Author: kannadanewsnow09

ಬೆಂಗಳೂರು: ನನಗೆ ಜೈಲೂಟ ಒಗ್ಗುತ್ತಿಲ್ಲ. ಜೊತೆಗೆ ದೇಹದ ತೂಕ ಬೇರೆ ಕಡಿಮೆ ಆಗುತ್ತಿದೆ. ಮನೆ ಊಟಕ್ಕೆ ವ್ಯವಸ್ಥೆ ಮಾಡುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ನಟ ದರ್ಶನ್ ಸಲ್ಲಿಸಿದ್ದರು. ಇಂತಹ ರಿಟ್ ಅರ್ಜಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಜೈಲೂಟ ಸೇರುತ್ತಿಲ್ಲ. ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಪರ ವಕೀಲರ ಮೂಲಕ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ಕೋರಿ ನಟ ದರ್ಶನ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಿಚಾರಣೆಗೆ ಹೈಕೋರ್ಟ್ ಕೈಗೆತ್ತಿಕೊಳ್ಳುತ್ತಿದ್ದಂತೇ, ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಿತು. ನ್ಯಾಯಾಂಗ ಬಂಧನಕ್ಕೆ ವಹಿಸುವಾಗ ಅನಾರೋಗ್ಯದ ಅಹವಾಲು ಸಲ್ಲಿಸುವಂತಿಲ್ಲ. ವಿಶೇಷ ಆಹಾರ ಅಗತ್ಯದ ಬಗ್ಗೆ ಮ್ಯಾಜಿಸ್ಟ್ರೇಟ್ ತಿಳಿಸಿಲ್ಲ. ಜೈಲು ಅಧಿನಿಯಮ 1963ರ ಸೆ.30ರಂತೆ ನಟ ದರ್ಶನ್ ಅವರು ಇನ್ಸ್ ಪೆಕ್ಟರ್ ಜನರಲ್ ಅವರಿಗೆ ಅನುಮತಿಯನ್ನು ಕೇಳಿಲ್ಲ ಅಂತ ಆಕ್ಷೇಪಿಸಿತು. ಅರ್ಹತೆ ಅನುಸಾರವಾಗಿ ಜೈಲಿನ ಐಜಿಯವರು ಸೂಕ್ತ ಆದೇಶ ನೀಡುತ್ತಾರೆ. ಜೈಲು…

Read More

ನವದೆಹಲಿ: ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿದ್ದ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ನ ಕನಿಷ್ಠ 10 ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಗುರುವಾರ ಹಳಿ ತಪ್ಪಿವೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಆರಂಭಿಕ ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ರೈಲಿನ 10-12 ಬೋಗಿಗಳು ಹಳಿ ತಪ್ಪಿವೆ. ಮಧ್ಯಾಹ್ನ 2:35 ರ ಸುಮಾರಿಗೆ ಉತ್ತರ ಪ್ರದೇಶದ ಗೊಂಡಾ ಬಳಿ ರೈಲು ಹಳಿ ತಪ್ಪಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಆದಾಗ್ಯೂ, ಯಾವುದೇ ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೈಲು ಅಪಘಾತದ ಬಗ್ಗೆ ಅರಿತುಕೊಂಡಿದ್ದಾರೆ ಮತ್ತು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದು, ರಕ್ಷಣಾ…

Read More

ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ಚಂಡೀಗಢ-ದಿಬ್ರುಘರ್ ರೈಲು ಹಳಿ ತಪ್ಪಿದೆ. ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ, ಹಲವು ಪ್ರಯಾಣಿಕರು ಸಾವನ್ನಪ್ಪಿರೋದು, ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1813877746332012924 ಈ ಕುರಿತಂತೆ ಉತ್ತರ ಪ್ರದೇಶದ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೊಂಡಾ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು; ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ ಎಂದಿದೆ. https://twitter.com/ANI/status/1813878334159454551 https://kannadanewsnow.com/kannada/cm-siddaramaiah-bought-dalit-leaders-by-wearing-biscuits-former-mp-muniswamy/ https://kannadanewsnow.com/kannada/parents-should-note-here-are-the-symptoms-of-chandipur-virus-that-causes-the-death-of-children/

