರಕರಣಗಳಲ್ಲಿ ಬೇಕಿದ್ದಂತ ಆರೋಪಿಯನ್ನು ಬಂಧಿಸೋದಕ್ಕೆ ತೆರಳಿದಂತ ವೇಳೆಯಲ್ಲಿ ಪೊಲೀಸರ ಮೇಲೆಗೆ ಹಲ್ಲೆಗೆ ಯತ್ನಿಸಿದ ಕಾರಣ, ಕಾಲಿಗೆ ಗುಂಟೇಡು ನೀಡಿ, ಬಂಧಿಸಲಾಗಿದೆ.…
ಬೆಂಗಳೂರು: ಇಲ್ಲಿನ ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದಂತ ರೌಡಿ ಶೀಟರ್ ಬಂಧಿಸಲು ತೆರಿದ್ದಂತ ವೇಳೆಯಲ್ಲಿ ಹಲ್ಲೆ ನಡೆಸಲು ಪರಾರಿಯಾಗಲು ಯತ್ನಿಸಿದ್ದಕ್ಕೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ, ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಬಾಸ್ ಪೇಟೆಯ ಬಳಿಯಲ್ಲಿ ರೌಡಿ ಶೀಟರ್ ಜಯಂತ್ ಎಂಬಾತ ಇದ್ದಂತ ಸ್ಥಳದ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ಆಧರಿಸಿ, ರೌಡಿ ಶೀಟರ್ ಜಯಂತ್ ಬಂಧಿಸೋದಕ್ಕೆ ಪೊಲೀಸರು ತೆರಳಿದ್ದಾರೆ. ಈ ಸಂದರ್ಭದಲ್ಲಿ ಹೆಡ್ ಕಾನ್ ಸ್ಟೇಬಲ್ ಇಮ್ರಾನ್ ಖಾನ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ರಾಜು ಅವರು ರೌಡಿ ಶೀಟರ್ ಜಯಂತ್ ಕಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಬಂದಿತ ರೌಡಿ ಶೀಟರ್ ಜಯಂತ್ ಪಲ್ಸರ್ ಬೈಕ್ ನಲ್ಲಿ ಬಂದು ಹೆದ್ದಾರಿಯಲ್ಲಿ ಬೆದರಿಸಿ ಹಲವರನ್ನು ದರೋಡೆ ಮಾಡುತ್ತಿದ್ದನು. ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ…
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದಂತ ಕೋವಿಡ್-19 ಸಂದರ್ಭದಲ್ಲಿನ ಹಗರಣಗಳ ಕುರಿತಂತೆ ತನಿಖೆ ನಡೆಸಿದ್ದಂತ ತನಿಖಾ ಆಯೋಗವು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಇವರ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಯಿತು. ಅವರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳಿಗೆ ಸಂಬಂಧಿಸಿದಂತೆ ತಯಾರಿಸಿದ್ದಂತ ವರದಿಯನ್ನು ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://kannadanewsnow.com/kannada/sagar-range-forest-officer-seizes-illegal-beet-nata-stock/ https://kannadanewsnow.com/kannada/police-personnel-on-duty-die-of-heart-attack-in-gadag/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/