Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣಸೌಧ : ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಆಧ್ಯಾತ್ಮಿಕ ಚಿಂತಕ ಸ್ವಾಮಿ ವಿವೇಕಾನಂದ ಮತ್ತು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ್, ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ವರ್ಣಚಿತ್ರಗಳನ್ನು ವಿಧಾನ ಸಭೆಯ ಅಧಿಕಾರಿಗಳ ಗ್ಯಾಲರಿ ಹಾಗೂ ಪರ್ತಕತ್ರ ಗ್ಯಾಲರಿ ಮೇಲ್ಬಾಗ ಅಳವಡಿಸಲಾಗಿದೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷರು ತಮ್ಮ ವಿವೇಚನೆ ಬಳಿಸಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಸಮಾಜ ಸುಧಾರಣೆ ಕೈಗೊಂಡ ಮಹಿನೀಯರು,…
ಮಧ್ಯಪ್ರದೇಶ: ಇಲ್ಲಿನ ಇಂದೋರ್ ಅನ್ನು ಭಿಕ್ಷುಕರಿಂದ ಮುಕ್ತಗೊಳಿಸುವ ಪ್ರಯತ್ನದಲ್ಲಿ, ಜಿಲ್ಲಾಡಳಿತವು ಸೋಮವಾರ (ಡಿಸೆಂಬರ್ 16, 2024) ಭಿಕ್ಷೆ ನೀಡುವವರ ವಿರುದ್ಧ 2025 ರ ಜನವರಿ 1 ರಿಂದ ಎಫ್ಐಆರ್ ದಾಖಲಿಸಲು ಪ್ರಾರಂಭಿಸುತ್ತದೆ ಎಂದು ಜಿಲ್ಲಾಡಳಿತ ಸೋಮವಾರ (ಡಿಸೆಂಬರ್ 16, 2024) ತಿಳಿಸಿದೆ. ಇಂದೋರ್ನಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಆಡಳಿತವು ಈಗಾಗಲೇ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. “ಭಿಕ್ಷಾಟನೆಯ ವಿರುದ್ಧ ನಮ್ಮ ಜಾಗೃತಿ ಅಭಿಯಾನವು ಈ ತಿಂಗಳ ಅಂತ್ಯದವರೆಗೆ (ಡಿಸೆಂಬರ್) ನಗರದಲ್ಲಿ ಮುಂದುವರಿಯುತ್ತದೆ. ಜನವರಿ 1 ರಿಂದ ಯಾವುದೇ ವ್ಯಕ್ತಿಯು ಭಿಕ್ಷೆ ನೀಡುವುದು ಕಂಡುಬಂದರೆ, ಅವನ / ಅವಳ ವಿರುದ್ಧ ಎಫ್ಐಆರ್ ಸಹ ದಾಖಲಿಸಲಾಗುವುದು” ಎಂದು ಅವರು ಹೇಳಿದರು. ಮಧ್ಯಪ್ರದೇಶದ ಇಂದೋರ್ ಅನ್ನು ಭಿಕ್ಷುಕರಿಂದ ಮುಕ್ತಗೊಳಿಸುವ ಪ್ರಯತ್ನದಲ್ಲಿ, ಜಿಲ್ಲಾಡಳಿತವು ಸೋಮವಾರ (ಡಿಸೆಂಬರ್ 16, 2024) ಭಿಕ್ಷೆ ನೀಡುವವರ ವಿರುದ್ಧ 2025 ರ ಜನವರಿ 1 ರಿಂದ ಎಫ್ಐಆರ್ ದಾಖಲಿಸಲು ಪ್ರಾರಂಭಿಸುತ್ತದೆ ಎಂದು ಜಿಲ್ಲಾಡಳಿತ ಸೋಮವಾರ (ಡಿಸೆಂಬರ್ 16, 2024)…
ಬೆಳಗಾವಿ : ಬಡವರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್ ಶಾಸ್ತ್ರಿ ಚಿಟ್ಫಂಡ್ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು. “ಚೈನ್ಲಿಂಕ್, ಚಿಟ್ಫಂಡ್, ಪಿರಮಿಡ್ ಮಾದರಿ ಹಾಗೂ ಹಣ ಡಬ್ಲಿಂಗ್ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ…
ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಸೋಮವಾರ ನಡೆದ ಕಲಾಪದಲ್ಲಿ ಸದಸ್ಯ ಎಂ.ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಕಾರವಾರ, ಮಂಡ್ಯ, ಶಿವಮೊಗ್ಗ, ಮೈಸೂರು ಮತ್ತು ತುಮಕೂರಿನಲ್ಲಿ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆಯನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಒಂದು ವೇಳೆ ಸೂಕ್ತ ಕಡೆ ನಿವೇಶನ ಸಿಕ್ಕರೆ ಬೆಳಗಾವಿಯಲ್ಲಿ ಅತ್ಯಂತ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಮೊದಲು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಯಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ತೆರೆಯಬೇಕೆಂಬ ಆಲೋಚನೆ…
ಬೆಳಗಾವಿ ಸುವರ್ಣಸೌಧ: ರಾಜ್ಯದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ಇ ಪಠ್ಯಕ್ರಮ ಅಳವಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಘೋಷಿಸಿದ್ದಾರೆ. ಇಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಎಸ್ ಬಂಗಾರಪ್ಪ ಅವರು ಉತ್ತರಿಸಿದರು. ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದರು ತಿಳಿಸಿದರು. https://twitter.com/KarnatakaVarthe/status/1868632993084186905 https://kannadanewsnow.com/kannada/farmer-killed-in-bee-attack-in-mandya/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/