Read More

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವಂತ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಮತ್ತೆ ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಶಾಸಕ ಬಿ.ನಾಗೇಂದ್ರ ನೀಡುವಂತೆ ಇಡಿ ಅಧಿಕಾರಿಗಳು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಶಾಸಕ ಬಿ.ನಾಗೇಂದ್ರ ಅವರು ಮತ್ತೆ ಐದು ದಿನಗಳ ಕಾಲ ಇಡಿ ವಶದಲ್ಲಿ ತನಿಖೆಗೆ ಒಳಗಾಲಿದ್ದಾರೆ. https://kannadanewsnow.com/kannada/self-employed-aspirants-should-note-applications-invited-for-free-training-on-installation-and-repair-of-cctv-cameras/ https://kannadanewsnow.com/kannada/cm-siddaramaiah-bought-dalit-leaders-by-wearing-biscuits-former-mp-muniswamy/

Read More

ದಕ್ಷಿಣ ಕನ್ನಡ: ಸ್ವ ಉದ್ಯೋಗ ಕೈಗೊಳ್ಳೋ ಆಸಕ್ತಿ ಇರುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ತರಬೇತಿ ನೀಡಲು ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆ ಮಾಹಿತಿ ನೀಡಿದ್ದು, ದಿನಾಂಕ 05-08-2024ರಿಂದ 17-08-2024ರವರೆಗೆ ಸಿಸಿ ಕ್ಯಾಮೆರಾ ಅಳವಡಿಸುವಿಕೆ ಮತ್ತು ದುರಸ್ಥಿಯ ಉಚಿತ ತರಬೇತಿ ನೀಡಲಾಗುತ್ತಿದೆ ಅಂತ ತಿಳಿಸಿದೆ. ಧರ್ಮಸ್ಥಳ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗದ ಈ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. 18 ರಿಂದ 45 ವರ್ಷದೊಳಗಿನ ಯಾರು ಬೇಕಾದ್ರೂ ಅರ್ಜಿಯನ್ನು ಸಲ್ಲಿಸಬಹುದು ಅಂತ ಹೇಳಿದೆ. ಅರ್ಜಿಯನ್ನು ವಾಟ್ಸ್ ಆಪ್ ಮೂಲಕ ಸಲ್ಲಿಸುವುದಾದರೇ 6364561982ಗೆ ಕಳುಹಿಸಬಹುದು. ಇಲ್ಲದೇ ಆನ್ ಲೈನ್ ಮೂಲಕ ಸಲ್ಲಿಸುವುದಾದರೇ www.rudsetitraining.org ವೆಬ್ ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿ ಅಂತ ತಿಳಿಸಿದೆ. ಇನ್ನೂ ಸ್ವ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ 9591044014, 9900793675, 9980885900, 9448484237ಗೆ ಕರೆ…

Read More

ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು. ಹಗರಣದಲ್ಲಿ ಸಿಎಂ-ಡಿಸಿಎಂ ಸಹ ಭಾಗಿಯಾಗಿದ್ದಾರೆ ಎಂದು ತಪ್ಪೊಪ್ಪಿಗೆ ನೀಡಿ, ಇಲ್ಲದಿದ್ದರೆ ನಿಮಗೆ ಇಡಿ ಪವರ್‌ ಗೊತ್ತಿಲ್ಲ. ಆಮೇಲೆ ನೀವು ಕಷ್ಟಕ್ಕೆ ಸಿಲುಕುತ್ತೀರಿ ಎಂದು ವಿಚಾರಣೆ ವೇಳೆ ಹೆದರಿಸುವ ಮೂಲಕ ಇಡಿ ಅಧಿಕಾರಿಗಳು ತನಿಖೆಯನ್ನೇ ತಪ್ಪುದಾರಿಗೆ ಕೊಂಡೊಯ್ಯುತ್ತಿದ್ದಾರೆ. ಇಡಿ ಅಧಿಕಾರಿಗಳ ಜೊತೆ ರಾಜಿ ಸಂಧಾನ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಹೀಗಾಗಿ ಎಸ್ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ. ಅಂದರೇ ಆಗಸ್ಟ್.1ರವರೆಗೆ ನ್ಯಾಯಾಂಗ ಬಂಧವನ್ನು ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/cm-siddaramaiah-bought-dalit-leaders-by-wearing-biscuits-former-mp-muniswamy/ https://kannadanewsnow.com/kannada/parents-should-note-here-are-the-symptoms-of-chandipur-virus-that-causes-the-death-of-children/

