Author: kannadanewsnow09

ಸಕಲೇಶಪುರ: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಾಗುತ್ತೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇಂದು ಇಲ್ಲಿನ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರೊಂದಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂದು ಹೇಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಟಾಂಗ್‌ ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಅವರು ಯಾವ ಅರ್ಥದಲ್ಲಿ ಸೇನೆಯನ್ನು ಕರೆಸಬೇಕು ಎಂದು ಹೇಳಿದ್ದಾರೋ ಗೊತ್ತಿಲ್ಲ ಎಂದು ಚುಚ್ಚಿದರು. ಪಾಪ.. ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ, ಮಿಲಿಟರಿ ತರಬೇಕು ಎಂದು. ಅವರು ಮಿಲಿಟರಿಯನ್ನು ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಅವರು ಕೇಂದ್ರ ಸಚಿವರು ತಿರುಗೇಟು ಕೊಟ್ಟರು ಕೇಂದ್ರ…

Read More

ಸಕಲೇಶಪುರ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಇಲ್ಲಿನ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರೊಂದಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರತಿಯೊಂದಕ್ಕೂ ಕೇಂದ್ರ ಸರಕಾರದ ಸಹಕಾರ ಕೇಳುವ ರಾಜ್ಯ ಸರಕಾರವು ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ನಿನ್ನೆಯ ದಿನ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್‌ ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಕುಮಾರಸ್ವಾಮಿ ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು ಎಷ್ಟು ಸರಿ…

Read More

ಕುವೈತ್: ನಗರದ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ರಾಯಿಟರ್ಸ್ ಉದ್ಯೋಗಿ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಜುಲೈ 19 ರಂದು ತಡರಾತ್ರಿ ಈ ದುರಂತ ಘಟನೆ ನಡೆದಿದ್ದು, ಅವರು ರಜೆಯ ನಂತರ ಕೇರಳದಿಂದ ಹಿಂದಿರುಗಿದ ದಿನವೇ ಈ ದುರಂತ ಘಟನೆ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದಿ ಅರಬ್ ಟೈಮ್ಸ್ ಪ್ರಕಟಿಸಿದ ವರದಿಯ ಪ್ರಕಾರ, ಅಬ್ಬಾಸಿಯಾ ಪ್ರದೇಶದ ಎರಡನೇ ಮಹಡಿಯ ಫ್ಲ್ಯಾಟ್ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಹವಾನಿಯಂತ್ರಣದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದಾಗಿ ಭಾರತೀಯ ದಂಪತಿಗಳಾದ ಮ್ಯಾಥ್ಯೂಸ್ ಮುಲಕ್ಕಲ್ ಮತ್ತು ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಅವರ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಅಲಪ್ಪುಳ ಜಿಲ್ಲೆಯ ನೀರಟ್ಟುಪುರಂ ಮೂಲದವರು. “ಕುಟುಂಬವು ಕೇರಳದಲ್ಲಿ ರಜೆಯಿಂದ ಕುವೈತ್ಗೆ ಮರಳಿತ್ತು, ಸ್ಥಳೀಯ ಸಮಯ ಶುಕ್ರವಾರ (ಜುಲೈ 19) ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿತು. ಮ್ಯಾಥ್ಯೂಸ್ ಮುಲಕ್ಕಲ್ ರಾಯಿಟರ್ಸ್ನಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಪತ್ನಿ ಲಿನಿ…

Read More

ಕಾರವಾರ: ಇಲ್ಲಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದಾಗಿ ಅದರಡಿ ಲಾರಿಯೊಂದು ಸಿಲುಕಿತ್ತು. ಇಂತಹ ಲಾರಿ ಸೇರಿದಂತೆ ಅದರಡಿಯಲ್ಲಿ ಸಿಲುಕಿರುವಂತ ಕೆಲವರ ಮೃತದೇಹವನ್ನು ಹೊರತೆಗೆಯಲು ಮಿಲಿಟರಿ ಎಂಟ್ರಿ ಕೊಡಲಿಗೆದ. ಬೆಳಗಾವಿಯಿಂದ ಆಗಮಿಸಿರುವಂತ ಭಾರತೀಯ ಸೈನಿಕರ ಪಡೆಯು, ಶಿರೂರು ಬಳಿಯಲ್ಲಿ ಹೆದ್ದಾರಿಯಲ್ಲಿ ಕುಸಿತಗೊಂಡಿರುವಂತ ಗುಡ್ಡವನ್ನು ತೆರವುಗೊಳಿಸಲಿದೆ. ಅಲ್ಲದೇ ಕೇರಳ ಮೂಲದ ಲಾರಿಯೊಂದು ಗುಡ್ಡದ ಮಣ್ಣಿನಡಿ ಕುಸಿತಗೊಂಡಿದ್ದು, ಅದನ್ನು ಹೊರತೆಗೆಯುವ ಕಾರ್ಯಾಚರಣೆಯನ್ನು ಆರಂಭಿಸಲಿದೆ. ಈಗಾಗಲೇ ಎನ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ಮಣ್ಣು ತೆರವುಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈಗ ಬೆಳಗಾವಿಯಿಂದ ಆಗಮಿಸಲಿರುವಂತ ಮಿಲಿಟರಿ ಪಡೆಯು, ಶಿರೂರು ಗುಡ್ಡ ಕುಸಿತದ ಮಣ್ಣು ತೆರವು ಕಾರ್ಯಾಚರಣೆಗೆ ಇಳಿಯಲಿದೆ. ಮತ್ತೊಂದೆಡೆ ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ, ಮಂಕಾಳು ವೈದ್ಯ ಹಾಗೂ ಆರ್ ವಿ ದೇಶಪಾಂಡೆಯವರು ಸಾಥ್ ನೀಡಿದರು. https://kannadanewsnow.com/kannada/everyone-knows-who-is-the-brahma-of-corruption-bommai-on-siddaramaiah/…