ಬೆಳಗಾವಿ ಸುವರ್ಣಸೌಧ : ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲೀನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಕಳೆದ ಜೂನ್ ಮಾಹೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಡಿಸೆಂಬರ್ 16ರಂದು ಸದಸ್ಯರಾದ ಕುಶಾಲಪ್ಪ ಎಂ.ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ತಜ್ಞರ ಸಮಿತಿಯ ಸದಸ್ಯರು ಈಗಾಗಲೇ ಎರಡು ಬಾರಿ ಸಭೆ ನಡೆಸಿದ್ದಾರೆ. ತಜ್ಞರ ಸಮಿತಿಯು ಕಳೆದ ಜುಲೈ 4ರಂದು ಮೈಸೂರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿಗೆ ಭೇಟಿ ನೀಡಿ ನದಿಯ ಮಾಲಿನ್ಯದ ಬಗ್ಗೆ ಸದಸ್ಯರಿಂದ ವ್ಯಕ್ತವಾದ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದಿರುತ್ತದೆ. ಕಾವೇರಿ ನದಿಯ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗಳ ಅಧಿಕಾರಿಗಳಿಂದ ಮಾಹಿತಿ…
ಮಂಡ್ಯ: ಜಿಲ್ಲೆಯಲ್ಲಿ ಹೆಜ್ಜೇನು ದಾಳಿಯಿಂದಾಗಿ ರೈತನೊಬ್ಬ ಸಾವನ್ನಪ್ಪಿರುವಂತ ಘಟನೆ ಮಳವಳ್ಳಿಯ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ರೈತ ನಿಂಗೇಗೌಡ ಎಂಬುವರು ರೇಷ್ಮೆ ಸೊಪ್ಪು ಕೊಯ್ಯೋದಕ್ಕೆ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆಯಲ್ಲಿ ರೈತ ನಿಂಗೇಗೌಡ ಅವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು ದಾಳಿಯಿಂದಾಗಿ ತೀವ್ರವಾಗಿ ರೈತ ನಿಂಗೇಗೌಡ ಅಸ್ವಸ್ಥಗೊಂಡಿದ್ದರು. ಅವರನ್ನು ಮಳವಳ್ಳಿಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ರೈತ ನಿಂಗೇಗೌಡ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/bruhat-bengaluru-mahanagara-palike-bbmp-2nd-amendment-bill-2024-passed-in-assembly/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/
ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ವಿವಿಧ ಬಗೆಯ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ, ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಕೈಗೆಟುಕುವ ಬೆಲೆಯಲ್ಲಿ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಆರ್ ಪಾಟೀಲ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಬಡತನ ರೇಖೆಗಿಂತ ಕಡಿಮೆ (BPL) ಇರುವ ಕುಟುಂಬಗಳಿಗೆ Ab-Ark (ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ) ಯೋಜನೆಯಡಿಯಲ್ಲಿ ರೂ.5.00 ಲಕ್ಷದವರೆಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಬಡತನ ರೇಖೆಗಿಂತ ಮೇಲಿರುವ (APL) ಕುಟುಂಬಗಳಿಗೆ ರಿಯಾಯಿತಿ ಅಂದರೆ 30% ಸರ್ಕಾರದ ಅಡಿಯಿಂದ ಮತ್ತು 70% ರೋಗಿಗಳಿಂದ ಪಡೆದು ಚಿಕಿತ್ಸೆಗಾಗಿ ಭರಿಸಲಾಗುತ್ತದೆ. ಇದಲ್ಲದೇ SCP…
ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು. “ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. 3 ಲಕ್ಷ ಆಸ್ತಿಗಳಿಂದ 1200 ಕೋಟಿ ಬಾಕಿ ವಸೂಲಿ ಮಾಡಲಾಗಿದೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ” ಎಂದು ಮಾಹಿತಿ ನೀಡಿದರು. “2024ರ ನವೆಂಬರ್ 30ರವರೆಗೆ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈ ಸಂಬಂಧ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು, ಈಗ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಿಕೊಡಬೇಕು” ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ 30 ವರ್ಷಗಳ ಬಳಿಕ ನೆರವೇರುತ್ತಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಲಿದ್ದು ಗಣ್ಯರು, ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವ ಹೊಣೆ ಪೊಲೀಸರ ಮೇಲಿದ್ದು, ಯಾವುದೇ ಅನಾಹುತಕ್ಕೆ ಎಡೆಮಾಡಿಕೊಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೊಲೀಸ್ ಬಂದೋಬಸ್ತ್ ಸಭೆಯಲ್ಲಿ ಮಾತನಾಡಿದ ಸಚಿವರು, ಸಮ್ಮೇಳನಕ್ಕೆ ಆಗಮಿಸುವವರಿಗೆ ಸಂಚಾರ ಮಾರ್ಗದ ಫಲಕಗಳು ಹಾಗೂ ಆಗಮನ, ನಿರ್ಗಮನದ ಸ್ಥಳಗಳ ಕುರಿತ ಸೂಚನಾ ಫಲಕಗಳನ್ನು ಹೆದ್ದಾರಿಗಳಲ್ಲಿ ಹಾಕಬೇಕು. ಜನದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ವ್ಯಾಪಕವಾಗಿ ಪೊಲೀಸ್ ಬಂದೋಬಸ್ತ್ ಆಗಬೇಕು ಎಂದರು. ಸಮ್ಮೇಳನದ ಸಂಬಂಧ ಪೊಲೀಸ್ ಬಂದೋಬಸ್ತ್ ಗೆ ನಿಯೋಜನೆಗೊಳ್ಳಲಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ…