Read More

ಯಾದಗಿರಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೂವರನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ತಾಲ್ಲೂಕಿನ ಮುನಗಲ್ ಗ್ರಾಮದ ನವೀನ್ ಎಂಬಾತ, ದಾವಣಗೆರೆ ಮೂಲದ ಮೂವರನ್ನು ಸೈದಾಪುರದಲ್ಲಿ ಕಬ್ಬಿಣದ ರಾಡ್ ನಿಂದ ಹಾಗೂ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪತ್ನಿ, ಅತ್ತೆ ಹಾಗೂ ಮಾವವನ್ನು ನವೀನ್ ಎಂಬಾತ ಹತ್ಯೆ ಮಾಡಿದ್ದಾನೆ. ಪತ್ನಿ ಅನ್ನಪೂರ್ಣ, ಅತ್ತೆ ಕವಿತಾ ಹಾಗೂ ಮಾವ ಬಸವರಾಜಪ್ಪ ಎಂಬುವರನ್ನು ರಾಡ್ ನಿಂದ ಹೊಡೆದು ಹಾಗೂ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/cm-siddaramaiah-bought-dalit-leaders-by-wearing-biscuits-former-mp-muniswamy/ https://kannadanewsnow.com/kannada/heres-some-good-news-from-the-state-government-for-those-who-were-expecting-a-bpl-card/

Read More

ಅಹ್ಮದಾಬಾದ್: ಅಪರಿಚಿತ ಮಹಿಳೆಯೊಬ್ಬಳ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಕೇಳಿದ ಆರೋಪದ ಮೇಲೆ ಗಾಂಧಿನಗರದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಗುಜರಾತ್ ಹೈಕೋರ್ಟ್ ಮಂಗಳವಾರ ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಮತ್ತು ಅಂತಹ ಪ್ರಶ್ನೆಗಳು ಸೂಕ್ತವಲ್ಲ. ಆದರೆ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ಹೇಳಿದೆ. ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಕೇಳಿದ ಆರೋಪದ ಮೇಲೆ ಸಮೀರ್ ರಾಯ್ ವಿರುದ್ಧ ಮಹಿಳೆಯೊಬ್ಬರು ಏಪ್ರಿಲ್ 26 ರಂದು ಸೆಕ್ಷನ್ 21 ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ ಅಡಿಯಲ್ಲಿ ರಾಯ್ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಲಾಗಿದೆ. ತನ್ನ ವಿರುದ್ಧ ದಾಖಲಾದ ಎಫ್ಐಆರ್ ಏಪ್ರಿಲ್ 25 ರಂದು ಪೊಲೀಸ್ ದೌರ್ಜನ್ಯಕ್ಕಾಗಿ ಪೊಲೀಸರ ವಿರುದ್ಧ ಮಾಡಿದ ದೂರಿಗೆ ಪ್ರತಿಸ್ಫೋಟವಾಗಿದೆ ಎಂದು ರಾಯ್ ನ್ಯಾಯಾಲಯಕ್ಕೆ ಸಲ್ಲಿಸಿದರು. ಪೊಲೀಸರು ತಮ್ಮ ಮೊಬೈಲ್ ಫೋನ್ ಅನ್ನು ತೆಗೆದುಕೊಂಡು ತಮ್ಮ ಕೆಲವು ಡೇಟಾವನ್ನು ಅಳಿಸಿದ್ದಾರೆ ಎಂದು ರಾಯ್…

Read More

ಶಿವಮೊಗ್ಗ: ನಿನ್ನೆ ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ಇಂದು ಕೂಡ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾಗರ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದು,  ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 18-07-2024ರ ಗುರುವಾರದ ಇಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಿದ್ದಾರೆ. ಸೊರಬ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-2 ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರ್ ಸೊರಬ ಅವರ ಆದೇಶದಂತೆ ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಪ್ರಯುಕ್ತ ದಿನಾಂಕ 18/07/2024 ರ ಗುರುವಾರದ ಇಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ ಗಳಿಗೆ ಮತ್ತು ಎಲ್ಲಾ ಶಾಲಾ…

Read More