Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸೆಪ್ಟೆಂಬರ್.14ರವರೆಗೆ ಶೇ.5ರ ರಿಯಾಯಿತಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರದ ಆದೇಶಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿದ್ದು, ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ ಎಂದಿದೆ. ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಆಸ್ತಿ ತೆರಿಗೆದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದೆ.
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ.…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಜಾರಿಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ರಾಜ್ಯದ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿಗಳಿಗೂ 7ನೇ ರಾಜ್ಯ ಪರಿಷ್ಕೃತ ವೇತನ ಆಯೋಗದಂತೆ ವೇತನ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಿರ್ದೇಶಕರಾದಂತ ಟಿಎನ್ ಶಿವಶಂಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ 7ನೇ ವೇತನ ಪರಿಷ್ಕೃತ ವೇತನ ಜಾರಿಯಾಗಿದ್ದು, ಅದರನ್ವಯ ನಿಮ್ಮ ವಲಯ ವ್ಯಾಪ್ತಿಯ ಅಗ್ನಿಶಾಮಕ ಠಾಣೆ ಮತ್ತು ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಲಿಪಿಕ ನೌಕರರುಗಳ ಮೂಲ ಸೇವಾ ಪುಸ್ತಕಗಳನ್ನು ಪರಿಶೀಲಿಸಿ 7ನೇ ಪರಿಷ್ಕೃತ ವೇತನ ಶ್ರೇಣಿಗಳ ನಿಯಮಗಳನ್ವಯ ಅನ್ವಯಿಸುವ ವೇತನ ಶ್ರೇಣಿ ಮತ್ತು ವೇತನ ನಿಗದಿಪಡಿಸತಕ್ಕದ್ದು ಎಂದಿದ್ದಾರೆ. ಮುಂದುವರೆದು ಯಾವುದೇ ಅಧಿಕಾರಿ / ಸಿಬ್ಬಂದಿಯವರು ಮತ್ತು ಲಿಪಿಕ ನೌಕರರ ವೇತನ ನಿಗದಿಯಲ್ಲಿ ಸಮಸ್ಯೆಗಳು…
ಇಸ್ರೇಲಿ ಗಡಿಯ ಸಮೀಪವಿರುವ ಈಜಿಪ್ಟ್ನ ತಾಬಾ ಎಂಬ ಪಟ್ಟಣದಲ್ಲಿ ಅನೇಕ ಪ್ರವಾಸಿಗರಿಗೆ ಚೂರಿ ಇರಿತವಾಗಿದೆ ಎಂದು ಈಜಿಪ್ಟ್ನ ಸರ್ಕಾರಿ ಸಂಬಂಧಿತ ಅಲ್-ಖೈದಾ ನ್ಯೂಸ್ ಟಿವಿ ಶುಕ್ರವಾರ ವರದಿ ಮಾಡಿದೆ. ಈಜಿಪ್ಟ್ ನ ತಾಬಾ ಎಂಬಲ್ಲಿ ಅನೇಕ ಪ್ರವಾಸಿಗರ ಮೇಲೆ ವ್ಯಕ್ತಿಯೊಬ್ಬ ಹಲವು ಪ್ರವಾಸಿಗರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/chalavadi-narayanasamy-in-which-quota-did-you-get-an-industrial-site/ https://kannadanewsnow.com/kannada/good-news-for-property-tax-payers-5-discount-extended-till-september-14/
ಬೆಂಗಳೂರು: ನಾರಾಯಣಸ್ವಾಮಿಯವರೇ, ನೀವೂ ಕೈಗಾರಿಕಾ ನಿವೇಶನವನ್ನು ಪಡೆದಿದ್ದೀರಿ ಅಲ್ಲವೇ? ಯಾವ ಕೋಟಾದಲ್ಲಿ ಪಡೆದಿದ್ದೀರಿ? ಪ್ರಭಾವ ಬಳಸಿ ಪಡೆದಿದ್ದಾ? ಬಕೆಟ್ ಹಿಡಿದು ಪಡೆದಿದ್ದಾ? ಚಡ್ಡಿ ಹೊತ್ತು ಪಡೆದಿದ್ದಾ? ನಾಡಿನ ಜನರಿಗೆ ಉತ್ತರಿಸುವಿರಾ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, ಚಲವಾದಿ ನಾರಾಯಣಸ್ವಾಮಿಯವರು ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಕೃಪೆಯಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು, ಅದೇ ಚಲವಾದಿ ನಾರಾಯಣಸ್ವಾಮಿಯವರನ್ನು ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಮುಂದೆ ಬಿಟ್ಟ ಬಿಜೆಪಿ ಆಟ ನೋಡುತ್ತಿದೆ ಎಂದಿದೆ. ಅಸ್ತಿತ್ವ ಕಟ್ಟಿಕೊಟ್ಟವರನ್ನೇ ಜರಿಯಲು ಮುಂದಾಗಿರುವ ನಾರಾಯಣಸ್ವಾಮಿಯವರ ಅವಕಾಶವಾದಿತನವೇ ಅವರ ರಾಜಕೀಯ ಅಂತ್ಯಕ್ಕೆ ಮುನ್ನುಡಿ ಬರೆಯಲಿದೆ. ನಾರಾಯಣಸ್ವಾಮಿಯವರೇ, ನೀವೂ ಕೈಗಾರಿಕಾ ನಿವೇಶನವನ್ನು