Read More

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತದೆ ಎಂದು ರಕ್ಷಣೆಗೆ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ದರಿದ್ದೇವೆ. ಆದರೆ, ರಾಜಕೀಯ ದ್ವೇಷಕ್ಕಾಗಿ ಅಧಿಕಾರ ದುರುಪಯೋಗ ಆಗಬಾರದು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಕ್ಕಿಕೊಂಡಿದೆ. ಅದರ ಹಣ ಚುನಾವಣಾ ರಾಜಕಾರಣಕ್ಕೆ, ಸಾರಾಯಿ ಖರೀದಿಗೆ ಹೋಗಿರುವುದು ಸಿಕ್ಕಿದೆ. ಈ ಬಗ್ಗೆ ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿಯ ಅವಧಿಯಲ್ಲಿ 21 ಹಗರಣ ಆಗಿದೆ ಎಂದು ಆರೋಪಿಸಿದ್ದಾರೆ. ಬಹಳ ಕಷ್ಟ ಪಟ್ಟು ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಅಂತ ಈಗ ಕಣ್ಣು ತೆರೆದು ನೋಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾರೆ. ಯಾವುದೆ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ದರಿದ್ದೇವೆ. ಆದರೆ, ತನಿಖೆ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗಬಾರದು, ಅವರು…

Read More

ಢಾಕಾ: ದೇಶದಲ್ಲಿ ಆಡಳಿತ ವಿರೋಧಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವಾದ ಉದ್ಯೋಗ ಕೋಟಾವನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಭಾನುವಾರ ಕಡಿತಗೊಳಿಸಿದೆ ಎಂದು ಅಟಾರ್ನಿ ಜನರಲ್ ಎ.ಎಂ.ಅಮೀನ್ ಉದ್ದೀನ್ ಎಎಫ್ಪಿಗೆ ತಿಳಿಸಿದ್ದಾರೆ. 1971 ರ ಸ್ವಾತಂತ್ರ್ಯ ಯುದ್ಧದ ಅನುಭವಿಗಳ ಮಕ್ಕಳು ಶೇಕಡಾ 30 ರಷ್ಟು ಮೀಸಲಾತಿಗೆ ಅರ್ಹರಾಗಿರುವ ನಾಗರಿಕ ಸೇವಾ ಉದ್ಯೋಗ ಅರ್ಜಿದಾರರಿಗೆ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ಸುಪ್ರೀಂ ಕೋರ್ಟ್ ಹಿಂತೆಗೆದುಕೊಂಡಿತು, ಆದರೆ ರದ್ದುಗೊಳಿಸಲಿಲ್ಲ. ಒಟ್ಟಾರೆಯಾಗಿ ಬಾಂಗ್ಲಾದೇಶದಲ್ಲಿ ಉದ್ಯೋಗ ಕೋಟಾ ವಿರೋಧಿಸಿ ಮಾರಣಾಂತಿಕ ಪ್ರತಿಭಟನೆಯನ್ನು ಆಕಾಂಕ್ಷಿಗಳು ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ನಿಗದಿ ಪಡಿಸಿದ್ದಂತ ಉದ್ಯೋಗ ಕೋಟಾವನ್ನು ಸುಪ್ರೀಂ ಕೋರ್ಟ್ ಕಡಿತಗೊಳಿಸಿ ಆದೇಶಿಸಿದೆ. https://kannadanewsnow.com/kannada/mla-t-b-jayachandra-conferred-with-honorary-doctorate/ https://kannadanewsnow.com/kannada/good-news-for-scheduled-caste-students-in-the-state-prabuddha-yojana-to-continue/

