Author: kannadanewsnow09

ಬೆಂಗಳೂರು: ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದ ಅವರು, ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು. ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು…

Read More

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಉಂಟಾದಂತ ಬಾಂಬ್ ಸ್ಪೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಳಿಕ ಅವರು ಏನು ಹೇಳಿದರು ಅಂತ ಮುಂದೆ ಓದಿ. ಇಂದು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಈ ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿ ನೀಡಿ, ಪರಿಶೀನೆ ನಡೆಸಿದರು. ಈ ಬಳಿಕ ಮಾತನಾಡಿದಂತ ಡಿಸಿಎಂ ಡಿಕೆಶಿ ಅವರು, ರಾಮೇಶ್ವರಂ ಕೆಫೆಗೆ ಮಧ್ಯಾಹ್ನದ ವೇಳೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಹೋಗಿದ್ದಾನೆ. ಆತನ ಚಹರೆ ಕೆಫೆಯಲ್ಲಿರುವಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದರು. ಮಧ್ಯಾಹ್ನ 12ರ ಸುಮಾರಿ 30 ವರ್ಷದ ವ್ಯಕ್ತಿ ಬ್ಯಾಗ್ ನಲ್ಲಿ ತಂದಿದ್ದಂತ ಸ್ಪೋಟಕವನ್ನು ರಾಮೇಶ್ವರಂ ಕೆಫೆಯಲ್ಲಿ ಇರಿಸಿದ್ದಾರೆ. ನಂತ್ರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಕೂಡ ಸೇವಿಸಿ ಹೋಗಿದ್ದಾನೆ. ಟೈಮರ್ ಇಟ್ಟು ಮಧ್ಯಾಹ್ನ 12.55ರ ವೇಳೆಯಲ್ಲಿ ಕಡಿಮೆ ತೀವ್ರತೆಯಲ್ಲಿ…

Read More

ಬೆಂಗಳೂರು: ಮೊನ್ನೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘಟನೆ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ರಾಮೇಶ್ವರಂ ಕೆಫೆಯ ಬ್ಲಾಸ್ಟ್ ಸಂಭವಿಸಿದೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿಗಳಿಂದ, ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ತಂದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ನಂತರ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಸರಣಿ ಘಟನೆಗಳು ಒಂದಾದ ಮೇಲೆ ಒಂದರಂತೆ ರಾಜ್ಯದಲ್ಲಿ ನಡೆಯುತ್ತ ಬಂದಿವೆ. ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್‍ನಿಂದ ಶುರುವಾದ ಘಟನೆಗಳು ಶಿವಮೊಗ್ಗದಲ್ಲಿ ಟಿಪ್ಪು ಜಯಂತಿ ಮುಖೇನ ಹಿಂದೂಗಳ ಮನೆಗಳಿಗೆ ನುಗ್ಗಿ, ಮನೆಗಳ ಮೇಲೆ ಕಲ್ಲೆಸೆದು, ಹಿಂದೂಗಳನ್ನು ಬೆದರಿಸುವ ಘಟನೆಯೂ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ನಡೆದಿದೆ ಎಂದು ವಿವರಿಸಿದರು. ಡಿ.ಜೆ.ಹಳ್ಳಿ- ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರ ವಿರುದ್ಧ ಕೇಸು ಹಾಕಿದ್ದು ಅದನ್ನು ರದ್ದು ಮಾಡುವಂತೆ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು ಗೃಹ ಸಚಿವರಿಗೆ ಒತ್ತಾಯಿಸಿದ್ದರು. ಮೊನ್ನೆ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಡೆದ…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಘಟನೆಯ ಎಫ್.ಎಸ್.ಎಲ್ ವರದಿಯನ್ನು ತಿರುಚಿ ಹಾಕದೆ ಯಥಾವತ್ತಾಗಿ ಜನರ ಮುಂದೆ ಇಡಬೇಕು. ತಪ್ಪಿತಸ್ಥರನ್ನು ಒದ್ದು ಒಳಗೆ ಹಾಕಬೇಕು ಎಂದು ಸರಕಾರವನ್ನು ಆಗ್ರಹಿಸಿದರು. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ವಿಚಾರದಲ್ಲಿ ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದು ಸತ್ಯ ಎಂದು ಎಫ್‍ಎಸ್‍ಎಲ್ ವರದಿ ಇವತ್ತು ಬೆಳಿಗ್ಗೆ ಬಂದಿದೆ. ಅದನ್ನು ಮುಚ್ಚಿಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಎಫ್‍ಎಸ್‍ಎಲ್ ವರದಿ ತಿದ್ದುಪಡಿ ಮತ್ತೊಂದು ಬೋಗಸ್ ಎಫ್‍ಎಸ್‍ಎಲ್ ವರದಿ ಸಿದ್ಧಪಡಿಸಲಾಗುತ್ತಿದೆ ಎಂಬ ಅನುಮಾನ ನಮ್ಮೆಲ್ಲರನ್ನು ಕಾಡುತ್ತಿದೆ ಎಂದು ತಿಳಿಸಿದರು. ರಾಜ್ಯದ…