ಪಡೆದಿದ್ದೀರಿ ಅಲ್ಲವೇ? ಯಾವ ಕೋಟಾದಲ್ಲಿ ಪಡೆದಿದ್ದೀರಿ? ಪ್ರಭಾವ ಬಳಸಿ ಪಡೆದಿದ್ದಾ? ಬಕೆಟ್ ಹಿಡಿದು ಪಡೆದಿದ್ದಾ? ಚಡ್ಡಿ ಹೊತ್ತು ಪಡೆದಿದ್ದಾ? ನಾಡಿನ ಜನರಿಗೆ ಉತ್ತರಿಸುವಿರಾ? ಎಂದು ಕೇಳಿದೆ. https://twitter.com/INCKarnataka/status/1829521446428901816 https://kannadanewsnow.com/kannada/state-chief-secretary-issues-show-cause-notice-to-dgp-prisons-for-royalty-against-actor-darshan/ https://kannadanewsnow.com/kannada/good-news-for-property-tax-payers-5-discount-extended-till-september-14/ https://kannadanewsnow.com/kannada/bank-holidays-here-is-the-complete-list-of-bank-holidays-for-the-month-of-september/
ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದಂತ ಪೋಟೋ ವೈರಲ್ ಆಗುತ್ತಿದ್ದಂತೆ ಹಲವು ಅಧಿಕಾರಿ, ಸಿಬ್ಬಂದಿಗಳನ್ನು ಅಮಾತನಗೊಳಿಸಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕಾರಾಗೃಹ ಡಿಜಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕೇಸಲ್ಲಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಲೆದಂಡವಾಗುವ ಸಾಧ್ಯತೆ ಇದೆ. ಕಾರಣ, ಘಟನೆ ಸಂಬಂಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗಳು ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ಜಾರಿಗೊಳಿಸಿರುವಂತ ಶೋಕಾಸ್ ನೋಟಿಸ್ ನಲ್ಲಿ ಕಾರಾಗೃಹದಲ್ಲಿ ನಡೆಯುತ್ತಿರುವಂತ ಈ ಅಕ್ರಮ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ. ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು. ವಿವರವಾದ ಉತ್ತರ ನೀಡುವಂತೆ ಡಿಜಿಪಿಗೆ ಶೋಕಾಸ್ ನೋಟಿಸ್ ನಲ್ಲಿ ತಿಳಿಸಲಾಗಿದೆ. ಜೈಲಿನಲ್ಲಿ ಅಕ್ರಮ ತಡೆಗಾಗಿ ಕೈಗೊಂಡ ಕ್ರಮಗಳೇನು.? ಜೈಲಿನಲ್ಲಿ ನಡೆಯುತ್ತಿರುವಂತ ಅಕ್ರಮಗಳು ನಿಮ್ಮ…
ನವದೆಹಲಿ; ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಎಐಸಿಸಿಯಿಂದ ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶಿಸಲಾಗಿದೆ. ಕರ್ನಾಟಕದ ಹಲವರಿಗೆ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬರ್ ಎಐಸಿಸಿ ಕಾರ್ಯದರ್ಶಿಯಾಗಿ ಗಣೇಶ್ ಕುಮಾರ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡಾ.ಪಾಲಕ್ ವರ್ಮಾ ನೇಮಕ ಮಾಡಲಾಗಿದೆ. ಕರ್ನಾಟಕಕ್ಕೆ ಎಐಸಿಸಿ ಕಾರ್ಯದರ್ಶಿಯಾಗಿ ರೋಜಿ ಎಂ ಜಾನ್, ಮಯೂರ ಎಸ್ ಜಯಕುಮಾರ್, ಅಭಿಷೇಕ್ ದತ್ ಹಾಗೂ ಪಿ ಗೋಪಿ ಅವರನ್ನು ನೇಮಕ ಮಾಡಲಾಗಿದೆ. ಕೇರಳ ಮತ್ತು ಲಕ್ಷದ್ವೀಪಕ್ಕೆ ಪಿವಿ ಮೋಹನ್, ವಿಕೆ ಅರಿವಜಗನ್ ಹಾಗೂ ಮನಸೂರ್ ಆಲಿ ಖಾನ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಗೋವಾ, ದಾದರ್ ಮತ್ತು ನಾಗರ್ ಹಾವೇಲಿ, ದಾಮನ್ ಮತ್ತು ಡಿಯೂಗೆ ಕಾರ್ಯದರ್ಶಿಯನ್ನಾಗಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು ನೇಮಿಸಿದೆ. ತಮಿಳುನಾಡು ಹಾಗೂ ಪಾಂಡಿಚೇರಿ ಕಾರ್ಯದರ್ಶಿಯನ್ನಾಗಿ ಸೂರಜ್ ಹೆಗಡೆ ಅವರನ್ನು ನೇಮಿಸಿ ಆದೇಶಿಸಲಾಗಿದೆ. https://kannadanewsnow.com/kannada/renaming-bengaluru-south-district-will-increase-job-creation-deputy-cm-dk-shivakumar-shivakumar/ https://kannadanewsnow.com/kannada/good-news-for-property-tax-payers-5-discount-extended-till-september-14/…