Read More

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ನಡೆದ ಸತ್ಯ ಸಾಯಿ ಸಮೂಹ ಸಂಸ್ಥೆಗಳ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಸುಮಾರು ಐದು ದಶಕಗಳ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಮಾಡಿರುವ ಸಾಧನೆಗೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ .ಬಿ ಜಯಚಂದ್ರ ರವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ  ಹರಿದೀಪ್ ಸಿಂಗ್ ಪುರಿ ಅವರಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸತ್ಯ ಸಾಯಿ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸದ್ಗುರು ಪರಮಪೂಜ್ಯ ಶ್ರೀ ಮಧುಸೂದನ ಸಾಯಿ ಸ್ವಾಮಿಜಿಗಳು, ಕುಲಪತಿ ನರಸಿಂಹಮೂರ್ತಿರವರು, ಉಪಕುಲಪತಿ ಶ್ರೀಕಂಠ ಮೂರ್ತಿ ರವರು ಉಪಸ್ಥಿತರಿದ್ದರು. ಇನ್ನು ಬರಿ ಟಿ.ಬಿ.ಜಯಚಂದ್ರ ಅಲ್ಲ, “ಡಾ.ಟಿ.ಬಿ.ಜಯಚಂದ್ರ” ದೇಶದಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಸಮೂಹ ಸಂಸ್ಥೆ ಸಾರ್ವಜನಿಕ ಸೇವೆಯಲ್ಲಿ ಸುಮಾರು ಐದು ದಶಕಗಳ ಕಾಲ ಸಂದಿಸಿರುವ…

Read More

ಕೇರಳ: ಕೋಯಿಕ್ಕೋಡ್ನಲ್ಲಿ ನಿಪಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ ಎಂದು ರಾಜ್ಯ ಸರ್ಕಾರವನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮಲಪ್ಪುರಂ ಜಿಲ್ಲೆಯವನಾದ ಬಾಲಕನಲ್ಲಿ ನಿಪಾಹ್ ಸೋಂಕು ಇರುವುದು ಕೇರಳ ಸರ್ಕಾರ ಶನಿವಾರ ದೃಢಪಡಿಸಿತ್ತು. ನಿಪಾ ವೈರಸ್ ಸೋಂಕು ಹಂದಿಗಳು ಮತ್ತು ಹಣ್ಣಿನ ಬಾವಲಿಗಳಂತಹ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಪ್ರಾಣಿಜನ್ಯ ಕಾಯಿಲೆಯಾಗಿದೆ. ನಿಪಾ ಸಾಮಾನ್ಯವಾಗಿ ಪ್ರಾಣಿಗಳಿಂದ ಅಥವಾ ಕಲುಷಿತ ಆಹಾರದ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ನೇರವಾಗಿ ಜನರ ನಡುವೆ ಹರಡಬಹುದು. ಇದರ ರೋಗಲಕ್ಷಣಗಳಲ್ಲಿ ತೀವ್ರವಾದ ಜ್ವರ, ವಾಂತಿ ಮತ್ತು ಉಸಿರಾಟದ ಸೋಂಕು ಸೇರಿವೆ, ಆದರೆ ತೀವ್ರವಾದ ಪ್ರಕರಣಗಳು ಸೆಳೆತಗಳು ಮತ್ತು ಮೆದುಳಿನ ಉರಿಯೂತವನ್ನು ಒಳಗೊಂಡಿರಬಹುದು, ಇದು ಕೋಮಾಗೆ ಕಾರಣವಾಗುತ್ತದೆ. ನಿಪಾಹ್ ಗೆ ಯಾವುದೇ ಲಸಿಕೆ ಇಲ್ಲ. ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಈ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದ ಬಾಲಕನಲ್ಲಿ ಸೋಂಕನ್ನು ದೃಢಪಡಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್…

Read More

ಬೆಂಗಳೂರು : ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಿದ್ದು, ಹಂತಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೊರೆತ ತಾತ್ವಿಕ ಒಪ್ಪಿಗೆ ಮೇರೆಗೆ ಹಂತ-ಹಂತವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ (LKG & UNG) ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಅದರಂತೆ, ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG & UKG) ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ 62, ಪೂರ್ವ ಜಿಲ್ಲೆಯ 20, ಕೇಂದ್ರ ಜಿಲ್ಲೆಯ 50, ಬೆಂಗಳೂರು ರಾಜ್ಯ (ಪ್ರೊಜೆಕ್ಟ್) 50, ಬೆಂಗಳೂರು ದಕ್ಷಿಣ 48, ಆನೆಕಲ್ 20 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 1,238 ಗಂಡು ಹಾಗೂ 1,203 ಹೆಣ್ಣು ಮಕ್ಕಳು ಸೇರಿ ಒಟ್ಟೂ 2,441 ಮಕ್ಕಳು ಇದರಲ್ಲಿ ಒಳಗೊಳ್ಳಲಿದ್ದಾರೆ.…

Read More

ಮಂಡ್ಯ: ಜಿಲ್ಲೆಯ ಕೆ ಆರ್ ಎಸ್ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ 15,000 ದಿಂದ 35,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಪ್ರವಾಹದ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ. ಕೃಷ್ಣರಾಜಸಾಗರ ಜಲನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆ ಆರ್ ಎಸ್ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದೆ ಅಂತ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಿಂದ ಸುಮಾರು 15,000 ದಿಂದ 35,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ತಗ್ಗು ಪ್ರದೇಶದಲ್ಲಿನ, ಕಾವೇರಿ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಇನ್ನೂ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ. ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ…

Read More