Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಯೋಜನೆಗಳು: ಉದ್ಯೋಗಿನಿ ಯೋಜನೆ: ವಯೋಮಿತಿ 18 ರಿಂದ 55 ವರ್ಷಗಳೊಳಗಿರುವ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ ರೂ.02 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಕನಿಷ್ಠ ರೂ.01 ಲಕ್ಷದಿಂದ ಗರಿಷ್ಟ ರೂ.03 ಲಕ್ಷ, ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ ರೂ.1.50 ಲಕ್ಷ ಹೊಂದಿರಬೇಕು. ಘಟಕ ವೆಚ್ಚ ಗರಿಷ್ಟ ರೂ.03 ಲಕ್ಷ, ಶೇ.30 ರಷ್ಟು ಸಹಾಯಧನ ನೀಡಲಾಗುವುದು. ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ 18…
ಬಳ್ಳಾರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಕಿರು ಸಿರಿಧಾನ್ಯಗಳಾದ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಕಿರು ಸಿರಿಧಾನ್ಯ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು. ಬೆಲೆ(ಕ್ವಿಂಟಲ್ ಗೆ): ಬಿಳಿಜೋಳ-ಹೈಬ್ರೀಡ್: ರೂ.3699 ಬಿಳಿಜೋಳ- ಮಾಲ್ದಂಡಿ: ರೂ.3749 ರಾಗಿ: ರೂ.4886 ಕಿರು ಸಿರಿಧಾನ್ಯ (ಸಾಮೆ ಮತ್ತು ನವಣೆ):…
ಧಾರವಾಡ: 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವೀಂಟಲ್‍ಗೆ ರೂ.3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವೀಂಟಲ್‍ಗೆ ರೂ.3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ, ಕುಂದಗೋಳ ಮತ್ತು ಕಲಘಟಗಿ ತಾಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಪ್ರತಿ ರೈತರಿಂದ ಹಿಡುವಳಿಯನ್ನು ಆಧರಿಸಿ ಪ್ರತಿ ಎಕರೆಗೆ 15 ಕ್ವೀಂಟಲ್ ನಂತೆ ಗರಿಷ್ಟ 150 ಕ್ವೀಂಟಲ್ ಬಿಳಿ ಜೋಳವನ್ನು ಖರೀದಿಸಲಾಗುವುದು. ಆಸಕ್ತ ರೈತರು ಬಯೋಮೆಟ್ರಿಕ್ ಮೂಲಕ ನವೆಂಬರ್ 15, 2025 ರಿಂದ ಮಾರ್ಚ 30, 2026 ರವರೆಗೆ ನೊಂದಣಿ ಮಾಡಬೇಕು. ಮುಂಗಾರು ಋತುವಿನ ಬಿಳಿ ಜೋಳವನ್ನು ನವೆಂಬರ್ 1, 2025 ರಿಂದ ಜನೆವರಿ 31, 2026…
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಸರ್ಕಾರ ಕೇವಲ ಉತ್ತರ ನೀಡಿದರೆ ಸಾಲದು, ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮಗ್ರವಾಗಿ ಚರ್ಚೆಯಾಗಿ, ಸಲಹೆ ಸೂಚನೆಗಳು ದೊರೆಯಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ದುರಸ್ತಿಯಾಗಿಲ್ಲ. ಶೂ ಸಾಕ್ಸ್ ವಿತರಣೆಯಾಗಿಲ್ಲ. ಈ ಬಗ್ಗೆ ಸ್ಪೀಕರ್ ಗೆ ಪತ್ರ ಬರೆಯಲಿದ್ದೇನೆ. ಈ ಕುರಿತು ಕೂಡ ಸುದೀರ್ಘವಾಗಿ ಚರ್ಚೆಯಾಗಬೇಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ವಿಶೇಷ ಸವಲತ್ತು, ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ದ್ರವ್ಯಗಳ ಬಳಕೆ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ, ಮಳೆ ಹಾನಿ ಪರಿಹಾರದ ಬಗ್ಗೆ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ಬಗ್ಗೆ ಚರ್ಚಿಸಲಿದ್ದೇವೆ ಎಂದರು. ಜೆಡಿಎಸ್ ಜೊತೆ ಸಮನ್ವಯ ಸಭೆ ನಡೆಸಿ, ಹೋರಾಟದ ಬಗ್ಗೆ…
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ.1.20…
ಮಂಡ್ಯ : ಮೂರ್ನಾಲ್ಕು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಗೂ 10 ಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ಯಾವುದೇ ಕಾರಣ ನೀಡದೇ ಗೈರಾಗಿದ್ದಾರೆ. ಅಂತಹ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ತಾ.ಪಂ ಇಓ ರಾಮಲಿಂಗಯ್ಯ ಅವರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಸೂಚನೆ ನೀಡಿದ್ದರು ಸಹ ಅಧಿಕಾರಿಗಳು ತಮ್ಮ ಛಾಳಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಿರಿ. ಈ ಹಿಂದೆ ನಿಮ್ಮಿಷ್ಟದ ರೀತಿ ಕೆಲಸ ಮಾಡ್ತಿದ್ರಿ ಆದರೆ ಅದಕ್ಕೆಲ್ಲ ನಾನು ಆಸ್ಪದ ಕೊಡಲ್ಲ. ಇದೇ ರೀತಿ ನಿಮ್ಮ ನಡತೆ ಮುಂದುವರೆದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು. ಮದ್ದೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು, ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ…