ಚನ್ನಪಟ್ಟಣ : “ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಿದ ಕಾರಣಕ್ಕೆ ಯುವ ಪೀಳಿಗೆಗೆ ಉದ್ಯೋಗ ಹಾಗು ಜೀವನ ಕಟ್ಟಿಕೊಳ್ಳಲು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟರು. ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು “ಬೆಂಗಳೂರಿನ ಹೆಸರು ಈ ಜಿಲ್ಲೆಗೆ ಏಕೆ ಬೇಕು ಎಂದು ಒಂದಷ್ಟು ಜನ ಪ್ರಶ್ನೆ ಮಾಡುತ್ತಿದ್ದರು. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಆಗುವುದು ಬೇಕಿಲ್ಲವೆ. ಉದ್ಯೋಗ ಸೃಷ್ಟಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಗುರಿ” ಎಂದು ಹೇಳಿದರು. “ನಾವು ಉದ್ಯೋಗ ಮೇಳಕ್ಕೆ ಬಂದಿರುವ ಎಲ್ಲರಿಗೂ ಕೆಲಸ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ಆದರೆ ಯಾವ ಮಾರ್ಗದಲ್ಲಿ ನಡೆದರೆ ಯಶಸ್ಸು ಸಿಗುತ್ತದೆ ಎಂದು ದಾರಿ ಮಾಡಿಕೊಡುತ್ತೇವೆ” ಎಂದು ಹೇಳಿದರು. “ನಾನು ಅನೇಕ ಹೆಣ್ಣು ಮಕ್ಕಳನ್ನು ಮಾತನಾಡಿಸಿಕೊಂಡು ಬಂದೆ. ಅನೇಕರಲ್ಲಿ ದುಡಿಯಬೇಕು ಎನ್ನುವ ಹಸಿವು ಹೆಚ್ಚಿದೆ. ನನಗೆ ಅನೇಕರ ಪರಿಸ್ಥಿತಿ ನೋಡಿ ಸಂಕಟ ಉಂಟಾಯಿತು. ನಮ್ಮ ಊರಿನ ಪಕ್ಕದ ಲಂಬಾಣಿ…
ಚನ್ನಪಟ್ಟಣ : “ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ. ನಾವು ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆ ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಾವು ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂಬ ಕಾರಣಕ್ಕೆ ರಾಜ್ಯದ ಜನ ನಮಗೆ 135 ಸೀಟು ಕೊಟ್ಟು ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿಮ್ಮ ಊರಿನಲ್ಲಿ ಸಣ್ಣಪುಟ್ಟ ಶುಭ ಕಾರ್ಯಕ್ರಮ ನಡೆಸಲು ಸಮುದಾಯಭವನ ಬೇಕು ಎಂದು ಕೇಳಿಕೊಂಡರು. ಅದಕ್ಕಾಗಿ ನಾವು ಬಂದು ಇಂದು ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. ಈ ಭಾಗದ ನಾಲ್ವರು ವಿಧಾನ ಪರಿಷತ್ ಸದಸ್ಯರು ತಲಾ 15 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ. ಉಳಿದ ಅನುದಾನದ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದರು. “ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮಸ್ಯೆ ಕುರಿತಂತೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. ಸಾರ್ವಜನಿಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಪಡೆಯಬಹುದು ಎಂಬುದಾಗಿ ಸುದ್ದಿ ಹರಿದಾಡುತ್ತಿತ್ತು. ಆದರೇ ಗ್ಯಾರಂಟಿ ಯೋಜನೆಗಳ ಸಹಾಯವಾಣಿ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಗೆ ಮಾತ್ರ ಸೀಮಿತ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಸಹಾಯವಾಣಿ ಸಂಖ್ಯೆ 9480683972 ಯನ್ನು ಆರಂಭಿಸಲಾಗಿರುತ್ತದೆ ಎಂದಿದೆ. ಮುಂದುವರಿದು, ಸದರಿ ದೂರವಾಣಿ ಸಂಖ್ಯೆಗೆ ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರಗನ್ನು ಹೊರತುಪಡಿಸಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಕರೆಗಳು ಬರುತ್ತಿವೆ. ಬಿಬಿಎಂಪಿಯಿಂದ ಬಿಡುಗಡೆಗೊಳಿಸಿರುವ ಸಹಾಯವಾಣಿ ಸಂಖ್ಯೆಯು ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮಾತ್ರ ಗ್ಯಾರಂಟಿ ಯೋಜನೆಗಳ ಬಗ್ಗೆ ಕಛೇರಿ…