Read More

ಬೆಂಗಳೂರು: ಇಂದು ಅರವಿಂದ್ ಶ್ರೀವಾಸ್ತವ ಅವರು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಫೆಬ್ರವರಿ 25, 1965 ರಂದು ಜನಿಸಿದ ಶ್ರೀವಾಸ್ತವ ಅವರು ವಾರಣಾಸಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಿಂದ ಬಿ.ಟೆಕ್ (ಮೆಕ್ಯಾನಿಕಲ್ ಎಂಜಿನಿಯರಿಂಗ್) ಪದವಿ ಪಡೆದಿದ್ದಾರೆ. 1987 ರ ಬ್ಯಾಚ್‌ ನ ಭಾರತೀಯ ರೈಲ್ವೆ ಸ್ಟೋರ್ಸ್ ಸರ್ವೀಸ್ (ಐ.ಆರ್.ಎಸ್.ಎಸ್) ಅಧಿಕಾರಿಯಾಗಿರುವ ಅವರು 06.03.1989 ರಂದು ರೈಲ್ವೆ ಇಲಾಖೆಗೆ ಸೇರಿದವರು. ಭಾರತೀಯ ರೈಲ್ವೆಯೊಂದಿಗೆ ಮೂರೂವರೆ ದಶಕಗಳ ಕಾಲ ಒಡನಾಟ ಹೊಂದಿದ್ದಾರೆ. ಕಲ್ಕತ್ತಾದ ಪೂರ್ವ ರೈಲ್ವೆ, ವಾರಾಣಸಿಯ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ನವ ದೆಹಲಿಯ ರೈಲ್ವೆ ಮಂಡಳಿ, ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿ ಮತ್ತು ಕಲ್ಕತ್ತಾ ಆಗ್ನೇಯ ರೈಲ್ವೆ ಸೇರಿದಂತೆ ವಿವಿಧ ಇಲಾಖೆಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ರೈಲು ಗಾಲಿ ಕಾರ್ಖಾನೆಯ ಮುಖ್ಯ ಸಾಮಗ್ರಿ ವ್ಯವಸ್ಥಾಪಕರಾಗಿ, ಸ್ಟೋರ್ಸ್ (ಜಾಗೃತ) ಕಾರ್ಯನಿರ್ವಾಹಕ ನಿರ್ದೇಶಕರಾಗಿ, ನವದೆಹಲಿ ರೈಲ್ವೆ ಮಂಡಳಿ ಮುಖ್ಯ ವಿಚಕ್ಷಣಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಠಿಸಿದೆ ಎಂದಿದ್ದಾರೆ. ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ. https://twitter.com/BYVijayendra/status/1763541240363286741 https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಶಿವಮೊಗ್ಗ: ನಗರ ಉಪ ವಿಭಾಗ-2ರ ಓ.ಟಿ.ರಸ್ತೆಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗದ ಕಾಮಗಾರಿ ಕೆಲಸ ಇರುವುದರಿಂದ ಮಾ. 02 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರಗೆ ಮುರಾದ್‍ನಗರ, ಸೀಗೇಹಟ್ಟಿ, ಆಜಾದ್‍ನಗರ, ಪಂಚವಟಿ ಕಾಲೋನಿ, ಓ.ಟಿ.ರಸ್ತೆ, ಕುಂಬಾರಗುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ, ಜೈಲ್ ಸರ್ಕಲ್ ಶಿವಮೊಗ್ಗ, ದೂ.ಸಂ: 08182-276776 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ. 2017 ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆ ಇತ್ತು. ಜಾತಿ ಗಣತಿ ಮಾಡುವ ಅಧಿಕಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿದೆ ಅದನ್ನು ತಪ್ಪಿಸಲು ಇವರು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳಿ ಉದ್ದೇಶ ಒಂದು ಆದೇಶ ಒಂದು ಆಗಿರುವುದರಿಂದ ಈ ಗೊಂದಲ ಸೃಷ್ಟಿಯಾಯಿತು. ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ…

Read More

ಬೆಂಗಳೂರು: ನಗರದ ಕಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 9 ಮಂದಿಗ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿತ್ತು. ಆ ಬಳಿಕ ಅಂದು ಬಾಂಬ್ ಸ್ಪೋಟ ಎಂಬುದಾಗಿ ತಿಳಿದು ಬಂದಿತ್ತು. ಈ ಘಟನಾ ಸ್ಥಳದಲ್ಲಿ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಂಡದಿಂತ ಪರಿಶೀಲನೆ, ತನಿಖೆ ನಡೆಸಲಾಗುತ್ತಿದೆ. ಇದೀಗ ತನಿಖೆಯ ವೇಳೆಯಲ್ಲಿ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ‘IED ಬಾಂಬ್ ಸ್ಫೋಟ’: ಘಟನೆ ದೃಢಪಡಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ…

Read More