ಹಾಸನ: ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಜಾಗೃತಿ, ಸಂವಾದ, ಸಾರ್ವಜನಿಕರೊಂದಿಗೆ ಕಾಯ್ದೆಯ ಸದ್ಬಳಕೆ ಕುರಿತು ಚರ್ಚಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು ಕಳೆದ ಅಕ್ಟೋಬರ್ 12 ಕ್ಕೆ 20 ವರ್ಷಗಳು ಪೂರ್ಣಗೊಂಡಿದ್ದು, ಅನೇಕ ಬದಲಾವಣೆಗಳು ಕೂಡ ಆಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕಲ್ಪಿಸುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಹೇಳಿದರು. ಕಾರ್ಯಗಾರದ ಮೂಲ ಉದ್ದೇಶ ಬದಲಾವಣೆ, ಆಯೋಗ…
ಚಾಮರಾಜನಗರ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗಕ್ಕೆ ರಾಜ್ಯದ ವಿವಿಧ ಕಡೆಗಳಿಂದ 35,009 ಹಾಗೂ ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ ಹಾಗೂ ಡಾ. ಹರೀಶ್ ಕುಮಾರ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಮಾಹಿತಿ ಆಯುಕ್ತರು ಚಾಮರಾಜನಗರ ಜಿಲ್ಲೆಯಿಂದ ಸಲ್ಲಿಕೆಯಾಗಿರುವ 614 ಮೇಲ್ಮನವಿಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯುತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 249, ಕಂದಾಯ ಇಲಾಖೆ 105, ಕೃಷಿ ಇಲಾಖೆ 46, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 37 ಇವೆ. ಇವುಗಳ ವಿಲೇವಾರಿಗೆ ಮಾಹಿತಿ ಆಯೋಗ ಕ್ರಮವಹಿಸಿದೆ ಎಂದರು. ನಾವು ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಾಗ 55,400 ಮೇಲ್ಮನವಿಗಳು ನಮ್ಮ ಮುಂದಿದ್ದವು. ಅವುಗಳಲ್ಲಿ 20 ಸಾವಿರ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದ್ದೇವೆ. ಉಳಿದ 35 ಸಾವಿರ ಮೇಲ್ಮನವಿಗಳ ವಿಲೇವಾರಿ ಮಾಡಲಾಗುತ್ತಿದೆ ಎಂದರು. ಮಾಹಿತಿ ಹಕ್ಕು ಕಾಯ್ದೆ ಕುರಿತು ಅಧಿಕಾರಿಗಳಿಗೆ ಮತ್ತಷ್ಟು ಅರಿವು ಮೂಡಿಸಲು ಆಯೋಗವು ರಾಜ್ಯಾದ್ಯಂತ…
ಚಾಮರಾಜನಗರ : ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ ಹಾಗೂ ಸಂವಾದವನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತನ್ನದೇ ಆದ ಕರ್ತವ್ಯಗಳನ್ನು ನಿರ್ವಹಿಸಲಿದೆ. ಕಾರ್ಯಕ್ರಮಗಳು, ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಶಾಶ್ವತ ಕಾರ್ಯಾಂಗವೆಂದರೆ ನೌಕರ ಶಾಹಿಗಳು. ಅಧಿಕಾರಿ ನೌಕರರಿಗೆ ಗುರುತರ ಜವಾಬ್ದಾರಿಯಿದೆ. ಜನರು ಮಾಹಿತಿ ಹಕ್ಕಿನಡಿ ಕೇಳುವ ಮಾಹಿತಿಯನ್ನು ಉದಾಸೀನ ಮಾಡದೇ ನೀಡಬೇಕು ಎಂದರು. ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಉದ್ದೇಶದೊಂದಿಗೆ ಮಾಹಿತಿ ಹಕ್ಕು…
ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಪ್ಲಾಸ್ಟಿಕ್ ಸುಡುತ್ತಿದ್ದ ವ್ಯಕ್ತಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ನವೆಂಬರ್ 11 ರಂದು ರಾತ್ರಿ ಪರಿಶೀಲನೆ ನಡೆಸುವ ವೇಳೆ, ಥಣಿಸಂದ್ರ ಮುಖ್ಯ ರಸ್ತೆ ಅಶ್ವತ್ಥನಗರದಲ್ಲಿ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಸುಡುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಪ್ಲಾಸ್ಟಿಕ್ ಗೆ ಬೆಂಕಿ ಹಚ್ಚಿ ಸುಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದಾಗ, ಅವರು ಪ್ಲಾಸ್ಟಿಕ್/ತ್ಯಾಜ್ಯವನ್ನು ಸುಡುತ್ತಿರುವುದನ್ನು ಒಪ್ಪಿಕೊಂಡು ನೀರು ಹಾಕಿ ನಂದಿಸಿದರು. ಈ ರೀತಿಯಾಗಿ ತ್ಯಾಜ್ಯ ಸುಡುವುದು ಕಾನೂನುಬಾಹಿರವಾಗಿರುವುದರಿಂದ, ಪ್ಲಾಸ್ಟಿಕ್ ಸುಟ್ಟ ವ್ಯಕ್ತಿಗೆ ದಂಡ ವಿಧಿಸಲು ಉತ್ತರ ನಗರ ಪಾಲಿಕೆ ಜಂಟಿ ಆಯುಕ್ತರಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು. ಅದನ್ವಯವಾಗಿ, ಥಣಿಸಂದ್ರ ವಾರ್ಡ್‌ನ ಕಿರಿಯ ಆರೋಗ್ಯ ಪರಿವೀಕ್ಷಕ ಹಾಗೂ ಮಾರ್ಷಲ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಎಳನೀರು ಮಾರಾಟ ಮಾಡುವ…














